1
|
ಇದು ಆಮೋಸನ ಸಂದೇಶ. ಇವನು ತೆಕೋವ ಎಂಬ ಪಟ್ಟಣದ ಕುರುಬರಲ್ಲೊಬ್ಬನು. ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಸಮಯದಲ್ಲಿ ಮತ್ತು ಅದೇ ಸಮಯದಲ್ಲಿ ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರೇಲನ್ನು ಆಳುತ್ತಿರುವಾಗ ಆಮೋಸನಿಗೆ ದೈವದರ್ಶನಗಳುಂಟಾದವು. ಭೂಕಂಪವಾಗುವುದಕ್ಕಿಂತ ಎರಡು ವರುಷಗಳಿಗೆ ಮೊದಲು ಈ ದರ್ಶನಗಳಾದವು. |
2
|
ಆಮೋಸನು ಹೇಳಿದ್ದೇನಂದರೆ, ಚೀಯೋನಿನಲ್ಲಿ ಯೆಹೋವನು ಸಿಂಹದಂತೆ ಗರ್ಜಿಸುವನು. ಜೆರುಸಲೇಮಿನಿಂದ ಆರ್ಭಟಿಸುತ್ತಾನೆ. ಆಗ ಕುರುಬರ ಹಸಿರು ಹುಲ್ಲಗಾವಲು ಕಂದುಬಣ್ಣ ತಾಳಿ ಸಾಯುವುದು. ಕರ್ಮೆಲ್ ಬೆಟ್ಟವು ಒಣಗಿ ಬರಡಾಗುವುದು. |
3
|
ಯೆಹೋವನು ಹೇಳುವದೇನೆಂದರೆ, “ದಮಸ್ಕದವರು ನಡಿಸಿದ ಅನೇಕ ಅಪರಾಧಗಳ ನಿಮಿತ್ತವಾಗಿ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಯಾಕೆಂದರೆ ಅವರು ಗಿಲ್ಯಾದಿನ ಜನರನ್ನು ಒಕ್ಕಣೆಗೆ ಉಪಯೋಗಿಸುವ ಕಬ್ಬಿಣದ ಸಲಕರಣೆಗಳಿಂದ ಜಜ್ಜಿಬಿಟ್ಟರು. |
4
|
ಆದರೆ ನಾನು ಹಜಾಯೇಲನ ನಿವಾಸದಲ್ಲಿ ಬೆಂಕಿಯನ್ನು ಪ್ರಾರಂಭಿಸುವೆನು. ಅದು ಬೆನ್ಹದದನ ಭವ್ಯ ಅರಮನೆಗಳನ್ನೆಲ್ಲಾ ಸುಟ್ಟುಹಾಕುವದು. |
5
|
“ನಾನು ದಮಸ್ಕದ ಹೆಬ್ಬಾಗಿಲುಗಳನ್ನೂ ಒಡೆದು ಹಾಕುವೆನು; ಆವೆನ್ ಕಣಿವೆಯಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ತೆಗೆದುಬಿಡುವೆನು; ಬೇತ್ ಎದೆನ್ನಲ್ಲಿರುವ ಸಾಮರ್ಥ್ಯದ ಗುರುತನ್ನು ಕಿತ್ತುಹಾಕುವೆನು. ಆಗ ಅರಾಮ್ಯರು ಸೋಲಿಸಲ್ಪಟ್ಟವರಾಗಿ ಕಿರ್ ಎಂಬಲ್ಲಿಗೆ ಕೊಂಡೊಯ್ಯುವರು. ಇದು ಯೆಹೋವನ ನುಡಿ.” |
6
|
ಯೆಹೋವನು ಹೇಳುವದೇನಂದರೆ, “ಗಾಜದ ಜನರನ್ನು ಅವರು ಮಾಡಿದ ಅಪರಾಧಗಳ ನಿಮಿತ್ತ ಖಂಡಿತವಾಗಿಯೂ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಇಡೀ ಜನಾಂಗವನ್ನೇ ಎದೋಮಿಗೆ ಗುಲಾಮರನ್ನಾಗಿ ಕಳುಹಿಸಿದರು. |
7
|
ಅದಕ್ಕಾಗಿ ನಾನು ಗಾಜದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಈ ಬೆಂಕಿಯು ಗಾಜದ ಎತ್ತರವಾದ ಗೋಪುರಗಳನ್ನು ನಾಶಮಾಡುವದು. |
8
|
ಇದಲ್ಲದೆ, ನಾನು ಅಷ್ಡೋದಿನಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ನಾಶಮಾಡುವೆನು; ಅಷ್ಕೆಲೋನಿನಲ್ಲಿ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು; ಎಕ್ರೋನಿನ ಜನರನ್ನು ಶಿಕ್ಷಿಸುವೆನು. ಆಮೇಲೆ ಅಳಿದುಳಿದ ಫಿಲಿಷ್ಟಿಯರು ಸಾಯುವರು.” ಇದು ಯೆಹೋವನ ನುಡಿ. |
