1
|
ಗುಲಾಮರು ತಮ್ಮ ಯಜಮಾನರಿಗೆ ಸಂಪೂರ್ಣ ಗೌರವ ಕೊಡಬೇಕು. ಆಗ ದೇವರ ಹೆಸರಾಗಲಿ ನಮ್ಮ ಉಪದೇಶವಾಗಲಿ ಟೀಕೆಗೆ ಗುರಿಯಾಗುವುದಿಲ್ಲ. |
2
|
ಕೆಲವರಿಗೆ ವಿಶ್ವಾಸಿಗಳಾದ ಯಜಮಾನರಿದ್ದಾರೆ. ಆದ್ದರಿಂದ ಆ ಗುಲಾಮರು ಮತ್ತು ಯಜಮಾನರು ಸಹೋದರರಾಗಿದ್ದಾರೆ. ಆದರೆ ಅವರು ತಮ್ಮ ಯಜಮಾನರಿಗೆ ಕಡಿಮೆ ಗೌರವ ಕೊಡದೆ ತಮ್ಮ ಯಜಮಾನರ ಸೇವೆಯನ್ನು ಇನ್ನೂ ಉತ್ತಮವಾಗಿ ಮಾಡಬೇಕು. ಏಕೆಂದರೆ ಅವರು ಒಳ್ಳೆಯ ಕೆಲಸಗಳಿಗಾಗಿ ತಮ್ಮನ್ನು ಪ್ರತಿಷ್ಠಿಸಿಕೊಳ್ಳುವ ವಿಶ್ವಾಸಿಗಳಾಗಿದ್ದಾರೆ ಮತ್ತು ಸ್ನೇಹಿತರಾಗಿದ್ದಾರೆ. ಈ ಕಾರ್ಯಗಳನ್ನು ಮಾಡುವಂತೆ ನೀನು ಜನರಿಗೆ ಉಪದೇಶಿಸಬೇಕು ಮತ್ತು ತಿಳಿಸಬೇಕು. |
3
|
ಕೆಲವು ಜನರು ಸುಳ್ಳುಸಂಗತಿಗಳನ್ನು ಬೋಧಿಸುತ್ತಾರೆ. ಆ ಜನರು ನಮ್ಮ ಪ್ರಭುವಾದ ಯೇಸುವಿನ ಸತ್ಯ ಬೋಧನೆಯನ್ನು ಒಪ್ಪುವುದಿಲ್ಲ. ದೇವರ ಸೇವೆಯನ್ನು ಸತ್ಯಕ್ಕನುಸಾರವಾಗಿ ಮಾಡಬೇಕೆಂಬ ಉಪದೇಶವನ್ನು ಅವರು ಸ್ವೀಕರಿಸಿಕೊಳ್ಳುವುದಿಲ್ಲ. |
4
|
ದುರ್ಬೋಧಕನು ಗರ್ವದಿಂದ ತುಂಬಿದವನಾಗಿರುತ್ತಾನೆ ಮತ್ತು ಅವನಿಗೆ ಏನೂ ಅರ್ಥವಾಗುವುದಿಲ್ಲ. ಅವನು ಕುತರ್ಕ ವಾಗ್ವಾದ ಮಾಡುವುದರಲ್ಲಿ ಆಸಕ್ತನಾಗಿದ್ದಾನೆ. ಇದರಿಂದ ಹೊಟ್ಟೆಕಿಚ್ಚು, ಜಗಳ, ನಿಂದನೆ ಮತ್ತು ದುಸ್ಸಂಶಯಗಳು ಉಂಟಾಗುತ್ತವೆ. |
5
|
ಇದಲ್ಲದೆ ಕೆಡುಕರಲ್ಲಿ ವಾದವಿವಾದಗಳು ಹುಟ್ಟುತ್ತವೆ. ಆ ಜನರು ಸತ್ಯವನ್ನು ತೊರೆದವರಾಗಿದ್ದಾರೆ. ದೇವರ ಸೇವೆಯು ಐಶ್ವರ್ಯವನ್ನು ಗಳಿಸುವ ಮಾರ್ಗವೆಂಬುದು ಅವರ ಆಲೋಚನೆ. |
6
|
ದೇವರ ಸೇವೆ ಮಾಡುವವನು ತನ್ನಲ್ಲಿರುವುದರಲ್ಲಿ ಸಂತುಷ್ಟನಾಗಿದ್ದರೆ, ಅವನು ದೊಡ್ಡ ಶ್ರೀಮಂತನೇ ಸರಿ. |
7
|
ನಾವು ಲೋಕಕ್ಕೆ ಬಂದಾಗ ಏನನ್ನೂ ತೆಗೆದುಕೊಂಡು ಬರಲಿಲ್ಲ. ನಾವು ಸಾಯುವಾಗ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ. |
