Bible Languages

Indian Language Bible Word Collections

Bible Versions

Books

Acts Chapters

Acts 26 Verses

Bible Versions

Books

Acts Chapters

Acts 26 Verses

1 ಅಗ್ರಿಪ್ಪನು ಪೌಲನಿಗೆ, “ಈಗ ನೀನು ನಿನ್ನ ಪರವಾಗಿ ಮಾತಾಡಬಹುದು” ಎಂದು ಹೇಳಿದನು. ಆಗ ಪೌಲನು ತನ್ನ ಕೈಯೆತ್ತಿ ಮಾತಾಡಲಾರಂಭಿಸಿ ಇಂತೆಂದನು:
2 ”ರಾಜನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸುತ್ತಿರುವ ಆಪಾದನೆಗಳಿಗೆಲ್ಲಾ ನಾನು ಉತ್ತರಕೊಡುವೆನು. ಇಂದು ನಿನ್ನ ಮುಂದೆ ನಿಂತುಕೊಂಡು ಪ್ರತಿವಾದ ಮಾಡುವ ಅವಕಾಶ ದೊರೆತಿರುವುದು ನನ್ನ ಭಾಗ್ಯವೆಂದೇ ಎಣಿಸುತ್ತೇನೆ.
3 ನಾನು ನಿನ್ನೊಂದಿಗೆ ಮಾತಾಡಲು ಬಹು ಸಂತೋಷಪಡುತ್ತೇನೆ. ಯಾಕೆಂದರೆ, ಯೆಹೂದ್ಯರ ಎಲ್ಲಾ ಸಂಪ್ರದಾಯಗಳ ಬಗ್ಗೆ ಮತ್ತು ಯೆಹೂದ್ಯರು ವಾದಿಸುತ್ತಿರುವ ಸಂಗತಿಗಳ ಬಗ್ಗೆ ನಿನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ದಯವಿಟ್ಟು ನನ್ನ ಮಾತುಗಳನ್ನು ತಾಳ್ಮೆಯಿಂದ ಆಲಿಸು.
4 ”ನನ್ನ ಇಡೀ ಜೀವಮಾನದ ಬಗ್ಗೆ ಎಲ್ಲಾ ಯೆಹೂದ್ಯರಿಗೆ ಗೊತ್ತಿದೆ. ನಾನು ಆರಂಭದಿಂದ ನನ್ನ ಸ್ವದೇಶದಲ್ಲಿಯೂ ಅನಂತರ ಜೆರುಸಲೇಮಿನಲ್ಲಿಯೂ ಜೀವಿಸಿದ ರೀತಿಯನ್ನು ಅವರು ಬಲ್ಲರು.
5 ಈ ಯೆಹೂದ್ಯರು ಬಹುಕಾಲದಿಂದಲೂ ನನ್ನನ್ನು ತಿಳಿದಿದ್ದಾರೆ. ನೀನು ಅವರನ್ನು ಕೇಳುವುದಾದರೆ, ನಾನು ಒಳ್ಳೆಯ ಫರಿಸಾಯನಾಗಿದ್ದೆನೆಂದು ಅವರು ನಿನಗೆ ಹೇಳಬಲ್ಲರು. ಯೆಹೂದ್ಯರ ಇತರ ಯಾವುದೇ ಪಂಗಡಗಿಳಿಗಿಂತಲೂ ಹೆಚ್ಚು ಎಚ್ಚರಿಕೆಯಿಂದ ಫರಿಸಾಯರು ಯೆಹೂದ್ಯ ಧರ್ಮದ ಕಟ್ಟೆಳೆಗಳಿಗೆ ವಿಧೇಯರಾಗುತ್ತಾರೆ.
6 ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನಾನು ನಿರೀಕ್ಷಿಸಿಕೊಂಡಿರುವುದರಿಂದಲೇ ಈಗ ವಿಚಾರಣೆಗೆ ಗುರಿಯಾಗಿದ್ದೇನೆ.
7 ಈ ವಾಗ್ದಾನವು ಖಂಡಿತವಾಗಿ ನೆರವೇರುತ್ತದೆ ಎಂದು ಹನ್ನೆರಡು ಕುಲಗಳ ನಮ್ಮ ಜನರು ನಿರೀಕ್ಷಿಸಿಕೊಂಡಿದ್ದಾರೆ. ಯೆಹೂದ್ಯರು ಹಗಲಿರುಳು ದೇವರ ಸೇವೆ ಮಾಡುತ್ತಿರುವುದು ಈ ನಿರೀಕ್ಷೆಯಿಂದಲೇ. ನಾನು ಸಹ ಇದೇ ನಿರೀಕ್ಷೆಯನ್ನು ಹೊಂದಿರುವುದರಿಂದ ಇವರು ನನ್ನ ಮೇಲೆ ಆಪಾದನೆಗಳನ್ನು ಹೊರಿಸಿದ್ದಾರೆ!
