Bible Languages

Indian Language Bible Word Collections

Bible Versions

Books

Acts Chapters

Acts 22 Verses

Bible Versions

Books

Acts Chapters

Acts 22 Verses

1 ಪೌಲನು, “ನನ್ನ ಸಹೋದರರೇ, ನನ್ನ ತಂದೆಗಳೇ, ನನ್ನ ಪ್ರತಿವಾದವನ್ನು ಕೇಳಿರಿ!” ಎಂದನು.
2 ಪೌಲನು ಯೆಹೂದ್ಯರ ಭಾಷೆಯಲ್ಲಿ ಮಾತಾಡುತ್ತಿರುವುದನ್ನು ಕೇಳಿ ಯೆಹೂದ್ಯರು ಮತ್ತಷ್ಟು ನಿಶಬ್ಧರಾದರು.
3 ಆಗ ಪೌಲನು ಇಂತೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.
4 ಯೇಸುವಿನ ಮಾರ್ಗವನ್ನು ಯಾರು ಹಿಂಬಾಲಿಸುತ್ತಾರೋ ಅವರನ್ನು ನಾನು ಹಿಂಸಿಸಿದೆನು. ನನ್ನ ದೆಸೆಯಿಂದ ಅವರಲ್ಲಿ ಕೆಲವರು ಕೊಲ್ಲಲ್ಪಟ್ಟರು. ನಾನು ಪುರುಷರನ್ನು ಮತ್ತು ಸ್ತ್ರೀಯರನ್ನು ಬಂಧಿಸಿ ಸೆರೆಮನೆಗೆ ಹಾಕಿದೆನು.
5 ”ಇದು ಸತ್ಯವೆಂಬುದಕ್ಕೆ ಪ್ರಧಾನಯಾಜಕರು ಮತ್ತು ಯೆಹೂದ್ಯರ ಹಿರೀನಾಯಕರ ಸಭೆಯವರೆಲ್ಲರು ಸಾಕ್ಷಿಗಳಾಗಿದ್ದಾರೆ. ಒಂದು ಸಲ, ಈ ನಾಯಕರು ನನಗೆ ಕೆಲವು ಪತ್ರಗಳನ್ನು ಕೊಟ್ಟರು. ದಮಸ್ಕ ಪಟ್ಟಣದಲ್ಲಿನ ಯೆಹೂದ್ಯ ಸಹೋದರರಿಗೆ ಆ ಪತ್ರಗಳನ್ನು ಬರೆಯಲಾಗಿತ್ತು. (ಯೇಸುವಿನ) ಶಿಷ್ಯರನ್ನು ಬಂಧಿಸಿ ದಂಡಿಸುವುದಕ್ಕಾಗಿ ಅವರನ್ನು ಜೆರುಸಲೇಮಿಗೆ ಎಳೆದುಕೊಂಡು ಬರಲು ನಾನು ಅಲ್ಲಿಗೆ ಹೋಗುತ್ತಿದ್ದೆ.
6 ”ನಾನು ಪ್ರಯಾಣ ಮಾಡುತ್ತಾ ದಮಸ್ಕದ ಸಮೀಪಕ್ಕೆ ಬಂದಾಗ ಒಂದು ಘಟನೆ ಸಂಭವಿಸಿತು. ಆಗ ಸುಮಾರು ಮಧ್ಯಾಹ್ನವಾಗಿತ್ತು. ಇದ್ದಕ್ಕಿದ್ದಂತೆ ಪ್ರಕಾಶಮಾನವಾದ ಬೆಳಕೊಂದು ನನ್ನ ಸುತ್ತಲೂ ಪ್ರಕಾಶಿಸಿತು.
7 ನಾನು ನೆಲಕ್ಕೆ ಬಿದ್ದೆನು. ಆಗ ವಾಣಿಯೊಂದು ನನಗೆ, ؅ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆ ಪಡಿಸುತ್ತಿರುವೆ?؆ ಎಂದು ಹೇಳಿತು.
