1
|
ಯೋತಾವುನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಪಟ್ಟಕ್ಕೆ ಬಂದನು. ಅವನು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನ ತಾಯಿ ಚಾದೋಕನ ಮಗಳಾದ ಯೆರೂಷ. |
2
|
ಯೋತಾವುನು ಯೆಹೋವನಿಗೆ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡಿದನು. ತನ್ನ ತಂದೆಯಾದ ಉಜ್ಜೀಯನಂತೆ ಅವನೂ ದೇವರಿಗೆ ವಿಧೇಯನಾಗಿ ನಡೆದುಕೊಂಡನು. ಆದರೆ ತನ್ನ ತಂದೆಯು ದೇವಾಲಯವನ್ನು ಪ್ರವೇಶಿಸಿ ಧೂಪ ಹಾಕಿದಂತೆ ಇವನು ಮಾಡಲಿಲ್ಲ. ಜನರು ಮಾತ್ರ ಕೆಟ್ಟಕಾರ್ಯಗಳಲ್ಲಿಯೇ ಮುಂದುವರೆದರು. |
3
|
ಯೋತಾವುನು ದೇವಾಲಯದ ಮೇಲಿನ ಬಾಗಿಲನ್ನು ತಿರುಗಿ ಕಟ್ಟಿಸಿದನು. ಪೌಳಿ ಗೋಡೆಯ ಮೇಲೆ ಓಫೇಲ್ ಎಂಬ ಸ್ಥಳದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು. |
4
|
ಯೋತಾವುನು ಯೆಹೂದದ ಬೆಟ್ಟಪ್ರದೇಶಗಳಲ್ಲಿ ಪಟ್ಟಣಗಳನ್ನು ಮತ್ತು ಕಾಡಿನೊಳಗೆ ಗೋಪುರಗಳನ್ನು ಕಟ್ಟಿಸಿದನು. |
5
|
ಯೋತಾವುನು ಅಮ್ಮೋನಿಯರ ಸೈನ್ಯದೊಡನೆ ಕಾದಾಡಿ ಜಯಗಳಿಸಿದನು. ಅವರು ಪ್ರತಿ ವರುಷ ಮೂರು ವರುಷಗಳ ಕಾಲ ಮೂರು ಸಾವಿರದ ನಾನೂರು ಕಿಲೋಗ್ರಾಂ ತೂಕದ ಬೆಳ್ಳಿ, ಅರವತ್ತೆರಡು ಸಾವಿರ ಬುಷೆಲ್ ಗೋಧಿಯನ್ನೂ, ಅರವತ್ತೆರಡು ಸಾವಿರ ಬುಷೆಲ್ ಜವೆ ಗೋಧಿಯನ್ನೂ ಯೋತಾವುನಿಗೆ ಕಾಣಿಕೆಯಾಗಿ ಕೊಟ್ಟರು. |
6
|
ಯೋತಾವುನು ದೇವರಿಗೆ ವಿಧೇಯನಾಗಿ ಜೀವಿಸಿದ್ದ ಕಾರಣ ಬಲಿಷ್ಠನಾದ ರಾಜನಾದನು. |
7
|
ಅವನು ಮಾಡಿದ ಬೇರೆ ಕಾರ್ಯಗಳು ಮತ್ತು ನಡಿಸಿದ ಯುದ್ಧಗಳ ವಿಷಯ ಇಸ್ರೇಲರ ಮತ್ತು ಯೆಹೂದದ ರಾಜರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ. |
8
|
ಯೋತಾವುನು ತನ್ನ ಇಪ್ಪತ್ತೈದನೆಯ ವರ್ಷದಲ್ಲಿ ಅರಸನಾದನು. ಅವನು ಹದಿನಾರು ವರುಷ ಜೆರುಸಲೇಮಿನಲ್ಲಿ ಆಳಿದನು. |
9
|
ಯೋತಾವುನು ಸತ್ತಾಗ ಅವನ ಪೂರ್ವಿಕರೊಂದಿಗೆ ಸಮಾಧಿಮಾಡಿದರು. ಅವನನ್ನು ದಾವೀದನಗರದಲ್ಲಿ ಹೂಳಿಟ್ಟರು. ಯೋತಾವುನ ಮಗನಾದ ಆಹಾಜನು ತನ್ನ ತಂದೆಯ ನಂತರ ರಾಜನಾದನು. |
2-Chronicles 27:1 Kannada Language Bible Words basic statistical display
COMING SOON ...