Bible Languages

Indian Language Bible Word Collections

Bible Versions

Books

Colossians Chapters

Colossians 1 Verses

Bible Versions

Books

Colossians Chapters

Colossians 1 Verses

1 ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಅಪೊಸ್ತಲನಾದ ಪೌಲನು ಬರೆಯುವ ಪತ್ರ.
2 ಕೊಲೊಸ್ಸೆಯಲ್ಲಿರುವ ದೇವಜನರಿಗೆ ಅಂದರೆ ಕ್ರಿಸ್ತನಲ್ಲಿ ನಂಬಿಗಸ್ತರಾದ ಮತ್ತು ಪವಿತ್ರರಾದ ಸಹೋದರ, ಸಹೋದರಿಯರಿಗೆ ನಾನು ಈ ಪತ್ರವನ್ನು ನಮ್ಮ ಸಹೋದರನಾದ ತಿಮೊಥೆಯನ ಜೊತೆಗೂಡಿ ಬರೆಯುತ್ತಿದ್ದೇನೆ. ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ದೊರಕಲಿ.
3 ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ವಿಷಯದಲ್ಲಿ ದೇವರಿಗೆ ಸ್ತೋತ್ರ ಸಲ್ಲಿಸುತ್ತೇವೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ತಂದೆಯೇ ದೇವರು.
4 ನಾವು ದೇವರಿಗೆ ಸ್ತೋತ್ರ ಮಾಡಲು ಕಾರಣವೇನೆಂದರೆ ಕ್ರಿಸ್ತ ಯೇಸುವಿನಲ್ಲಿ ನಿಮಗಿರುವ ನಂಬಿಕೆಯ ಬಗ್ಗೆ, ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯ ಬಗ್ಗೆ ಕೇಳಿದ್ದೇವೆ.
5 [This verse may not be a part of this translation]
6 [This verse may not be a part of this translation]
7 ನೀವು ಎಪಫ್ರನಿಂದ ದೇವರ ಕೃಪೆಯ ಬಗ್ಗೆ ತಿಳಿದುಕೊಂಡಿರಿ. ಅವನು ನಮ್ಮ ಜೊತೆಯಲ್ಲಿಯೇ ಸೇವೆ ಮಾಡುತ್ತಿದ್ದಾನೆ. ನಾವು ಅವನನ್ನು ಪ್ರೀತಿಸುತ್ತೇವೆ. ಅವನು ನಮಗೋಸ್ಕರ ಕ್ರಿಸ್ತನ ನಂಬಿಗಸ್ತ ಸೇವಕನಾಗಿದ್ದಾನೆ.
8 ಪವಿತ್ರಾತ್ಮ ಪ್ರೇರಿತವಾದ ನಿಮ್ಮ ಪ್ರೀತಿಯ ಬಗ್ಗೆ ಎಪಫ್ರನು ಸಹ ನಮಗೆ ತಿಳಿಸಿದನು.
9 ನಿಮ್ಮ ಬಗ್ಗೆ ಈ ಸಂಗತಿಗಳನ್ನು ಕೇಳಿದ ದಿನದಿಂದ, ನಿಮಗೋಸ್ಕರ ಎಡಬಿಡದೆ ಪ್ರಾರ್ಥಿಸುತ್ತಿದ್ದೇವೆ. ದೇವರು ಅಪೇಕ್ಷಿಸುವ ಸಂಗತಿಗಳೆಲ್ಲವನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳಬೇಕೆಂತಲೂ ಆತ್ಮಿಕ ಸಂಗತಿಗಳಲ್ಲಿ ಮಹಾಜ್ಞಾನವನ್ನು ಮತ್ತು ತಿಳುವಳಿಕೆಯನ್ನು ಹೊಂದಿಕೊಳ್ಳಬೇಕೆಂತಲೂ
