English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Amos Chapters

Amos 1 Verses

1 ಇದು ಆಮೋಸನ ಸಂದೇಶ. ಇವನು ತೆಕೋವ ಎಂಬ ಪಟ್ಟಣದ ಕುರುಬರಲ್ಲೊಬ್ಬನು. ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಸಮಯದಲ್ಲಿ ಮತ್ತು ಅದೇ ಸಮಯದಲ್ಲಿ ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರೇಲನ್ನು ಆಳುತ್ತಿರುವಾಗ ಆಮೋಸನಿಗೆ ದೈವದರ್ಶನಗಳುಂಟಾದವು. ಭೂಕಂಪವಾಗುವುದಕ್ಕಿಂತ ಎರಡು ವರ್ಷಗಳಿಗೆ ಮೊದಲು ಈ ದರ್ಶನಗಳಾದವು.
2 ಆಮೋಸನು ಹೇಳಿದ್ದೇನೆಂದರೆ, “ಚೀಯೋನಿನಲ್ಲಿ ಯೆಹೋವನು ಸಿಂಹದಂತೆ ಗರ್ಜಿಸುವನು. ಜೆರುಸಲೇಮಿನಿಂದ ಆರ್ಭಟಿಸುತ್ತಾನೆ. ಆಗ ಕುರುಬರ ಹಸಿರು ಹುಲ್ಲುಗಾವಲು ಕಂದುಬಣ್ಣವಾಗಿ ಸಾಯುವುದು. ಕರ್ಮೆಲ್ ಬೆಟ್ಟವು ಒಣಗಿ ಬರಡಾಗುವುದು.”
3 ಯೆಹೋವನು ಹೇಳುವುದೇನೆಂದರೆ, “ದಮಸ್ಕದವರು ನಡಿಸಿದ ಅನೇಕ ಅಪರಾಧಗಳ ನಿಮಿತ್ತವಾಗಿ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಯಾಕೆಂದರೆ ಅವರು ಗಿಲ್ಯಾದಿನ ಜನರನ್ನು ಒಕ್ಕಣೆಗೆ ಉಪಯೋಗಿಸುವ ಕಬ್ಬಿಣದ ಸಲಕರಣೆಗಳಿಂದ ಜಜ್ಜಿಬಿಟ್ಟರು.
4 ಆದರೆ ನಾನು ಹಜಾಯೇಲನ ನಿವಾಸದಲ್ಲಿ ಬೆಂಕಿಯನ್ನು ಪ್ರಾರಂಭಿಸುವೆನು. ಅದು ಬೆನ್ಹದದನ ಭವ್ಯ ಅರಮನೆಗಳನ್ನೆಲ್ಲಾ ಸುಟ್ಟುಹಾಕುವದು.
5 “ನಾನು ದಮಸ್ಕದ ಹೆಬ್ಬಾಗಿಲುಗಳನ್ನೂ ಒಡೆದುಹಾಕುವೆನು; ಆವೆನ್ ಕಣಿವೆಯಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ತೆಗೆದುಬಿಡುವೆನು; ಬೇತ್ ಎದೆನ್‌ನಲ್ಲಿರುವ ಸಾಮರ್ಥ್ಯದ ಗುರುತನ್ನು ಕಿತ್ತುಹಾಕುವೆನು. ಆಗ ಅರಾಮ್ಯರು ಸೋಲಿಸಲ್ಪಟ್ಟವರಾಗಿ ಕೀರ್ ಎಂಬಲ್ಲಿಗೆ ಕೊಂಡೊಯ್ಯುವರು. ಇದು ಯೆಹೋವನ ನುಡಿ.”
6 ಯೆಹೋವನು ಹೇಳುವುದೇನೆಂದರೆ, “ಗಾಜದ ಜನರನ್ನು ಅವರು ಮಾಡಿದ ಅಪರಾಧಗಳ ನಿಮಿತ್ತ ಖಂಡಿತವಾಗಿಯೂ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಇಡೀ ಜನಾಂಗವನ್ನೇ ಎದೋಮಿಗೆ ಗುಲಾಮರನ್ನಾಗಿ ಕಳುಹಿಸಿದರು.
7 ಅದಕ್ಕಾಗಿ ನಾನು ಗಾಜದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಈ ಬೆಂಕಿಯು ಗಾಜದ ಎತ್ತರವಾದ ಗೋಪುರಗಳನ್ನು ನಾಶಮಾಡುವದು.
