1
|
ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. |
2
|
[This verse may not be a part of this translation] |
3
|
[This verse may not be a part of this translation] |
4
|
ವಿಶ್ವಾಸಿಗಳು ಎಲ್ಲೆಲ್ಲಿಯೂ ಚದರಿಹೋದರು. ವಿಶ್ವಾಸಿಗಳು ತಾವು ಹೋದ ಪ್ರತಿಯೊಂದು ಸ್ಥಳದಲ್ಲಿಯೂ ಜನರಿಗೆ ಸುವಾರ್ತೆಯನ್ನು ತಿಳಿಸಿದರು. |
5
|
ಫಿಲಿಪ್ಪನು ಸಮಾರ್ಯ ಪಟ್ಟಣಕ್ಕೆ ಹೋಗಿ ಕ್ರಿಸ್ತನ ಬಗ್ಗೆ ಉಪದೇಶಿಸಿದನು. |
6
|
ಫಿಲಿಪ್ಪನು ಹೇಳುವುದನ್ನು ಅಲ್ಲಿನ ಜನರು ಕೇಳಿದರು. ಅವನು ಮಾಡುತ್ತಿದ್ದ ಅದ್ಭುತಕಾರ್ಯಗಳನ್ನು ನೋಡಿದರು. ಅವನು ಹೇಳಿದ ಸಂಗತಿಗಳನ್ನು ಗಮನವಿಟ್ಟು ಕೇಳಿದರು. |
7
|
ಈ ಜನರಲ್ಲಿ ಅನೇಕರು ದೆವ್ವಗಳಿಂದ ಪೀಡಿತರಾಗಿದ್ದರು. ಫಿಲಿಪ್ಪನು ಆ ದೆವ್ವಗಳನ್ನು ಅವರೊಳಗಿಂದ ಹೊರಡಿಸಿದಾಗ ಅವು ಅಬ್ಬರಿಸುತ್ತಾ ಹೊರಬಂದವು. ಅಲ್ಲಿದ್ದ ಅನೇಕ ಬಲಹೀನರನ್ನು, ಕುಂಟರನ್ನು ಸಹ ಫಿಲಿಪ್ಪನು ಗುಣಪಡಿಸಿದನು. |
8
|
ಇದರಿಂದಾಗಿ ಆ ಪಟ್ಟಣದಲ್ಲಿದ್ದ ಜನರು ಬಹು ಸಂತೋಷಗೊಂಡರು. |
9
|
ಆದರೆ ಆ ಪಟ್ಟಣದಲ್ಲಿ ಸಿಮೋನ ಎಂಬ ಒಬ್ಬನಿದ್ದನು. ಫಿಲಿಪ್ಪನು ಅಲ್ಲಿಗೆ ಬರುವುದಕ್ಕಿಂತ ಮೊದಲಿನಿಂದಲೂ ಸಿಮೋನನು ಮಂತ್ರತಂತ್ರಗಳನ್ನು ಮಾಡುತ್ತಿದ್ದನು. ಅವನು ತನ್ನ ತಂತ್ರಗಳಿಂದ ಸಮಾರ್ಯದ ಜನರೆಲ್ಲರನ್ನು ವಿಸ್ಮಯಗೊಳಿಸಿದ್ದನು. ಸಿಮೋನನು ತನ್ನನ್ನು ಮಹಾವ್ಯಕ್ತಿಯೆಂದು ಹೇಳಿಕೊಂಡು ಜಂಭಪಡುತ್ತಿದ್ದನು. |
10
|
ಎಲ್ಲಾ ಜನರು ಅಂದರೆ ಕನಿಷ್ಠರಾದವರು ಮತ್ತು ಅತಿಮುಖ್ಯರಾದವರು ಸಿಮೋನನು ಹೇಳಿದ ಸಂಗತಿಗಳನ್ನು ನಂಬಿದ್ದರು. “ಈ ಮನುಷ್ಯನಲ್ಲಿ ಮಹಾಶಕ್ತಿ؆ ಎಂಬ ದೇವರ ಶಕ್ತಿಯಿದೆ!” ಎಂದು ಜನರು ಅವನ ಬಗ್ಗೆ ಹೇಳುತ್ತಿದ್ದರು. |