8 ಸತ್ತವರನ್ನು ದೇವರು ಜೀವಂತವಾಗಿ ಎಬ್ಬಿಸುತ್ತಾನೆ ಎಂಬುದು ನಂಬತಕ್ಕದ್ದಲ್ಲವೆಂದು ನೀವು ಭಾವಿಸಿಕೊಂಡಿರುವುದೇಕೆ?
9 ”ನಾನು ಫರಿಸಾಯನಾಗಿದ್ದಾಗ ನಜರೇತಿನ ಯೇಸುವಿನ ಹೆಸರಿಗೆ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಬೇಕೆಂದು ಆಲೋಚಿಸಿಕೊಂಡೆನು.
10 ಜೆರುಸಲೇಮಿನಲ್ಲಿ ವಿಶ್ವಾಸಿಗಳ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಿದೆ. ಈ ವಿಶ್ವಾಸಿಗಳಲ್ಲಿ ಅನೇಕರನ್ನು ಸೆರೆಮನೆಗೆ ಹಾಕಲು ಮಹಾಯಾಜಕರು ನನಗೆ ಅಧಿಕಾರವನ್ನು ಕೊಟ್ಟರು. ಯೇಸುವಿನ ಶಿಷ್ಯರನ್ನು ಕೊಂದಾಗ ಅದಕ್ಕೆ ನಾನೂ ನನ್ನ ಸಮ್ಮತಿಯನ್ನು ಸೂಚಿಸಿದೆ.
11 ಪ್ರತಿಯೊಂದು ಸಭಾಮಂದಿರದಲ್ಲಿಯೂ ನಾನು ಅವರನ್ನು ದಂಡಿಸಿದೆನು. ಯೇಸುವಿನ ವಿರುದ್ಧ ದೂಷಣೆಯ ಮಾತುಗಳನ್ನು ಅವರ ಬಾಯಿಂದ ಹೊರಡಿಸಲು ನಾನು ಪ್ರಯತ್ನಿಸಿದೆನು. ಆ ವಿಶ್ವಾಸಿಗಳ ಮೇಲೆ ಬಹುಕೋಪವುಳ್ಳವನಾಗಿದ್ದು ಅವರನ್ನು ಹುಡುಕಿಹುಡುಕಿ ಹಿಂಸಿಸುವುದಕ್ಕಾಗಿ ವಿದೇಶದ ಪಟ್ಟಣಗಳಿಗೂ ಹೋದೆನು.
12 ”ಒಂದುಸಲ, ದಮಸ್ಕ ಪಟ್ಟಣಕ್ಕೆ ಹೋಗಲು ಮಹಾಯಾಜಕರು ನನಗೆ ಅಪ್ಪಣೆಯನ್ನೂ ಅಧಿಕಾರವನ್ನೂ ಕೊಟ್ಟರು.
13 ನಾನು ದಮಸ್ಕದ ದಾರಿಯಲ್ಲಿ ಹೋಗುತ್ತಿದ್ದೆನು. ಆಗ ಮಧ್ಯಾಹ್ನವಾಗಿತ್ತು. ಇದ್ದಕ್ಕಿದ್ದಂತೆ ಆಗ ಆಕಾಶದಿಂದ ಸೂರ್ಯನಿಗಿಂತಲೂ ಪ್ರಕಾಶಮಾನವಾದ ಬೆಳಕೊಂದು ಬಂದು ನನ್ನ ಸುತ್ತಲೂ ಮತ್ತು ನನ್ನೊಂದಿಗೆ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಪ್ರಜ್ವಲಿಸಿತು.
14 ನಾವೆಲ್ಲರೂ ನೆಲಕ್ಕೆ ಬಿದ್ದೆವು. ಆಗ ವಾಣಿಯೊಂದು ಯೆಹೂದ್ಯರ ಭಾಷೆಯಲ್ಲಿ ನನ್ನೊಂದಿಗೆ ಮಾತಾಡುವುದನ್ನು ಕೇಳಿದೆನು. ಆ ವಾಣಿಯು, ؅ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತಿರುವೆ? ಮುಳ್ಳುಗೋಲನ್ನು ಒದೆಯುವುದು ನಿನಗೆ ಕಷ್ಟ؆ ಎಂದು ಹೇಳಿತು.
15 ”ನಾನು, ؅ಪ್ರಭುವೇ, ನೀನು ಯಾರು?؆ ಎಂದೆನು. “ಪ್ರಭುವು, ؅ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.
