Bible Languages

Indian Language Bible Word Collections

Bible Versions

Books

1 Timothy Chapters

1 Timothy 3 Verses

Bible Versions

Books

1 Timothy Chapters

1 Timothy 3 Verses

1 ನಾನು ಹೇಳುವ ಈ ಸಂಗತಿ ಸತ್ಯವಾದದ್ದು. ಅದೇನೆಂದರೆ, ಸಭಾಧ್ಯಕ್ಷನಾಗಲು ಬಹಳವಾಗಿ ಪ್ರಯತ್ನಿಸುವವನು ಒಳ್ಳೆಯ ಕೆಲಸವನ್ನೇ ಅಪೇಕ್ಷಿಸುವವನಾಗಿದ್ದಾನೆ.
2 ಅವನು ಜನರ ಟೀಕೆಗೆ ಒಳಗಾಗದಷ್ಟು ಉತ್ತಮನಾಗಿರಬೇಕು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನು ಜಿತೇಂದ್ರಿಯನೂ ಜ್ಞಾನಿಯೂ ಆಗಿರಬೇಕು; ಜನರ ಗೌರವಕ್ಕೆ ಪಾತ್ರನಾಗಿರಬೇಕು; ಜನರನ್ನು ತನ್ನ ಮನೆಗೆ ಸ್ವಾಗತಿಸಿ ಅವರಿಗೆ ಸಹಾಯ ಮಾಡಲು ಸಿದ್ಧನಾಗಿರಬೇಕು; ಒಳ್ಳೆಯ ಉಪದೇಶಕನಾಗಿರಬೇಕು;
3 ಮದ್ಯಪಾನದಲ್ಲಿ ಆಸ್ತಕನಾಗಿರಬಾರದು ಮತ್ತು ಹಿಂಸಾತ್ಮಕನಾಗಿರಬಾರದು. ಅವನು ಸಾತ್ವಿಕನೂ ಶಾಂತನೂ ಆಗಿರಬೇಕು; ಹಣದಾಸೆ ಉಳ್ಳವನಾಗಿರಬಾರದು.
4 ಅವನು ತನ್ನ ಸ್ವಂತ ಕುಟುಂಬಕ್ಕೆ ಒಳ್ಳೆಯ ನಾಯಕನಾಗಿರಬೇಕು. ಅವನ ಮಕ್ಕಳು ಅವನಿಗೆ ವಿಧೇಯರಾಗಿದ್ದು ಪೂರ್ಣ ಗೌರವವನ್ನು ನೀಡುವಂತಿರಬೇಕೆಂಬುದು ಇದರ ಅರ್ಥ.
5 (ತನ್ನ ಸ್ವಂತ ಕುಟುಂಬವನ್ನು ಆಳಲು ತಿಳಿಯದವನು ದೇವರ ಸಭೆಯನ್ನು ಪರಾಮರಿಸಲು ಸಮರ್ಥನಲ್ಲ.)
6 ಅವನು ಹೊಸ ವಿಶ್ವಾಸಿಯಾಗಿರಬಾರದು. ಹೊಸ ವಿಶ್ವಾಸಿಯನ್ನು ಸಭಾಧ್ಯಕ್ಷನನ್ನಾಗಿ ಮಾಡಿದರೆ, ಅವನು ಗರ್ವಿಷ್ಠನಾಗುವನು. ಸೈತಾನನು ತನ್ನ ಗರ್ವದ ನಿಮಿತ್ತ ಶಿಕ್ಷೆಗೆ ಒಳಗಾದಂತೆ ಇವನೂ ಶಿಕ್ಷೆಗೆ ಗುರಿಯಾಗುವನು.
7 ಸಭಾಧ್ಯಕ್ಷನು ಸಭೆಯಲ್ಲಿಲ್ಲದ ಜನರ ಗೌರವಕ್ಕೆ ಸಹ ಪಾತ್ರನಾಗಿರಬೇಕು. ಆಗ ಅವನು ಇತರರ ಟೀಕೆಗೆ ಗುರಿಯಾಗುವುದೂ ಇಲ್ಲ, ಸೈತಾನನ ವಂಚನೆಗೆ ಸಿಕ್ಕಿಬೀಳುವುದೂ ಇಲ್ಲ.
