1
|
ಆಸನ ಮಗನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದನು. ಅವನು ತನ್ನ ರಾಜ್ಯವನ್ನು ಬಲಪಡಿಸಿ ಇಸ್ರೇಲರಿಂದ ತನಗೆ ಅಪಾಯವಾಗದಂತೆ ಸುರಕ್ಷೆಯ ವ್ಯವಸ್ಥೆ ಮಾಡಿಕೊಂಡನು. |
2
|
ಯೆಹೂದದ ಎಲ್ಲಾ ಕೋಟೆಗಳುಳ್ಳ ಪಟ್ಟಣಗಳಲ್ಲಿಯೂ ತನ್ನ ತಂದೆಯು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ಪ್ರಾಂತ್ಯದ ಪಟ್ಟಣಗಳಲ್ಲಿಯೂ ಸೈನ್ಯವನ್ನಿಟ್ಟನು. |
3
|
ಯೆಹೋವನು ಯೆಹೋಷಾಫಾಟನೊಂದಿಗೆ ಇದ್ದನು; ಯಾಕಂದರೆ ಯೆಹೋಷಾಫಾಟನು ತನ್ನ ಯೌವನ ಕಾಲದಲ್ಲಿಯೆ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಜೀವಿಸಿದನು. ಅವನು ಬಾಳನ ಪೂಜೆಯನ್ನು ಮಾಡಲಿಲ್ಲ. |
4
|
ತನ್ನ ಪೂರ್ವಿಕರು ಅನುಸರಿಸಿದ ದೇವರನ್ನು ನಿರೀಕ್ಷಿಸಿದನು. ಆತನ ಆಜ್ಞೆಗಳನ್ನು ಅನುಸರಿಸಿದನು. ಇಸ್ರೇಲಿ ಅರಸರು ನಡೆದಂತೆ ಇವನು ನಡೆಯಲಿಲ್ಲ. |
5
|
ಯೆಹೋವನು ಯೆಹೋಷಾಫಾಟನಿಗಾಗಿ ರಾಜ್ಯದ ಅಧಿಕಾರವನ್ನು ಸ್ಥಿರಪಡಿಸಿದನು. ಯೆಹೂದದ ಜನರೆಲ್ಲರು ಅವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಆದುದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ದೊರಕಿತು. |
6
|
ಅವನ ಹೃದಯವು ಯೆಹೋವನ ಮಾರ್ಗಗಳಲ್ಲಿ ಆನಂದವನ್ನು ಕಂಡುಕೊಂಡಿತು. ಯೆಹೂದ ಪ್ರಾಂತ್ಯದಲ್ಲಿ ವಿಗ್ರಹಗಳ ಪೂಜಾಸ್ಥಳಗಳನ್ನೆಲ್ಲಾ ತೆಗೆದುಹಾಕಿಸಿ ಅಶೇರ ಸ್ತಂಭಗಳನ್ನು ಕಡಿದುಹಾಕಿಸಿ ಅವುಗಳನ್ನು ನಿರ್ಮೂಲ ಮಾಡಿದನು. |
7
|
ತನ್ನ ಆಳ್ವಿಕೆಯ ಮೂರನೆಯ ವರುಷದಲ್ಲಿ ಯೆಹೂದದ ಎಲ್ಲಾ ಪಟ್ಟಣಗಳಿಗೆ ನಾಯಕರನ್ನು ಕಳುಹಿಸಿ ಜನರಿಗೆ ದೇವರ ವಿಧಿನಿಯಮಗಳು ಬೋಧಿಸಲ್ಪಡುವಂತೆ ಮಾಡಿದನು. ಆ ನಾಯಕರು ಯಾರೆಂದರೆ: ಬೆನ್ಹೈಲ್, ಓಬದ್ಯ, ಜೆಕರ್ಯನೆತನೇಲ್ ಮತ್ತು ಮೀಕಾಯ. |
8
|
ಯೆಹೋಷಾಫಾಟನು ಅವರೊಂದಿಗೆ ಲೇವಿಯರನ್ನೂ ಕಳುಹಿಸಿದನು. ಅವರು ಯಾರೆಂದರೆ: ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ ಮತ್ತು ಟೋಬೀಯ. ಅವರೊಂದಿಗೆ ಕಳುಹಿಸಲ್ಪಟ್ಟ ಯಾಜಕರು ಯಾರೆಂದರೆ: ಎಲೀಷಾಮಾ ಮತ್ತು ಯೆಹೋರಾಮ. |
9
|
ಇವರೆಲ್ಲಾ ಯೆಹೂದದ ಜನರಿಗೆ ಯೆಹೋವನ ಧರ್ಮೋಪದೇಶ ಪುಸ್ತಕದಿಂದ ಆತನ ಕಟ್ಟಳೆ ವಿಧಿನಿಯಮಗಳನ್ನು ಯೆಹೂದದ ಪಟ್ಟಣಗಳಲ್ಲೆಲ್ಲಾ ಸಂಚರಿಸಿ ಕಲಿಸಿದರು. |
