ಈ ಶಬ್ದವನ್ನು ಕೇಳಿ ಈ ಜನರ ಒಂದು ದೊಡ್ಡ ಸಮೂಹವೇ ಅಲ್ಲಿಗೆ ಬಂದಿತು. ಅಪೊಸ್ತಲರು ಮಾತಾಡುತ್ತಿರುವುದು ಪ್ರತಿಯೊಬ್ಬರಿಗೂ ಅವರವರ ಸ್ವಂತ ಭಾಷೆಗಳಲ್ಲಿ ಕೇಳಿಸುತ್ತಿರುವುದನ್ನು ಕಂಡು ಅವರಿಗೆ ಆಶ್ಚರ್ಯವಾಯಿತು.
ಇದನ್ನು ನೋಡಿದ ಯೆಹೂದ್ಯರೆಲ್ಲರೂ ವಿಸ್ಮಯಗೊಂಡರು. ಹೀಗೆ ಮಾಡಲು ಅಪೊಸ್ತಲರಿಗೆ ಹೇಗೆ ಸಾಧ್ಯವಾಯಿತೆಂದು ಅವರಿಗೆ ಅರ್ಥವಾಗಲಿಲ್ಲ. ಅವರು, “ಮಾತಾಡುತ್ತಿರುವ ಈ ಜನರು (ಅಪೊಸ್ತಲರು) ಗಲಿಲಾಯದವರು! [†ಗಲಿಲಾಯದವರು ಇವರು ತಮ್ಮ ಸ್ವಂತ ಭಾಷೆಯಲ್ಲಿ ಮಾತ್ರ ಮಾತಾಡಬಲ್ಲರೆಂಬುದು ಜನರ ಭಾವನೆಯಾಗಿತ್ತು.]
ಕ್ರೇಟ್ನವರು ಮತ್ತು ಅರೇಬಿಯವರು ಇದ್ದಾರೆ. ನಮ್ಮಲ್ಲಿರುವ ಕೆಲವು ಜನರು ಹುಟ್ಟು ಯೆಹೂದ್ಯರು. ಉಳಿದವರು ಮತಾಂತರ ಹೊಂದಿದವರು. ನಾವು ಬೇರೆಬೇರೆ ದೇಶಗಳವರು. ಆದರೆ ಈ ಜನರು ಮಾತಾಡುತ್ತಿರುವುದು ನಮ್ಮ ಸ್ವಂತ ಭಾಷೆಗಳಲ್ಲಿ ನಮಗೆ ಕೇಳಿಸುತ್ತಿದೆ! ಅವರು ದೇವರ ಬಗ್ಗೆ ಹೇಳುತ್ತಿರುವ ಮಹಾಸಂಗತಿಗಳು ನಮಗೆಲ್ಲರಿಗೂ ಅರ್ಥವಾಗುತ್ತಿವೆ” ಎಂದು ಹೇಳಿದರು.
ಬಳಿಕ ಪೇತ್ರನು ಉಳಿದ ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎದ್ದುನಿಂತುಕೊಂಡನು. ಎಲ್ಲಾ ಜನರಿಗೆ ಕೇಳುವಂತೆ ಅವನು ಗಟ್ಟಿಯಾಗಿ ಹೀಗೆಂದನು: “ಯೆಹೂದ್ಯರೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರೇ, ನನಗೆ ಕಿವಿಗೊಡಿರಿ. ನೀವು ತಿಳಿದುಕೊಳ್ಳಬೇಕಾದ ಸಂಗತಿಯನ್ನು ನಾನು ನಿಮಗೆ ಹೇಳುತ್ತೇನೆ.
‘ದೇವರು ಹೀಗೆನ್ನುತ್ತಾನೆ: ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು. ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು.
“ಯೆಹೂದ್ಯರೇ, ಈ ಮಾತುಗಳನ್ನು ಕೇಳಿರಿ: ನಜರೇತಿನ ಯೇಸು ಬಹು ವಿಶೇಷವಾದ ವ್ಯಕ್ತಿ. ದೇವರು ತಾನು ಯೇಸುವಿನ ಮೂಲಕ ಮಾಡಿದ ಶಕ್ತಿಯುತವಾದ ಮತ್ತು ಅದ್ಭುತವಾದ ಕಾರ್ಯಗಳ ಮೂಲಕ ಇದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾನೆ. ಈ ಸಂಗತಿಗಳನ್ನು ನೀವೆಲ್ಲರೂ ನೋಡಿದಿರಿ. ಆದ್ದರಿಂದ ಇದು ಸತ್ಯವೆಂದು ನಿಮಗೆ ಗೊತ್ತಿದೆ.
ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.
ಯೇಸುವಿನ ಬಗ್ಗೆ ದಾವೀದನು ಹೀಗೆ ಹೇಳಿದ್ದಾನೆ: ‘ಪ್ರಭುವು ಯಾವಾಗಲೂ ನನ್ನ ಮುಂದೆ ಇರುವುದನ್ನು ನಾನು ನೋಡುತ್ತಿದ್ದೆನು; ನನ್ನನ್ನು ಸುರಕ್ಷಿತವಾಗಿಡಲು ಆತನು ನನ್ನ ಬಲಗಡೆಯಲ್ಲಿದ್ದಾನೆ.
“ನನ್ನ ಸಹೋದರರೇ, ನಮ್ಮ ಪಿತೃವಾದ ದಾವೀದನ ಬಗ್ಗೆ ನಾನು ನಿಮಗೆ ನಿಜವಾಗಿಯೂ ಹೇಳಬಲ್ಲೆನು. ಅವನು ಸತ್ತುಹೋದನು ಮತ್ತು ಅವನಿಗೆ ಸಮಾಧಿಯಾಯಿತು. ಅವನ ಸಮಾಧಿಯು ನಮ್ಮ ಮಧ್ಯದಲ್ಲಿ ಇಂದಿನವರೆಗೂ ಇದೆ.
