Bible Languages

Indian Language Bible Word Collections

Bible Versions

Books

2 Kings Chapters

2 Kings 12 Verses

Bible Versions

Books

2 Kings Chapters

2 Kings 12 Verses

1 ಯೇಹುವು ಇಸ್ರೇಲಿನ ರಾಜನಾಗಿದ್ದ ಏಳನೆಯ ವರ್ಷದಲ್ಲಿ ಯೆಹೋವಾಷನು ಆಳಲಾರಂಭಿಸಿದನು. ಯೆಹೋವಾಷನು ಜೆರಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಬೇರ್ಷೆಬದ ಚಿಬ್ಯಳು ಯೆಹೋವಾಷನ ತಾಯಿ.
2 ಯೆಹೋವಾಷನು ಯೆಹೋವನು ಸರಿಯೆಂದು ಹೇಳಿದ ಕಾರ್ಯಗಳನ್ನು ಮಾಡಿದನು. ಯೆಹೋವಾಷನು ತನ್ನ ಜೀವಮಾನವೆಲ್ಲ ಯೆಹೋವನಿಗೆ ವಿಧೇಯನಾಗಿದ್ದನು. ಯಾಜಕನಾದ ಯೆಹೋಯಾದಾವನು ಉಪದೇಶಿಸಿದ್ದ ಕಾರ್ಯಗಳನ್ನೆಲ್ಲ ಯೆಹೋವಾಷನು ಮಾಡಿದನು.
3 ಆದರೆ ಅವನು ಉನ್ನತ ಪೂಜಾ ಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಇನ್ನೂ ಆ ಸ್ಥಳಗಳಲ್ಲಿ ಯಜ್ಞಗಳನ್ನು ಅರ್ಪಿಸುತ್ತಾರೆ ಮತ್ತು ಧೂಪಗಳನ್ನು ಸುಡುತ್ತಾರೆ.
4 [This verse may not be a part of this translation]
5 [This verse may not be a part of this translation]
6 ಆದರೆ ಯಾಜಕರು ಸರಿಪಡಿಸಲಿಲ್ಲ. ಯೆಹೋವಾಷನು ರಾಜನಾದ ಇಪ್ಪತ್ತಮೂರನೆಯ ವರ್ಷದಲ್ಲಿ, ಯಾಜಕರಿನ್ನೂ ದೇವಾಲಯವನ್ನು ಸರಿಪಡಿಸಲಿಲ್ಲ.
7 ಆದ್ದರಿಂದ ರಾಜನಾದ ಯೆಹೋವಾಷನು ಯಾಜಕನಾದ ಯೆಹೋಯಾದಾವ ಮತ್ತು ಇತರ ಯಾಜಕರನ್ನು ಕರೆಸಿ, “ನೀವು ಆಲಯವನ್ನು ಸರಿಪಡಿಸಲಿಲ್ಲವೇಕೆ? ನಿಮ್ಮಿಂದ ಸೇವೆ ಹೊಂದುವ ಜನರು ಕೊಡುವ ಹಣವನ್ನು ಉಪಯೋಗಿಸಬೇಡಿ. ಆಲಯವನ್ನು ಸರಿಪಡಿಸುವುದಕ್ಕಾಗಿ ಆ ಹಣವನ್ನು ಉಪಯೋಗಿಸಬೇಕು” ಎಂದು ಹೇಳಿದನು.
8 ಆಗ ಯಾಜಕರು ಅವನಿಗೆ, “ನಾವು ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ ಮತ್ತು ಆಲಯವನ್ನು ಸರಿಪಡಿಸುವುದಕ್ಕೆ ಕೈ ಹಾಕುವುದಿಲ್ಲ” ಎಂದು ಹೇಳಿದರು.
