Bible Languages

Indian Language Bible Word Collections

Bible Versions

Books

Acts Chapters

Acts 24 Verses

Bible Versions

Books

Acts Chapters

Acts 24 Verses

1 ಐದು ದಿನಗಳ ನಂತರ, ಪ್ರಧಾನಯಾಜಕ ಅನನೀಯನು ಯೆಹೂದ್ಯರ ಹಿರೀನಾಯಕರಲ್ಲಿ ಕೆಲವರನ್ನು ಮತ್ತು ತೆರ್ತುಲ್ಲ ಎಂಬ ವಕೀಲನನ್ನು ಕರೆದುಕೊಂಡು ರಾಜ್ಯಪಾಲನ ಎದುರಿನಲ್ಲಿ ಪೌಲನ ಮೇಲೆ ದೋಷಾರೋಪಣೆ ಮಾಡಲು ಸೆಜರೇಯ ಪಟ್ಟಣಕ್ಕೆ ಹೋದನು.
2 ಪೌಲನನ್ನು ಸಭೆಗೆ ಕರೆಸಲಾಯಿತು. ಆಗ ತೆರ್ತುಲ್ಲನು ತನ್ನ ಆಪಾದನೆಗಳನ್ನು ಹೊರಿಸಲಾರಂಭಿಸಿದನು: “ಮಹಾರಾಜಶ್ರೀಗಳಾದ ಫೇಲಿಕ್ಸನೇ, ನಿನ್ನ ದೆಸೆಯಿಂದಾಗಿ ನಮ್ಮ ಜನರು ಶಾಂತಿಯಿಂದ ಜೀವಿಸುತ್ತಿದ್ದಾರೆ. ನಿನ್ನ ವಿವೇಕದ ಸಹಾಯದಿಂದ ನಮ್ಮ ದೇಶದ ಅನೇಕ ದೋಷಗಳನ್ನು ಸರಿಪಡಿಸಿ ಸುಧಾರಣೆಗಳನ್ನು ಮಾಡಲಾಗಿದೆ.
3 ನಾವು ಇವುಗಳನ್ನು ಬಹು ಕೃತಜ್ಞತೆಯಿಂದ ಎಲ್ಲಾ ಸ್ಥಳಗಳಲ್ಲಿ ಯಾವಾಗಲೂ ಒಪ್ಪಿಕೊಳ್ಳುತ್ತೇವೆ.
4 ಆದರೆ ನಾನು ನಿನ್ನ ಸಮಯವನ್ನು ಇನ್ನೂ ಹೆಚ್ಚಿಗೆ ತೆಗೆದುಕೊಳ್ಳಬಯಸದೆ, ಕೆಲವೇ ಮಾತುಗಳಲ್ಲಿ ಹೇಳುವೆ. ದಯವಿಟ್ಟು ತಾಳ್ಮೆಯಿಂದಿರು.
5 ಈ ಮನುಷ್ಯನು (ಪೌಲನು) ಗಲಭೆ ಮಾಡುತ್ತಿದ್ದಾನೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಇವನು ಗಲಭೆಯನ್ನು ಎಬ್ಬಿಸುತ್ತಾನೆ. ಇವನು ؅ನಜರೇನ؆ ಪಂಗಡದ ನಾಯಕನಾಗಿದ್ದಾನೆ.
6 ಅಲ್ಲದೆ, ಇವನು ದೇವಾಲಯವನ್ನು ಅಶುದ್ಧಗೊಳಿಸಲು ಪ್ರಯತ್ನಿಸಿದನು, ಆದರೆ ನಾವು ಇವನನ್ನು ತಡೆದೆವು.
7 [This verse may not be a part of this translation]
8 ಸ್ವತಃ ನೀನೇ ಇವನಿಗೆ ಕೆಲವು ಪ್ರಶ್ನೆಗಳನ್ನು ಕೇಳು. ಆಗ ಈ ಸಂಗತಿಗಳೆಲ್ಲಾ ಸತ್ಯವಾಗಿವೆಯೋ ಇಲ್ಲವೋ ಎಂದು ನಿರ್ಣಯಿಸಲು ನಿನಗೆ ಸಾಧ್ಯವಾಗುವುದು.”
9 ಉಳಿದ ಯೆಹೂದ್ಯರು, “ಈ ಸಂಗತಿಗಳು ನಿಜವಾಗಿಯೂ ಸತ್ಯವಾದುವುಗಳು!” ಎಂದರು.
10 ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ, ಮಾತಾಡಲು ಸೂಚಿಸಿದನು. ಆಗ ಪೌಲನು ಇಂತೆಂದನು: “ರಾಜ್ಯಪಾಲನಾದ ಫೇಲಿಕ್ಸನೇ, ನೀನು ಅನೇಕ ವರ್ಷಗಳಿಂದ ಈ ದೇಶಕ್ಕೆ ನ್ಯಾಯಧೀಶನಾಗಿರುವುದು ನನಗೆ ಗೊತ್ತಿದೆ. ಆದ್ದರಿಂದ ಸಂತೋಷದಿಂದ ನಿನ್ನ ಮುಂದೆ ನನ್ನನ್ನು ಪ್ರತಿಪಾದಿಸಿಕೊಳ್ಳುವೆನು.
