1
|
ಹೆಬ್ರೋನಿನಲ್ಲಿ ಅಬ್ನೇರನು ಸತ್ತನೆಂಬುದು ಸೌಲನ ಮಗನಾದ ಈಷ್ಬೋಶೆತನಿಗೆ ತಿಳಿಯಿತು. ಈಷ್ಬೋಶೆತನು ಮತ್ತು ಅವನ ಜನರು ಬಹಳ ಭಯಗೊಂಡರು. |
2
|
ಬಾಣ ಮತ್ತು ರೇಕಾಬ್ ಎಂಬವರು ಸೌಲನ ಮಗನ ಸೈನ್ಯದಲ್ಲಿ, ಸೇನಾಧಿಪತಿಗಳಾಗಿದ್ದರು. ಅವರಿಬ್ಬರೂ ಬೇರೋತಿನವನಾದ ರಿಮ್ಮೋನನ ಮಕ್ಕಳು. ಅವರು ಬೆನ್ಯಾಮೀನ್ ಕುಲದವರಾಗಿದ್ದರು. ಬೇರೋತ್ ಪಟ್ಟಣವು ಬೆನ್ಯಾಮೀನ್ ಕುಲದವರಿಗೆ ಸೇರಿತ್ತು. |
3
|
ಬೇರೋತಿನ ಜನರು ಗಿತ್ತಯಿಮಿಗೆ ಓಡಿಹೋದರು. ಅವರು ಇವತ್ತಿನವರೆಗೂ ಅಲ್ಲಿ ನೆಲೆಸಿದ್ದಾರೆ. |
4
|
ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಮಗನಿದ್ದನು. ಸೌಲನು ಮತ್ತು ಯೋನಾತಾನನು ಇಜ್ರೇಲಿನಲ್ಲಿ ಸತ್ತರೆಂಬ ವರ್ತಮಾನವು ಬಂದಾಗ ಯೋನಾತಾನನ ಮಗನಿಗೆ ಐದು ವರ್ಷವಾಗಿತ್ತು. ಅವನನ್ನು ಸಾಕುತ್ತಿದ್ದ ದಾದಿಯು ಭಯಪಟ್ಟು ಅವನನ್ನು ಎತ್ತಿಕೊಂಡು ಓಡತೊಡಗಿದಳು. ಆ ದಾದಿಯು ಅವಸರದಿಂದ ಓಡಿಹೋಗುತ್ತಿದ್ದಾಗ, ಯೋನಾತಾನನ ಮಗನು ಅವಳ ತೋಳುಗಳಿಂದ ಕೆಳಕ್ಕೆ ಬಿದ್ದನು. ಹೀಗೆ ಕೆಳಗೆ ಬಿದ್ದ ಯೋನಾತಾನನ ಮಗನ ಎರಡು ಕಾಲುಗಳು ಕುಂಟಾದವು. ಈ ಮಗನ ಹೆಸರೇ ಮೆಫೀಬೋಶೆತ್. |
5
|
ಬೇರೋತಿನ ರಿಮ್ಮೋನನ ಮಕ್ಕಳಾದ ಬಾಣನು ಮತ್ತು ರೇಕಾಬನು ಈಷ್ಬೋಶೆತನ ಮನೆಗೆ ಮಧ್ಯಾಹ್ನದಲ್ಲಿ ಹೋದರು. ಈಷ್ಬೋಶೆತನು ಬಿಸಿಲಿನ ತಾಪದಿಂದ ವಿಶ್ರಾಂತಿ ಪಡೆಯುತ್ತಿದ್ದನು. |
6
|
[This verse may not be a part of this translation] |
7
|
[This verse may not be a part of this translation] |
8
|
