Bible Languages

Indian Language Bible Word Collections

Bible Versions

Books

Acts Chapters

Acts 28 Verses

Bible Versions

Books

Acts Chapters

Acts 28 Verses

1 ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ ಅದು ಮಾಲ್ಟ ದ್ವೀಪವೆಂದು ನಮಗೆ ತಿಳಿಯಿತು.
2 ಆಗ ಮಳೆಯು ಸುರಿಯುತ್ತಿತ್ತು ಮತ್ತು ತುಂಬ ಚಳಿಯಿತ್ತು. ಆದರೆ ಅಲ್ಲಿನ ಜನರು ನಮಗೆ ವಿಶೇಷವಾದ ಕರುಣೆತೋರಿ ನಮಗಾಗಿ ಬೆಂಕಿಹೊತ್ತಿಸಿ ನಮ್ಮೆಲ್ಲರನ್ನು ಆಹ್ವಾನಿಸಿದರು.
3 ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ ಅದನ್ನು ಬೆಂಕಿಯ ಮೇಲೆ ಹಾಕುತ್ತಿರಲು ಅದರ ಕಾವಿನ ದೆಸೆಯಿಂದ ವಿಷದ ಹಾವೊಂದು ಹೊರಗೆ ಬಂದು ಪೌಲನ ಕೈಗೆ ಸುತ್ತಿಕೊಂಡಿತು.
4 ಪೌಲನ ಕೈಗೆ ಸುತ್ತಿಕೊಂಡಿದ್ದ ಆ ಹಾವನ್ನು ಅಲ್ಲಿನ ಜನರು ನೋಡಿ, “ಇವನು ಕೊಲೆಗಾರನೇ ಸರಿ! ಇವನು ಸಮುದ್ರದಲ್ಲಿ ಸಾಯದಿದ್ದರೂ ಇವನು ಬದುಕುವುದು ನ್ಯಾಯಕ್ಕೆ ಇಷ್ಟವಿಲ್ಲ” ಎಂದು ಹೇಳಿದರು.
5 ಆದರೆ ಪೌಲನು ಆ ಹಾವನ್ನು ಬೆಂಕಿಯೊಳಕ್ಕೆ ಝಾಡಿಸಿ ಬಿಟ್ಟನು. ಪೌಲನಿಗೆ ಯಾವ ಹಾನಿಯೂ ಆಗಲಿಲ್ಲ.
6 ಪೌಲನ ಮೈ ಊದಿಕೊಂಡು ಇದ್ದಕ್ಕಿದ್ದಂತೆ ಸತ್ತು ಬೀಳುತ್ತಾನೆ ಎಂದು ಅವರು ತಿಳಿದುಕೊಂಡಿದ್ದರು. ಅವರು ಪೌಲನನ್ನೇ ಬಹು ಹೊತ್ತಿನವರೆಗೆ ದಿಟ್ಟಿಸಿ ನೋಡುತ್ತಿದ್ದರೂ ಪೌಲನಿಗೆ ಯಾವ ಹಾನಿಯೂ ಆಗಲಿಲ್ಲ. ಆದ್ದರಿಂದ ಅವರು ತಮ್ಮ ಅಭಿಪ್ರಾಯವನ್ನು ಬದಲಿಸಿ, “ಇವನೊಬ್ಬ ದೇವರು!” ಎಂದು ಹೇಳಿದರು.
7 ಆ ಸ್ಥಳದ ಸುತ್ತಮುತ್ತ ಕೆಲವು ಹೊಲಗಳು ಇದ್ದವು. ಆ ದ್ವೀಪದ ಪ್ರಮುಖ ವ್ಯಕ್ತಿಯೊಬ್ಬನಿಗೆ ಆ ಹೊಲಗಳು ಸೇರಿದ್ದವು. ಅವನ ಹೆಸರು ಪೊಪ್ಲಿಯ. ಅವನು ನಮ್ಮನ್ನು ತನ್ನ ಮನೆಗೆ ಸ್ವಾಗತಿಸಿದನು. ಪೊಪ್ಲಿಯನು ಕನಿಕರ ತೋರಿದನು. ನಾವು ಅವನ ಮನೆಯಲ್ಲಿ ಮೂರು ದಿನವಿದ್ದೆವು.
8 ಪೊಪ್ಲಿಯನ ತಂದೆಯು ಬಹಳ ಅಸ್ವಸ್ಥನಾಗಿದ್ದನು. ಅವನಿಗೆ ಜ್ವರವಿತ್ತು ಮತ್ತು ರಕ್ತಭೇದಿಯಾಗುತ್ತಿತ್ತು. ಪೌಲನು ಅವನ ಬಳಿಗೆ ಹೋಗಿ ಅವನಿಗಾಗಿ ಪ್ರಾರ್ಥಿಸಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಗುಣಪಡಿಸಿದನು.
9 ಇದಾದ ನಂತರ ದ್ವೀಪದಲ್ಲಿದ್ದ ಇತರ ರೋಗಿಗಳೆಲ್ಲ ಪೌಲನ ಬಳಿಗೆ ಬಂದರು. ಪೌಲನು ಅವರನ್ನು ಸಹ ಗುಣಪಡಿಸಿದನು.