10 ಪ್ರಭುವಿಗೆ ಯೋಗ್ಯರಾಗಿ ನಡೆದು ಪ್ರತಿಯೊಂದು ವಿಷಯದಲ್ಲಿ ಆತನನ್ನು ಸಂತೋಷಪಡಿಸಬೇಕೆಂತಲೂ ನೀವು ಎಲ್ಲಾ ವಿಧವಾದ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ದೇವಜ್ಞಾನದಲ್ಲಿ ಬೆಳಯಬೇಕೆಂತಲೂ
11 ಆತನ ಮಹಿಮಾಶಕ್ತಿಯಿಂದ ಪರಿಪೂರ್ಣ ಬಲ ಹೊಂದಿ ಆನಂದಪೂರ್ವಕವಾದ ತಾಳ್ಮೆಯನ್ನು, ದೀರ್ಘಶಾಂತಿಯನ್ನು ಯಾವಾಗಲೂ ತೋರಿಸುವವರಾಗಿರಬೇಕೆಂತಲೂ ನಾವು ಪ್ರಾರ್ಥಿಸುತ್ತಿದ್ದೇವೆ.
12 ಆಗ ನೀವು ಆನಂದದಿಂದ ತಂದೆಗೆ ಕೃತಜ್ಞತಾಸ್ತುತಿ ಮಾಡಬಲ್ಲಿರಿ. ಬೆಳಕಿನಲ್ಲಿ ವಾಸಿಸುವ ತನ್ನ ಜನರೆಲ್ಲರಿಗೂ ಆತನು ಸಿದ್ಧಪಡಿಸಿರುವಂಥವುಗಳನ್ನು ಹೊಂದಿಕೊಳ್ಳಲು ಆತನೇ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದನು.
13 ದೇವರು ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡುಗಡೆ ಮಾಡಿದ್ದಾನೆ. ಆತನು ನಮ್ಮನ್ನು ತನ್ನ ಪ್ರಿಯ ಮಗನ (ಯೇಸುವಿನ) ರಾಜ್ಯದೊಳಗೆ ಸೇರಿಸಿದ್ದಾನೆ.
14 ಮಗನು ನಮ್ಮ ಪಾಪಗಳಿಗೆ ಪರಿಹಾರ ನೀಡಿದನು. ಆತನಲ್ಲಿಯೇ ನಮ್ಮ ಪಾಪಗಳಿಗೆ ಕ್ಷಮೆ ದೊರೆಯಿತು.
15 ದೇವರನ್ನು ನೋಡಲು ಯಾವ ವ್ಯಕ್ತಿಗೂ ಸಾಧ್ಯವಿಲ್ಲ. ಆದರೆ ಯೇಸುವು ದೇವರ ಪ್ರತಿರೂಪಿಯಾಗಿದ್ದಾನೆ. ಸೃಷ್ಟಿಸಲ್ಪಟ್ಟವುಗಳಿಗೆಲ್ಲಾ ಯೇಸು ಅಧಿಪತಿಯಾಗಿದ್ದಾನೆ.
16 ಭೂಲೋಕ ಮತ್ತು ಪರಲೋಕಗಳಲ್ಲಿರುವ ಎಲ್ಲವುಗಳು, ದೃಶ್ಯ ಮತ್ತು ಅದೃಶ್ಯವಾದವುಗಳು, ಆತ್ಮಿಕ ಶಕ್ತಿಗಳು, ಪ್ರಭುತ್ವಗಳು ಆತನ ಶಕ್ತಿಯಿಂದ ನಿರ್ಮಿತವಾಗಿವೆ. ಅಧಿಪತಿಗಳು ಮತ್ತು ಅಧಿಕಾರಿಗಳು ಆತನ ಶಕ್ತಿಯಿಂದ ನಿರ್ಮಿತರಾದರು. ಸಮಸ್ತವೂ ಕ್ರಿಸ್ತನ ಮೂಲಕವಾಗಿ ಆತನಿಗೋಸ್ಕರ ಸೃಷ್ಟಿಸಲ್ಪಟ್ಟವು.
17 ಅವುಗಳಿಗಿಂತ ಮೊದಲೇ ಕ್ರಿಸ್ತನಿದ್ದನು. ಸಮಸ್ತಕ್ಕೂ ಆತನೇ ಆಧಾರ ಭೂತನಾಗಿದ್ದಾನೆ.
