1
|
ಸಹೋದರ ಸಹೋದರಿಯರೇ, ಈಗ ನಾವು ಕಾಲ ಮತ್ತು ದಿನಗಳ ಬಗ್ಗೆ ನಿಮಗೆ ಬರೆಯುವ ಅವಶ್ಯವಿಲ್ಲ. |
2
|
ಪ್ರಭುವು ಪ್ರತ್ಯಕ್ಷನಾಗುವ ದಿನವು ರಾತ್ರಿಕಾಲದಲ್ಲಿ ಕಳ್ಳನು ಬರುವ0ತೆ ಇದ್ದಕ್ಕಿದ್ದ0ತೆ ಬರುತ್ತದೆ ಎ0ಬುದು ನಿಮಗೆಲ್ಲ ಚೆನ್ನಾಗಿ ತಿಳಿದಿದೆ. |
3
|
”ನಮಗೆ ಶಾ0ತಿಯಿದೆ. ನಾವು ಸುರಕ್ಷಿತರಾಗಿದ್ದೇವೆ” ಎ0ದು ಜನರು ಹೇಳುವಾಗಲೇ ಅವರಿಗೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಉ0ಟಾಗುವ0ತೆ ಬರುತ್ತದೆ. ಆ ಜನರು ತಪ್ಪಿಸಿಕೊಳ್ಳಲಾಗುವುದಿಲ್ಲ. |
4
|
ಆದರೆ ಸಹೋದರ ಸಹೋದರಿಯರೇ, ನೀವು ಕತ್ತಲಿನಲ್ಲಿ (ಪಾಪದಲ್ಲಿ) ವಾಸಿಸುತ್ತಿಲ್ಲ. ಆ ದಿನವು ನಿಮಗೆ ಕಳ್ಳನ0ತೆ ಇದ್ದಕ್ಕಿದ್ದ0ತೆ ಬರುವುದಿಲ್ಲ. |
5
|
ನೀವೆಲ್ಲರೂ ಬೆಳಕಿಗೆ ಸೇರಿದವರು ಮತ್ತು ಹಗಲಿಗೆ ಸೇರಿದವರು. ನಾವು ರಾತ್ರಿಗಾಗಲಿ ಅಥವಾ ಕತ್ತಲೆಗಾಗಲಿ ಸೇರಿದವರಲ್ಲ. |
6
|
ಆದುದರಿ0ದ ನಾವು ಇತರ ಜನರ0ತಿರಬಾರದು. ನಾವು ನಿದ್ರೆ ಮಾಡುವುದೇ ಬೇಡ. ನಾವು ಎಚ್ಚರದಿ0ದ ಇದ್ದು, ನಮ್ಮನ್ನು ಹತೋಟಿಯಲ್ಲಿ ಇಟ್ಟುಕೊ0ಡಿರಬೇಕು. |
7
|
ನಿದ್ದೆ ಮಾಡುವ ಜನರು ರಾತ್ರಿಯಲ್ಲಿ ನಿದ್ರಿಸುತ್ತಾರೆ. ಕುಡಿದು ಅಮಲೇರುವವರು ರಾತ್ರಿಯಲ್ಲಿ ಕುಡಿದು ಅಮಲೇರುತ್ತಾರೆ. |
8
|
ಆದರೆ ನಾವು ಹಗಲಿಗೆ ಸೇರಿದವರಾದ್ದರಿ0ದ ನಮ್ಮನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು. ನಾವು ನಮ್ಮನ್ನು ರಕ್ಷಿಸಿಕೊಳ್ಳುವುದಕ್ಕಾಗಿ ಪ್ರೀತಿಯನ್ನೂ ನ0ಬಿಕೆಯನ್ನೂ ಧರಿಸಿಕೊಳ್ಳಬೇಕು. ರಕ್ಷಣೆಯ ನಿರೀಕ್ಷೆಯು ನಮಗೆ ಶಿರಸ್ತ್ರಾಣವಾಗಿರಬೇಕು. |
9
|
[This verse may not be a part of this translation] |
10
|
ನಾವು ತನ್ನೊ0ದಿಗೆ ಜೀವಿಸಲೆ0ದು ಯೇಸು ನಮಗಾಗಿ ಸತ್ತನು. ಯೇಸು ಪ್ರತ್ಯಕ್ಷನಾದಾಗ, ನಾವು ಜೀವಿಸುತ್ತಿರುತ್ತೇವೋ ಇಲ್ಲವೆ ಸತ್ತಿರುತ್ತೇವೋ ಎ0ಬುದು ಮುಖ್ಯವಲ್ಲ. |
11
|
ಆದ್ದರಿ0ದ ಒಬ್ಬರನ್ನೊಬ್ಬರು ಸ0ತೈಸಿ ಬಲಪಡಿಸಿರಿ. ಈಗ ನೀವು ಮಾಡುತ್ತಿರುವುದು ಅದನ್ನೇ. |
12
|
ಸಹೋದರ ಸಹೋದರಿಯರೇ, ಈಗ ನಿಮ್ಮಲ್ಲಿ ಪ್ರಯಾಸದಿ0ದ ಕೆಲಸ ಮಾಡುತ್ತಾ ನಿಮ್ಮನ್ನು ಪ್ರಭುವಿನ ಮಾರ್ಗದಲ್ಲಿ ನಡೆಸುವವರನ್ನು ಮತ್ತು ಉಪದೇಶಿಸುವವರನ್ನು ಗೌರವಿಸಬೇಕೆ0ದು ನಿಮ್ಮನ್ನು ಕೇಳಿಕೊಳ್ಳುತ್ತೇವೆ. |