11
|
ಸಿಮೋನನು ತನ್ನ ಮಂತ್ರತಂತ್ರಗಳಿಂದ ಜನರನ್ನು ಬಹುಕಾಲದಿಂದಲೂ ವಿಸ್ಮಯಗೊಳಿಸಿದ್ದರಿಂದ ಜನರು ಅವನ ಹಿಂಬಾಲಕರಾಗಿದ್ದರು. |
12
|
ಆದರೆ ಫಿಲಿಪ್ಪನು ದೇವರ ರಾಜ್ಯದ ಬಗ್ಗೆ ಮತ್ತು ಯೇಸುಕ್ರಿಸ್ತನ ಶಕ್ತಿಯ ಬಗ್ಗೆ ಜನರಿಗೆ ಸುವಾರ್ತೆಯನ್ನು ಹೇಳಿದನು. ಗಂಡಸರು ಮತ್ತು ಹೆಂಗಸರು ಫಿಲಿಪ್ಪನು ಹೇಳಿದ್ದನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು. |
13
|
ಸಿಮೋನನು ಸಹ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡನು. ಸಿಮೋನನು ಫಿಲಿಪ್ಪನ ಸಮೀಪದಲ್ಲೇ ಇದ್ದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಸಿಮೋನನು ನೋಡಿ ವಿಸ್ಮಿತನಾದನು. |
14
|
ಅಪೊಸ್ತಲರು ಇನ್ನೂ ಜೆರುಸಲೇಮಿನಲ್ಲಿದ್ದರು. ಸಮಾರ್ಯದ ಜನರು ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅವರಿಗೆ ತಿಳಿಯಿತು. ಆದ್ದರಿಂದ ಅಪೊಸ್ತಲರು ಪೇತ್ರ ಮತ್ತು ಯೋಹಾನರನ್ನು ಸಮಾರ್ಯದ ಜನರ ಬಳಿಗೆ ಕಳುಹಿಸಿದರು. |
15
|
ಪೇತ್ರ ಮತ್ತು ಯೋಹಾನರು ಅಲ್ಲಿಗೆ ಬಂದು ಸಮಾರ್ಯದ ವಿಶ್ವಾಸಿಗಳಿಗೂ ಪವಿತ್ರಾತ್ಮನು ದೊರೆಯಬೇಕೆಂದು ಅವರಿಗಾಗಿ ಪ್ರಾರ್ಥಿಸಿದರು. |
16
|
ಈ ಜನರು ಪ್ರಭುವಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರು. ಆದರೆ ಪವಿತ್ರಾತ್ಮನು ಅವರಲ್ಲಿ ಯಾರ ಮೇಲೆಯೂ ಇನ್ನೂ ಇಳಿದು ಬಂದಿರಲಿಲ್ಲ. ಈ ಕಾರಣದಿಂದಲೇ ಪೇತ್ರ ಮತ್ತು ಯೋಹಾನರು ಪ್ರಾರ್ಥಿಸಿದರು. |
17
|
ಈ ಇಬ್ಬರು ಅಪೊಸ್ತಲರು ಅವರ ಮೇಲೆ ತಮ್ಮ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮನನ್ನು ಹೊಂದಿಕೊಂಡರು. |
18
|
