ಪೌಲನು ಅನನೀಯನಿಗೆ, “ದೇವರು ನಿನ್ನನ್ನು ಸಹ ಹೊಡೆಯುವನು! ಸುಣ್ಣ ಬಳಿದ ಗೋಡೆ ನೀನು! ಮೋಶೆಯ ಧರ್ಮಶಾಸ್ತ್ರಕ್ಕನುಸಾರವಾಗಿ ನ್ಯಾಯತೀರ್ಪು ಮಾಡಲು ಅಲ್ಲಿ ಕುಳಿತುಕೊಂಡು ನನಗೆ ಹೊಡೆಯಲು ಅವರಿಗೆ ಹೇಳುತ್ತಿರುವೆಯಾ! ಮೋಶೆಯ ಧರ್ಮಶಾಸ್ತ್ರಕ್ಕೆ ಅದು ವಿರುದ್ಧವಾದದ್ದು” ಎಂದು ಹೇಳಿದನು.
ಪೌಲನು, “ಸಹೋದರರೇ, ಈ ಮನುಷ್ಯನು ಪ್ರಧಾನಯಾಜಕನೆಂದು ನನಗೆ ಗೊತ್ತಿರಲ್ಲಿಲ್ಲ. ‘ನಿಮ್ಮ ಜನನಾಯಕರ ಬಗ್ಗೆ ಕೆಟ್ಟಮಾತುಗಳುನ್ನು ಆಡಬಾರದು’ [✡ಉಲ್ಲೇಖನ: ವಿಮೋಚನ. 22:28.] ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ” ಎಂದು ಹೇಳಿದನು.
ಸಭೆಯಲ್ಲಿದ್ದ ಜನರಲ್ಲಿ ಕೆಲವರು ಸದ್ದುಕಾಯರಾಗಿದ್ದರು; ಮತ್ತೆ ಕೆಲವರು ಫರಿಸಾಯರಾಗಿದ್ದರು. ಆದ್ದರಿಂದ ಪೌಲನು, “ನನ್ನ ಸಹೋದರರೇ, ನಾನು ಫರಿಸಾಯನು! ನನ್ನ ತಂದೆಯೂ ಫರಿಸಾಯನಾಗಿದ್ದನು! ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!” ಎಂದು ಕೂಗಿ ಹೇಳಿದನು.
ಈ ಯೆಹೂದ್ಯರೆಲ್ಲರೂ ಹೆಚ್ಚುಹೆಚ್ಚು ಗಟ್ಟಿಯಾಗಿ ಆರ್ಭಟಿಸಿತೊಡಗಿದರು. ಫರಿಸಾಯರ ಗುಂಪಿಗೆ ಸೇರಿದ್ದ ಕೆಲವು ಮಂದಿ ಧರ್ಮೋಪದೇಶಕರು ಎದ್ದುನಿಂತುಕೊಂಡು, “ಈ ಮನುಷ್ಯನಲ್ಲಿ ನಮಗೇನೂ ತಪ್ಪು ಕಂಡುಬರುತ್ತಿಲ್ಲ! ದಮಸ್ಕಕ್ಕೆ ಹೋಗುವ ದಾರಿಯಲ್ಲಿ ದೇವದೂತನಾಗಲಿ ಆತ್ಮವಾಗಲಿ ಅವನೊಂದಿಗೆ ಮಾತಾಡಿದ್ದಿರಬೇಕು!” ಎಂದು ವಾದಿಸಿದರು.
ಮರುದಿನ ರಾತ್ರಿ ಪ್ರಭು ಯೇಸುವು ಬಂದು ಪೌಲನ ಬಳಿ ನಿಂತುಕೊಂಡು, “ಧೈರ್ಯದಿಂದಿರು! ನೀನು ನನ್ನ ಬಗ್ಗೆ ಜೆರುಸಲೇಮಿನ ಜನರಿಗೆ ತಿಳಿಸಿರುವೆ. ನೀನು ರೋಮಿಗೂ ಹೋಗಿ ಅಲ್ಲಿರುವ ಜನರಿಗೆ ನನ್ನ ಬಗ್ಗೆ ತಿಳಿಸಬೇಕು!” ಎಂದು ಹೇಳಿದನು.
ಈ ಯೆಹೂದ್ಯರು ಮಹಾಯಾಜಕರ ಮತ್ತು ಯೆಹೂದ್ಯರ ಹಿರಿಯ ನಾಯಕರ ಬಳಿಗೆ ಹೋಗಿ, “ನಾವು ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂಬ ಕಠಿಣವಾದ ಹರಕೆ ಮಾಡಿಕೊಂಡಿದ್ದೇವೆ!
ಆದ್ದರಿಂದ ಈಗ ನೀವು ಮಾಡಬೇಕಾದದ್ದೇನೆಂದರೆ, ಸೇನಾಧಿಪತಿಗೂ ಎಲ್ಲಾ ಯೆಹೂದ್ಯ ನಾಯಕರಿಗೂ ಒಂದು ಸಂದೇಶವನ್ನು ಕಳುಹಿಸಿಕೊಡಿರಿ. ಪೌಲನಿಗೆ ಇನ್ನೂ ಹೆಚ್ಚು ಪ್ರಶ್ನೆಗಳನ್ನು ಕೇಳಬೇಕಾಗಿರುವುದರಿಂದ ಪೌಲನನ್ನು ನಮ್ಮ ಬಳಿಗೆ ಕರೆದುಕೊಂಡು ಬರಬೇಕೆಂದು ಸೇನಾಧಿಪತಿಗೆ ತಿಳಿಸಿರಿ. ಪೌಲನು ಇಲ್ಲಿಗೆ ಬರುತ್ತಿರುವಾಗಲೇ ನಾವು ಮಾರ್ಗದಲ್ಲಿ ಕಾದುಕೊಂಡಿದ್ದು ಅವನನ್ನು ಕೊಲ್ಲುತ್ತೇವೆ” ಎಂದು ಹೇಳಿದರು.