10 [This verse may not be a part of this translation]
11 [This verse may not be a part of this translation]
12 ನಾವು ಸಿರಾಕೊಸ್ ಪಟ್ಟಣಕ್ಕೆ ಬಂದು ಅಲ್ಲಿ ಮೂರು ದಿನವಿದ್ದೆವು. ಬಳಿಕ ಅಲ್ಲಿಂದ ಹೊರಟು
13 ರೇಗಿಯ ಎಂಬ ಪಟ್ಟಣಕ್ಕೆ ಬಂದೆವು. ಮರುದಿನ ನೈರುತ್ಯ ಗಾಳಿಯು ಬೀಸತೊಡಗಿತು. ಆದ್ದರಿಂದ ಅಲ್ಲಿಂದ ಹೊರಡಲು ಸಾಧ್ಯವಾಯಿತು. ಒಂದು ದಿನವಾದ ಮೇಲೆ ಪುತೋಲಿ ಎಂಬ ಪಟ್ಟಣಕ್ಕೆ ಬಂದೆವು.
14 ಅಲ್ಲಿ ಕೆಲವು ಮಂದಿ ವಿಶ್ವಾಸಿಗಳನ್ನು ಕಂಡೆವು. ತಮ್ಮೊಂದಿಗೆ ಒಂದು ವಾರವಾದರೂ ಇರಬೇಕೆಂದು ಅವರು ನಮ್ಮನ್ನು ಕೇಳಿಕೊಂಡರು. ಕೊನೆಗೆ ನಾವು ರೋಮಿಗೆ ಹೊರಟೆವು.
15 ನಾವು ಇಲ್ಲಿರುವುದು ರೋಮಿನಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. ಅವರು ನಮ್ಮನ್ನು ಭೇಟಿಯಾಗುವುದಕ್ಕಾಗಿ ؅ಅಪಿಯಾ؆ ಮಾರುಕಟ್ಟೆಗೂ ಮತ್ತು ؅ತ್ರಿಛತ್ರ؆ ಎಂಬ ಸ್ಥಳಕ್ಕೂ ಬಂದರು. ಈ ವಿಶ್ವಾಸಿಗಳನ್ನು ಕಂಡಾಗ ಪೌಲನು ಧೈರ್ಯಗೊಂಡು ದೇವರಿಗೆ ಸ್ತೋತ್ರ ಸಲ್ಲಿಸಿದನು.
16 ಬಳಿಕ ನಾವು ರೋಮಿಗೆ ಹೋದೆವು. ಅಲ್ಲಿ ಪ್ರತ್ಯೇಕವಾಗಿರಲು ಪೌಲನಿಗೆ ಅವಕಾಶವನ್ನು ಕೊಡಲಾಯಿತು. ಆದರೆ ಪೌಲನನ್ನು ಕಾಯುವುದಕ್ಕಾಗಿ ಸೈನಿಕನೊಬ್ಬನು ಅವನೊಂದಿಗಿದ್ದನು.
17 ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಧಾನರಾಗಿದ್ದವರನ್ನು ಕರೆಯಿಸಿದನು. ಅವರು ಬಂದು ಒಟ್ಟಾಗಿ ಸೇರಿದಾಗ ಪೌಲನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ನಮ್ಮ ಜನರಿಗೂ ನಮ್ಮ ಪಿತೃಗಳ ಸಂಪ್ರದಾಯಗಳಿಗೂ ವಿರುದ್ಧವಾಗಿ ನಾನೇನೂ ಮಾಡಿಲ್ಲ. ಆದರೆ ನನ್ನನ್ನು ಜೆರುಸಲೇಮಿನಲ್ಲಿ ಬಂಧಿಸಿ ರೋಮಿನವರಿಗೆ ಒಪ್ಪಿಸಲಾಗಿದೆ.
18 ರೋಮಿನವರು ನನಗೆ ಅನೇಕ ಪ್ರಶ್ನೆಗಳನ್ನು ಕೇಳಿದರು. ಆದರೆ ನನ್ನನ್ನು ಮರಣದಂಡನೆಗೆ ಗುರಿಮಾಡುವಂಥ ಯಾವ ಅಪರಾಧವನ್ನೂ ಅವರು ನನ್ನಲ್ಲಿ ಕಾಣಲಿಲ್ಲ. ಆದ್ದರಿಂದ ಅವರು ನನ್ನನ್ನು ಬಿಡುಗಡೆ ಮಾಡಬೇಕೆಂದಿದ್ದರು.
19 ಆದರೆ ಅಲ್ಲಿದ್ದ ಯೆಹೂದ್ಯರು ಅದಕ್ಕೆ ಆಕ್ಷೇಪಿಸಿದರು. ಆದ್ದರಿಂದ ನನಗೆ ರೋಮಿನಲ್ಲಿ ಸೀಸರನ ಮುಂದೆ ವಿಚಾರಣೆಯಾಗಲಿ ಎಂದು ಕೇಳಿಕೊಳ್ಳಬೇಕಾಯಿತು. ಆದರೆ ನನ್ನ ಜನರು ಮಾಡಿದ್ದು ತಪ್ಪೆಂದು ನಾನು ನಿಮಗೆ ಹೇಳುತ್ತಿಲ್ಲ.