ಅಪೊಸ್ತಲರು ಜನರ ಮೇಲೆ ತಮ್ಮ ಕೈಗಳನ್ನಿಟ್ಟಾಗ ಜನರಿಗೆ ಪವಿತ್ರಾತ್ಮನು ದೊರೆತ್ತಿದ್ದನ್ನು ಸಿಮೋನನು ಕಂಡನು. ಆದ್ದರಿಂದ ಸಿಮೋನನು ಅಪೊಸ್ತಲರಿಗೆ ಹಣವನ್ನು ನೀಡುತ್ತಾ, |
19
|
”ನಾನು ಯಾರ ಮೇಲೆ ಕೈಯಿಟ್ಟರೂ ಅವರಿಗೆ ಪವಿತ್ರಾತ್ಮನು ದೊರೆಯುವಂಥ ಶಕ್ತಿಯನ್ನು ನನಗೆ ಕೊಡಿರಿ” ಎಂದು ಹೇಳಿದನು. |
20
|
ಪೇತ್ರನು ಸಿಮೋನನಿಗೆ, “ನೀನೂ ನಾಶವಾಗು! ನಿನ್ನ ಹಣವೂ ನಾಶವಾಗಲಿ! ದೇವರ ವರವನ್ನು ಹಣದಿಂದ ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದೆ. |
21
|
ಈ ಕಾರ್ಯದಲ್ಲಿ ನೀನು ನಮ್ಮೊಂದಿಗೆ ಭಾಗಿಯಾಗಲು ಸಾಧ್ಯವಿಲ್ಲ. ನಿನ್ನ ಹೃದಯವು ದೇವರ ಮುಂದೆ ಸರಿಯಾಗಿಲ್ಲ. |
22
|
ನಿನ್ನ ಹೃದಯವನ್ನು ಮಾರ್ಪಡಿಸಿಕೊ! ನೀನು ಮಾಡಿದ ಕೆಟ್ಟಕಾರ್ಯದಿಂದ ತಿರುಗಿಕೊ. ಪ್ರಭುವಿನಲ್ಲಿ ಪ್ರಾರ್ಥಿಸು. ನೀನು ಹೀಗೆ ಆಲೋಚಿಸಿದ್ದನ್ನು ಆತನು ಕ್ಷಮಿಸಬಹುದು. |
23
|
ನೀನು ಅತೀವ ಅಸೂಯೆಯಿಂದ ತುಂಬಿದವನೂ ಪಾಪದ ಆಳ್ವಿಕೆಗೆ ಒಳಗಾದವನೂ ಆಗಿರುವೆ” ಎಂದು ಹೇಳಿದನು. |
24
|
ಸಿಮೋನನು, “ನೀವಿಬ್ಬರೂ ನನಗೋಸ್ಕರ ಪ್ರಭುವಿನಲ್ಲಿ ಪ್ರಾರ್ಥಿಸಿ. ನೀವು ಹೇಳಿದ ಸಂಗತಿಗಳು ನನಗಾಗದಂತೆ ಪ್ರಾರ್ಥಿಸಿ!” ಎಂದು ಕೇಳಿಕೊಂಡನು. |
25
|
ಬಳಿಕ ಆ ಇಬ್ಬರು ಅಪೊಸ್ತಲರು ತಾವು ಕಂಡ ಯೇಸುವಿನ ಕಾರ್ಯಗಳನ್ನು ಜನರಿಗೆ ತಿಳಿಸಿದರು. ಅಪೊಸ್ತಲರು ಜನರಿಗೆ ಪ್ರಭುವಿನ ಸಂದೇಶವನ್ನು ತಿಳಿಸಿದರು. ಆಮೇಲೆ ಅವರು ಜೆರುಸಲೇಮಿಗೆ ಹಿಂತಿರುಗಿದರು. ದಾರಿಯಲ್ಲಿ ಅವರು ಸಮಾರ್ಯದ ಅನೇಕ ಊರುಗಳಿಗೆ ಹೋಗಿ ಜನರಿಗೆ ಸುವಾರ್ತೆಯನ್ನು ತಿಳಿಸಿದರು. |
26
|
ಪ್ರಭುವಿನ ದೂತನೊಬ್ಬನು ಫಿಲಿಪ್ಪನಿಗೆ, “ನೀನು ಸಿದ್ಧನಾಗಿ ದಕ್ಷಿಣದ ಕಡೆಗೆ ಅಂದರೆ ಜೆರುಸಲೇಮಿನಿಂದ ಗಾಜಾಕ್ಕೆ ಹೋಗುವ ಮರಳುಗಾಡಿನ ಮಾರ್ಗಕ್ಕೆ ಹೋಗು” ಎಂದು ಹೇಳಿದನು. |