8 ”ನಾನು, ؅ಪ್ರಭುವೇ, ನೀನು ಯಾರು?؆ ಎಂದು ಕೇಳಿದೆನು. ಆ ವಾಣಿಯು, ؅ನಾನು ನಜರೇತಿನ ಯೇಸು. ನೀನು ಹಿಂಸಿಸುತ್ತಿರುವುದು ನನ್ನನ್ನೇ؆ ಎಂದು ಹೇಳಿತು.
9 ನನ್ನೊಂದಿಗಿದ್ದ ಜನರು ನನ್ನ ಸಂಗಡ ಮಾತಾಡುತ್ತಿದ್ದ ವ್ಯಕ್ತಿಯ ಸ್ವರವನ್ನು ಕೇಳಲಿಲ್ಲ. ಆದರೆ ಅವರು ಬೆಳಕನ್ನು ನೋಡಿದರು.
10 ”ನಾನು, ؅ಪ್ರಭುವೇ, ನಾನೇನು ಮಾಡಲಿ?” ಎಂದೆನು. ಪ್ರಭುವು ؅ಎದ್ದು ದಮಸ್ಕದೊಳಗೆ ಹೋಗು. ನಾನು ನಿನಗೆ ನೇಮಿಸಿರುವ ಕೆಲಸಗಳನ್ನೆಲ್ಲಾ ಅಲ್ಲಿ ನಿನಗೆ ತಿಳಿಸಲಾಗುವುದು؆ ಎಂದು ಉತ್ತರಕೊಟ್ಟನು.
11 ಪ್ರಕಾಶಮಾನವಾದ ಆ ಬೆಳಕು ನನ್ನನ್ನು ಕುರುಡನನ್ನಾಗಿ ಮಾಡಿದ್ದರಿಂದ ನನಗೆ ಏನೂ ಕಾಣಲಿಲ್ಲ. ಆದ್ದರಿಂದ ಆ ಜನರು ನನ್ನನ್ನು ದಮಸ್ಕಕ್ಕೆ ಕೈಹಿಡಿದು ನಡೆಸಿಕೊಂಡು ಹೋದರು.
12 ”ದಮಸ್ಕದಲ್ಲಿ ಅನನೀಯ ಎಂಬುವನು ನನ್ನ ಬಳಿಗೆ ಬಂದನು. ಅನನೀಯನು ಧಾರ್ಮಿಕ ವ್ಯಕ್ತಿಯಾಗಿದ್ದನು. ಅವನು ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯನಾಗಿದ್ದನು. ಅಲ್ಲಿ ವಾಸವಾಗಿದ್ದ ಯೆಹೂದ್ಯರೆಲ್ಲರು ಅವನನ್ನು ಗೌರವಿಸುತ್ತಿದ್ದರು.
13 ಅನನೀಯನು ನನ್ನ ಬಳಿಗೆ ಬಂದು, ؅ಸಹೋದರನಾದ ಸೌಲನೇ, ನಿನಗೆ ಮತ್ತೆ ದೃಷ್ಟಿ ಬರಲಿ!؆ ಎಂದನು. ಆ ಕೂಡಲೇ ನನಗೆ ದೃಷ್ಟಿ ಬಂದಿತು, ಮತ್ತು ನಾನು ಅವನನ್ನು ನೋಡಿದೆನು.
14 ”ಅನನೀಯನು ನನಗೆ, ؅ನಮ್ಮ ಪಿತೃಗಳ ದೇವರು ಬಹುಕಾಲದ ಹಿಂದೆಯೇ ನಿನ್ನನ್ನು ಆರಿಸಿಕೊಂಡನು. ನೀನು ದೇವರ ಯೋಜನೆಯನ್ನು ತಿಳಿದುಕೊಳ್ಳಬೇಕೆಂತಲೂ ನೀತಿಸ್ವರೂಪನನ್ನು (ಯೇಸು) ನೋಡಬೇಕೆಂತಲೂ ಆತನ ವಾಕ್ಯಗಳನ್ನು ಕೇಳಬೇಕೆಂತಲೂ ದೇವರು ನಿನ್ನನ್ನು ಆರಿಸಿಕೊಂಡನು.
15 ನೀನು ಕಂಡ ಮತ್ತು ಕೇಳಿದ ಸಂಗತಿಗಳ ಬಗ್ಗೆ ಎಲ್ಲಾ ಜನರಿಗೆ ಸಾಕ್ಷಿಯಾಗಿರುವೆ.
16 ಈಗ ನೀನು ತಡಮಾಡುವುದೇಕೆ? ಎದ್ದೇಳು! ಆತನಲ್ಲಿ ನಂಬಿಕೆಯಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೊ؆ ಎಂದು ಹೇಳಿದನು.
