1
|
ಚೀಯೋನಿನಲ್ಲಿ ಆರಾಮವಾಗಿರುವವರಿಗೂ ಸಮಾರ್ಯದ ಪರ್ವತಾಗ್ರಗಳಲ್ಲಿ ಸುರಕ್ಷಿತರಾಗಿರುವವರಿಗೂ ಕೆಡುಕು ಸಂಭವಿಸುವದು. ನೀವು ವಿಶೇಷವಾದ ದೇಶದ ವಿಶೇಷ ನಾಯಕರು. ಇಸ್ರೇಲಿನ ಮನೆತನವು ಸಲಹೆಗಾಗಿ ನಿಮ್ಮ ಹತ್ತಿರ ಬರುತ್ತದೆ. |
2
|
ಹೋಗಿ ಕಲ್ನೆಯ ಕಡೆಗೆ ದಿಟ್ಟಿಸಿರಿ. ಅಲ್ಲಿಂದ ದೊಡ್ಡ ಪಟ್ಟಣವಾದ ಹಾಮಾತಿಗೆ ಹೋಗಿರಿ. ಫಿಲಿಷ್ಟಿಯರ ಗತ್ ಪಟ್ಟಣಕ್ಕೆ ಹೋಗಿರಿ. ಆ ಜನಾಂಗಗಳಿಗಿಂತ ನೀವು ಉತ್ತಮರೋ? ಇಲ್ಲ. ಅವರ ರಾಜ್ಯವು ನಿಮಗಿಂತ ವಿಸ್ತಾರವಾಗಿದೆ. |
3
|
ಶಿಕ್ಷಿಸಲ್ಪಡುವ ದಿವಸದ ಕಡೆಗೆ ನೀವು ಧಾವಿಸುತ್ತಿದ್ದೀರಿ. ಅಕ್ರಮ ಆಳ್ವಿಕೆಯನ್ನು ನೀವು ಹತ್ತಿರಕ್ಕೆ ಬರಮಾಡಿಕೊಳ್ಳುತ್ತಾ ಇದ್ದೀರಿ. |
4
|
ಆದರೆ ಈಗ ನೀವು ಸುಖದ ಜೀವಿತದಲ್ಲಿ ಆನಂದಿಸುತ್ತಿದ್ದೀರಿ, ದಂತದ ಮಂಚದಲ್ಲಿ ಮಲಗುವಿರಿ; ಸುಖಾಸನಗಳ ಮೇಲೆ ಬಿದ್ದುಕೊಳ್ಳುವಿರಿ. ಹಿಂಡಿನಿಂದ ಎಳೇ ಕುರಿಮರಿಯನ್ನೂ ಹಟ್ಟಿಯಿಂದ ಎಳೇ ಕರುವನ್ನೂ ಭಕ್ಷಿಸುತ್ತೀರಿ. |
5
|
ನಿಮ್ಮ ತಂತಿವಾದ್ಯಗಳಿಂದ ಹಾಡನ್ನು ಬಾರಿಸುವಿರಿ; ದಾವೀದನಂತೆ ನಿಮ್ಮ ವಾದ್ಯಗಳನ್ನು ಅಭ್ಯಾಸಿಸುವಿರಿ. |
6
|
ಅಂದವಾದ ಪಾತ್ರೆಗಳಲ್ಲಿ ದ್ರಾಕ್ಷಾರಸ ಕುಡಿಯುವಿರಿ. ಉತ್ತಮವಾದ ಸುಗಂಧತೈಲವನ್ನು ಉಪಯೋಗಿಸುವಿರಿ. ಯೋಸೇಫನ ಕುಟುಂಬದ ನಾಶನದ ಬಗ್ಗೆಯೂ ನೀವು ಬೇಸರಗೊಳ್ಳಲಿಲ್ಲ. |
7
|
ಈಗ ಆ ಜನರು ತಮ್ಮ ಸುಖಾಸನಗಳಲ್ಲಿ ಕಾಲನ್ನು ನೇರವಾಗಿ ಚಾಚಿಕೊಂಡು ಮಲಗಿದ್ದಾರೆ. ಆದರೆ ಅವರ ಸುಖದ ಸಮಯಗಳು ಅಂತ್ಯವಾಗುವವು. ಅವರು ಕೈದಿಗಳಂತೆ ಸೆರೆ ಹಿಡಿಯಲ್ಪಟ್ಟು ಪರದೇಶಕ್ಕೆ ಒಯ್ಯಲ್ಪಡುವರು. ಅವರಲ್ಲಿ ಕೆಲವರು ಸೆರೆಗೊಯ್ಯಲ್ಪಡುವವರಲ್ಲಿ ಮೊದಲಿಗರಾಗುವರು. |
8
|
ನನ್ನ ಒಡೆಯನಾದ ಯೆಹೋವನು ತನ್ನ ಹೆಸರಿನ ಮೇಲೆ ಆಣೆಯಿಟ್ಟು ಈ ಮಾತುಗಳನ್ನು ನುಡಿದಿದ್ದಾನೆ. ಸರ್ವಶಕ್ತನಾದ ಯೆಹೋವನ ನುಡಿಗಳಿವು: “ಯಾಕೋಬನು ಹೆಚ್ಚಳ ಪಡುವಂಥವುಗಳನ್ನು ನಾನು ದ್ವೇಷಿಸುತ್ತೇನೆ. ಅವನ ಬಲವಾದ ಬುರುಜುಗಳನ್ನು ದ್ವೇಷಿಸುತ್ತೇನೆ. ಆದುದರಿಂದ ಶತ್ರುಗಳು ಬಂದು ಪಟ್ಟಣವನ್ನೂ ಪಟ್ಟಣದಲ್ಲಿರುವದೆಲ್ಲವನ್ನೂ ಸೂರೆಮಾಡುವಂತೆ ಮಾಡುವೆನು.” |