27
|
ಆದ್ದರಿಂದ ಫಿಲಿಪ್ಪನು ಸಿದ್ಧನಾಗಿ ಹೊರಟನು. ಇಥಿಯೋಪಿಯಾದ ಒಬ್ಬನನ್ನು ಅವನು ದಾರಿಯಲ್ಲಿ ಕಂಡನು. ಈ ಮನುಷ್ಯನು ನಪುಂಸಕನಾಗಿದ್ದನು. ಇಥಿಯೋಪಿಯದ ರಾಣಿಯಾದ ಕಂದಾಕೆಯ ಆಸ್ಥಾನದಲ್ಲಿ ಇವನು ಮುಖ್ಯಾಧಿಕಾರಿಯಾಗಿದ್ದನು. ಹಣವನ್ನೆಲ್ಲ ನೋಡಿಕೊಳ್ಳುವ ಜವಾಬ್ದಾರಿ ಇವನದೇ ಆಗಿತ್ತು. ಈ ಮನುಷ್ಯನು ಆರಾಧನೆಗಾಗಿ ಜೆರುಸಲೇಮಿಗೆ ಹೋಗಿದ್ದನು. |
28
|
ಈಗ ಅವನು ತನ್ನ ಮನೆಗೆ ಮರಳಿ ಹೋಗುತ್ತಿದ್ದನು. ಅವನು ತನ್ನ ರಥದಲ್ಲಿ ಕುಳಿತುಕೊಂಡು ಯೆಶಾಯನ ಗ್ರಂಥವನ್ನು ಓದುತ್ತಿದ್ದನು. |
29
|
ಪವಿತ್ರಾತ್ಮನು ಫಿಲಿಪ್ಪನಿಗೆ, “ರಥದ ಬಳಿಗೆ ಹೋಗಿ ಅದರ ಸಮೀಪದಲ್ಲಿ ನಿಂತುಕೊ” ಎಂದು ಹೇಳಿದನು. |
30
|
ಅಂತೆಯೇ ಫಿಲಿಪ್ಪನು ರಥದ ಬಳಿಗೆ ಹೋದನು. ಆ ಮನುಷ್ಯನು ಓದುತ್ತಿರುವುದು ಅವನಿಗೆ ಕೇಳಿಸಿತು. ಅವನು ಯೆಶಾಯನ ಪ್ರವಾದನಾ ಗ್ರಂಥವನ್ನು ಓದುತ್ತಿದ್ದನು. ಫಿಲಿಪ್ಪನು ಅವನಿಗೆ, “ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು. |
31
|
ಆ ಅಧಿಕಾರಿಯು “ನಾನು ಹೇಗೆ ಅರ್ಥಮಾಡಿಕೊಳ್ಳಲಿ? ಬೇರೆ ಯಾರಾದರೂ ನನಗೆ ಅದನ್ನು ವಿವರಿಸಬೇಕು!” ಎಂದು ಉತ್ತರಕೊಟ್ಟನು. ಬಳಿಕ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಅವನು ಫಿಲಿಪ್ಪನನ್ನು ಆಹ್ವಾನಿಸಿದನು. |
32
|
ಅವನು ಓದುತ್ತಿದ್ದ ಪವಿತ್ರ ಗ್ರಂಥದ ಭಾಗವು ಇಂತಿದೆ: ವಧ್ಯಸ್ಥಾನಕ್ಕೆ ಒಯ್ದ ಕುರಿಯಂತೆ ಆತನಿದ್ದನು. ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವ ಕುರಿಯಂತೆ ಆತನಿದ್ದನು. ಆತನು ಬಾಯಿ ತೆರೆಯಲಿಲ್ಲ. |
33
|
