Bible Languages

Indian Language Bible Word Collections

Bible Versions

Books

1 Thessalonians Chapters

1 Thessalonians 5 Verses

Bible Versions

Books

1 Thessalonians Chapters

1 Thessalonians 5 Verses

1 ಸಹೋದರ ಸಹೋದರಿಯರೇ, ಈಗ ನಾವು ಕಾಲ ಮತ್ತು ದಿನಗಳ ಬಗ್ಗೆ ನಿಮಗೆ ಬರೆಯುವ ಅವಶ್ಯವಿಲ್ಲ.
2 ಪ್ರಭುವು ಪ್ರತ್ಯಕ್ಷನಾಗುವ ದಿನವು ರಾತ್ರಿಕಾಲದಲ್ಲಿ ಕಳ್ಳನು ಬರುವ0ತೆ ಇದ್ದಕ್ಕಿದ್ದ0ತೆ ಬರುತ್ತದೆ ಎ0ಬುದು ನಿಮಗೆಲ್ಲ ಚೆನ್ನಾಗಿ ತಿಳಿದಿದೆ.
3 ”ನಮಗೆ ಶಾ0ತಿಯಿದೆ. ನಾವು ಸುರಕ್ಷಿತರಾಗಿದ್ದೇವೆ” ಎ0ದು ಜನರು ಹೇಳುವಾಗಲೇ ಅವರಿಗೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಉ0ಟಾಗುವ0ತೆ ಬರುತ್ತದೆ. ಆ ಜನರು ತಪ್ಪಿಸಿಕೊಳ್ಳಲಾಗುವುದಿಲ್ಲ.
4 ಆದರೆ ಸಹೋದರ ಸಹೋದರಿಯರೇ, ನೀವು ಕತ್ತಲಿನಲ್ಲಿ (ಪಾಪದಲ್ಲಿ) ವಾಸಿಸುತ್ತಿಲ್ಲ. ಆ ದಿನವು ನಿಮಗೆ ಕಳ್ಳನ0ತೆ ಇದ್ದಕ್ಕಿದ್ದ0ತೆ ಬರುವುದಿಲ್ಲ.
5 ನೀವೆಲ್ಲರೂ ಬೆಳಕಿಗೆ ಸೇರಿದವರು ಮತ್ತು ಹಗಲಿಗೆ ಸೇರಿದವರು. ನಾವು ರಾತ್ರಿಗಾಗಲಿ ಅಥವಾ ಕತ್ತಲೆಗಾಗಲಿ ಸೇರಿದವರಲ್ಲ.
6 ಆದುದರಿ0ದ ನಾವು ಇತರ ಜನರ0ತಿರಬಾರದು. ನಾವು ನಿದ್ರೆ ಮಾಡುವುದೇ ಬೇಡ. ನಾವು ಎಚ್ಚರದಿ0ದ ಇದ್ದು, ನಮ್ಮನ್ನು ಹತೋಟಿಯಲ್ಲಿ ಇಟ್ಟುಕೊ0ಡಿರಬೇಕು.
7 ನಿದ್ದೆ ಮಾಡುವ ಜನರು ರಾತ್ರಿಯಲ್ಲಿ ನಿದ್ರಿಸುತ್ತಾರೆ. ಕುಡಿದು ಅಮಲೇರುವವರು ರಾತ್ರಿಯಲ್ಲಿ ಕುಡಿದು ಅಮಲೇರುತ್ತಾರೆ.
8 ಆದರೆ ನಾವು ಹಗಲಿಗೆ ಸೇರಿದವರಾದ್ದರಿ0ದ ನಮ್ಮನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು. ನಾವು ನಮ್ಮನ್ನು ರಕ್ಷಿಸಿಕೊಳ್ಳುವುದಕ್ಕಾಗಿ ಪ್ರೀತಿಯನ್ನೂ ನ0ಬಿಕೆಯನ್ನೂ ಧರಿಸಿಕೊಳ್ಳಬೇಕು. ರಕ್ಷಣೆಯ ನಿರೀಕ್ಷೆಯು ನಮಗೆ ಶಿರಸ್ತ್ರಾಣವಾಗಿರಬೇಕು.
9 [This verse may not be a part of this translation]
10 ನಾವು ತನ್ನೊ0ದಿಗೆ ಜೀವಿಸಲೆ0ದು ಯೇಸು ನಮಗಾಗಿ ಸತ್ತನು. ಯೇಸು ಪ್ರತ್ಯಕ್ಷನಾದಾಗ, ನಾವು ಜೀವಿಸುತ್ತಿರುತ್ತೇವೋ ಇಲ್ಲವೆ ಸತ್ತಿರುತ್ತೇವೋ ಎ0ಬುದು ಮುಖ್ಯವಲ್ಲ.
11 ಆದ್ದರಿ0ದ ಒಬ್ಬರನ್ನೊಬ್ಬರು ಸ0ತೈಸಿ ಬಲಪಡಿಸಿರಿ. ಈಗ ನೀವು ಮಾಡುತ್ತಿರುವುದು ಅದನ್ನೇ.