8 ಅದೇ ರೀತಿಯಲ್ಲಿ ಸಭೆಯಲ್ಲಿ ವಿಶೇಷ ಸೇವಕರಾದವರು ತಮ್ಮ ನಡತೆಯ ನಿಮಿತ್ತ ಇತರರಿಂದ ಗೌರವ ಹೊಂದಿದವರಾಗಿರಬೇಕು. ಯಥಾರ್ಥವಾಗಿ ಮಾತಾಡುವಂಥವರಾಗಿರಬೇಕು. ಅವರು ಮದ್ಯಪಾನದಲ್ಲಿ ಆಸ್ತಕರಾಗಿದ್ದು ತಮ್ಮ ಕಾಲವನ್ನು ಕಳೆಯುವವರಾಗಿರಬಾರದು; ಯಾವಾಗಲೂ ಇತರರನ್ನು ಮೋಸಗೊಳಿಸಿ ಶ್ರೀಮಂತರಾಗಲು ಪ್ರಯತ್ನಿಸುವವರಾಗಿರಬಾರದು;
9 ದೇವರು ನಮಗೆ ತಿಳಿಸಿಕೊಟ್ಟ ಸತ್ಯವನ್ನು ಶುದ್ಧ ಮನಸ್ಸಾಕ್ಷಿಯಿಂದ ಮಾಡುವವರಾಗಿರಬೇಕು.
10 ಅವರನ್ನು ನೀನು ಮೊದಲು ಪರೀಕ್ಷಿಸು. ಅವರು ಕಳಂಕರಹಿತರಾಗಿದ್ದರೆ, ಸೇವಕರಾಗಿ ಸೇವೆ ಮಾಡಬಹುದು.
11 ಇದೇ ರೀತಿಯಲ್ಲಿ ಸಭಾಸೇವಕಿಯರಾದ ಸ್ತ್ರೀಯರು ಜನರ ಗೌರವಕ್ಕೆ ಪಾತ್ರರಾಗಿರಬೇಕು. ಅವರು ಇತರ ಜನರ ಬಗ್ಗೆ ಕೆಟ್ಟದ್ದನ್ನು ಹೇಳುವಂಥವರಾಗಿರಬಾರದು. ಅವರು ತಮ್ಮನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು; ಎಲ್ಲಾ ವಿಷಯಗಳಲ್ಲಿಯೂ ನಂಬಿಗಸ್ತರಾಗಿರಬೇಕು.
12 ಸಭಾಸೇವಕರು ಏಕ ಪತ್ನಿ ಉಳ್ಳವರಾಗಿರಬೇಕು. ಅವರು ತಮ್ಮ ಮಕ್ಕಳಿಗೆ ಮತ್ತು ಕುಟುಂಬಕ್ಕೆ ಒಳ್ಳೆಯ ನಾಯಕರಾಗಿರಬೇಕು.
13 ಯೋಗ್ಯ ಮಾರ್ಗದಲ್ಲಿ ಸೇವೆ ಮಾಡುವ ಜನರು ತಮಗೆ ಗೌರವಯುತವಾದ ಸ್ಥಾನವನ್ನು ಪಡೆಯುವರು. ಕ್ರಿಸ್ತ ಯೇಸುವಿನಲ್ಲಿ ತಮಗಿರುವ ನಂಬಿಕೆಯ ವಿಷಯದಲ್ಲಿ ಅವರು ಭರವಸೆ ಉಳ್ಳವರಾಗಿರುತ್ತಾರೆ.
14 ನಾನು ನಿನ್ನ ಬಳಿಗೆ ಬಹುಬೇಗ ಬರುವೆನೆಂಬ ಭರವಸೆ ನನಗಿದೆ. ಆದರೆ ಈಗ ನಾನು ಈ ಸಂಗತಿಗಳನ್ನು ಬರೆಯುತ್ತಿದ್ದೇನೆ.
15 ನಂತರ ನಾನು ನಿನ್ನ ಬಳಿಗೆ ಬೇಗ ಬಾರದೆ ಇದ್ದರೂ, ದೇವರ ಮನೆಯಲ್ಲಿ ಜನರು ಮಾಡಲೇಬೇಕಾದ ಕಾರ್ಯಗಳ ಬಗ್ಗೆ ನಿನಗೆ ತಿಳಿದಿದೆ. ಆ ಮನೆಯು ಜೀವಂತ ದೇವರ ಸಭೆ. ಅದು ಸತ್ಯದ ಅಡಿಪಾಯವೂ ಆಧಾರವೂ ಆಗಿದೆ.
16 ನಿಸ್ಸಂದೇಹವಾಗಿಯೂ ನಮ್ಮ ಆರಾಧನಾಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿ ಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.

1-Timothy 3:1 Kannada Language Bible Words basic statistical display

COMING SOON ...

×

Alert

×