20 ಆದಕಾರಣವೇ ನಾನು ನಿಮ್ಮನ್ನು ನೋಡಲು ಮತ್ತು ನಿಮ್ಮ ಸಂಗಡ ಮಾತಾಡಲು ಬಯಸಿದೆ. ಇಸ್ರೇಲಿನ ನಿರೀಕ್ಷೆಯಲ್ಲಿ ನಾನು ನಂಬಿಕೆ ಇಟ್ಟಿರುವುದರಿಂದಲೇ ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.
21 [This verse may not be a part of this translation]
22 [This verse may not be a part of this translation]
23 ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.
24 ಪೌಲನು ಹೇಳಿದ ಕೆಲವು ಸಂಗತಿಗಳನ್ನು ಕೆಲವು ಮಂದಿ ಯೆಹೂದ್ಯರು ನಂಬಿದರು. ಆದರೆ ಉಳಿದವರು ನಂಬಲಿಲ್ಲ.
25 ಅವರು ವಾದಮಾಡಿ ಅಲ್ಲಿಂದ ಹೊರಡಲು ಸಿದ್ಧರಾದಾಗ ಪೌಲನು ಅವರಿಗೆ ಇಂತೆಂದನು: “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಮೂಲಕ ಪಿತೃಗಳಿಗೆ ಸತ್ಯವನ್ನು ತಿಳಿಸಿದನು. ಆತನು ಹೀಗೆ ಹೇಳಿದ್ದಾನೆ:
26 ”ಈ ಜನರ ಬಳಿಗೆ ಹೋಗಿ ಇಂತೆನ್ನಿರಿ: ನೀನು ಕಿವಿಗೊಟ್ಟು ಕೇಳಿದರೂ ಅರ್ಥಮಾಡಿಕೊಳ್ಳವುದಿಲ್ಲ; ಕಣ್ಣಾರೆ ಕಂಡರೂ ಗ್ರಹಿಸಿಕೊಳ್ಳುವುದಿಲ್ಲ.
27 ಹೌದು, ಈ ಜನರ ಹೃದಯಗಳು ಕಠಿಣವಾಗಿವೆ. ಈ ಜನರಿಗೆ ಕಿವಿಗಳಿದ್ದರೂ ಕೇಳುವುದಿಲ್ಲ. ಸತ್ಯವಿದ್ದರೂ ನೋಡಬಯಸರು. ಅಲ್ಲದಿದ್ದರೆ ಇವರು ಕಣ್ಣಾರೆ ಕಂಡು, ಕಿವಿಯಾರೆ ಕೇಳಿ, ಮನಸಾರೆ ಗ್ರಹಿಸಿಕೊಂಡು ನನ್ನತ್ತ ತಿರುಗಿಕೊಳ್ಳುತ್ತಿದ್ದರು; ನನ್ನಿಂದ ಗುಣಹೊಂದುತ್ತಿದ್ದರು.؆ ಯೆಶಾಯ 6:9-10
28 ”ದೇವರು ತನ್ನ ರಕ್ಷಣೆಯನ್ನು ಯೆಹೂದ್ಯರಲ್ಲದವರಿಗೆ ಕಳುಹಿಸಿದ್ದಾನೆ. ಅವರು ಅದಕ್ಕೆ ಕಿವಿಗೊಡುವರು. ಯೆಹೂದ್ಯರಾದ ನಿಮಗೆ ಇದು ತಿಳಿದಿರಲಿ!”
29 [This verse may not be a part of this translation]
30 ಪೌಲನು ತನ್ನ ಬಾಡಿಗೆ ಮನೆಯಲ್ಲಿ ಎರಡು ವರ್ಷಗಳವರೆಗೆ ವಾಸವಾಗಿದ್ದನು. ತನ್ನನ್ನು ಸಂದರ್ಶಿಸಲು ಬಂದ ಜನರೆಲ್ಲರನ್ನು ಆದರದಿಂದ ಬರಮಾಡಿಕೊಂಡು,
31 ದೇವರ ರಾಜ್ಯದ ಬಗ್ಗೆ ಬೋಧಿಸುತ್ತಿದ್ದನು; ಪ್ರಭು ಯೇಸುಕ್ರಿಸ್ತನ ಬಗ್ಗೆ ಉಪದೇಶಿಸುತ್ತಿದ್ದನು; ಬಹು ಧೈರ್ಯದಿಂದ ಮಾತಾಡುತ್ತಿದ್ದನು. ಅವನಿಗೆ ಅಡ್ಡಿಮಾಡಲು ಯಾರೂ ಪ್ರಯತ್ನಿಸಲಿಲ್ಲ.

Acts 28:1 Kannada Language Bible Words basic statistical display

COMING SOON ...

×

Alert

×