ನನ್ನ ತಂದೆಯು ಭಾರವಾದ ನೊಗವನ್ನು ನಿಮ್ಮ ಮೇಲೆ ಹೊರಿಸಿದನು. ನಾನಾದರೋ ಅದನ್ನು ಅಧಿಕಗೊಳಿಸುವೆನು. ನನ್ನ ತಂದೆಯು ಚಾಟಿಯಿಂದ ನಿಮ್ಮನ್ನು ಶಿಕ್ಷಿಸಿದನು. ನಾನಾದರೋ ಮುಳ್ಳುಕೊರಡೆಗಳಿಂದ ನಿಮ್ಮನ್ನು ಶಿಕ್ಷಿಸುವೆನು’ ಎಂದು ಹೇಳು” ಎಂಬುದಾಗಿ ಸಲಹೆ ನೀಡಿದರು.
ಯೌವನಸ್ಥರು ಹೇಳಿದ ಪ್ರಕಾರ ರೆಹಬ್ಬಾಮನು ಅವರಿಗೆ, “ನನ್ನ ತಂದೆಯು ನಿಮಗೆ ಭಾರವಾದ ನೊಗವನ್ನು ಹೊರಿಸಿದನು. ನಾನಾದರೋ ಅದನ್ನು ಇನ್ನೂ ಅಧಿಕಗೊಳಿಸುವೆನು. ನನ್ನ ತಂದೆಯು ಚಾಟಿಯಿಂದ ನಿಮ್ಮನ್ನು ಹೊಡೆದನು. ನಾನಾದರೋ ಮುಳ್ಳುಕೊರಡೆಗಳಿಂದ ನಿಮ್ಮನ್ನು ಹೊಡೆಯುವೆನು” ಅಂದನು.
ಹೀಗೆ ರೆಹಬ್ಬಾಮನು ಜನರ ಬೇಡಿಕೆಯನ್ನು ಕೇಳಲಿಲ್ಲ. ಯಾಕೆಂದರೆ ಇದು ದೇವರ ಚಿತ್ತವಾಗಿತ್ತು. ದೇವರು ಅಹೀಯನ ಮುಖಾಂತರ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರುವಂತೆ ಹೀಗಾಯಿತು. ಅಹೀಯನು ಶೀಲೋವಿನವನಾಗಿದ್ದನು. ಯಾರೊಬ್ಬಾಮನು ನೆಬಾಟನ ಮಗನಾಗಿದ್ದನು.
ರಾಜನಾದ ರೆಹಬ್ಬಾಮನು ತಮ್ಮ ಮಾತನ್ನು ಕೇಳದೆ ಹೋದದ್ದನ್ನು ಇಸ್ರೇಲರು ನೋಡಿ ಅವನಿಗೆ, “ನಾವು ದಾವೀದನ ಕುಟುಂಬದ ಭಾಗವಾಗಿದ್ದೇವೋ? ಇಲ್ಲ. ನಮಗೆ ಇಷಯನ ಆಸ್ತಿಯಲ್ಲಿ ಪಾಲಿದೆಯೋ? ಇಲ್ಲ. ಆದ್ದರಿಂದ ಇಸ್ರೇಲರೇ, ನಾವು ನಮ್ಮನಮ್ಮ ಮನೆಗಳಿಗೆ ಹೋಗೋಣ. ದಾವೀದನ ಮಗನು ಅವನ ವಂಶದವರನ್ನೇ ಆಳಲಿ” ಎಂದು ಹೇಳಿ ಸೇರಿಬಂದವರನ್ನೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಕ್ಕೆ ಕಳುಹಿಸಿದರು.
ಹದೋರಾಮನು ಬಿಟ್ಟೀಕೆಲಸ ಮಾಡುತ್ತಿದ್ದವರ ಅಧಿಕಾರಿ. ಅವನನ್ನು ರೆಹಬ್ಬಾಮನು ಇಸ್ರೇಲರ ಬಳಿಗೆ ಕಳುಹಿಸಿದನು. ಆದರೆ ಇಸ್ರೇಲರು ಅವನ ಮೇಲೆ ಕಲ್ಲೆಸೆದು ಕೊಂದರು. ಇದನ್ನು ನೋಡಿದ ರೆಹಬ್ಬಾಮನು ಓಡಿಹೋಗಿ ತನ್ನ ರಥವನ್ನು ಏರಿ ಅಲ್ಲಿಂದ ತಪ್ಪಿಸಿಕೊಂಡು ಜೆರುಸಲೇಮಿಗೆ ಬಂದನು.