ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು.
“ಆದ್ದರಿಂದ ಅಬ್ರಹಾಮನು ಖಾಲ್ದೆಯ [*ಖಾಲ್ದೆಯ ಅಥವಾ ಬಾಬಿಲೋನಿಯ.] ದೇಶವನ್ನು ಬಿಟ್ಟು ಹಾರಾನಿನಲ್ಲಿ ವಾಸಿಸಲು ಹೋದನು. ಅಬ್ರಹಾಮನ ತಂದೆ ಸತ್ತಮೇಲೆ ದೇವರು ಅವನನ್ನು ಈಗ ನೀವು ವಾಸಿಸುತ್ತಿರುವ ಈ ಸ್ಥಳಕ್ಕೆ ಕಳುಹಿಸಿದನು.
ಆದರೆ ದೇವರು ಅಬ್ರಹಾಮನಿಗೆ ಇಲ್ಲಿ ಯಾವ ಭೂಮಿಯನ್ನೂ ಕೊಡಲಿಲ್ಲ. ದೇವರು ಅವನಿಗೆ ಒಂದು ಅಡಿ ಸ್ಥಳವನ್ನೂ ಕೊಡಲಿಲ್ಲ. ಆದರೆ ಮುಂದಿನ ಕಾಲದಲ್ಲಿ ಈ ದೇಶವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವುದಾಗಿ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದನು. (ಅಬ್ರಹಾಮನಿಗೆ ಮಕ್ಕಳೇ ಇಲ್ಲದಿದ್ದಾಗ ಇದಾಯಿತು.)
“ದೇವರು ಅವನಿಗೆ, ‘ನಿನ್ನ ಸಂತಾನದವರು ಬೇರೊಂದು ದೇಶದಲ್ಲಿ ವಾಸಿಸುವರು. ಅವರು ಪರದೇಶಿಗಳಾಗಿರುವರು. ಅಲ್ಲಿಯ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳವರೆಗೆ ಅವರಿಗೆ ಕೇಡುಗಳನ್ನು ಮಾಡುವರು.
ಆದರೆ ಅವರನ್ನು ಗಲಾಮರನ್ನಾಗಿ ಮಾಡಿಕೊಂಡ ಜನಾಂಗವನ್ನು ನಾನು ದಂಡಿಸುವೆನು’ [✡ಉಲ್ಲೇಖನ: ಆದಿಕಾಂಡ 15:13-14.] ಎಂದು ಹೇಳಿದನು. ಇದಲ್ಲದೆ ದೇವರು ಅವನಿಗೆ, ‘ಆ ಬಳಿಕ ನಿನ್ನ ಜನರು ಆ ದೇಶದಿಂದ ಹೊರಗೆ ಬಂದು ನನ್ನನ್ನು ಈ ಸ್ಥಳದಲ್ಲಿ ಆರಾಧಿಸುವರು’ [✡ಉಲ್ಲೇಖನ: ಆದಿಕಾಂಡ 15:14; ವಿಮೋಚನ. 3:12.] ಎಂದು ಹೇಳಿದನು.
“ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಆ ಒಡಂಬಡಿಕೆಯ ಗುರುತೇ ಸುನ್ನತಿ. ಹೀಗಿರಲು ಅಬ್ರಹಾಮನು ಒಬ್ಬ ಮಗನನ್ನು ಪಡೆದಾಗ, ಆ ಮಗನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. ಅವನ ಮಗನ ಹೆಸರು ಇಸಾಕ. ಇಸಾಕನು ಸಹ ತನ್ನ ಮಗನಾದ ಯಾಕೋಬನಿಗೆ ಸುನ್ನತಿ ಮಾಡಿದನು. ಮತ್ತು ಯಾಕೋಬನು ತನ್ನ ಗಂಡುಮಕ್ಕಳಿಗೆಲ್ಲಾ ಸುನ್ನತಿ ಮಾಡಿದನು. ಈ ಗಂಡುಮಕ್ಕಳೇ ಮುಂದೆ ಹನ್ನೆರಡು ಮಂದಿ ಪಿತೃಗಳಾದರು.
ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.
ಬಳಿಕ ಅವರ ದೇಹಗಳನ್ನು ಶೇಕೆಮಿಗೆ ಸಾಗಿಸಲಾಯಿತು. ಅಲ್ಲಿಯ ಸಮಾಧಿಯೊಂದರಲ್ಲಿ ಅವರನ್ನು ಹೂಳಲಾಯಿತು. (ಅಬ್ರಹಾಮನು ಹಾಮೋರನ ಗಂಡುಮಕ್ಕಳಿಂದ ಕೊಂಡುಕೊಂಡದ್ದು ಈ ಸಮಾಧಿಯನ್ನೇ. ಅವನು ಅವರಿಗೆ ಬೆಳ್ಳಿಯನ್ನು ಕ್ರಯವಾಗಿ ಕೊಟ್ಟಿದ್ದನು.)
ತಮ್ಮನ್ನು ರಕ್ಷಿಸಲು ದೇವರು ಮೋಶೆಯನ್ನು ಉಪಯೋಗಿಸುತ್ತಿದ್ದಾನೆ ಎಂಬುದಾಗಿ ತನ್ನ ಯೆಹೂದ್ಯ ಸಹೋದರರು ಅರ್ಥಮಾಡಿಕೊಳ್ಳುತ್ತಾರೆ ಎಂದು ಮೋಶೆ ಭಾವಿಸಿಕೊಂಡನು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ.
“ಮರುದಿನ, ಇಬ್ಬರು ಯೆಹೂದ್ಯರು ಹೊಡೆದಾಡುವುದನ್ನು ಮೋಶೆಯು ಕಂಡನು. ಅವರನ್ನು ಸಮಾಧಾನಪಡಿಸಲು ಅವನು ಪ್ರಯತ್ನಿಸಿ ‘ಗೆಳೆಯರೇ, ನೀವು ಸಹೋದರರಾಗಿದ್ದೀರಿ! ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡುವುದೇಕೆ?’ ಎಂದು ಅವರನ್ನು ಕೇಳಿದನು.
ಪ್ರಭುವು ಅವನಿಗೆ, ‘ನಾನೇ ನಿನ್ನ ಪಿತೃಗಳ ದೇವರು. ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ [✡ಉಲ್ಲೇಖನ: ವಿಮೋಚನ. 3:6.] ಎಂದು ಹೇಳಿದನು. ಮೋಶೆಯು ಭಯದಿಂದ ನಡುಗ ತೊಡಗಿದನು; ಪೊದೆಯನ್ನು ನೋಡಲು ಹೆದರಿದನು.
ಜನರು ಈಜಿಪ್ಟಿನಲ್ಲಿ ಬಹಳ ಸಂಕಟಪಡುತ್ತಿರುವುದನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳಾಟವನ್ನು ನಾನು ಕೇಳಿದ್ದೇನೆ. ನಾನು ಅವರನ್ನು ರಕ್ಷಿಸುವುದಕ್ಕಾಗಿ ಇಳಿದುಬಂದಿದ್ದೇನೆ. ಮೋಶೆಯೇ, ಈಗ ನಾನು ನಿನ್ನನ್ನು ಈಜಿಪ್ಟಿಗೆ ಕಳುಹಿಸುತ್ತಿದ್ದೇನೆ’ [✡ಉಲ್ಲೇಖನ: ವಿಮೋಚನ. 3:5-10.] ಎಂದು ಹೇಳಿದನು.
“ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಈ ಮೋಶೆ. ಅವರು ಅವನಿಗೆ, ‘ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?’ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಆ ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ಈ ದೇವದೂತನನ್ನೇ.
ಆದ್ದರಿಂದ ಮೋಶೆಯು ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಈಜಿಪ್ಟಿನಲ್ಲಿಯೂ ಕೆಂಪುಸಮುದ್ರದಲ್ಲಿಯೂ ಮತ್ತು ನಲವತ್ತು ವರ್ಷಗಳ ಕಾಲ ಅರಣ್ಯದಲ್ಲಿಯೂ ಮಾಡಿದನು.