8
|
ಆದ್ದರಿಂದ ಊಟ ಬಟ್ಟೆಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತೇವೆ. |
9
|
[This verse may not be a part of this translation] |
10
|
ಹಣದಾಸೆಯು ಎಲ್ಲಾ ವಿಧವಾದ ಕೆಟ್ಟತನಕ್ಕೆ ಮೂಲವಾಗುತ್ತದೆ. ಕೆಲವು ಜನರು ಹೆಚ್ಚುಹೆಚ್ಚು ಹಣವನ್ನು ಗಳಿಸಿಕೊಳ್ಳುವುದಕ್ಕಾಗಿ ಸತ್ಯೋಪದೇಶವನ್ನು ತೊರೆದುಬಿಟ್ಟಿದ್ದಾರೆ. ಆದರೆ ಅವರು ತಮ್ಮನ್ನು ತಾವೇ ಹೆಚ್ಚು ವೇದನೆಗೆ ಗುರಿಪಡಿಸಿಕೊಂಡಿದ್ದಾರೆ. |
11
|
ಆದರೆ ನೀನು ದೇವರ ಮನುಷ್ಯ. ಆದ್ದರಿಂದ ಈ ಎಲ್ಲಾ ಸಂಗತಿಗಳಿಂದ ದೂರವಾಗಿರು. ದೇವರ ಸೇವೆಯನ್ನು ಮಾಡುತ್ತಾ ಉತ್ತಮಮಾರ್ಗದಲ್ಲಿ ಜೀವಿಸಲು ಪ್ರಯತ್ನಿಸು; ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತೆಗಳನ್ನು ಹೊಂದಿದವನಾಗಿರು. |
12
|
ನಂಬಿಕೆಯಲ್ಲಿ ದೃಢವಾಗಿರುವುದು ಓಟದ ಸ್ಪರ್ಧೆಗೆ ಹೋಲಿಕೆಯಾಗಿದೆ. ಓಟದ ಸ್ಪರ್ಧೆಯಲ್ಲಿ ಗೆಲ್ಲಲು ನಿನ್ನಿಂದ ಸಾಧ್ಯವಾದಷ್ಟು ಪ್ರಯತ್ನಿಸು. ನಿತ್ಯಜೀವವನ್ನು ಪಡೆದುಕೊಳ್ಳಲು ಪ್ರಯಾಸಪಡು. ಅದನ್ನು ಹೊಂದಿಕೊಳ್ಳುವುದಕ್ಕಾಗಿ ನೀನು ಕರೆಯಲ್ಪಟ್ಟಿರುವೆ. ಕ್ರಿಸ್ತನಂಬಿಕೆಯ ಕುರಿತಾದ ಸತ್ಯವನ್ನು ನೀನು ಅನೇಕ ಜನರ ಎದುರಿನಲ್ಲಿ ಒಪ್ಪಿಕೊಂಡೆಯಲ್ಲಾ. |
13
|
ಪೊಂತ್ಯ ಪಿಲಾತನ ಮುಂದೆ ಸಾಕ್ಷಿ ನೀಡಿದ ಕ್ರಿಸ್ತ ಯೇಸುವಿನ ಸನ್ನಿಧಿಯಲ್ಲಿಯೂ ಸರ್ವಸೃಷ್ಟಿಗೆ ಜೀವದಾಯಕನಾದ ದೇವರ ಸನ್ನಿಧಿಯಲ್ಲಿಯೂ ನಾನು ನಿನಗೆ ಆಜ್ಞಾಪಿಸುವುದೇನಂದರೆ, |
14
|
ನಮ್ಮ ಪ್ರಭುವಾದ ಯೇಸುಕ್ರಿಸ್ತನು ಮತ್ತೆ ಪ್ರತ್ಯಕ್ಷನಾಗುವ ಕಾಲದವರೆಗೆ ನೀನು ಆ ಕಾರ್ಯಗಳನ್ನು ತಪ್ಪಿಲ್ಲದೆ, ನಿಂದಾರಹಿತನಾಗಿ ಮಾಡುತ್ತಿರು. |
15
|
ದೇವರು ತಕ್ಕ ಸಮಯದಲ್ಲಿ ಅದನ್ನು ನೆರವೇರಿಸುವನು. ಆತನು ಭಾಗ್ಯವಂತನಾದ ಏಕಾಧಿಪತಿಯೂ ರಾಜಾಧಿರಾಜನೂ ಪ್ರಭುಗಳಿಗೆ ಪ್ರಭುವೂ ಆಗಿದ್ದಾನೆ. |