17 ”ತರುವಾಯ ನಾನು ಜೆರುಸಲೇಮಿಗೆ ಹಿಂತಿರುಗಿದೆನು. ನಾನು ದೇವಾಲಯದ ಅಂಗಳದಲ್ಲಿ ಪ್ರಾರ್ಥಿಸುತ್ತಿದ್ದಾಗ ನನಗೊಂದು ದರ್ಶನವಾಯಿತು.
18 ನಾನು ಯೇಸುವನ್ನು ಕಂಡೆನು. ಆತನು ನನಗೆ, ؅ಬೇಗನೆ ಜೆರುಸಲೇಮಿನಿಂದ ಹೊರಡು! ನನ್ನ ಕುರಿತಾದ ಸಾಕ್ಷಿಯನ್ನು ಈ ಜನರು ಸ್ವೀಕರಿಸುವುದಿಲ್ಲ؆ ಎಂದು ಹೇಳಿದನು.
19 ನಾನು, ؅ಪ್ರಭುವೇ, ವಿಶ್ವಾಸಿಗಳನ್ನು ಸೆರೆಮನೆಗಳಿಗೆ ಹಾಕಿಸಿ ಹೊಡೆಸುತ್ತಿದ್ದವನು ನಾನೇ ಎಂಬುದು ಜನರಿಗೆ ಗೊತ್ತಿದೆ. ನಿನ್ನಲ್ಲಿ ನಂಬಿಕೆಯಿಟ್ಟಿರುವ ಜನರನ್ನು ಪತ್ತೆಹಚ್ಚಿ ಬಂಧಿಸುವುದಕ್ಕಾಗಿ ನಾನು ಎಲ್ಲಾ ಸಭಾಮಂದಿರಗಳಿಗೆ ಹೋಗಿದ್ದೇನೆ.
20 ನಿನ್ನ ಸಾಕ್ಷಿಯಾದ ಸ್ತೆಫನನು ಕೊಲ್ಲಲ್ಪಟ್ಟಾಗ ನಾನು ಅಲ್ಲಿದ್ದದ್ದು ಸಹ ಜನರಿಗೆ ಗೊತ್ತಿದೆ. ಸ್ತೆಫನನನ್ನು ಕೊಲ್ಲಲು ಅವರು ನಿರ್ಧರಿಸಿದಾಗ ನಾನೂ ಅದಕ್ಕೆ ಒಪ್ಪಿಗೆ ಸೂಚಿಸಿ ಅಲ್ಲೇ ನಿಂತುಕೊಂಡಿದ್ದೆನು. ಅಲ್ಲದೆ ಅವನನ್ನು ಕೊಲ್ಲುತ್ತಿದ್ದ ಜನರ ಮೇಲಂಗಿಗಳನ್ನು ಸಹ ನಾನು ಹಿಡಿದುಕೊಂಡಿದ್ದೆ!؆ ಎಂದೆನು.
21 ”ಆದರೆ ಯೇಸು ನನಗೆ, ؅ಈಗ ಹೊರಡು, ಬಹುದೂರದಲ್ಲಿರುವ ಯೆಹೂದ್ಯರಲ್ಲದ ಜನರ ಬಳಿಗೆ ನಾನು ನಿನ್ನನ್ನು ಕಳುಹಿಸುವೆನು؆ ಎಂದು ಹೇಳಿದನು.”
22 ಪೌಲನು ಈ ಕೊನೆಯ ಸಂಗತಿಯನ್ನು ಅಂದರೆ ಯೆಹೂದ್ಯರಲ್ಲದವರ ಬಳಿಗೆ ಹೋಗುವುದರ ಬಗ್ಗೆ ಹೇಳಿದಾಗ ಅವರು ಅವನ ಮಾತಿಗೆ ಕಿವಿಗೊಡುವುದನ್ನು ನಿಲ್ಲಿಸಿ, “ಅವನನ್ನು ಕೊಲ್ಲಿರಿ! ಅವನನ್ನು ಪ್ರಪಂಚದಿಂದ ತೊಲಗಿಸಿರಿ! ಇಂಥ ಮನುಷ್ಯನಿಗೆ ಜೀವಿಸಲು ಅವಕಾಶವನ್ನೇ ಕೊಡಕೂಡದು!” ಎಂದು ಕೂಗಿದರು.
23 ಅವರು ಬೊಬ್ಬೆಹಾಕಿದರು; ತಮ್ಮ ಮೇಲಂಗಿಗಳನ್ನು ಬಿಚ್ಚಿ ಬೀಸಿದರು; ಧೂಳನ್ನು ಮೇಲಕ್ಕೆ ತೂರಿದರು.