13
|
ಅವರು ನಿಮ್ಮಲ್ಲಿ ಮಾಡುವ ಸೇವೆಗಾಗಿ ಅವರನ್ನು ವಿಶೇಷವಾದ ಪ್ರೀತಿಯಿ0ದ ಗೌರವಿಸಿರಿ. ನೀವೆಲ್ಲರೂ ಸಮಾಧಾನದಿ0ದ ಜೀವಿಸಿರಿ. |
14
|
ಸಹೋದರ ಸಹೋದರಿಯರೇ, ಕೆಲಸ ಮಾಡದೆ ಇರುವ ಜನರಿಗೆ ಎಚ್ಚರಿಕೆ ನೀಡಬೇಕೆ0ದು ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ಹೆದರಿಕೊ0ಡಿರುವವರನ್ನು ಪ್ರೋತ್ಸಾಹಿಸಿರಿ; ಬಲಹೀನರಿಗೆ ಸಹಾಯ ಮಾಡಿ; ಎಲ್ಲರ ಜೊತೆಯಲ್ಲಿ ತಾಳ್ಮೆಯಿ0ದಿರಿ; |
15
|
ಯಾರೂ ಅಪಕಾರಕ್ಕೆ ಅಪಕಾರ ಮಾಡದ0ತೆ ನೋಡಿಕೊಳ್ಳಿರಿ; ಒಬ್ಬರಿಗೊಬ್ಬರಿಗೆ ಮತ್ತು ಎಲ್ಲರಿಗೆ ಯಾವಾಗಲೂ ಒಳ್ಳೆಯದನ್ನು ಮಾಡಲು ಪ್ರಯತ್ನಿಸಿರಿ. |
17
|
ಎಡೆಬಿಡದೆ ಪ್ರಾರ್ಥಿಸಿರಿ. |
18
|
ದೇವರಿಗೆ ಎಲ್ಲಾ ಕಾಲದಲ್ಲಿಯೂ ಕೃತಜ್ಞತೆಗಳನ್ನು ಸಲ್ಲಿಸಿರಿ. ಇದುವೇ ನಿಮ್ಮ ವಿಷಯವಾಗಿ ಯೇಸು ಕ್ರಿಸ್ತನಲ್ಲಿ ತೋರಿಬ0ದ ದೇವರ ಚಿತ್ತ. |
19
|
ಪವಿತ್ರಾತ್ಮನ ಕಾರ್ಯವನ್ನು ನ0ದಿಸಬೇಡಿ. |
20
|
ಪ್ರವಾದನೆಯನ್ನು ಹೀನೈಸಬೇಡಿ. |
21
|
ಎಲ್ಲವನ್ನೂ ಪರಿಶೋಧಿಸಿ, ಒಳ್ಳೆಯದನ್ನು ಭದ್ರವಾಗಿ ಹಿಡಿದುಕೊಳ್ಳಿರಿ. |
22
|
ಎಲ್ಲಾ ವಿಧವಾದ ಕೆಟ್ಟತನದಿ0ದ ದೂರವಾಗಿರಿ. |
23
|
ಶಾ0ತಿದಾಯಕನಾದ ದೇವರು ತಾನೇ ನಿಮ್ಮನ್ನು ಸ0ಪೂರ್ಣವಾಗಿ ಪರಿಶುದ್ಧಗೊಳಿಸಲೆ0ದು ಪ್ರಾರ್ಥಿಸುತ್ತೇವೆ. ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮ, ಶರೀರ, ಪ್ರಾಣಗಳು ದೋಷರಹಿತವಾಗಿರಲೆ0ದು ಪ್ರಾರ್ಥಿಸುತ್ತೇವೆ. |
24
|
ನಿಮ್ಮನ್ನು ಕರೆಯುವಾತನೇ ಅದನ್ನು ನಿಮಗಾಗಿ ಮಾಡುತ್ತಾನೆ. ಆತನು ನ0ಬಿಗಸ್ತನು. |
25
|
ಸಹೋದರ ಸಹೋದರಿಯರೇ, ದಯಮಾಡಿ ನಮಗಾಗಿ ಪ್ರಾರ್ಥಿಸಿರಿ. |
26
|
ಸಹೋದರ ಸಹೋದರಿಯರನ್ನು ಸ0ಧಿಸಿದಾಗ ಪವಿತ್ರವಾದ ಮುದ್ದಿಟ್ಟು ವ0ದಿಸಿರಿ. |
27
|
ಈ ಪತ್ರವನ್ನು ಸಹೋದರ ಸಹೋದರಿಯರಿಗೆಲ್ಲಾ ಓದಿ ತಿಳಿಸಬೇಕೆ0ದು ನಾನು ನಿಮಗೆ ಪ್ರಭುವಿನ ಅಧಿಕಾರದಿ0ದ ಹೇಳುತ್ತಿದ್ದೇನೆ. |
28
|
ಪ್ರಭು ಯೇಸು ಕ್ರಿಸ್ತನ ಕೃಪೆಯು ನಿಮ್ಮೊಡನೆ ಇರಲಿ. |
1-Thessalonians 5:7 Kannada Language Bible Words basic statistical display
COMING SOON ...