“ಈ ಮೋಶೆಯೇ ಯೆಹೂದ್ಯ ಜನರಿಗೆ, ‘ದೇವರು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ಆ ಪ್ರವಾದಿಯು ನಿಮ್ಮ ಸ್ವಜನರ ಮಧ್ಯದಿಂದಲೇ ಬರುವನು. ಅವನು ನನ್ನಂತೆಯೇ ಇರುವನು’ [✡ಉಲ್ಲೇಖನ: ಧರ್ಮೋಪದೇಶ. 18:15.] ಎಂದು ಹೇಳಿದನು.
ಅರಣ್ಯದಲ್ಲಿ ಯೆಹೂದ್ಯರ ಸಮೂಹದೊಂದಿಗೆ ಇದ್ದವನು ಈ ಮೋಶೆಯೇ. ಸಿನಾಯ್ ಬೆಟ್ಟದ ಬಳಿ ತನ್ನೊಂದಿಗೆ ಮಾತಾಡಿದ ದೇವದೂತನೊಂದಿಗೆ ಅವನಿದ್ದನು. ಅಲ್ಲದೆ ಅವನು ನಮ್ಮ ಪಿತೃಗಳೊಂದಿಗೆ ಇದ್ದನು. ಜೀವಕರವಾದ ಆಜ್ಞೆಗಳನ್ನು ಮೋಶೆಯು ದೇವರಿಂದ ಸ್ವೀಕರಿಸಿಕೊಂಡು ಅವುಗಳನ್ನು ನಮಗೆ ಕೊಟ್ಟನು.
ನಮ್ಮ ಪಿತೃಗಳು ಆರೋನನಿಗೆ, ‘ಮೋಶೆಯು ನಮ್ಮನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದನು. ಆದರೆ ಅವನಿಗೆ ಏನಾಯಿತೋ ನಮಗೆ ಗೊತ್ತಿಲ್ಲ. ಆದ್ದರಿಂದ ನಮ್ಮ ಮುಂದೆ ಹೋಗಲು ಮತ್ತು ನಮ್ಮನ್ನು ನಡೆಸಲು ಕೆಲವು ದೇವರುಗಳನ್ನು ಮಾಡು’ [✡ಉಲ್ಲೇಖನ: ವಿಮೋಚನ. 32:1.] ಎಂದರು.
ಆದರೆ ದೇವರು ಅವರಿಗೆ ವಿರೋಧವಾಗಿ, ಆಕಾಶದ ಸುಳ್ಳುದೇವರುಗಳನ್ನು ಪೂಜಿಸುವಂತೆ ಅವರನ್ನು ಬಿಟ್ಟುಬಿಟ್ಟನು. ಇದರ ಬಗ್ಗೆ ಪ್ರವಾದಿಗಳ ಪುಸ್ತಕದಲ್ಲಿ ಹೀಗೆ ಬರೆದಿದೆ: ದೇವರು ಹೀಗೆನ್ನುತ್ತಾನೆ, ‘ಯೆಹೂದ್ಯ ಜನರಾದ ನೀವು ನಲವತ್ತು ವರ್ಷಗಳ ಕಾಲ ಮರಳುಗಾಡಿನಲ್ಲಿದ್ದಾಗ ನನಗೆ ಯಜ್ಞಗಳನ್ನು ಅರ್ಪಿಸಲಿಲ್ಲ; ಕಾಣಿಕೆಗಳನ್ನು ತರಲಿಲ್ಲ.