11 ನಾನು ಆರಾಧನೆಗೋಸ್ಕರ ಜೆರುಸಲೇಮಿಗೆ ಹೋದದ್ದು ಕೇವಲ ಹನ್ನೆರಡು ದಿನಗಳ ಹಿಂದೆಯಷ್ಟೆ. ಅದು ಸತ್ಯವೆಂದು ಸ್ವತಃ ನೀನೇ ತಿಳಿದುಕೊಳ್ಳಬಲ್ಲೆ.
12 ನಾನು ದೇವಾಲಯದಲ್ಲಾಗಲಿ, ಸಭಾಮಂದಿರಗಳಲ್ಲಾಗಲಿ, ಪಟ್ಟಣದಲ್ಲಾಗಲಿ ಯಾರೊಂದಿಗಾದರೂ ವಾದ ಮಾಡುತ್ತಿರುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಿಲ್ಲ.
13 ಈಗ ನನಗೆ ವಿರೋಧವಾಗಿ ಹೇಳುತ್ತಿರುವ ಸಂಗತಿಗಳನ್ನು ಈ ಯೆಹೂದ್ಯರು ನಿರೂಪಿಸಲಾರರು.
14 ”ಆದರೆ ನಾನು ನಿನಗೆ ಹೇಳುವುದೇನೆಂದರೆ, ಯೇಸುವಿನ ಮಾರ್ಗದ ಹಿಂಬಾಲಕನಾದ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ. ಯೇಸುವಿನ ಮಾರ್ಗವು ಸರಿಯಲ್ಲವೆಂದು ಯೆಹೂದ್ಯರು ಹೇಳುತ್ತಾರೆ. ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಪುಸ್ತಕಗಳಲ್ಲಿಯೂ ಬರೆದಿರುವ ಪ್ರತಿಯೊಂದನ್ನು ನಾನು ನಂಬುತ್ತೇನೆ.
15 ಈ ಯೆಹೂದ್ಯರಿಗೆ ದೇವರಲ್ಲಿ ಯಾವ ನಿರೀಕ್ಷೆಯಿದೆಯೋ ಅದೇ ನಿರೀಕ್ಷೆ ನನಗೂ ಇದೆ. ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುತ್ತದೆ ಎಂಬುದೇ ಆ ನಿರೀಕ್ಷೆ.
16 ಈ ಕಾರಣದಿಂದ ನಾನು ಯಾವುದನ್ನು ಸರಿಯಾದದ್ದು ಎಂದು ನಂಬಿದ್ದೇನೋ ಅದನ್ನು ದೇವರ ಮುಂದೆಯೂ ಮನುಷ್ಯರ ಮುಂದೆಯೂ ಮಾಡಲು ಯಾವಾಗಲು ಪ್ರಯತ್ನಿಸುತ್ತಿದ್ದೇನೆ.
17 ”ನಾನು ಅನೇಕ ವರ್ಷಗಳಿಂದ ಜೆರಸಲೇಮಿನಲ್ಲಿ ಇರಲಿಲ್ಲ. ಬಳಿಕ ನಾನು ನನ್ನ ಜನರಿಗಾಗಿ ಹಣವನ್ನು ತರುವುದಕ್ಕಾಗಿಯೂ ಉಡುಗೊರೆಗಳನ್ನು ಕೊಡುವುದಕ್ಕಾಗಿಯೂ ಜೆರುಸಲೇಮಿಗೆ ಮರಳಿ ಹೋದೆನು.
18 ನಾನು ಈ ಕಾರ್ಯದಲ್ಲಿ ನಿರತನಾಗಿದ್ದಾಗ ಕೆಲವು ಮಂದಿ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಕಂಡರು. ನಾನು ಶುದ್ಧಾಚಾರದ ವಿಧಿಯನ್ನು ಮುಗಿಸಿದ್ದೆನು. ನಾನು ಯಾವ ಗಲಭೆಯನ್ನೂ ಮಾಡಿರಲಿಲ್ಲ. ನನ್ನ ಸುತ್ತಲೂ ಯಾವ ಜನರೂ ಇರಲಿಲ್ಲ.
19 ಆದರೆ ಏಷ್ಯಾದ ಕೆಲವು ಮಂದಿ ಯೆಹೂದ್ಯರು ಅಲ್ಲಿದ್ದರು. ಅವರು ಈಗ ನಿನ್ನೆದುರಿನಲ್ಲಿ ಇರಬೇಕಿತ್ತು. ನಾನು ನಿಜವಾಗಿ ಏನಾದರೂ ತಪ್ಪು ಮಾಡಿದ್ದರೆ ಏಷ್ಯಾದ ಆ ಯೆಹೂದ್ಯರೇ ನನ್ನ ಮೇಲೆ ದೋಷಾರೋಪಣೆ ಮಾಡಬೇಕಿತ್ತು.