9
|
ಆ ಸಮಯದಲ್ಲಿ ಒಂದು ಮನೆಯಲ್ಲಿ ಹತ್ತು ಮಂದಿ ಇದ್ದರೂ ಅವರು ಸಾಯುವರು. |
10
|
ಒಬ್ಬ ವ್ಯಕ್ತಿಯು ಸತ್ತಾಗ ಅವನ ಸಂಬಂಧಿಕರಲ್ಲಿ ಒಬ್ಬನು ಬಂದು ಶವವನ್ನು ಸುಡಲು ತೆಗೆದುಕೊಂಡು ಹೋಗುವನು. ಸಂಬಂಧಿಕನು ಬಂದು ಎಲುಬುಗಳನ್ನು ಕೊಂಡೊಯ್ಯುವನು. ಮನೆಯೊಳಗೆ ಅವಿತುಕೊಂಡಿರುವವರನ್ನು ಕರೆಯುವನು. “ಇನ್ನೂ ಸತ್ತ ಹೆಣಗಳು ಒಳಗಿವೆಯೋ?” ಎಂದು ವಿಚಾರಿಸುವನು. ಒಳಗಿದ್ದವರು “ಇಲ್ಲ” ಎಂದು ಉತ್ತರಿಸುವರು. ಆಗ ಆ ಸಂಬಂಧಿಕನು ಅವರನ್ನು ತಡೆದು, “ಯೆಹೋವನ ನಾಮವನ್ನು ನಾವು ಉಚ್ಚರಿಸಬಾರದು” ಎಂದು ಹೇಳುವನು. |
11
|
ನೋಡು, ಯೆಹೋವನು ಆಜ್ಞೆಯನ್ನು ಕೊಡುವನು. ಆಗ ಭವ್ಯಭವನಗಳು ಒಡೆದು ಚೂರುಚೂರಾಗಿ ಬೀಳುವವು. ಮತ್ತು ಸಣ್ಣ ಮನೆಗಳು ಚಿಂದಿಚಿಂದಿಯಾಗಿ ಚೂರಾಗುವವು. |
12
|
ಕುದುರೆಗಳು ಬಂಡೆಗಳ ಮೇಲೆ ಓಡುವವೋ? ಇಲ್ಲ! ಬಂಡೆಗಳನ್ನು ಊಳಲು ನಿಮ್ಮ ಹಸುಗಳನ್ನು ಉಪಯೋಗಿಸುವಿರೋ? ಇಲ್ಲ! ಆದರೆ ನೀವು ಎಲ್ಲವನ್ನು ತಿರುವು ಮುರುವು ಮಾಡುತ್ತೀರಿ. ಒಳ್ಳೇತನವನ್ನು ನೀವು ವಿಷವಾಗಿ ಮಾಡಿದ್ದೀರಿ. ನ್ಯಾಯವನ್ನು ಕಹಿಯಾದ ವಿಷವನ್ನಾಗಿ ಮಾಡಿದ್ದೀರಿ. |
13
|
ಲೊ ಡೆಬಾರ್ನಲ್ಲಿ ನೀವು ಸಂತೋಷದಲ್ಲಿದ್ದೀರಿ. “ಕರ್ನಯಿಮನ್ನು ನಾವು ನಮ್ಮ ಬಲದಿಂದಲೇ ಗೆದ್ದಿದ್ದೇವೆ” ಎಂದು ನೀವು ಹೇಳುತ್ತೀರಿ. |
14
|
“ಆದರೆ ಇಸ್ರೇಲೇ, ನಿನಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು. ಆ ಜನಾಂಗವು ನಿನ್ನ ದೇಶದಲ್ಲಿ ಪೂರ್ತಿ ಸಂಕಟವನ್ನುಂಟು ಮಾಡುವದು; ಅದು ಲೆಬೋಹಮಾತಿನಿಂದ ಹಿಡಿದು ಅರಾಬಾ ಹಳ್ಳದ ತನಕ ಸಂಕಟವನ್ನುಂಟು ಮಾಡುವದು.” ಸರ್ವಶಕ್ತನಾದ ಯೆಹೋವನು ಇದನ್ನು ಹೇಳಿದ್ದಾನೆ. |
Amos 6:1 Kannada Language Bible Words basic statistical display
COMING SOON ...