10
|
ಯೆಹೂದದ ಸುತ್ತಮುತ್ತಲಿನ ದೇಶಗಳ ಜನಾಂಗಗಳು ಯೆಹೋವನಿಗೆ ಭಯಪಟ್ಟರು. ಆದುದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಕ್ಕೆ ಹೋಗಲಿಲ್ಲ. |
11
|
ಫಿಲಿಷ್ಟಿಯರಲ್ಲಿ ಕೆಲವರು ಅವನಿಗೆ ಬೆಳ್ಳಿಬಂಗಾರಗಳ ಕಾಣಿಕೆಗಳನ್ನು ತಂದುಕೊಟ್ಟರು; ಅವನೊಬ್ಬ ಬಲಿಷ್ಠನಾದ ರಾಜನೆಂದು ಅವರು ತಿಳಿದುಕೊಂಡಿದ್ದರು. ಅರಬಿಯದ ಜನರು ಯೆಹೋಷಾಫಾಟನಿಗೆ ಪಶುಗಳ ಹಿಂಡುಗಳನ್ನು ತಂದುಕೊಟ್ಟರು. ಅವುಗಳಲ್ಲಿ ಏಳು ಸಾವಿರದ ಏಳುನೂರು ಟಗರುಗಳು ಮತ್ತು ಏಳು ಸಾವಿರದ ಏಳುನೂರು ಹೋತಗಳು ಇದ್ದವು. |
12
|
ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ದೊಡ್ಡ ಅರಸನಾದನು. ಅವನು ಯೆಹೂದ ದೇಶದಲ್ಲೆಲ್ಲಾ ಕೋಟೆಗಳನ್ನು ಕಟ್ಟಿಸಿದನು. ಉಗ್ರಾಣ ನಗರಗಳನ್ನು ಕಟ್ಟಿಸಿದನು. |
13
|
ಅವುಗಳಲ್ಲಿ ಬೇಕಾದ ಸಾಮಾಗ್ರಿಗಳನ್ನು ಸಂಗ್ರಹಿಸಿಟ್ಟನು. ಜೆರುಸಲೇಮಿನಲ್ಲಿ ನುರಿತ ಸೈನ್ಯವನ್ನು ಇರಿಸಿದನು. |
14
|
ಅವರು ಬೇರೆಬೇರೆ ಕುಲಗಳಿಂದ ಬಂದವರಾಗಿದ್ದರು. ಯೆಹೂದಕುಲದ ಅದ್ನನು ಮೂರುಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. |
15
|
ಯೆಹೋಹಾನಾನನು ಎರಡು ಲಕ್ಷ ಎಂಭತ್ತು ಸಾವಿರ ಸೈನಿಕರಿಗೆ ಸೇನಾಪತಿಯಾಗಿದ್ದನು. |
16
|
ಅಮಸ್ಯನು ಎರಡು ಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. ಅಮಸ್ಯನು ಜಿಕ್ರಿಯ ಮಗ. ಯೆಹೋವನ ಸೇವೆಮಾಡುವದಕ್ಕೆ ಅವನು ತನ್ನನ್ನು ಒಪ್ಪಿಸಿಕೊಟ್ಟಿದ್ದನು. |
17
|
ಬೆನ್ಯಾಮೀನನ ಕುಲದ ಎಲ್ಯಾದನು ಎರಡು ಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. ಇವರು ಬಿಲ್ಲು, ಬಾಣ, ಗುರಾಣಿಗಳನ್ನು ಬಳಸಬಲ್ಲವರಾಗಿದ್ದರು. ಎಲ್ಯಾದನು ಶೂರನಾದ ಸೇನಾಪತಿ. |
18
|
ಯೆಹೋಜಾಬಾದನು ಒಂದುಲಕ್ಷ ಎಂಭತ್ತು ಸಾವಿರ ಸೈನಿಕರಿಗೆ ಸೇನಾಪತಿಯಾಗಿದ್ದನು. |
19
|
ಈ ಸೈನಿಕರೆಲ್ಲಾ ಯೆಹೋಷಾಫಾಟನ ಸೇವೆಮಾಡಿದರು. ಇವರಲ್ಲದೆ ಯೆಹೂದ ದೇಶದಲ್ಲೆಲ್ಲಾ ಇದ್ದ ಕೋಟೆಗಳಲ್ಲಿಯೂ ಸೈನಿಕರಿದ್ದರು. |
2-Chronicles 17:1 Kannada Language Bible Words basic statistical display
COMING SOON ...