1
|
ಸಹೋದರ ಸಹೋದರಿಯರೇ, ಮಕೆದೋನಿಯದ ಸಭೆಗಳಲ್ಲಿ ದೇವರು ತೋರಿದ ಕೃಪೆಯ ಬಗ್ಗೆ ನಿಮಗೆ ತಿಳಿಸಲು ಇಷ್ಟಪಡುತ್ತೇವೆ. |
2
|
ಆ ವಿಶ್ವಾಸಿಗಳು ಅತೀವ ಕಷ್ಟಗಳಿಂದ ಪರೀಕ್ಷಿಸಲ್ಪಟ್ಟಿದ್ದಾರೆ. ಅವರು ಬಹಳ ಬಡಜನರು. ಆದರೆ ಅವರು ತಮ್ಮ ಮಹಾ ಆನಂದದಿಂದ ಬಹಳವಾಗಿ ಕೊಟ್ಟರು. |
3
|
ತಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಕೊಟ್ಟಿದ್ದಾರೆಂದು ನಾನು ನಿಮಗೆ ಹೇಳುತ್ತೇನೆ. ಅವರು ತಮ್ಮ ಶಕ್ತಿಮೀರಿ ಕೊಟ್ಟಿದ್ದಾರೆ. ಅವರು ತಾವಾಗಿಯೇ ಕೊಟ್ಟರು. ಕೊಡಬೇಕೆಂದು ಅವರಿಗೆ ಯಾರೂ ಹೇಳಲಿಲ್ಲ. |
4
|
ದೇವಜನರಿಗೋಸ್ಕರವಾದ ಈ ಸೇವೆಯಲ್ಲಿ ತಾವೂ ಪಾಲುಗಾರರಾಗುವ ಭಾಗ್ಯ ದೊರೆಯಬೇಕೆಂದು ಅವರು ನಮ್ಮನ್ನು ಪದೇಪದೇ ಕೇಳಿಕೊಂಡರು ಮತ್ತು ಬೇಡಿಕೊಂಡರು. |
5
|
ನಾವೆಂದೂ ನೆನಸಿಲ್ಲದ ರೀತಿಯಲ್ಲಿ ಅವರು ಕೊಟ್ಟರು. ಅವರು ತಮ್ಮ ಹಣವನ್ನು ನಮಗೆ ಕೊಡುವುದಕ್ಕಿಂತ ಮೊದಲು ತಮ್ಮನ್ನೇ ಪ್ರಭುವಿಗೂ ನಮಗೂ ಒಪ್ಪಿಸಿಕೊಟ್ಟರು. ದೇವರು ಬಯಸುವುದು ಇದನ್ನೇ. |
6
|
ಆದ್ದರಿಂದ, ವಿಶೇಷವಾದ ಈ ಕೃಪಾಕಾರ್ಯವನ್ನು ಪೂರೈಸಲು ನಿಮಗೆ ಸಹಾಯ ಮಾಡಬೇಕೆಂದು ನಾವು ತೀತನನ್ನು ಕೇಳಿಕೊಂಡೆವು. ಈ ಕಾರ್ಯವನ್ನು ಪ್ರಾರಂಭಿಸಿದವನು ತೀತನೇ. |
7
|
ನೀವು ಪ್ರತಿಯೊಂದರಲ್ಲಿಯೂ ಅಂದರೆ, ನಂಬಿಕೆಯಲ್ಲಿ, ಮಾತಾಡುವುದರಲ್ಲಿ, ಜ್ಞಾನದಲ್ಲಿ, ಸಹಾಯಮಾಡಬೇಕೆಂಬ ಆಸಕ್ತಿಯಲ್ಲಿ ಮತ್ತು ನಮ್ಮಿಂದ ಕಲಿತುಕೊಂಡ ಪ್ರೀತಿಯಲ್ಲಿ ಶ್ರೀಮಂತರಾಗಿದ್ದೀರಿ. ಆದ್ದರಿಂದ ಕೃಪಾಕಾರ್ಯದಲ್ಲಿಯೂ ನೀವು ಶ್ರೀಮಂತರಾಗಿರಬೇಕೆಂದು ನಾವು ಬಯಸುತ್ತೇವೆ. |
8
|
ನೀವು ಕೊಡಬೇಕೆಂದು ನಾನು ಆಜ್ಞಾಪಿಸುತ್ತಿಲ್ಲ. ಆದರೆ ನಿಮ್ಮ ಪ್ರೀತಿಯು ನಿಜವಾದ ಪ್ರೀತಿಯೇ ಎಂಬುದನ್ನು ನಾನು ನೋಡಬಯಸುತ್ತೇನೆ. ಸಹಾಯ ಮಾಡಲು ಇತರ ಜನರಿಗಿರುವ ನಿಜವಾದ ಬಯಕೆಯನ್ನು ನಿಮಗೆ ತೋರಿಸುವುದರ ಮೂಲಕವಾಗಿ ನಾನು ನಿಮ್ಮನ್ನು ಪರೀಕ್ಷಿಸುತ್ತೇನೆ. |
9
|
ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಿದೆ. ಕ್ರಿಸ್ತನು ದೇವರೊಂದಿಗೆ ಶ್ರೀಮಂತಿಕೆಯಲ್ಲಿದ್ದರೂ ನಿಮಗೋಸ್ಕರವಾಗಿ ಬಡವನಾದದ್ದು ನಿಮಗೆ ಗೊತ್ತಿದೆ. ನೀವು ಶ್ರೀಮಂತರಾಗಬೇಕೆಂದು ಕ್ರಿಸ್ತನು ಬಡವನಾದನು. |
10
|
ನಾನು ನಿಮಗೆ ಹೇಳುವುದೇನೆಂದರೆ: ಕಳೆದ ವರ್ಷ ಕೊಡುವುದರಲ್ಲಿ ನೀವೇ ಮೊದಲಿಗರಾಗಿದ್ದಿರಿ ಮತ್ತು ಮೊಟ್ಟಮೊದಲನೆಯದಾಗಿ ಕೊಟ್ಟವರು ನೀವೇ. |
11
|
ಆದ್ದರಿಂದ ನೀವು ಆರಂಭಿಸಿದ ಕಾರ್ಯವನ್ನು ಈಗ ಪೂರ್ಣಗೊಳಿಸಿರಿ. ಆಗ, ನಿಮ್ಮ ಕಾರ್ಯ ಮತ್ತು ನಿಮ್ಮ ಸಿದ್ಧಮನಸ್ಸು ಸರಿಸಮಾನವಾಗಿರುವುದು. ನಿಮ್ಮಲ್ಲಿರುವುದನ್ನು ಕೊಡಿರಿ. |
12
|
ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ. |
13
|
ಇತರ ಜನರು ಸುಖವಾಗಿರುವಾಗ ನೀವು ಕಷ್ಟದಿಂದಿರುವುದು ನಮಗೆ ಇಷ್ಟವಿಲ್ಲ. ಪ್ರತಿಯೊಂದರಲ್ಲಿಯೂ ಸಮಾನತೆ ಇರಬೇಕೆಂಬುದೇ ನಮ್ಮ ಬಯಕೆ. |
14
|
ಈಗ ನಿಮ್ಮಲ್ಲಿ ಬೇಕಾದಷ್ಟಿದೆ. ನಿಮ್ಮ ಈ ಸಮೃದ್ಧಿಯು ಇತರ ಜನರ ಕೊರತೆಯನ್ನು ನೀಗಿಸುವುದು. ಬಳಿಕ, ಅವರು ಸಮೃದ್ಧರಾಗಿರುವಾಗ ನಿಮ್ಮ ಕೊರತೆಯನ್ನು ನೀಗಿಸುವರು. ಹೀಗೆ ಎಲ್ಲರೂ ಸಮಾನರಾಗಿರುವರು. |
15
|
ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಇದಾಗುವುದು, “ಬಹಳವಾಗಿ ಶೇಖರಿಸಿಕೊಂಡವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪ ಶೇಖರಿಸಿಕೊಂಡವನಿಗೆ ಏನೂ ಕಡಿಮೆಯಾಗಲಿಲ್ಲ.” ವಿಮೋಚನಕಾಂಡ 16:18 |
16
|
ನಿಮ್ಮ ಮೇಲೆ ನನಗಿರುವ ಪ್ರೀತಿಯನ್ನು ದೇವರು ತೀತನಿಗೂ ಕೊಟ್ಟದ್ದಕ್ಕಾಗಿ ದೇವರನ್ನು ಸ್ತುತಿಸುತ್ತೇನೆ. |
17
|
ನಾವು ಕೇಳಿಕೊಂಡ ಕಾರ್ಯಗಳನ್ನು ಮಾಡಲು ತೀತನು ಒಪ್ಪಿಕೊಂಡನು. ನಿಮ್ಮ ಬಳಿಗೆ ಬರಲು ಅವನು ಅತ್ಯಾಸಕ್ತನಾಗಿದ್ದನು. ಇದು ಅವನ ಸ್ವಂತ ಆಲೋಚನೆ. |
18
|
ಎಲ್ಲಾ ಸಭೆಗಳಲ್ಲಿ ಹೊಗಳಿಕೆಗೆ ಪಾತ್ರನಾಗಿರುವ ಒಬ್ಬ ಸಹೋದರನನ್ನು ತೀತನೊಡನೆ ಕಳುಹಿಸುತ್ತಿದ್ದೇವೆ. ಈ ಸಹೋದರನು ಸುವಾರ್ತಾಸೇವೆಯ ವಿಷಯದಲ್ಲಿ ಕೀರ್ತಿಪಡೆದಿದ್ದಾನೆ. |