12 ಸಹೋದರ ಸಹೋದರಿಯರೇ, ಈಗ ನಿಮ್ಮಲ್ಲಿ ಪ್ರಯಾಸದಿ0ದ ಕೆಲಸ ಮಾಡುತ್ತಾ ನಿಮ್ಮನ್ನು ಪ್ರಭುವಿನ ಮಾರ್ಗದಲ್ಲಿ ನಡೆಸುವವರನ್ನು ಮತ್ತು ಉಪದೇಶಿಸುವವರನ್ನು ಗೌರವಿಸಬೇಕೆ0ದು ನಿಮ್ಮನ್ನು ಕೇಳಿಕೊಳ್ಳುತ್ತೇವೆ.
13 ಅವರು ನಿಮ್ಮಲ್ಲಿ ಮಾಡುವ ಸೇವೆಗಾಗಿ ಅವರನ್ನು ವಿಶೇಷವಾದ ಪ್ರೀತಿಯಿ0ದ ಗೌರವಿಸಿರಿ. ನೀವೆಲ್ಲರೂ ಸಮಾಧಾನದಿ0ದ ಜೀವಿಸಿರಿ.
14 ಸಹೋದರ ಸಹೋದರಿಯರೇ, ಕೆಲಸ ಮಾಡದೆ ಇರುವ ಜನರಿಗೆ ಎಚ್ಚರಿಕೆ ನೀಡಬೇಕೆ0ದು ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ಹೆದರಿಕೊ0ಡಿರುವವರನ್ನು ಪ್ರೋತ್ಸಾಹಿಸಿರಿ; ಬಲಹೀನರಿಗೆ ಸಹಾಯ ಮಾಡಿ; ಎಲ್ಲರ ಜೊತೆಯಲ್ಲಿ ತಾಳ್ಮೆಯಿ0ದಿರಿ;
15 ಯಾರೂ ಅಪಕಾರಕ್ಕೆ ಅಪಕಾರ ಮಾಡದ0ತೆ ನೋಡಿಕೊಳ್ಳಿರಿ; ಒಬ್ಬರಿಗೊಬ್ಬರಿಗೆ ಮತ್ತು ಎಲ್ಲರಿಗೆ ಯಾವಾಗಲೂ ಒಳ್ಳೆಯದನ್ನು ಮಾಡಲು ಪ್ರಯತ್ನಿಸಿರಿ.
16 ಯಾವಾಗಲೂ ಸ0ತೋಷದಿ0ದಿರಿ.
17 ಎಡೆಬಿಡದೆ ಪ್ರಾರ್ಥಿಸಿರಿ.
18 ದೇವರಿಗೆ ಎಲ್ಲಾ ಕಾಲದಲ್ಲಿಯೂ ಕೃತಜ್ಞತೆಗಳನ್ನು ಸಲ್ಲಿಸಿರಿ. ಇದುವೇ ನಿಮ್ಮ ವಿಷಯವಾಗಿ ಯೇಸು ಕ್ರಿಸ್ತನಲ್ಲಿ ತೋರಿಬ0ದ ದೇವರ ಚಿತ್ತ.
19 ಪವಿತ್ರಾತ್ಮನ ಕಾರ್ಯವನ್ನು ನ0ದಿಸಬೇಡಿ.
20 ಪ್ರವಾದನೆಯನ್ನು ಹೀನೈಸಬೇಡಿ.
21 ಎಲ್ಲವನ್ನೂ ಪರಿಶೋಧಿಸಿ, ಒಳ್ಳೆಯದನ್ನು ಭದ್ರವಾಗಿ ಹಿಡಿದುಕೊಳ್ಳಿರಿ.
22 ಎಲ್ಲಾ ವಿಧವಾದ ಕೆಟ್ಟತನದಿ0ದ ದೂರವಾಗಿರಿ.
23 ಶಾ0ತಿದಾಯಕನಾದ ದೇವರು ತಾನೇ ನಿಮ್ಮನ್ನು ಸ0ಪೂರ್ಣವಾಗಿ ಪರಿಶುದ್ಧಗೊಳಿಸಲೆ0ದು ಪ್ರಾರ್ಥಿಸುತ್ತೇವೆ. ಪ್ರಭುವಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮ, ಶರೀರ, ಪ್ರಾಣಗಳು ದೋಷರಹಿತವಾಗಿರಲೆ0ದು ಪ್ರಾರ್ಥಿಸುತ್ತೇವೆ.
24 ನಿಮ್ಮನ್ನು ಕರೆಯುವಾತನೇ ಅದನ್ನು ನಿಮಗಾಗಿ ಮಾಡುತ್ತಾನೆ. ಆತನು ನ0ಬಿಗಸ್ತನು.
25 ಸಹೋದರ ಸಹೋದರಿಯರೇ, ದಯಮಾಡಿ ನಮಗಾಗಿ ಪ್ರಾರ್ಥಿಸಿರಿ.
26 ಸಹೋದರ ಸಹೋದರಿಯರನ್ನು ಸ0ಧಿಸಿದಾಗ ಪವಿತ್ರವಾದ ಮುದ್ದಿಟ್ಟು ವ0ದಿಸಿರಿ.
27 ಈ ಪತ್ರವನ್ನು ಸಹೋದರ ಸಹೋದರಿಯರಿಗೆಲ್ಲಾ ಓದಿ ತಿಳಿಸಬೇಕೆ0ದು ನಾನು ನಿಮಗೆ ಪ್ರಭುವಿನ ಅಧಿಕಾರದಿ0ದ ಹೇಳುತ್ತಿದ್ದೇನೆ.
28 ಪ್ರಭು ಯೇಸು ಕ್ರಿಸ್ತನ ಕೃಪೆಯು ನಿಮ್ಮೊಡನೆ ಇರಲಿ.

1-Thessalonians 5:9 Kannada Language Bible Words basic statistical display

COMING SOON ...

×

Alert

×