English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

2 Chronicles Chapters

2 Chronicles 15 Verses

1 (1-2) ಓಬೇದನ ಮಗನಾದ ಅಜರ್ಯನ ಮೇಲೆ ದೇವರಾತ್ಮವು ಬಂದಿತು. ಅಜರ್ಯನು ಆಸನನ್ನು ಸಂಧಿಸಿ ಹೀಗೆ ಹೇಳಿದನು: “ಆಸನೇ, ನನ್ನ ಮಾತನ್ನು ಕೇಳು. ಯೆಹೂದದ ಜನರೇ, ಬೆನ್ಯಾಮೀನ್ ಜನರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವನೊಡನೆ ಇದ್ದರೆ ಆತನು ನಿಮ್ಮ ಸಂಗಡ ಇರುವನು. ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು. ಆದರೆ ನೀವು ಆತನನ್ನು ತೊರೆದರೆ ಆತನು ನಿಮ್ಮನ್ನೂ ತೊರೆಯುವನು.
3 ಬಹಳಕಾಲದ ತನಕ ಇಸ್ರೇಲರಲ್ಲಿ ನಿಜವಾದ ದೇವರಿರಲಿಲ್ಲ; ಬೋಧಕನಿರಲಿಲ್ಲ; ಧರ್ಮಶಾಸ್ತ್ರವೂ ಇರಲಿಲ್ಲ.
4 ಆದರೆ ಇಸ್ರೇಲರು ತಮಗೆ ಕಷ್ಟಬಂದಾಗ ದೇವರ ಕಡೆಗೆ ತಿರುಗಿದರು. ಆತನೇ ಇಸ್ರೇಲಿನ ದೇವರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.
5 ಆ ಕಷ್ಟದ ಸಮಯದಲ್ಲಿ ಯಾರೂ ಸುರಕ್ಷಿತವಾಗಿ ಪ್ರಯಾಣ ಮಾಡುವಂತಿರಲಿಲ್ಲ. ಎಲ್ಲಾ ದೇಶಗಳಲ್ಲಿಯೂ ಕಷ್ಟ ತೊಂದರೆಗಳು ತುಂಬಿದ್ದವು.
6 ಒಂದು ದೇಶವು ಇನ್ನೊಂದು ದೇಶವನ್ನು ನಾಶಮಾಡುತ್ತಿತ್ತು; ಒಂದು ಪಟ್ಟಣವು ಇನ್ನೊಂದು ಪಟ್ಟಣವನ್ನು ಸೂರೆಮಾಡುತ್ತಿತ್ತು. ಹೀಗೆ ದೇವರು ಎಲ್ಲ್ಲಾ ಬಗೆಯ ತೊಂದರೆಗಳಿಂದ ಅವರನ್ನು ತಳಮಳಗೊಳಿಸಿದನು.
7 ಯೆಹೂದದ ಜನರೇ, ಬೆನ್ಯಾಮೀನ್ ಜನರೇ, ನೀವು ಶಕ್ತರಾಗಿರಿ, ನಿರಾಶರಾಗಬೇಡಿರಿ; ಯಾಕೆಂದರೆ ನಿಮ್ಮ ಒಳ್ಳೆಯ ಕೆಲಸಕ್ಕೆ ನಿಮಗೆ ಪ್ರತಿಫಲ ದೊರೆಯುವುದು.”
8 ಪ್ರವಾದಿಯಾದ ಓಬೇದನು ತಂದ ಸಂದೇಶವನ್ನು ಆಸನು ಕೇಳಿ ತುಂಬಾ ಪ್ರೋತ್ಸಾಹಗೊಂಡನು. ಅನಂತರ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯದಲ್ಲಿದ್ದ ಎಲ್ಲಾ ವಿಗ್ರಹಗಳನ್ನು ತೆಗೆದುಹಾಕಿಸಿದನು. ಗೆದ್ದಿದ್ದ ಎಫ್ರಾಯೀಮ್ ಬೆಟ್ಟಪ್ರದೇಶಗಳಲ್ಲಿದ್ದ ವಿಗ್ರಹಗಳನ್ನು ತೆಗೆದುಹಾಕಿಸಿದನು. ದೇವಾಲಯದ ಮಂಟಪದೆದುರು ಇದ್ದ ಯೆಹೋವನ ಯಜ್ಞವೇದಿಕೆಯನ್ನು ಸರಿಪಡಿಸಿದನು.
9 ಆಮೇಲೆ ಆಸನು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯದ ಜನರನ್ನೆಲ್ಲಾ ಒಟ್ಟಾಗಿ ಸೇರಿಸಿದನು. ಅದೇ ಪ್ರಕಾರ ಅವನು ಇಸ್ರೇಲನ್ನು ಬಿಟ್ಟು ಯೆಹೂದದಲ್ಲಿ ನೆಲೆಸಲು ಬಂದಿದ್ದ ಎಫ್ರಾಯೀಮ್, ಮನಸ್ಸೆ ಮತ್ತು ಸಿಮೆಯೋನ್ ಪ್ರಾಂತ್ಯಗಳವರನ್ನೂ ಒಟ್ಟಾಗಿ ಸೇರಿಸಿದನು. ದೇವರಾದ ಯೆಹೋವನು ಆಸನ ಕೂಡ ಇರುವದನ್ನು ನೋಡಿ ಅವನೊಂದಿಗೆ ಸೇರಲು ಅನೇಕ ಜನರು ಬಂದಿದ್ದರು.