ಆದ್ದರಿಂದ ಸೇನಾಧಿಕಾರಿಯು ಪೌಲನ ಸೋದರಳಿಯನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋದನು. ಆ ಅಧಿಕಾರಿಯು ಸೇನಾಧಿಪತಿಗೆ, “ಈ ಯೌವನಸ್ಥನನ್ನು ನಿನ್ನ ಬಳಿಗೆ ಕರೆದುಕೊಂಡು ಹೋಗಬೇಕೆಂದು ಸೆರೆವಾಸದಲ್ಲಿರುವ ಪೌಲನು ನನ್ನನ್ನು ಕೇಳಿಕೊಂಡನು ಇವನು ನಿನಗೊಂದು ಸಂದೇಶವನ್ನು ತಿಳಿಸಬೇಕೆಂದಿದ್ದಾನೆ” ಎಂದು ಹೇಳಿದನು.
ಆದರೆ ಅವರನ್ನು ನಂಬಬೇಡ! ಪೌಲನನ್ನು ಕೊಲ್ಲುವುದಕ್ಕಾಗಿ ನಲವತ್ತಕ್ಕಿಂತಲೂ ಹೆಚ್ಚು ಮಂದಿ ಯೆಹೂದ್ಯರು ಅಡಗಿಕೊಂಡು ಕಾಯುತ್ತಿದ್ದಾರೆ. ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂದು ಅವರೆಲ್ಲರೂ ಹರಕೆ ಮಾಡಿಕೊಂಡಿದ್ದಾರೆ! ಈಗ ಅವರು ನಿನ್ನ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ” ಎಂದು ಹೇಳಿದನು.
ಬಳಿಕ ಸೇನಾಧಿಪತಿಯು ಇಬ್ಬರು ಸೇನಾಧಿಕಾರಿಗಳನ್ನು ಕರೆದು ಅವರಿಗೆ, “ಸೆಜರೇಯಕ್ಕೆ ಕಳುಹಿಸಿಕೊಡಲು ಇನ್ನೂರು ಮಂದಿ ಸೈನಿಕರನ್ನು ಸಿದ್ಧಪಡಿಸು. ಅಲ್ಲದೆ ಎಪ್ಪತ್ತು ಮಂದಿಯ ಅಶ್ವದಳವನ್ನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಪಡಿಸು. ಈ ರಾತ್ರಿ ಒಂಭತ್ತು ಗಂಟೆಗೆ ಇಲ್ಲಿಂದ ಹೊರಡಲು ನೀವು ಸಿದ್ಧರಾಗಿರಬೇಕು.
ಅಲ್ಲಿ ನನಗೆ ತಿಳಿದುಬಂದದ್ದೇನೆಂದರೆ, ಪೌಲನು ದುಷ್ಕೃತ್ಯಗಳನ್ನು ಮಾಡಿದ್ದಾನೆಂದು ಯೆಹೂದ್ಯರು ಹೇಳಿದರೂ ಅವರ ಆಪಾದನೆಗಳು ಅವರ ಸ್ವಂತ ಯೆಹೂದ್ಯ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟದ್ದಾಗಿದ್ದವು. ಅಲ್ಲದೆ ಇವನನ್ನು ಸೆರೆಮನೆಗಾಗಲಿ ಮರಣದಂಡನೆಗಾಗಲಿ ಗುರಿಪಡಿಸಬಹುದಾದ ಯಾವ ಅಪರಾಧವೂ ಇರಲಿಲ್ಲ.
ಆದರೆ ಯೆಹೂದ್ಯರಲ್ಲಿ ಕೆಲವರು ಪೌಲನನ್ನು ಕೊಲ್ಲಲು ಯೋಜನೆ ಮಾಡುತ್ತಿರುವುದು ನನಗೆ ತಿಳಿಯಿತು. ಆದ್ದರಿಂದ ನಾನು ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ. ಅಲ್ಲದೆ ಅವನ ಮೇಲಿರುವ ದೂರುಗಳನ್ನು ನಿನಗೆ ತಿಳಿಸಬೇಕೆಂದು ನಾನು ಆಪಾದಕರಿಗೂ ಸಹ ತಿಳಿಸಿದ್ದೇನೆ.
ರಾಜ್ಯಪಾಲನು, “ನಿನಗೆ ವಿರೋಧವಾಗಿರುವ ಯೆಹೂದ್ಯರು ಇಲ್ಲಿಗೆ ಬಂದಾಗ, ನಾನು ನಿನ್ನ ವಿಚಾರಣೆ ಮಾಡುತ್ತೇನೆ” ಎಂದು ಹೇಳಿದನು. ಬಳಿಕ ರಾಜ್ಯಪಾಲನು ಪೌಲನನ್ನು ಅರಮನೆಯೊಳಗೆ ಇರಿಸಬೇಕೆಂದು ಆಜ್ಞಾಪಿಸಿದನು. (ಈ ಕಟ್ಟಡವನ್ನು ಹೆರೋದನು ಕಟ್ಟಿಸಿದ್ದನು.)