ಅವನು ಜನರ ಟೀಕೆಗೆ ಒಳಗಾಗದಷ್ಟು ಉತ್ತಮನಾಗಿರಬೇಕು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನು ಜಿತೇಂದ್ರಿಯನೂ ಜ್ಞಾನಿಯೂ ಆಗಿರಬೇಕು; ಜನರ ಗೌರವಕ್ಕೆ ಪಾತ್ರನಾಗಿರಬೇಕು; ಜನರನ್ನು ತನ್ನ ಮನೆಗೆ ಸ್ವಾಗತಿಸಿ ಅವರಿಗೆ ಸಹಾಯ ಮಾಡಲು ಸಿದ್ಧನಾಗಿರಬೇಕು; ಒಳ್ಳೆಯ ಉಪದೇಶಕನಾಗಿರಬೇಕು;
ಅವನು ಹೊಸ ವಿಶ್ವಾಸಿಯಾಗಿರಬಾರದು. ಹೊಸ ವಿಶ್ವಾಸಿಯನ್ನು ಸಭಾಧ್ಯಕ್ಷನನ್ನಾಗಿ ಮಾಡಿದರೆ, ಅವನು ಗರ್ವಿಷ್ಠನಾಗುವನು. ಸೈತಾನನು ತನ್ನ ಗರ್ವದ ನಿಮಿತ್ತ ಶಿಕ್ಷೆಗೆ ಒಳಗಾದಂತೆ ಇವನೂ ಶಿಕ್ಷೆಗೆ ಗುರಿಯಾಗುವನು.
ಅದೇ ರೀತಿಯಲ್ಲಿ ಸಭೆಯಲ್ಲಿ ವಿಶೇಷ ಸೇವಕರಾದವರು ತಮ್ಮ ನಡತೆಯ ನಿಮಿತ್ತ ಇತರರಿಂದ ಗೌರವ ಹೊಂದಿದವರಾಗಿರಬೇಕು. ಯಥಾರ್ಥವಾಗಿ ಮಾತಾಡುವಂಥವರಾಗಿರಬೇಕು. ಅವರು ಮದ್ಯಪಾನದಲ್ಲಿ ಆಸ್ತಕರಾಗಿದ್ದು ತಮ್ಮ ಕಾಲವನ್ನು ಕಳೆಯುವವರಾಗಿರಬಾರದು; ಯಾವಾಗಲೂ ಇತರರನ್ನು ಮೋಸಗೊಳಿಸಿ ಶ್ರೀಮಂತರಾಗಲು ಪ್ರಯತ್ನಿಸುವವರಾಗಿರಬಾರದು;
ಇದೇ ರೀತಿಯಲ್ಲಿ ಸಭಾಸೇವಕಿಯರಾದ ಸ್ತ್ರೀಯರು ಜನರ ಗೌರವಕ್ಕೆ ಪಾತ್ರರಾಗಿರಬೇಕು. ಅವರು ಇತರ ಜನರ ಬಗ್ಗೆ ಕೆಟ್ಟದ್ದನ್ನು ಹೇಳುವಂಥವರಾಗಿರಬಾರದು. ಅವರು ತಮ್ಮನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು; ಎಲ್ಲಾ ವಿಷಯಗಳಲ್ಲಿಯೂ ನಂಬಿಗಸ್ತರಾಗಿರಬೇಕು.
ನಂತರ ನಾನು ನಿನ್ನ ಬಳಿಗೆ ಬೇಗ ಬಾರದೆ ಇದ್ದರೂ, ದೇವರ ಮನೆಯಲ್ಲಿ ಜನರು ಮಾಡಲೇಬೇಕಾದ ಕಾರ್ಯಗಳ ಬಗ್ಗೆ ನಿನಗೆ ತಿಳಿದಿದೆ. ಆ ಮನೆಯು ಜೀವಂತ ದೇವರ ಸಭೆ. ಅದು ಸತ್ಯದ ಅಡಿಪಾಯವೂ ಆಧಾರವೂ ಆಗಿದೆ.
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.