16 ಎದ್ದೇಳು! ನಿನ್ನನ್ನು ನನ್ನ ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಆರಿಸಿಕೊಂಡಿದ್ದೇನೆ. ಈ ಹೊತ್ತು ನಾನು ನಿನಗೆ ಕಾಣಿಸಿಕೊಂಡದ್ದರ ವಿಷಯವಾಗಿಯೂ ನಾನು ನಿನಗೆ ಕೊಡಲಿರುವ ದರ್ಶನಗಳ ವಿಷಯವಾಗಿಯೂ ನೀನು ಜನರಿಗೆ ಸಾಕ್ಷಿಯಾಗಿರುವೆ. ಇದಕ್ಕಾಗಿಯೇ ಈ ಹೊತ್ತು ನಾನು ನಿನಗೆ ಕಾಣಿಸಿಕೊಂಡೆನು.
17 ನಿನ್ನ ಸ್ವಂತ ಜನರಿಂದಲೂ ಯೆಹೂದ್ಯರಲ್ಲದ ಜನರಿಂದಲೂ ನಿನಗೆ ಕೇಡಾಗದಂತೆ ಕಾಪಾಡುವೆನು. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತಿದ್ದೇನೆ.
18 ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು؆ ಎಂದನು.”
19 ಪೌಲನು ಮಾತನ್ನು ಮುಂದುವರಿಸಿ ಇಂತೆಂದನು: “ರಾಜನಾದ ಅಗ್ರಿಪ್ಪನೇ, ನಾನು ಪರಲೋಕದ ಈ ದರ್ಶನವನ್ನು ಕಂಡ ಮೇಲೆ ಅದಕ್ಕೆ ವಿಧೇಯನಾದೆನು.
20 ನಾನು ಜನರಿಗೆ, ؅ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ؆ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.
21 ”ಈ ಕಾರಣಗಳಿಂದ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಬಂಧಿಸಿ ಕೊಲ್ಲಲು ಪ್ರಯತ್ನಿಸಿದರು.
22 ಆದರೆ ದೇವರು ನನಗೆ ಸಹಾಯಮಾಡಿದನು. ಆತನು ಇಂದಿನವರೆಗೂ ನನಗೆ ಸಹಾಯಮಾಡುತ್ತಿದ್ದಾನೆ. ಆದ್ದರಿಂದಲೇ ಇಂದು ಇಲ್ಲಿ ನಿಂತುಕೊಂಡಿದ್ದೇನೆ ಮತ್ತು ನಾನು ಕಂಡ ಸಂಗತಿಗಳ ಬಗ್ಗೆ ಜನರಿಗೆಲ್ಲಾ ಸಾಕ್ಷಿ ಹೇಳುತ್ತಿದ್ದೇನೆ. ಆದರೆ ನಾನು ಯಾವ ಹೊಸದನ್ನೂ ಹೇಳದೆ, ಮೋಶೆ ಮತ್ತು ಪ್ರವಾದಿಗಳು ನೆರವೇರುತ್ತವೆ ಎಂದು ಹೇಳಿದ ಸಂಗತಿಗಳನ್ನೇ ಹೇಳುತ್ತಿದ್ದೇನೆ.
23 ಕ್ರಿಸ್ತನು ಬಾಧೆಪಟ್ಟು ಸತ್ತು, ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದುಬಂದು, ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಬೆಳಕನ್ನು ತರುತ್ತಾನೆಂದು ಮೋಶೆ ಮತ್ತು ಪ್ರವಾದಿಗಳು ಹೇಳಿದ್ದಾರೆ.”