16
|
ಸಾವಿಲ್ಲದವನು ಆತನೊಬ್ಬನೇ. ಆತನು ಉಜ್ವಲ ಬೆಳಕಿನಲ್ಲಿ ವಾಸವಾಗಿರುವುದರಿಂದ ಆತನ ಹತ್ತಿರಕ್ಕೆ ಜನರು ಹೋಗಲು ಸಾಧ್ಯವಿಲ್ಲ. ಆತನನ್ನು ಇದುವರೆಗೆ ಯಾರು ನೋಡಿಲ್ಲ; ನೋಡಲು ಸಾಧ್ಯವೂ ಇಲ್ಲ. ಆತನಿಗೆ ಗೌರವವೂ ಅಧಿಪತ್ಯವೂ ಸದಾಕಾಲವಿರಲಿ. ಆಮೆನ್. |
17
|
ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಈ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ. |
18
|
ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಶ್ರೀಮಂತರಿಗೆ ತಿಳಿಸು. ಸತ್ಕಾರ್ಯಗಳನ್ನು ಮಾಡುವುದರಲ್ಲೇ ಶ್ರೀಮಂತರಾಗಿರಬೇಕೆಂದು ಅವರಿಗೆ ತಿಳಿಸು. ಪರೋಪಕಾರದಲ್ಲೂ ಹಂಚಿಕೊಳ್ಳುವುದರಲ್ಲೂ ಸಂತಸಪಡಲು ಅವರಿಗೆ ತಿಳಿಸು. |
19
|
ಆಗ ಪರಲೋಕದಲ್ಲಿ ಒಂದು ನಿಧಿಯನ್ನು ಅವರು ಕೂಡಿಟ್ಟು ಕೊಂಡಂತಾಗುತ್ತದೆ. ಆ ನಿಧಿಯೇ ಅವರ ಮುಂದಿನ ಜೀವಿತಕ್ಕೆ ಭದ್ರವಾದ ಅಸ್ತಿವಾರವಾಗಿದೆ. ಹೀಗೆ ಅವರು ಶಾಶ್ವತ ಜೀವವನ್ನು ಹೊಂದಿಕೊಳ್ಳುವರು. |
20
|
ತಿಮೊಥೆಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡು. ಪ್ರಾಪಂಚಿಕವಾದ ಮೂರ್ಖ ಸಂಗತಿಗಳನ್ನು ಹೇಳುವ ಜನರಿಂದಲೂ ಸತ್ಯದ ವಿರುದ್ಧವಾಗಿ ವಾದ ಮಾಡುವ ಜನರಿಂದಲೂ ದೂರವಾಗಿರು. ಅವರು ಅದನ್ನು ಜ್ಞಾನವೆಂದು ಕರೆದರೂ ಅದು ನಿಜವಾದ ಜ್ಞಾನವಲ್ಲ. |
21
|
ಕೆಲವರು ತಮಗೆ ಜ್ಞಾನ ಇದೆಯೆಂದು ಹೇಳಿ ಕೊಂಡರೂ ಸತ್ಯೋಪದೇಶವನ್ನು ತೊರೆದು ಬಿಟ್ಟವರಾಗಿದ್ದಾರೆ. ದೇವರ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. |
1-Timothy 6:15 Kannada Language Bible Words basic statistical display
COMING SOON ...