ಹೆಬ್ರೋನಿಗೆ ಬಂದು ಈಷ್ಬೋಶೆತನ ತಲೆಯನ್ನು ದಾವೀದನಿಗೆ ಕೊಟ್ಟರು. ರೇಕಾಬನು ಮತ್ತು ಬಾಣನು ರಾಜನಾದ ದಾವೀದನಿಗೆ, “ಸೌಲನ ಮಗನೂ ನಿನ್ನ ಶತ್ರುವೂ ಅದ ಈಷ್ಬೋಶೆತನ ತಲೆಯು ಇಲ್ಲಿದೆ. ಅವನು ನಿನ್ನನ್ನು ಕೊಲ್ಲಲು ಪ್ರಯತ್ನಿಸಿದನು. ನಿನಗಾಗಿ ಯೆಹೋವನು ಈ ದಿನ ಸೌಲನನ್ನೂ ಅವನ ಕುಲವನ್ನೂ ದಂಡಿಸಿದನು” ಎಂದು ಹೇಳಿದರು. |
9
|
ದಾವೀದನು ರಿಮ್ಮೇನನ ಮಕ್ಕಳಾದ ರೇಕಾಬನಿಗೂ ಅವನ ಸೋದರನಾದ ಬಾಣನಿಗೂ, “ಯೆಹೋವನಾಣೆಯಾಗಿಯೂ ಆತನು ಎಲ್ಲಾ ಕೇಡುಗಳಿಂದ ನನ್ನನ್ನು ರಕ್ಷಿಸಿದನು. |
10
|
ಆದರೆ ಒಮ್ಮೆ ಒಬ್ಬ ವ್ಯಕ್ತಿಯು ತಾನು ಶುಭ ಸುದ್ದಿಯನ್ನು ನನಗೆ ತರುತ್ತಿದ್ದೇನೆಂದು ಯೋಚಿಸಿದನು. ಅವನು, ‘ನೋಡು, ಸೌಲನು ಸತ್ತನು’ ಎಂದು ನನಗೆ ಹೇಳಿದನು. ಈ ಸುದ್ದಿಯನ್ನು ನನಗೆ ತಿಳಿಸಿದ್ದರಿಂದ ನಾನು ಅವನಿಗೆ ಕೊಡುಗೆಗಳನ್ನು ಕೊಡಬಹುದೆಂದು ಅವನು ಭಾವಿಸಿದನು. ಆದರೆ ನಾನು ಅವನನ್ನು ಚಿಕ್ಲಗಿನಲ್ಲಿ ಕೊಂದೆನು. |
11
|
ದುಷ್ಟರಾದ ನೀವು ಇಂದು ಒಬ್ಬ ನೀತಿವಂತನನ್ನು ಅವನ ಸ್ವಂತ ಮನೆಯಲ್ಲಿ ಅವನ ಸ್ವಂತ ಹಾಸಿಗೆಯ ಮೇಲೆಯೇ ಕೊಂದಿರುವುದರಿಂದ ನಿಮ್ಮನ್ನೂ ನಾನು ಕೊಂದು ನಿರ್ಮೂಲ ಮಾಡಬೇಕು” ಎಂದನು. |
12
|
ದಾವೀದನು, ರೇಕಾಬನನ್ನು ಮತ್ತು ಬಾಣನನ್ನು ಕೊಲ್ಲಲು ಯುವಕರಿಗೆ ಆಜ್ಞಾಪಿಸಿದನು. ಆಗ ಆ ಯುವಕರು ರೇಕಾಬನ ಮತ್ತು ಬಾಣನ ಕೈಕಾಲುಗಳನ್ನು ಕತ್ತರಿಸಿಹಾಕಿ, ಹೆಬ್ರೋನಿನ ಕೊಳದ ಬಳಿಯಲ್ಲಿ ಅವರ ದೇಹಗಳನ್ನು ನೇತುಹಾಕಿದರು. ನಂತರ ಅವರು ಈಷ್ಬೋಶೆತನ ತಲೆಯನ್ನು ತೆಗೆದುಕೊಂಡು ಹೋಗಿ, ಹೆಬ್ರೋನಿನಲ್ಲಿ ಅಬ್ನೇರನನ್ನು ಸಮಾಧಿಮಾಡಿದ ಸ್ಥಳದಲ್ಲೇ ಸಮಾಧಿಮಾಡಿದರು. |
2-Samuel 4:1 Kannada Language Bible Words basic statistical display
COMING SOON ...