24 ಪೌಲನು ತನ್ನ ಪರವಾಗಿ ಈ ಸಂಗತಿಗಳನ್ನು ಹೇಳುತ್ತಿರಲು ಫೆಸ್ತನು, “ಪೌಲನೇ, ನೀನು ಹುಚ್ಚನಾಗಿರುವೆ! ಅಧಿಕ ಅಧ್ಯಯನ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ!” ಎಂದು ಕೂಗಿ ಹೇಳಿದನು.
25 ಪೌಲನು, “ಮಹಾರಾಜಶ್ರೀಗಳಾದ ಫೆಸ್ತನೇ, ನಾನು ಹುಚ್ಚನಲ್ಲ. ನಾನು ಹೇಳುತ್ತಿರುವುದು ಸತ್ಯಸಂಗತಿಗಳಾಗಿವೆ. ನನ್ನ ಮಾತುಗಳು ಮೂರ್ಖನ ಮಾತುಗಳಲ್ಲ. ನಾನು ಸ್ವಸ್ಥಬುದ್ಧಿಯುಳ್ಳವನಾಗಿದ್ದೇನೆ.
26 ರಾಜನಾದ ಅಗ್ರಿಪ್ಪನಿಗೆ ಈ ಸಂಗತಿಗಳು ತಿಳಿದಿವೆ. ನಾನು ಅವನೊಂದಿಗೆ ಸ್ವತಂತ್ರವಾಗಿ ಮಾತಾಡಬಲ್ಲೆನು. ಈ ಎಲ್ಲಾ ಸಂಗತಿಗಳ ಬಗ್ಗೆ ಅವನು ಕೇಳಿದ್ದಾನೆಂದು ನನಗೆ ಗೊತ್ತಿದೆ. ಯಾಕೆಂದರೆ ಎಲ್ಲಾ ಜನರು ನೋಡಬಹುದಾದ ಸ್ಥಳದಲ್ಲಿ ಈ ಸಂಗತಿಗಳು ನೆರವೇರಿದವು.
27 ರಾಜ ಅಗ್ರಿಪ್ಪನೇ, ಪ್ರವಾದಿಗಳು ಬರೆದ ಸಂಗತಿಗಳನ್ನು ನೀನು ನಂಬುವಿಯಾ? ನೀನು ನಂಬುವೆ ಎಂದು ನನಗೆ ಗೊತ್ತಿದೆ!” ಎಂಬುದಾಗಿ ಹೇಳಿದನು.
28 ರಾಜ ಅಗ್ರಿಪ್ಪನು ಪೌಲನಿಗೆ, “ಬಹು ಸುಲಭವಾಗಿ ನನ್ನನ್ನು ಒಪ್ಪಿಸಿ ಕ್ರೈಸ್ತನನ್ನಾಗಿ ಮಾಡಬಹುದೆಂದು ನೀನು ಯೋಚಿಸಿಕೊಂಡಿರುವಿಯಾ?” ಎಂದು ಕೇಳಿದನು.
29 ಪೌಲನು, “ಸುಲಭವೋ ಕಷ್ಟವೋ ಅದು ನನಗೆ ಮುಖ್ಯವಲ್ಲ. ನೀನು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಪ್ರತಿಯೊಬ್ಬರೂ ರಕ್ಷಣೆ ಹೊಂದಿ ನನ್ನಂತೆಯೇ ಆಗಬೇಕೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ!” ಎಂದು ಹೇಳಿದನು.
30 ರಾಜ ಅಗ್ರಿಪ್ಪನು, ರಾಜ್ಯಪಾಲ ಫೆಸ್ತನು, ಬೆರ್ನಿಕೆರಾಣಿ ಮತ್ತು ಅವರೊಂದಿಗೆ ಕುಳಿತುಕೊಂಡಿದ್ದ ಜನರೆಲ್ಲರೂ ಎದ್ದುನಿಂತು
31 ಅಲ್ಲಿಂದ ಹೊರಗೆ ಹೋದರು. ಅವರು ಒಬ್ಬರಿಗೊಬ್ಬರು, “ಈ ಮನುಷ್ಯನನ್ನು ಕೊಲ್ಲಬಾರದು ಅಥವಾ ಸೆರೆಮನೆಗೆ ಹಾಕಬಾರದು. ಇವನು ನಿಜವಾಗಿಯೂ ಕೆಟ್ಟದ್ದೇನೂ ಮಾಡಿಲ್ಲ!” ಎಂದು ಮಾತಾಡಿಕೊಂಡರು.
32 ಬಳಿಕ ಅಗ್ರಿಪ್ಪನು ಫೆಸ್ತನಿಗೆ, “ಇವನು ಸೀಸರನಿಗೆ ಬಿನ್ನಹ ಮಾಡಿಕೊಳ್ಳದಿದ್ದರೆ, ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು.

Acts 26:1 Kannada Language Bible Words basic statistical display

COMING SOON ...

×

Alert

×