English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

2 Corinthians Chapters

2 Corinthians 6 Verses

1 ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.
2 ದೇವರು ಹೀಗೆನ್ನುತ್ತಾನೆ: “ಸುಪ್ರಸನ್ನತೆಯ ಕಾಲದಲ್ಲಿ ನಾನು ನಿನಗೆ ಕಿವಿಗೊಟ್ಟೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು.” ಯೆಶಾಯ 49:8 ಇದೇ ಆ “ಸುಪ್ರಸನ್ನತೆಯ ಕಾಲ.” ಇದೇ ಆ “ರಕ್ಷಣೆಯ ದಿನ.”
3 ನಮ್ಮ ಸೇವೆಯು ನಿಂದೆಗೆ ಒಳಗಾಗಬಾರದೆಂದು ನಾವು ಯಾರಿಗೂ ತೊಂದರೆ ಮಾಡುವುದಿಲ್ಲ.
4 ಆದರೆ ಪ್ರತಿಯೊಂದು ವಿಷಯದಲ್ಲಿಯೂ ನಾವು ದೇವರ ಸೇವಕರೆಂಬುದನ್ನು ತೋರ್ಪಡಿಸುತ್ತೇವೆ. ನಾವು ಸಂಕಟಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ
5 ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರುತ್ತೇವೆ.
6 ನಾವು ದೇವರ ಸೇವಕರೆಂಬುದನ್ನು ನಮ್ಮ ತಿಳುವಳಿಕೆಯಿಂದಲೂ ತಾಳ್ಮೆಯಿಂದಲೂ ಕನಿಕರದಿಂದಲೂ ಮತ್ತು ಪರಿಶುದ್ಧ ಜೀವಿತದಿಂದಲೂ ತೋರ್ಪಡಿಸಿದ್ದೇವೆ. ನಾವು ಇದನ್ನು ಪವಿತ್ರಾತ್ಮನಿಂದಲೂ ನಿಜವಾದ ಪ್ರೀತಿಯಿಂದಲೂ
7 ಸತ್ಯವನ್ನು ಹೇಳುವುದರಿಂದಲೂ ದೇವರ ಶಕ್ತಿಯಿಂದಲೂ ತೋರ್ಪಡಿಸುತ್ತೇವೆ. ಪ್ರತಿಯೊಂದರ ವಿರೋಧವಾಗಿ ನಮ್ಮನ್ನು ಸಂರಕ್ಷಿಸಿಕೊಳ್ಳಲು ನಮ್ಮ ಒಳ್ಳೆಯ ಜೀವಿತವನ್ನೇ ಉಪಯೋಗಿಸುತ್ತೇವೆ.
8 ಕೆಲವರು ನಮ್ಮನ್ನು ಸನ್ಮಾನಿಸುತ್ತಾರೆ; ಇನ್ನು ಕೆಲವರು ನಮಗೆ ಅವಮಾನ ಮಾಡುತ್ತಾರೆ. ಕೆಲವರು ನಮ್ಮ ಬಗ್ಗೆ ಒಳ್ಳೆಯ ವಿಷಯಗಳನ್ನು ಹೇಳುತ್ತಾರೆ; ಇನ್ನು ಕೆಲವರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಹೇಳುತ್ತಾರೆ. ಕೆಲವರು ನಮ್ಮನ್ನು ಸುಳ್ಳುಗಾರರೆನ್ನುತ್ತಾರೆ, ಆದರೆ ನಾವು ಸತ್ಯವನ್ನೇ ಹೇಳುತ್ತೇವೆ.
9 ನಾವು ಪ್ರಸಿದ್ಧರಾಗಿದ್ದರೂ ಕೆಲವರು ನಮ್ಮನ್ನು ಅಪ್ರಸಿದ್ಧರಂತೆ ಕಾಣುತ್ತಾರೆ. ನಾವು ಸಾಯುವಂತಿದ್ದರೂ ಬದುಕಿದ್ದೇವೆ; ಶಿಕ್ಷಿಸಲ್ಪಟ್ಟರೂ ಕೊಲ್ಲಲ್ಪಡಲಿಲ್ಲ;