19
|
ಇದಲ್ಲದೆ, ನಾವು ಈ ಸಹಾಯಧನವನ್ನು ತೆಗೆದುಕೊಂಡು ಹೋಗುವಾಗ ನಮ್ಮ ಸಂಗಡವಿರುವುದಕ್ಕಾಗಿ ಸಭೆಗಳವರು ಈ ಸಹೋದರನನ್ನು ಆಯ್ಕೆಮಾಡಿದ್ದಾರೆ. ದೇವರ ಮಹಿಮೆಗಾಗಿಯೂ ಮತ್ತು ಸಹಾಯ ಮಾಡಲು ನಿಜವಾಗಿ ಬಯಸುತ್ತೇವೆ ಎಂಬುದನ್ನು ತೋರಿಸುವುದಕ್ಕಾಗಿಯೂ ಈ ಸೇವಾಕಾರ್ಯವನ್ನು ಮಾಡುತ್ತಿದ್ದೇವೆ. |
20
|
ಹೇರಳವಾದ ಈ ಸಹಾಯಧನವನ್ನು ನಾವು ನೋಡಿಕೊಳ್ಳುವ ಬಗ್ಗೆ ಟೀಕಿಸಲು ಯಾರಿಗೂ ಅವಕಾಶ ಕೊಡಬಾರದೆಂದು ಎಚ್ಚರಿಕೆಯಿಂದಿದ್ದೇವೆ. |
21
|
ಪ್ರಭುವು ಯಾವುದನ್ನು ಸರಿಯಾದದ್ದೆಂದು ಸ್ವೀಕರಿಸಿಕೊಳ್ಳುವನೊ ಮತ್ತು ಜನರು ಯಾವುದನ್ನು ಸರಿಯಾದದ್ದೆಂದು ಯೋಚಿಸುವರೊ ಅದನ್ನೇ ಮಾಡಲು ನಾವು ಪ್ರಯತ್ನಿಸುತ್ತಿದ್ದೇವೆ. |
22
|
ಇದಲ್ಲದೆ, ಸಹಾಯ ಮಾಡಲು ಯಾವಾಗಲೂ ಸಿದ್ಧನಾಗಿರುವ ನಮ್ಮ ಸಹೋದರನನ್ನು ಅವರೊಂದಿಗೆ ಕಳುಹಿಸಿಕೊಡುತ್ತಿದ್ದೇವೆ. ಅವನು ಅನೇಕ ವಿಧದಲ್ಲಿ ತನ್ನನ್ನು ನಿರೂಪಿಸಿದ್ದಾನೆ. ಈಗ ಅವನಿಗೆ ನಿಮ್ಮಲ್ಲಿ ಹೆಚ್ಚು ಭರವಸೆ ಇರುವುದರಿಂದ ಮತ್ತುಷ್ಟು ಸಹಾಯ ಮಾಡಲು ಬಯಸುತ್ತಾನೆ. |
23
|
ನಾನು ತೀತನ ಬಗ್ಗೆ ಹೇಳುವುದೇನೆಂದರೆ, ಅವನು ನನ್ನ ಜೊತೆಕೆಲಸಗಾರನಾಗಿದ್ದಾನೆ. ನಿಮಗೆ ಸಹಾಯ ಮಾಡಲು ಅವನು ನನ್ನೊಂದಿಗೆ ಕೆಲಸಮಾಡುತ್ತಿದ್ದಾನೆ. ಇತರ ಸಹೋದರರ ಬಗ್ಗೆ ನಾನು ಹೇಳುವುದೇನೆಂದರೆ, ಅವರು ಸಭೆಗಳಿಂದ ಕುಳುಹಿಸಲ್ಪಟ್ಟವರಾಗಿದ್ದಾರೆ ಮತ್ತು ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುವಂಥವರಾಗಿದ್ದಾರೆ. |
24
|
ಆದ್ದರಿಂದ ನಿಮ್ಮಲ್ಲಿ ನಿಜವಾಗಿಯೂ ಪ್ರೀತಿಯಿದೆ ಎಂಬುದನ್ನು ಈ ಜನರಿಗೆ ತೋರಿಸಿಕೊಡಿರಿ. ನಾವು ನಿಮ್ಮ ವಿಷಯದಲ್ಲಿ ಯಾಕೆ ಹೆಮ್ಮೆಪಡುತ್ತೇವೆಂಬುದನ್ನು ಇವರಿಗೆ ತೋರಿಸಿಕೊಡಿರಿ. ಆಗ ಎಲ್ಲಾ ಸಭೆಗಳವರು ಅದನ್ನು ನೋಡಲು ಸಾಧ್ಯವಾಗುವುದು. |
2-Corinthians 8:6 Kannada Language Bible Words basic statistical display
COMING SOON ...