1
|
ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ. |
2
|
ದೇವರು ಇಂತೆನ್ನುತ್ತಾನೆ: “ಸುಪ್ರಸನ್ನತೆಯ ಕಾಲದಲ್ಲಿ ನಾನು ನಿನಗೆ ಕಿವಿಗೊಟ್ಟೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು.” ಯೆಶಾಯ 49:8 ಇದೇ ಆ “ಸುಪ್ರಸನ್ನತೆಯ ಕಾಲ”, ಇದೇ ಆ “ರಕ್ಷಣೆಯ ದಿನ.” |
3
|
ನಮ್ಮ ಸೇವೆಯು ನಿಂದೆಗೆ ಒಳಗಾಗಬಾರದೆಂದು ನಾವು ಯಾರಿಗೂ ತೊಂದರೆ ಮಾಡುವುದಿಲ್ಲ. |
4
|
ಆದರೆ ಪ್ರತಿಯೊಂದು ವಿಷಯದಲ್ಲಿಯೂ ನಾವು ದೇವರ ಸೇವಕರೆಂಬುದನ್ನು ತೋರ್ಪಡಿಸುತ್ತೇವೆ. ನಾವು ಸಂಕಟಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ |
5
|
ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರುತ್ತೇವೆ. |
6
|
ನಾವು ದೇವರ ಸೇವಕರೆಂಬುದನ್ನು ನಮ್ಮ ತಿಳುವಳಿಕೆಯಿಂದಲೂ ತಾಳ್ಮೆಯಿಂದಲೂ ಕನಿಕರದಿಂದಲೂ ಮತ್ತು ಪರಿಶುದ್ಧ ಜೀವಿತದಿಂದಲೂ ತೋರ್ಪಡಿಸಿದ್ದೇವೆ. ನಾವು ಇದನ್ನು ಪವಿತ್ರಾತ್ಮನಿಂದಲೂ ನಿಜವಾದ ಪ್ರೀತಿಯಿಂದಲೂ |
7
|
ಸತ್ಯವನ್ನು ಹೇಳುವುದರಿಂದಲೂ ದೇವರ ಶಕ್ತಿಯಿಂದಲೂ ತೋರ್ಪಡಿಸುತ್ತೇವೆ. ಪ್ರತಿಯೊಂದರ ವಿರೋಧವಾಗಿ ನಮ್ಮನ್ನು ಸಂರಕ್ಷಿಸಿಕೊಳ್ಳಲು ನಮ್ಮ ಒಳ್ಳೆಯ ಜೀವಿತವನ್ನೇ ಉಪಯೋಗಿಸುತ್ತೇವೆ. |
8
|
ಕೆಲವರು ನಮ್ಮನ್ನು ಸನ್ಮಾನಿಸುತ್ತಾರೆ; ಇನ್ನು ಕೆಲವರು ನಮಗೆ ಅವಮಾನ ಮಾಡುತ್ತಾರೆ. ಕೆಲವರು ನಮ್ಮ ಬಗ್ಗೆ ಒಳ್ಳೆಯ ವಿಷಯಗಳನ್ನು ಹೇಳುತ್ತಾರೆ; ಇನ್ನು ಕೆಲವರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಹೇಳುತ್ತಾರೆ. ಕೆಲವರು ನಮ್ಮನ್ನು ಸುಳ್ಳುಗಾರರೆನ್ನುತ್ತಾರೆ, ಆದರೆ ನಾವು ಸತ್ಯವನ್ನೇ ಹೇಳುತ್ತೇವೆ. |
9
|
ನಾವು ಪ್ರಸಿದ್ಧರಾಗಿದ್ದರೂ ಕೆಲವರು ನಮ್ಮನ್ನು ಅಪ್ರಸಿದ್ಧರಂತೆ ಕಾಣುತ್ತಾರೆ. ನಾವು ಸಾಯುವಂತಿದ್ದರೂ ಬದುಕಿದ್ದೇವೆ; ಶಿಕ್ಷಿಸಲ್ಪಟ್ಟರೂ ಕೊಲ್ಲಲ್ಪಡಲಿಲ್ಲ; |
10
|
ದುಃಖಿತರಂತೆ ಕಂಡರೂ ಯಾವಾಗಲೂ ಉಲ್ಲಾಸಿಸುವವರಾಗಿದ್ದೇವೆ; ಬಡವರಂತೆ ಕಂಡರೂ ಅನೇಕರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿ ಮಾಡುತ್ತಿದ್ದೇವೆ; ಏನೂ ಇಲ್ಲದವರಂತೆ ಕಂಡರೂ ವಾಸ್ತವವಾಗಿ ಎಲ್ಲವನ್ನೂ ಹೊಂದಿದವರಾಗಿದ್ದೇವೆ. |