20 ನಾನು ಜೆರುಸಲೇಮಿನಲ್ಲಿ ಯೆಹೂದ್ಯ ನ್ಯಾಯಸಭೆಯ ಮುಂದೆ ನಿಂತಿದ್ದಾಗ, ನನ್ನಲ್ಲಿ ಅವರಿಗೆ ಯಾವ ಅಪರಾಧಗಳು ಕಂಡುಬಂದವೆಂದು ಇಲ್ಲಿರುವ ಈ ಯೆಹೂದ್ಯರನ್ನೇ ಕೇಳು.
21 ನಾನು ಅವರ ಮುಂದೆ ನಿಂತಿದ್ದಾಗ, ؅ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!؆ ಎಂಬ ಒಂದೇ ಒಂದು ಸಂಗತಿಯನ್ನು ನಾನು ಕೂಗಿ ಹೇಳಿದೆ.”
22 ಫೇಲಿಕ್ಸನು ಯೇಸುವಿನ ಮಾರ್ಗದ ಬಗ್ಗೆ ಮೊದಲೇ ಸಾಕಷ್ಟು ಅರ್ಥಮಾಡಿಕೊಂಡಿದ್ದನು. ಅವನು ವಿಚಾರಣೆಯನ್ನು ನಿಲ್ಲಿಸಿ, “ಸೇನಾಧಿಪತಿಯಾದ ಲೂಸಿಯನು ಇಲ್ಲಿಗೆ ಬಂದಾಗ, ಈ ಸಂಗತಿಗಳ ಬಗ್ಗೆ ನಾನು ತೀರ್ಪನ್ನು ಕೊಡುತ್ತೇನೆ” ಎಂದು ಹೇಳಿದನು.
23 ಪೌಲನನ್ನು ಕಾವಲಿನಲ್ಲಿರಿಸಬೇಕೆಂದು ಫೇಲಿಕ್ಸನು ಸೇನಾಧಿಕಾರಿಗೆ ತಿಳಿಸಿದನು. ಆದರೆ ಪೌಲನಿಗೆ ಸ್ವಲ್ಪ ಸ್ವತಂತ್ರವನ್ನು ಕೊಡುವಂತೆಯೂ ಪೌಲನ ಮಿತ್ರರು ಅವನಿಗೆ ಅಗತ್ಯವಾದ ವಸ್ತುಗಳನ್ನು ತಂದುಕೊಡುವುದಕ್ಕೆ ಅವಕಾಶ ಕೊಡಬೇಕೆಂತಲೂ ಅವನು ಅಧಿಕಾರಿಗೆ ಹೇಳಿದನು.
24 ಕೆಲವು ದಿನಗಳಾದ ಮೇಲೆ ಫೇಲಿಕ್ಸನು ತನ್ನ ಹೆಂಡತಿಯಾದ ದ್ರೂಸಿಲ್ಲಳೊಂದಿಗೆ ಬಂದನು. ಆಕೆ ಯೆಹೂದ್ಯಳು. ಫೇಲಿಕ್ಸನು ಪೌಲನನ್ನು ಕರೆಯಿಸಿದನು. ಕ್ರಿಸ್ತನಾದ ಯೇಸುವಿನಲ್ಲಿ ನಂಬಿಕೆ ಇಡುವುದರ ಬಗ್ಗೆ ಪೌಲನು ಹೇಳಿದ್ದನ್ನು ಅವನು ಆಲಿಸಿದನು.
25 ಆದರೆ ನೀತಿಯಬಾಳ್ವೆ, ಇಂದ್ರಿಯನಿಗ್ರಹ ಮತ್ತು ಮುಂದೆ ಬರಲಿರುವ ನ್ಯಾಯತೀರ್ಪುಗಳ ಬಗ್ಗೆ ಪೌಲನು ಮಾತಾಡಿದಾಗ ಅವನು ಭಯಗೊಂಡು, “ಈಗ ನೀನು ಹೋಗು! ನನಗೆ ಹೆಚ್ಚು ಸಮಯವಿರುವಾಗ ನಿನ್ನನ್ನು ಕರೆಯಿಸುತ್ತೇನೆ” ಎಂದು ಹೇಳಿದನು.
26 ಆದರೆ ಪೌಲನು ಲಂಚ ಕೊಡಬಹುದೆಂದು ಅವನು ನಿರೀಕ್ಷಿಸಿಕೊಂಡಿದ್ದರಿಂದ ಅವನು ಅನೇಕ ಸಲ ಪೌಲನನ್ನು ಕರೆಯಿಸಿ ಅವನೊಂದಿಗೆ ಮಾತಾಡಿದನು.
27 ಆದರೆ ಎರಡು ವರ್ಷಗಳ ನಂತರ ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ರಾಜ್ಯಪಾಲನಾದನು. ಆದರೆ ಫೇಲಿಕ್ಸನು ಯೆಹೂದ್ಯರನ್ನು ಮೆಚ್ಚಿಸುವುದಕ್ಕಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.

Acts 24:9 Kannada Language Bible Words basic statistical display

COMING SOON ...

×

Alert

×