ಆತನಿಗೆ ಅವಮಾನ ಮಾಡಿದರು. ಆತನಿಗೆ ನ್ಯಾಯವು ದೊರೆಯಲಿಲ್ಲ. ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದುಬಿಟ್ಟರಲ್ಲಾ! ಆತನ ಸಂತತಿಯವರ ಬಗ್ಗೆ ಯಾರು ಮಾತಾಡಬಲ್ಲರು?” ಯೆಶಾಯ 53:7-8 |
34
|
ಅವನು ಫಿಲಿಪ್ಪನಿಗೆ, “ದಯವಿಟ್ಟು ನನಗೆ ಹೇಳು, ಯಾವ ಪ್ರವಾದಿಯ ಬಗ್ಗೆ ಇಲ್ಲಿ ಹೇಳುತ್ತಿದ್ದಾನೆ? ಅವನು ತನ್ನ ಬಗ್ಗೆ ಹೇಳುತ್ತಿದ್ದಾನೋ ಅಥವಾ ಬೇರೊಬ್ಬನ ಬಗ್ಗೆ ಹೇಳುತ್ತಿದ್ದಾನೋ?” ಎಂದು ಕೇಳಿದನು. |
35
|
ಫಿಲಿಪ್ಪನು ಪವಿತ್ರ ಗ್ರಂಥದ ಈ ಭಾಗದಿಂದಲೇ ಆರಂಭಿಸಿ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅವನಿಗೆ ತಿಳಿಸಿದನು. |
36
|
ಅವರು ಪ್ರಯಾಣ ಮಾಡುತ್ತಾ ನೀರಿದ್ದ ಒಂದು ಸ್ಥಳಕ್ಕೆ ಬಂದಾಗ ಅಧಿಕಾರಿಯು, “ಇಗೋ! ಇಲ್ಲಿ ನೀರಿದೆ! ನಾನು ದೀಕ್ಷಾಸ್ನಾನ ತೆಗೆದುಕೊಳ್ಳಲು ಏನಾದರೂ ಅಡ್ಡಿಯಿದೆಯೇ?” ಎಂದು ಫಿಲಿಪ್ಪನನ್ನು ಕೇಳಿದನು. |
37
|
[This verse may not be a part of this translation] |
38
|
ಬಳಿಕ ಅವನು ರಥವನ್ನು ನಿಲ್ಲಿಸಬೇಕೆಂದು ಆಜ್ಞಾಪಿಸಿದನು. ಅವರಿಬ್ಬರೂ ನೀರಿನೊಳಗೆ ಇಳಿದು ಹೋದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು. |
39
|
ಅವರು ನೀರಿನಿಂದ ಮೇಲಕ್ಕೆ ಬಂದಾಗ ಪ್ರಭುವಿನ ಆತ್ಮನಿಂದ ಫಿಲಿಪ್ಪನು ಎತ್ತಲ್ಪಟ್ಟನು. ಅವನು ಫಿಲಿಪ್ಪನನ್ನು ಮತ್ತೆಂದೂ ನೋಡಲಿಲ್ಲ. ಅವನು ಬಹಳ ಸಂತೋಷದಿಂದ ತನ್ನ ಪ್ರಯಾಣವನ್ನು ಮುಂದುವರಿಸಿದನು. |
40
|
ಆದರೆ ಫಿಲಿಪ್ಪನು ಅಜೋತ್ ಎಂಬ ಪಟ್ಟಣದಲ್ಲಿ ಕಾಣಿಸಿಕೊಂಡು ಸೆಜರೇಯ ಎಂಬ ಪಟ್ಟಣಕ್ಕೆ ಹೋದನು. ಅಲ್ಲಿಗೆ ಹೋಗುವಾಗ ದಾರಿಯಲ್ಲಿ ಸಿಕ್ಕಿದ ಎಲ್ಲಾ ಊರುಗಳಲ್ಲಿಯೂ ಸುವಾರ್ತೆಯನ್ನು ಸಾರಿದನು. |
Acts 8:12 Kannada Language Bible Words basic statistical display
COMING SOON ...