11
|
ಕೊರಿಂಥದಲ್ಲಿರುವ ನಿಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತಾಡಿದ್ದೇವೆ. ನಮ್ಮ ಹೃದಯಗಳನ್ನು ನಿಮ್ಮ ಮುಂದೆ ತೆರೆದಿಟ್ಟಿದ್ದೇವೆ. |
12
|
ನಿಮ್ಮ ಮೇಲೆ ನಮಗಿರುವ ಪ್ರೀತಿಯು ನಿಂತು ಹೋಗಿಲ್ಲ. ಆದರೆ ನಮ್ಮ ಮೇಲೆ ನಿಮಗಿದ್ದ ಪ್ರೀತಿಯೇ ನಿಂತು ಹೋಗಿದೆ. |
13
|
ನೀವು ನನ್ನ ಮಕ್ಕಳೆಂಬಂತೆ ನಾನು ನಿಮ್ಮೊಂದಿಗೆ ಮಾತಾಡುತ್ತಿದ್ದೇನೆ. ನಾವು ತೆರೆದಂತೆ ನೀವು ಸಹ ನಿಮ್ಮ ಹೃದಯಗಳನ್ನು ತೆರೆಯಿರಿ. |
14
|
ಕ್ರಿಸ್ತನಂಬಿಕೆಯಿಲ್ಲದ ಜನರಿಗೂ ನಿಮಗೂ ವ್ಯತ್ಯಾಸವಿದೆ. ಆದ್ದರಿಂದ ನೀವು ಅವರೊಂದಿಗೆ ಸೇರಬೇಡಿ. ಒಳ್ಳೆಯದು ಮತ್ತು ಕೆಟ್ಟದು ಒಟ್ಟಾಗಿ ಸೇರಲು ಸಾಧ್ಯವಿಲ್ಲ. ಬೆಳಕು ಕತ್ತಲೆಯೊಡನೆ ಅನ್ಯೋನ್ಯವಾಗಿರಲು ಸಾಧ್ಯವೇ? |
15
|
ಕ್ರಿಸ್ತನೂ ಸೈತಾನನೂ ಅನ್ಯೋನ್ಯವಾಗಿರಲು ಸಾಧ್ಯವೇ? ವಿಶ್ವಾಸಿಗಳಿಗೂ ಅವಿಶ್ವಾಸಿಗಳಿಗೂ ಪಾಲುಗಾರಿಕೆಯೇನು? |
16
|
ದೇವರ ಆಲಯವು ವಿಗ್ರಹಗಳೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವೇ? ನಾವು ಜೀವಸ್ವರೂಪನಾದ ದೇವರ ಆಲಯವಾಗಿದ್ದೇವೆ. ದೇವರು ಹೇಳಿದಂತೆ: “ನಾನು ಅವರೊಂದಿಗೆ ವಾಸಿಸುವೆನು; ಅವರೊಂದಿಗೆ ನಡೆಯುವೆನು; ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.” ಯಾಜಕಕಾಂಡ 26:11-12 |
17
|
”ಆದ್ದರಿಂದ ಆ ಜನರನ್ನು ಬಿಟ್ಟು ಹೊರಬನ್ನಿರಿ; ಅವರಿಂದ ಬೇರ್ಪಡಿರಿ ಎನ್ನತ್ತಾನೆ ಪ್ರಭುವು. ಅಶುದ್ಧವಾದ ಯಾವುದನ್ನೂ ಮುಟ್ಟಬೇಡಿ, ಆಗ ನಾನು ನಿಮ್ಮನ್ನು ಸ್ವೀಕರಿಸಿಕೊಳ್ಳುವೆನು.” ಯೆಶಾಯ 52:11 |
18
|
”ನಾನು ನಿಮ್ಮ ತಂದೆಯಾಗಿರುವೆನು, ಮತ್ತು ನೀವು ನನ್ನ ಪುತ್ರಪುತ್ರಿಯರಾಗುವಿರಿ ಎನ್ನುತ್ತಾನೆ ಸರ್ವಶಕ್ತನಾದ ಪ್ರಭುವು.” 2 ಸಮುವೇಲ 7:14; 7:8 |
2-Corinthians 6:2 Kannada Language Bible Words basic statistical display
COMING SOON ...