9
|
ಯೆಹೋವನು ಹೇಳುವದೇನಂದರೆ, “ಅನೇಕ ಅಪರಾಧಗಳನ್ನು ಮಾಡಿದ ತೂರಿನ ಜನರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಜನಾಂಗದ ಜನರನ್ನೆಲ್ಲಾ ಗುಲಾಮರನ್ನಾಗಿ ಎದೋಮಿಗೆ ಕಳುಹಿಸಿದರು. ಅವರು ತಮ್ಮ ಸಹೋದರರೊಂದಿಗೆ (ಇಸ್ರೇಲಿನೊಂದಿಗೆ) ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟರು. |
10
|
ಆದುದರಿಂದ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಹಾಕುವೆನು. ಆ ಬೆಂಕಿಯು ತೂರಿನ ಎತ್ತರವಾದ ಬುರುಜುಗಳನ್ನು ನಾಶ ಮಾಡುವದು.” |
11
|
ಯೆಹೋವನು ಹೇಳುವದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಎದೋಮ್ಯರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಎದೋಮ್ ತನ್ನ ಸಹೋದರನಾದ ಇಸ್ರೇಲನ್ನು ಕತ್ತಿಯಿಂದ ಹತಿಸಿತು. ಎದೋಮ್ ಯಾವ ಕರುಣೆಯನ್ನೂ ತೋರಲಿಲ್ಲ. ಅದರ ಕೋಪವು ನಿರಂತರವಾಗಿ ಮುಂದುವರಿಯಿತು; ಕ್ರೂರಪ್ರಾಣಿಯಂತೆ ಇಸ್ರೇಲನ್ನು ಹರಿದು ಹರಿದು ಹಾಕಿತು. |
12
|
ಆದುದರಿಂದ ನಾನು ತೇಮಾನಿನಲ್ಲಿ ಬೆಂಕಿಯನ್ನು ಹಾಕುವೆನು. ಆ ಬೆಂಕಿಯು ಬೋಚ್ರದ ಉನ್ನತ ಗೋಪುರಗಳನ್ನು ನಾಶಮಾಡುವದು.” |
13
|
ಯೆಹೋವನು ಹೇಳುವದೇನೆಂದರೆ, “ಅನೇಕಾನೇಕ ಅಪರಾಧಗಳನ್ನು ಮಾಡಿದ ಅಮ್ಮೋನಿಯರನ್ನು ನಾನು ಖಂಡಿತವಾಗಿಯೂ ಶಿಕ್ಷಿಸುತ್ತೇನೆ. ಯಾಕೆಂದರೆ ಅವರು ಗಿಲ್ಯಾದಿನ ಗರ್ಭಿಣಿ ಸ್ತ್ರೀಯರನ್ನು ಕೊಂದರು. ಆ ಪ್ರಾಂತ್ಯವನ್ನು ಕೈವಶಮಾಡಿಕೊಂಡು ತಮ್ಮ ದೇಶವನ್ನು ವಿಸ್ತಾರ ಮಾಡುವುದಕ್ಕಾಗಿ ಅವರು ಹೀಗೆ ಮಾಡಿದರು. |
14
|
ಆದುದರಿಂದ ನಾನು ರಬ್ಬದ ಗೋಡೆಗಳಲ್ಲಿ ಬೆಂಕಿ ಹಾಕುವೆನು. ಆ ಬೆಂಕಿಯು ರಬ್ಬದ ಉನ್ನತ ಗೋಪುರಗಳನ್ನು ನಾಶಮಾಡುವದು; ಹಗಲಿನ ಯುದ್ಧದ ಕೂಗಾಟದಂತೆಯೂ ಸುಂಟರಗಾಳಿಯಂತೆಯೂ ಸಂಕಟವು ಅವರ ದೇಶಕ್ಕೆ ಬರುವದು. |
15
|
ಆಗ ಅವರ ಅರಸನು ಮತ್ತು ನಾಯಕರು ಸೆರೆಹಿಡಿಯಲ್ಪಡುವರು. ಅವರನ್ನೆಲ್ಲ ಒಟ್ಟಿಗೆ ಕೊಂಡೊಯ್ಯಲಾಗುವುದು.” ಈ ಸಂಗತಿಗಳನ್ನೆಲ್ಲ ಯೆಹೋವನು ತಿಳಿಸಿದನು. |
Amos 1:15 Kannada Language Bible Words basic statistical display
COMING SOON ...