24 ಆಗ ಸೇನಾಧಿಪತಿಯು ಪೌಲನನ್ನು ದಂಡಿನ ಪಾಳೆಯದೊಳಗೆ ಕರೆದುಕೊಂಡು ಹೋಗಿ ಹೊಡೆಯಲು ಸೈನಿಕರಿಗೆ ಹೇಳಿದನು. ಜನರು ಪೌಲನ ವಿರೋಧವಾಗಿ ಈ ರೀತಿ ಕೂಗಲು ಕಾರಣವೇನೆಂದು ಪೌಲನಿಂದಲೇ ಹೇಳಿಸಬೇಕೆಂಬುದು ಸೇನಾಧಿಪತಿಯ ಅಪೇಕ್ಷೆಯಾಗಿತ್ತು.
25 ಸೈನಿಕರು ಹೊಡೆಯುವುದಕ್ಕಾಗಿ ಪೌಲನನ್ನು ಕಟ್ಟುತ್ತಿರಲು ಅಲ್ಲಿದ್ದ ರೋಮ್ ಅಧಿಕಾರಿಗೆ ಪೌಲನು, “ಅಪರಾಧಿಯೆಂದು ತೀರ್ಪಾಗಿಲ್ಲದ ರೋಮ್ ಪ್ರಜೆಯೊಬ್ಬನನ್ನು ಹೊಡೆಯಲು ನಿಮಗೆ ಹಕ್ಕಿದೆಯೋ?” ಎಂದು ಕೇಳಿದನು.
26 ಆ ಅಧಿಕಾರಿಯು ಇದನ್ನು ಕೇಳಿದ ಕೂಡಲೇ ಸೇನಾಧಿಪತಿಯ ಬಳಿಗೆ ಬಂದು, “ನೀನು ಏನು ಮಾಡುತ್ತಿರುವೆ ಎಂಬುದು ನಿನಗೆ ಗೊತ್ತಿದೆಯೋ? ಈ ಮನುಷ್ಯನು ರೋಮಿನ ಪ್ರಜೆ!” ಎಂದು ಹೇಳಿದನು.
27 ಸೇನಾಧಿಪತಿಯು ಪೌಲನ ಬಳಿಗೆ ಬಂದು, “ಹೇಳು, ನೀನು ನಿಜವಾಗಿಯೂ ರೋಮಿನ ಪ್ರಜೆಯೋ?” ಎಂದು ಕೇಳಿದನು. ಪೌಲನು, “ಹೌದು” ಎಂದು ಉತ್ತರಕೊಟ್ಟನು.
28 ಸೇನಾಧಿಪತಿಯು, “ನಾನು ರೋಮಿನ ಪ್ರಜೆಯಾಗಲು ಬಹಳ ಹಣಕೊಟ್ಟಿರುವೆ” ಎಂದು ಹೇಳಿದನು. ಅದಕ್ಕೆ ಪೌಲನು, “ನಾನು ಹುಟ್ಟಿದಂದಿನಿಂದಲೇ ರೋಮಿನ ಪ್ರಜೆ” ಎಂದನು.
29 ಪೌಲನನ್ನು ಪ್ರಶ್ನಿಸಲು ಸಿದ್ಧರಾಗುತ್ತಿದ್ದ ಜನರು ಆ ಕೂಡಲೇ ಪೌಲನ ಬಳಿಯಿಂದ ಹೊರಟುಹೋದರು. ಪೌಲನನ್ನು ಆಗಲೇ ಕಟ್ಟಿಹಾಕಿದ್ದರಿಂದ ಮತ್ತು ಪೌಲನು ರೋಮಿನ ಪ್ರಜೆಯಾಗಿದ್ದರಿಂದ ಸೇನಾಧಿಪತಿಗೆ ಭಯವಾಯಿತು.
30 ಮರುದಿನ, ಪೌಲನಿಗೆ ವಿರೋಧವಾಗಿ ಯೆಹೂದ್ಯರು ತಂದ ಆಪಾದನೆ ಏನೆಂದು ತಿಳಿದುಕೊಳ್ಳಲು ಸೇನಾಧಿಪತಿಯು ನಿರ್ಧರಿಸಿದನು. ಆದ್ದರಿಂದ ಅವನು ಮಹಾಯಾಜಕರಿಗೂ ಯೆಹೂದ್ಯರ ನ್ಯಾಯಸಭೆಯವರಿಗೂ ಒಟ್ಟಾಗಿ ಸೇರಿಬರಲು ಆಜ್ಞಾಪಿಸಿದನು. ಸೇನಾಧಿಪತಿಯು ಪೌಲನ ಸರಪಣಿಗಳನ್ನು ತೆಗೆದುಹಾಕಿ ಅವನನ್ನು ಹೊರಗೆ ಕರೆದುಕೊಂಡು ಬಂದು ಸಭೆಯ ಮುಂದೆ ನಿಲ್ಲಿಸಿದನು.

Acts 22:1 Kannada Language Bible Words basic statistical display

COMING SOON ...

×

Alert

×