10 ದುಃಖಿತರಂತೆ ಕಂಡರೂ ಯಾವಾಗಲೂ ಉಲ್ಲಾಸಿಸುವವರಾಗಿದ್ದೇವೆ; ಬಡವರಂತೆ ಕಂಡರೂ ಅನೇಕರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿ ಮಾಡುತ್ತಿದ್ದೇವೆ; ಏನೂ ಇಲ್ಲದವರಂತೆ ಕಂಡರೂ ವಾಸ್ತವವಾಗಿ ಎಲ್ಲವನ್ನೂ ಹೊಂದಿದವರಾಗಿದ್ದೇವೆ.
11 ಕೊರಿಂಥದಲ್ಲಿರುವ ನಿಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತಾಡಿದ್ದೇವೆ. ನಮ್ಮ ಹೃದಯಗಳನ್ನು ನಿಮ್ಮ ಮುಂದೆ ತೆರೆದಿಟ್ಟಿದ್ದೇವೆ.
12 ನಿಮ್ಮ ಮೇಲೆ ನಮಗಿರುವ ಪ್ರೀತಿಯು ನಿಂತು ಹೋಗಿಲ್ಲ. ಆದರೆ ನಮ್ಮ ಮೇಲೆ ನಿಮಗಿದ್ದ ಪ್ರೀತಿಯೇ ನಿಂತು ಹೋಗಿದೆ.
13 ನೀವು ನನ್ನ ಮಕ್ಕಳೆಂಬಂತೆ ನಾನು ನಿಮ್ಮೊಂದಿಗೆ ಮಾತಾಡುತ್ತಿದ್ದೇನೆ. ನಾವು ತೆರೆದಂತೆ ನೀವು ಸಹ ನಿಮ್ಮ ಹೃದಯಗಳನ್ನು ತೆರೆಯಿರಿ.
14 ಕ್ರಿಸ್ತನಂಬಿಕೆಯಿಲ್ಲದ ಜನರಿಗೂ ನಿಮಗೂ ವ್ಯತ್ಯಾಸವಿದೆ. ಆದ್ದರಿಂದ ನೀವು ಅವರೊಂದಿಗೆ ಸೇರಬೇಡಿ. ಒಳ್ಳೆಯದು ಮತ್ತು ಕೆಟ್ಟದು ಒಟ್ಟಾಗಿ ಸೇರಲು ಸಾಧ್ಯವಿಲ್ಲ. ಬೆಳಕು ಕತ್ತಲೆಯೊಡನೆ ಅನ್ಯೋನ್ಯವಾಗಿರಲು ಸಾಧ್ಯವೇ?
15 ಕ್ರಿಸ್ತನೂ ಸೈತಾನನೂ ಅನ್ಯೋನ್ಯವಾಗಿರಲು ಸಾಧ್ಯವೇ? ವಿಶ್ವಾಸಿಗಳಿಗೂ ಅವಿಶ್ವಾಸಿಗಳಿಗೂ ಪಾಲುಗಾರಿಕೆಯೇನು?
16 ದೇವರ ಆಲಯವು ವಿಗ್ರಹಗಳೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವೇ? ನಾವು ಜೀವಸ್ವರೂಪನಾದ ದೇವರ ಆಲಯವಾಗಿದ್ದೇವೆ. ದೇವರು ಹೇಳಿದಂತೆ: “ನಾನು ಅವರೊಂದಿಗೆ ವಾಸಿಸುವೆನು; ಅವರೊಂದಿಗೆ ನಡೆಯುವೆನು; ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.” ಯಾಜಕಕಾಂಡ 26:11-12
17 “ಆದ್ದರಿಂದ ಆ ಜನರನ್ನು ಬಿಟ್ಟು ಹೊರಬನ್ನಿರಿ; ಅವರಿಂದ ಬೇರ್ಪಡಿರಿ ಎನ್ನುತ್ತಾನೆ ಪ್ರಭುವು. ಅಶುದ್ಧವಾದ ಯಾವುದನ್ನೂ ಮುಟ್ಟಬೇಡಿ, ಆಗ ನಾನು ನಿಮ್ಮನ್ನು ಸ್ವೀಕರಿಸಿಕೊಳ್ಳುವೆನು.” ಯೆಶಾಯ 52:11
18 “ನಾನು ನಿಮ್ಮ ತಂದೆಯಾಗಿರುವೆನು ಮತ್ತು ನೀವು ನನ್ನ ಪುತ್ರಪುತ್ರಿಯರಾಗುವಿರಿ ಎನ್ನುತ್ತಾನೆ ಸರ್ವಶಕ್ತನಾದ ಪ್ರಭುವು.” 2 ಸಮುವೇಲ 7:8, 14
×

Alert

×