10 ಅವರೆಲ್ಲರೂ ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಲ್ಲಿ ಜೆರುಸಲೇಮಿನಲ್ಲಿ ಸೇರಿಬಂದರು.
11 ಆ ಸಮಯದಲ್ಲಿ ಅವರು ಏಳುನೂರು ಹೋರಿಗಳನ್ನೂ ಏಳುಸಾವಿರ ಆಡುಕುರಿಗಳನ್ನೂ, ಯೆಹೋವನಿಗೆ ಸಮರ್ಪಿಸಿದರು. ಇವುಗಳನ್ನು ಆಸನ ಸೈನ್ಯವು ಶತ್ರುಗಳಿಂದ ಸುಲಿದುಕೊಂಡಿದ್ದರು.
12 ತಮ್ಮ ಪೂರ್ವಿಕರು ಸೇವೆಮಾಡಿದ ದೇವರೊಂದಿಗೆ ಅಲ್ಲಿ ಅವರು ಒಡಂಬಡಿಕೆ ಮಾಡಿಕೊಂಡು ತಾವು ಪೂರ್ಣಹೃದಯದಿಂದಲೂ ಪೂರ್ಣಆತ್ಮದಿಂದಲೂ ಆತನ ಸೇವೆ ಮಾಡುವುದಾಗಿ ಪ್ರಮಾಣಮಾಡಿದರು.
13 ಯಾವನಾದರೂ ದೇವರಾದ ಯೆಹೋವನ ಸೇವೆಮಾಡಲು ನಿರಾಕರಿಸುವದಾದರೆ ಆ ವ್ಯಕ್ತಿಯು ಗಂಡಸಾಗಿದ್ದರೂ ಹೆಂಗಸಾಗಿದ್ದರೂ ಮುಖ್ಯವಾದವನಾಗಿದ್ದರೂ ಮುಖ್ಯವಲ್ಲದವನಾಗಿದ್ದರೂ ಕೊಲ್ಲಲ್ಪಡಬೇಕು ಎಂಬುದಾಗಿ ಹೇಳಿದರು.
14 ಆಮೇಲೆ ಆಸನೂ ಅವನ ಜನರೂ ದೇವರಿಗೆ ಪ್ರಮಾಣಮಾಡಿ ಸಂತೋಷದಿಂದ ಹರ್ಷಧ್ವನಿ ಮಾಡಿದರು. ಅಲ್ಲದೆ ತುತ್ತೂರಿಯನ್ನೂ ಕೊಂಬನ್ನೂ ಊದಿದರು.
15 ಯೆಹೂದದ ಎಲ್ಲಾ ಜನರು ತಾವು ಯೆಹೋವನಿಗೆ ಮಾಡಿದ ಪ್ರಮಾಣದ ನಿಮಿತ್ತ ಸಂತೋಷಪಟ್ಟರು. ಯಾಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ಪ್ರಮಾಣಮಾಡಿದ್ದರು. ಅವರು ಯೆಹೋವನನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸಿದರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಪ್ರಸನ್ನನಾಗಿ ಅವರಿಗೆ ಸಮಾಧಾನವನ್ನು ಕೊಟ್ಟನು.
16 ಆಸನು ತನ್ನ ತಾಯಿಯಾದ ಮಾಕಳನ್ನು ರಾಜಮಾತೆ ಎಂಬ ಪದವಿಯಿಂದ ತಳ್ಳಿಬಿಟ್ಟನು. ಯಾಕೆಂದರೆ ಆಕೆಯು ಅಶೇರ್ ದೇವತೆಯ ಅಸಹ್ಯವಾದ ಕಂಬವನ್ನು ಮಾಡಿಸಿದ್ದಳು. ಆಸನು ಅದನ್ನು ಕಡಿದು ಚೂರುಚೂರಾಗಿ ಮಾಡಿಸಿದನು. ನಂತರ ಅದನ್ನು ಕಿದ್ರೋನ್ ಕಣಿವೆಯಲ್ಲಿ ಸುಟ್ಟುಬಿಟ್ಟನು.
17 ಆದರೂ ಯೆಹೂದದ ಎಲ್ಲಾ ಉನ್ನತಸ್ಥಳಗಳು ತೆಗೆಯಲ್ಪಡಲಿಲ್ಲ, ಆದರೆ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ನಂಬಿಗಸ್ತನಾಗಿದ್ದನು.
18 ಆಸನು ತನ್ನ ತಂದೆಯು ಕೊಟ್ಟ ಪರಿಶುದ್ಧ ಕಾಣಿಕೆಗಳನ್ನು ದೇವಾಲಯದಲ್ಲಿ ಇಡಿಸಿದನು. ಅವು ಬೆಳ್ಳಿಬಂಗಾರಗಳ ವಸ್ತುಗಳಾಗಿದ್ದವು.
19 ಆಸನ ಆಳ್ವಿಕೆಯ ಮೂವತ್ತೈದನೆಯ ವರ್ಷದ ತನಕ ದೇಶದಲ್ಲಿ ಯುದ್ಧವೇ ಇರಲಿಲ್ಲ.
×

Alert

×