9 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಅದರ ಮೇಲೆ ಒಂದು ತೂತು ಮಾಡಿದನು. ನಂತರ ಯೆಹೋಯಾದಾವನು ಆ ಪೆಟ್ಟಿಗೆಯನ್ನು ಯಜ್ಞವೇದಿಕೆಯ ಬಲಗಡೆಯಲ್ಲಿ ಇಟ್ಟನು. ದೇವಾಲಯಕ್ಕೆ ಜನರು ಬರುವ ಬಾಗಿಲಿನಲ್ಲಿ ಈ ಪೆಟ್ಟಿಗೆಯಿತ್ತು. ಕೆಲವು ಮಂದಿ ಯಾಜಕರು ಆಲಯದ ಬಾಗಿಲಿನಲ್ಲಿ ರಕ್ಷಕರಾಗಿ ನಿಂತರು. ಆ ಯಾಜಕರು ಜನರು ಯೆಹೋವನಿಗೆಂದು ಕೊಡುವ ಆ ಹಣವನ್ನು ಪೆಟ್ಟಿಗೆಯಲ್ಲಿ ಹಾಕಿದರು.
10 ಜನರು ದೇವಾಲಯಕ್ಕೆ ಹೋದಾಗ ಆ ಪೆಟ್ಟಿಗೆಯಲ್ಲಿ ಹಣವನ್ನು ಹಾಕಲಾರಂಭಿಸಿದರು. ರಾಜನ ಕಾರ್ಯದರ್ಶಿಯಾಗಲಿ ಪ್ರಧಾನಯಾಜಕನಾಗಲಿ ನೋಡಿದಾಗ ಸಾಕಷ್ಟು ಹಣವು ತುಂಬಿದ್ದರೆ ಅದನ್ನು ಲೆಕ್ಕಹಾಕಿ ಚೀಲಗಳಲ್ಲಿ ತುಂಬಿಡುತ್ತಿದ್ದರು.
11 ನಂತರ ಅವರು ಆ ಹಣದಿಂದ ದೇವಾಲಯದ ಕೆಲಸಗಾರರಿಗೂ ಬಡಗಿಗಳಿಗೂ ಮತ್ತು ದೇವಾಲಯದ ಇತರ ಕೆಲಸಗಾರರಿಗೂ
12 ಕಲ್ಲುಕುಟಿಕರಿಗೂ ಶಿಲ್ಪಿಗಳಿಗೂ ಸಂಬಳ ಕೊಡುತ್ತಿದ್ದರು. ಅವರು ಆ ಹಣದಿಂದ ಮರವನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಂಡರು; ಯೆಹೋವನ ಆಲಯವನ್ನು ಸರಿಪಡಿಸಲು ಇತರ ಕೆಲಸಗಳಿಗೆ ಆ ಹಣವನ್ನು ಬಳಸುತ್ತಿದ್ದರು.
13 [This verse may not be a part of this translation]
14 [This verse may not be a part of this translation]
15 5ಯಾರೂ ಆ ಹಣವನ್ನು ಲೆಕ್ಕಹಾಕಲಿಲ್ಲ. ಇಲ್ಲವೆ ಆ ಹಣವೇನಾಯಿತೆಂದು ಯಾವ ಕೆಲಸಗಾರನನ್ನೂ ಒತ್ತಾಯಿಸಿ ಕೇಳಲಿಲ್ಲ. ಏಕೆಂದರೆ ಆ ಕೆಲಸಗಾರರು ನಂಬಿಗಸ್ತರಾಗಿದ್ದರು!
16 ಜನರು ತಮ್ಮ ಅಪರಾಧ ಪ್ರಾಯಶ್ಚಿತ್ತ ಮತ್ತು ದೋಷಪರಿಹಾರದ ಸಮಯದಲ್ಲಿ ಹಣವನ್ನು ಕೊಟ್ಟರು. ಆದರೆ ಅಂತಹ ಹಣವನ್ನು ಕೆಲಸಗಾರರ ವೇತನಕ್ಕೆ ಉಪಯೋಗಿಸಲಿಲ್ಲ. ಆ ಹಣವು ಯಾಜಕರಿಗೆ ಸೇರಿದ್ದು.