ನೀವು ನಿಮ್ಮೊಂದಿಗೆ ಮೊಲೋಖನ (ಸುಳ್ಳುದೇವರ) ಗುಡಾರವನ್ನು ಮತ್ತು ನಿಮ್ಮ ರೇಫಾ ದೇವತೆಯ ನಕ್ಷತ್ರರೂಪವನ್ನು ಹೊತ್ತುಕೊಂಡು ಹೋದಿರಿ. ಆರಾಧಿಸುವುದಕ್ಕಾಗಿ ನೀವು ಮಾಡಿಕೊಂಡ ವಿಗ್ರಹಗಳೇ ಇವು. ಆದ್ದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆಗೆ ಕಳುಹಿಸಿಬಿಡುವೆನು.’ ಆಮೋಸ 5:25-27]
“ದೇವರು ನಮ್ಮ ಪಿತೃಗಳೊಂದಿಗೆ ಯಾವ ಗುಡಾರದಲ್ಲಿ ಮತಾಡಿದ್ದನೋ ಆ ಗುಡಾರವು [†ಗುಡಾರ ಯಜ್ಞವೇದಿಕೆಯನ್ನು ಹೊಂದಿರುವ ದೇವಾಲಯದಂತೆ ಈ ಗುಡಾರವನ್ನು ಆರಾಧನಾ ಸ್ಥಳವನ್ನಾಗಿ ಉಪಯೋಗಿಸಲಾಗುತ್ತಿತ್ತು. ಇದನ್ನು ಸ್ಥಳದಿಂದ ಸ್ಥಳಕ್ಕೆ ತೆಗೆದುಕೊಂಡು ಹೋಗಬಹುದಾಗಿತ್ತು.] ಈ ಯೆಹೂದ್ಯರೊಂದಿಗೆ ಮರಳುಗಾಡಿನಲ್ಲಿತ್ತು. ಈ ಗುಡಾರವನ್ನು ನಿರ್ಮಿಸುವ ಬಗೆಯನ್ನು ದೇವರು ಮೋಶೆಗೆ ತಿಳಿಸಿಕೊಟ್ಟನು. ದೇವರು ತನಗೆ ತೋರಿಸಿದ ಆಕಾರದಂತೆಯೇ ಮೋಶೆಯು ಅದನ್ನು ನಿರ್ಮಿಸಿದನು.
ತರುವಾಯ ಇತರ ಜನಾಂಗಗಳ ನಾಡುಗಳನ್ನು ವಶಪಡಿಸಿಕೊಳ್ಳುವುದಕ್ಕಾಗಿ ಯೆಹೋಶುವನು ನಮ್ಮ ಪಿತೃಗಳನ್ನು ಮುನ್ನಡೆಸಿದನು. ನಮ್ಮ ಜನರು ಆ ದೇಶದೊಳಗೆ ಹೋದಾಗ, ದೇವರು ಇತರ ಜನರನ್ನು ಅಲ್ಲಿಂದ ಹೊರಡಿಸಿಬಿಟ್ಟನು. ನಮ್ಮ ಜನರು ಆ ಹೊಸ ದೇಶದೊಳಗೆ ಹೋದಾಗ ಈ ಗುಡಾರವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ನಮ್ಮ ಜನರು ಈ ಗುಡಾರವನ್ನು ತಮ್ಮ ಪಿತೃಗಳಿಂದ ಸ್ವೀಕರಿಸಿಕೊಂಡು ದಾವೀದನ ಕಾಲದವರೆಗೂ ಅದನ್ನು ಇಟ್ಟುಕೊಂಡಿದ್ದರು.
ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!
ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.
ಅವನನ್ನು ಪಟ್ಟಣದಿಂದ ಹೊರಗೆ ಎಳೆದೊಯ್ದು, ಅವನು ಸಾಯುವವರೆಗೂ ಅವನ ಮೇಲೆ ಕಲ್ಲುಗಳನ್ನು ಎಸೆದರು. ಸ್ತೆಫನನ ವಿರುದ್ಧವಾಗಿ ಸುಳ್ಳು ಹೇಳಿದ ಜನರು ತಮ್ಮ ಮೇಲಂಗಿಗಳನ್ನು ಬಿಚ್ಚಿ ಸೌಲನೆಂಬ ಯುವಕನಿಗೆ ಕೊಟ್ಟು,