ದಾವೀದನು ಒಬ್ಬ ಪ್ರವಾದಿಯಾಗಿದ್ದನು [§ಪ್ರವಾದಿಯಾಗಿದ್ದನು ನೋಡಿರಿ: ಕೀರ್ತನೆ. 132:11.] ಮತ್ತು ‘ನಿನ್ನ ಕುಟುಂಬದ ಒಬ್ಬನನ್ನು ನಿನ್ನಂತೆಯೇ ರಾಜನನ್ನಾಗಿ ಮಾಡುವೆನು’ ಎಂದು ದೇವರು ಅವನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದು ಅವನಿಗೆ ಗೊತ್ತಿತ್ತು.
ಅದು ನೆರವೇರುವುದಕ್ಕಿಂತ ಮೊದಲೇ ದಾವೀದನಿಗೆ ತಿಳಿದಿತ್ತು. ಆದಕಾರಣ ದಾವೀದನು ಪುನರುತ್ಥಾನ ಹೊಂದುವ ಕ್ರಿಸ್ತನ ಬಗ್ಗೆ, ‘ಆತನನ್ನು ಪಾತಾಳದಲ್ಲಿ ಬಿಡಲ್ಪಡಲಿಲ್ಲ. ಆತನ ದೇಹವು ಸಮಾಧಿಯಲ್ಲಿ ಕೊಳೆಯಲಿಲ್ಲ’ ಎಂದಿದ್ದಾನೆ.
ಯೇಸು ಪರಲೋಕಕ್ಕೆ ಎತ್ತಲ್ಪಟ್ಟನು. ಈಗ ಯೇಸು ದೇವರೊಂದಿಗಿದ್ದಾನೆ, ದೇವರ ಬಲಗಡೆಯಲ್ಲಿದ್ದಾನೆ. ಈಗ ತಂದೆಯು (ದೇವರು) ಪವಿತ್ರಾತ್ಮನನ್ನು ಯೇಸುವಿಗೆ ಕೊಟ್ಟಿದ್ದಾನೆ. ಪವಿತ್ರಾತ್ಮನನ್ನು ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದನು. ಆದ್ದರಿಂದ ಯೇಸು ಈಗ ಆ ಆತ್ಮನನ್ನು ಸುರಿಸಿದ್ದಾನೆ. ನೀವು ನೋಡುತ್ತಿರುವುದು ಮತ್ತು ಕೇಳುತ್ತಿರುವುದು ಇದನ್ನೇ.
(34-35) ಪರಲೋಕಕ್ಕೆ ಎತ್ತಲ್ಪಟ್ಟವನು ದಾವೀದನಲ್ಲ, ಯೇಸುವೇ. ದಾವೀದನೇ ಅದರ ಬಗ್ಗೆ ಹೇಳುತ್ತಾ, ‘ಪ್ರಭುವು (ದೇವರು) ನನ್ನ ಪ್ರಭುವಿಗೆ, ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಗಳಿಗೆ ಪೀಠವಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ಕುಳಿತುಕೊ ಎಂದು ತಿಳಿಸಿದನು’ ಎಂದಿದ್ದಾನೆ. ಕೀರ್ತನೆ. 110:1]
“ಆದ್ದರಿಂದ ಯೆಹೂದ್ಯರೆಲ್ಲರೂ ಇದನ್ನು ನಿಜವಾಗಿಯೂ ತಿಳಿದುಕೊಳ್ಳಬೇಕು. ದೇವರು ಯೇಸುವನ್ನು ಪ್ರಭುವನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆ. ನೀವು ಶಿಲುಬೆಗೇರಿಸಿದ ವ್ಯಕ್ತಿಯೇ ಆತನು!”
ಪೇತ್ರನು ಅವರಿಗೆ, “ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ದೇವರು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲದೆ ದೇವರು ವಾಗ್ದಾನ ಮಾಡಿರುವ ಪವಿತ್ರಾತ್ಮನನ್ನು ಹೊಂದಿಕೊಳ್ಳುವಿರಿ.
ಈ ವಾಗ್ದಾನವನ್ನು ನಿಮಗೂ ನಿಮ್ಮ ಮಕ್ಕಳಿಗೂ ಬಹು ದೂರದಲ್ಲಿರುವ ಜನರಿಗೂ ಕೊಡಲಾಗಿದೆ. ನಮ್ಮ ದೇವರಾದ ಪ್ರಭುವು ತನ್ನ ಬಳಿಗೆ ಕರೆಯುವ ಪ್ರತಿಯೊಬ್ಬರಿಗೂ ಈ ವಾಗ್ದಾನವನ್ನು ಕೊಟ್ಟಿದ್ದಾನೆ” ಎಂದು ಹೇಳಿದನು.
ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.
ಅವರು ದೇವರನ್ನು ಕೊಂಡಾಡುತ್ತಿದ್ದರು ಮತ್ತು ಜನರೆಲ್ಲರೂ ಅವರನ್ನು ಇಷ್ಟಪಡುತ್ತಿದ್ದರು. ಪ್ರತಿದಿನವೂ ಹೆಚ್ಚುಹೆಚ್ಚು ಜನರು ರಕ್ಷಣೆ ಹೊಂದುತ್ತಿದ್ದರು; ಪ್ರಭುವು ಅವರನ್ನೆಲ್ಲಾ ವಿಶ್ವಾಸಿಗಳ ಸಭೆಗೆ ಸೇರಿಸುತ್ತಿದ್ದನು.