17 ಹಜಾಯೇಲನು ಅರಾಮ್ಯರ ರಾಜನಾಗಿದ್ದನು. ಹಜಾಯೇಲನು ಗತ್ ಊರನ್ನೂ ಸೋಲಿಸಿದನು. ಆಗ ಅವನು ಜೆರುಸಲೇಮಿನ ವಿರುದ್ಧ ಯುದ್ಧಕ್ಕೆ ಹೋಗಲು ಯೋಚಿಸಿದನು.
18 ಯೆಹೋಷಾಫಾಟ್, ಯೆಹೋರಾಮ್ ಮತ್ತು ಅಹಜ್ಯರು ಯೆಹೂದದ ರಾಜರಾಗಿದ್ದರು. ಅವರೆಲ್ಲ ಯೆಹೋವಾಷನ ಪೂರ್ವಿಕರು. ಅವರು ಅನೇಕ ವಸ್ತುಗಳನ್ನು ಯೆಹೋವನಿಗೆ ಕೊಟ್ಟಿದ್ದರು. ಅವುಗಳನ್ನೆಲ್ಲ ಆಲಯದಲ್ಲಿ ಇಟ್ಟಿದ್ದರು. ಯೆಹೋವಾಷನೂ ಯೆಹೋವನಿಗೆ ಅನೇಕ ವಸ್ತುಗಳನ್ನು ಕೊಟ್ಟಿದ್ದನು. ಯೆಹೋವಾಷನು ಅವುಗಳ ಜೊತೆಗೆ, ಆಲಯದಲ್ಲಿದ್ದ ಮತ್ತು ತನ್ನ ಮನೆಯಲ್ಲಿದ್ದ ಬಂಗಾರವನ್ನೆಲ್ಲ ತೆಗೆದುಕೊಂಡನು. ನಂತರ ಯೆಹೋವಾಷನು ಆ ಬೆಲೆಬಾಳುವ ವಸ್ತುಗಳನ್ನೆಲ್ಲ ಅರಾಮ್ಯರ ರಾಜನಾದ ಹಜಾಯೇಲನಿಗೆ ಕಳುಹಿಸಿದನು. ಆದ್ದರಿಂದ ಹಜಾಯೇಲನು ಜೆರುಸಲೇಮಿನ ವಿರುದ್ಧ ಯುದ್ಧಮಾಡದೆ ಹೊರಟುಹೋದನು. 19”ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೆಹೋವಾಷನು ಮಾಡಿದ ಇತರ ಮಹಾ ಕಾರ್ಯಗಳ ಬಗ್ಗೆ ಬರೆಯಲಾಗಿದೆ.
19 ಯೆಹೋವಾಷನ ಅಧಿಕಾರಿಗಳು ಅವನ ವಿರುದ್ಧವಾಗಿ ಸಂಚುಮಾಡಿ ಅವನನ್ನು ಸಿಲ್ಲಾಕ್ಕೆ ಹೋಗುವ ರಸ್ತೆಯಲ್ಲಿದ್ದ ಮಿಲ್ಲೋ ಮನೆಯಲ್ಲಿ ಕೊಂದುಹಾಕಿದರು.
20 ಶಿಮೆಯಾತನ ಮಗನಾದ ಯೋಜಾಕಾರನು ಮತ್ತು ಶೋಮೇರನ ಮಗನಾದ ಯೆಹೋದಾಬಾದನು ಯೆಹೋವಾಷನ ಅಧಿಕಾರಿಗಳಾಗಿದ್ದರು. ಅವರು ಯೆಹೋವಾಷನನ್ನು ಕೊಂದರು. ಜನರು ಯೆಹೋವಾಷನನ್ನು ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಯೆಹೋವಾಷನ ನಂತರ ಅವನ ಮಗನಾದ ಅಮಚ್ಯನು ನೂತನ ರಾಜನಾದನು.
21 [This verse may not be a part of this translation]

2-Kings 12:1 Kannada Language Bible Words basic statistical display

COMING SOON ...

×

Alert

×