8 ಇದಲ್ಲದೆ, ನಾನು ಅಷ್ಡೋದಿನಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ನಾಶಮಾಡುವೆನು; ಅಷ್ಕೆಲೋನಿನಲ್ಲಿ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು; ಎಕ್ರೋನಿನ ಜನರನ್ನು ಶಿಕ್ಷಿಸುವೆನು. ಆಮೇಲೆ ಅಳಿದುಳಿದ ಫಿಲಿಷ್ಟಿಯರು ಸಾಯುವರು.” ಇದು ಯೆಹೋವನ ನುಡಿ.
9 ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ತೂರಿನ ಜನರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಜನಾಂಗದ ಜನರನ್ನೆಲ್ಲಾ ಗುಲಾಮರನ್ನಾಗಿ ಎದೋಮಿಗೆ ಕಳುಹಿಸಿದರು. ಅವರು ತಮ್ಮ ಸಹೋದರರೊಂದಿಗೆ (ಇಸ್ರೇಲಿನೊಂದಿಗೆ) ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟರು.
10 ಆದ್ದರಿಂದ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಹಾಕುವೆನು. ಆ ಬೆಂಕಿಯು ತೂರಿನ ಎತ್ತರವಾದ ಬುರುಜುಗಳನ್ನು ನಾಶಮಾಡುವದು.”
11 ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಎದೋಮ್ಯರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಎದೋಮ್ ತನ್ನ ಸಹೋದರನಾದ ಇಸ್ರೇಲನ್ನು ಕತ್ತಿಯಿಂದ ಹತಿಸಿತು. ಎದೋಮ್ ಯಾವ ಕರುಣೆಯನ್ನೂ ತೋರಲಿಲ್ಲ. ಅದರ ಕೋಪವು ನಿರಂತರವಾಗಿ ಮುಂದುವರಿಯಿತು; ಕ್ರೂರಪ್ರಾಣಿಯಂತೆ ಇಸ್ರೇಲನ್ನು ಹರಿದುಹರಿದು ಹಾಕಿತು.
12 ಆದ್ದರಿಂದ ನಾನು ತೇಮಾನಿನಲ್ಲಿ ಬೆಂಕಿಯನ್ನು ಹಾಕುವೆನು. ಆ ಬೆಂಕಿಯು ಬೋಚ್ರದ ಉನ್ನತ ಗೋಪುರಗಳನ್ನು ನಾಶಮಾಡುವದು.”
13 ಯೆಹೋವನು ಹೇಳುವುದೇನೆಂದರೆ, “ಅನೇಕಾನೇಕ ಅಪರಾಧಗಳನ್ನು ಮಾಡಿದ ಅಮ್ಮೋನಿಯರನ್ನು ನಾನು ಖಂಡಿತವಾಗಿಯೂ ಶಿಕ್ಷಿಸುತ್ತೇನೆ. ಯಾಕೆಂದರೆ ಅವರು ಗಿಲ್ಯಾದಿನ ಗರ್ಭಿಣಿ ಸ್ತ್ರೀಯರನ್ನು ಕೊಂದರು. ಆ ಪ್ರಾಂತ್ಯವನ್ನು ಕೈವಶಮಾಡಿಕೊಂಡು ತಮ್ಮ ದೇಶವನ್ನು ವಿಸ್ತಾರ ಮಾಡುವುದಕ್ಕಾಗಿ ಅವರು ಹೀಗೆ ಮಾಡಿದರು.
14 ಆದ್ದರಿಂದ ನಾನು ರಬ್ಬದ ಗೋಡೆಗಳಲ್ಲಿ ಬೆಂಕಿ ಹಾಕುವೆನು. ಆ ಬೆಂಕಿಯು ರಬ್ಬದ ಉನ್ನತ ಗೋಪುರಗಳನ್ನು ನಾಶಮಾಡುವದು; ಹಗಲಿನ ಯುದ್ಧದ ಕೂಗಾಟದಂತೆಯೂ ಸುಂಟರಗಾಳಿಯಂತೆಯೂ ಸಂಕಟವು ಅವರ ದೇಶಕ್ಕೆ ಬರುವದು.
15 ಆಗ ಅವರ ಅರಸನು ಮತ್ತು ನಾಯಕರು ಸೆರೆಹಿಡಿಯಲ್ಪಡುವರು. ಅವರನ್ನೆಲ್ಲ ಒಟ್ಟಿಗೆ ಕೊಂಡೊಯ್ಯಲಾಗುವುದು.” ಈ ಸಂಗತಿಗಳನ್ನೆಲ್ಲ ಯೆಹೋವನು ತಿಳಿಸಿದನು.
×

Alert

×