Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Books

Amos Chapters

Amos 3 Verses

1 ಇಸ್ರೇಲಿನ ಜನರೇ, ಈ ಸಂದೇಶಕ್ಕೆ ಕಿವಿಗೊಡಿರಿ! ನಿಮ್ಮ ವಿಷಯವಾಗಿ ಯೆಹೋವನು ಹೀಗೆ ಹೇಳಿದ್ದಾನೆ. ಇಸ್ರೇಲೇ, ಇದು ನಾನು ಈಜಿಪ್ಟ್‌ನಿಂದ ಬಿಡಿಸಿಕೊಂಡು ಬಂದ ಎಲ್ಲಾ ಕುಟುಂಬಗಳವರ (ಇಸ್ರೇಲ್) ವಿಷಯವಾದ ಸಂದೇಶ.
2 “ಈ ಭೂಮುಖದಲ್ಲಿ ಅನೇಕ ಕುಟುಂಬಗಳಿವೆ. ಅವರೆಲ್ಲರಲ್ಲಿ ನಿಮ್ಮನ್ನು ಮಾತ್ರವೇ ನಾನು ವಿಶೇಷ ರೀತಿಯಲ್ಲಿ ಬಲ್ಲೆನು. ಆದರೆ ನೀವು ನನಗೆ ವಿರುದ್ಧವಾದಿರಿ. ಆದುದರಿಂದ ನಾನು ನೀವು ಮಾಡಿದ ಪಾಪಗಳಿಗೆ ನಿಮ್ಮೆಲ್ಲರನ್ನು ಶಿಕ್ಷಿಸುವೆನು.”
3 ಇಬ್ಬರು ಒಟ್ಟಾಗಿ ನಡೆಯಬೇಕಾದರೆ ಅದಕ್ಕೆ ಅವರಿಬ್ಬರೂ ಒಪ್ಪಿಕೊಂಡಿರಲೇಬೇಕು.
4 ಅಡವಿಯಲ್ಲಿರುವ ಸಿಂಹವು ಪ್ರಾಣಿಯನ್ನು ಹಿಡಿದ ನಂತರವೇ ಗರ್ಜಿಸುವದು. ಪ್ರಾಯದ ಸಿಂಹವು ತನ್ನ ಗವಿಯಲ್ಲಿ ಗರ್ಜಿಸಿದರೆ ಅದು ಒಂದು ಪ್ರಾಣಿಯನ್ನು ಹಿಡಿಯಿತು ಎಂದು ಅರ್ಥ.
5 ಬಲೆಯಲ್ಲಿ ಆಹಾರ ಹಾಕದೆ ಇರುವದಾದರೆ ಪಕ್ಷಿಯು ಬಲೆಯೊಳಗೆ ಸಿಕ್ಕಿಹಾಕಿಕೊಳ್ಳುವುದಿಲ್ಲ. ಏನೂ ಸಿಕ್ಕಿಕೊಳ್ಳದೆ ಬೋನು ಹಾರುವದೋ?
6 ತೂತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.
7 ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.
8 ಸಿಂಹವು ಗರ್ಜಿಸಿದಾಗ ಜನರಿಗೆ ಭಯವಾಗುವುದು. ಯೆಹೋವನು ಮಾತನಾಡಿದಾಗ ಪ್ರವಾದಿಗಳು ಪ್ರವಾದಿಸುವರು.
9 [This verse may not be a part of this translation]
10 [This verse may not be a part of this translation]
11 ಆದುದರಿಂದ ಯೆಹೋವನು ಹೇಳುವದೇನಂದರೆ, “ಆ ದೇಶಕ್ಕೆ ಒಬ್ಬ ಶತ್ರುವು ಬರುವನು. ಅವನು ನಿಮ್ಮ ಬಲವನ್ನೇ ಮುರಿಯುವನು. ನೀವು ಉನ್ನತ ಬುರುಜುಗಳಲ್ಲಿ ಅಡಿಗಿಸಿಟ್ಟಿದ್ದ ವಸ್ತುಗಳನ್ನು ಕಿತ್ತುಕೊಳ್ಳುವನು.”
12 ಯೆಹೋವನು ಹೇಳುವುದೇನಂದರೆ, “ಒಂದುವೇಳೆ ಸಿಂಹವು ಒಂದು ಕುರಿಮರಿಯ ಮೇಲೆ ಎರಗಿದರೆ ಕುರುಬನು ಅದನ್ನು ರಕ್ಷಿಸಲು ಪ್ರಯತ್ನಿಸಾನು. ಆದರೆ ಕುರುಬನು ಆ ಕುರಿ ಮರಿಯ ಒಂದು ಭಾಗವನ್ನು ಮಾತ್ರ ಕಾಪಾಡಿಯಾನು. ಸಿಂಹದ ಬಾಯಿಂದ ಕುರಿಯ ಎರಡು ಕಾಲುಗಳನ್ನೊ ಕಿವಿಯ ಒಂದು ಭಾಗವನ್ನೋ ಎಳೆದು ರಕ್ಷಿಸಿಯಾನು. ಅದೇ ರೀತಿಯಲ್ಲಿ ಬಹುತೇಕ ಇಸ್ರೇಲರು ರಕ್ಷಿಸಲ್ಪಡುವದಿಲ್ಲ. ಸಮಾರ್ಯದಲ್ಲಿರುವ ಜನರು ತಮ್ಮ ಹಾಸಿಗೆಯ ಒಂದು ಮೂಲೆಯನ್ನಾಗಲಿ ಅಥವಾ ಮಂಚದ ಮೇಲಿನ ಬಟ್ಟೆಯ ಒಂದು ತುಂಡನ್ನಾಗಲಿ ಉಳಿಸಿಕೊಳ್ಳುವರು.”
13 ಸರ್ವಶಕ್ತನೂ ನನ್ನ ಒಡೆಯನೂ ಆಗಿರುವ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, “ಯಾಕೋಬನ ಕುಟುಂಬದವರಿಗೆ ಈ ವಿಷಯವನ್ನು ತಿಳಿಸು.
14 ಇಸ್ರೇಲು ಪಾಪಮಾಡಿದೆ. ಅದಕ್ಕಾಗಿ ನಾನು ಅದನ್ನು ಶಿಕ್ಷಿಸುವೆನು. ಬೇತೇಲಿನಲ್ಲಿರುವ ವೇದಿಕೆಗಳನ್ನೂ ನಾನು ನಾಶಮಾಡುವೆನು. ವೇದಿಕೆಯ ಕೊಂಬುಗಳು ಮುರಿಯಲ್ಪಟ್ಟು ನೆಲದ ಮೇಲೆ ಬೀಳುವವು.
15 ಬೇಸಿಗೆ ಕಾಲದ ಅರಮನೆಯೊಂದಿಗೆ ಚಳಿಗಾಲದ ಅರಮನೆಯನ್ನೂ ನಾಶಮಾಡುವೆನು. ದಂತದ ಭವನಗಳನ್ನು ನಾಶಮಾಡುವೆನು, ಇತರ ಎಷ್ಟೋ ಮನೆಗಳು ನಾಶವಾಗುವವು.” ಇವು ಯೆಹೋವನ ನುಡಿಗಳು.
×

Alert

×