18 ಕ್ರಿಸ್ತನು ದೇಹಕ್ಕೆ (ಸಭೆಯ) ಶಿರಸ್ಸಾಗಿದ್ದಾನೆ. ಪ್ರತಿಯೊಂದೂ ಆತನಿಂದಲೇ ಬರುತ್ತದೆ. ಮರಣದಿಂದ ಎದ್ದುಬಂದ ಆತನೇ ಚೊಚ್ಚಲ ಮಗನು. ಆದ್ದರಿಂದ ಎಲ್ಲಾದರಲ್ಲಿಯೂ ಯೇಸುವೇ ಅತ್ಯಂತ ಪ್ರಾಮುಖ್ಯನಾಗಿದ್ದಾನೆ.
19 ಆತನಲ್ಲಿ ತನ್ನ ಸರ್ವಸಂಪೂರ್ಣತೆಯು ನೆಲಸಿರಬೇಕೆಂಬುದೂ,
20 ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ಸಮಾಧಾನವನ್ನು ಉಂಟುಮಾಡಿ ಭೂಪರಲೋಕಗಳಲ್ಲಿರುವ ಸಮಸ್ತವನ್ನು ತನಗೆ ಸಂಧಾನ ಪಡಿಸಿಕೊಳ್ಳಬೇಕೆಂಬುದೂ ದೇವರ ಚಿತ್ತವಾಗಿತ್ತು.
21 ಒಂದು ಕಾಲದಲ್ಲಿ ನೀವು ದೇವರಿಂದ ಬೇರ್ಪಟ್ಟಿದ್ದಿರಿ, ದುಷ್ಕೃತ್ಯಗಳನ್ನು ಮಾಡುತ್ತಾ ನಿಮ್ಮ ಮನಸ್ಸುಗಳಲ್ಲಿ ದೇವರಿಗೆ ಶತ್ರುಗಳಾಗಿದ್ದಿರಿ.
22 ಈಗಲಾದರೊ ಕ್ರಿಸ್ತನು ಶರೀರಧಾರಿಯಾಗಿ ಈ ಲೋಕದಲ್ಲಿದ್ದಾಗ ತನ್ನ ಪ್ರಾಣವನ್ನೇ ಕೊಡುವುದರ ಮೂಲಕ ನಿಮಗೂ ದೇವರಿಗೂ ಸಂಧಾನ ಮಾಡಿದ್ದಾನೆ. ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿಷ್ಕಳಂಕರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ದೇವರ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು.
23 ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.
24 ನಾನು ನಿಮಗಾಗಿ ಅನುಭವಿಸಿದ ಬಾಧೆಗಳಿಂದ ನನಗೆ ಸಂತೋಷವಾಗಿದೆ. ಕ್ರಿಸ್ತನು ಸಭೆಯೆಂಬ ತನ್ನ ದೇಹದ ಮೂಲಕ ಇನ್ನೂ ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಈ ಸಂಕಟಗಳಲ್ಲಿ ನಾನು ಅನುಭವಿಸಬೇಕಾದವುಗಳನ್ನು ಆತನ ದೇಹಕ್ಕೋಸ್ಕರ ನನ್ನ ದೇಹದಲ್ಲಿ ಅನುಭವಿಸುತ್ತೇನೆ.
25 ನಾನು ಸಭೆಗೆ ಸೇವಕನಾದೆನು. ಏಕೆಂದರೆ ದೇವರು ನನಗೆ ವಿಶೇಷವಾದ ಕಾರ್ಯವನ್ನು ಮಾಡುವಂತೆ ಆಜ್ಞಾಪಿಸಿದನು. ಈ ಕಾರ್ಯವು ನಿಮಗೆ ಸಹಾಯ ಮಾಡುವುದು. ದೇವರ ಉಪದೇಶವನ್ನು ಸಂಪೂರ್ಣವಾಗಿ ತಿಳಿಸುವುದೇ ಆ ಕಾರ್ಯ.
26 ಆದಿಕಾಲದಿಂದಲೂ ಅಡಗಿಸಿಟ್ಟಿದ್ದ ರಹಸ್ಯಸತ್ಯವೇ ಈ ಉಪದೇಶ. ಈ ಸತ್ಯವನ್ನು ಎಲ್ಲಾ ಜನರಿಗೆ ಮರೆಮಾಡಲಾಗಿತ್ತು. ಈಗಲಾದರೊ ಈ ರಹಸ್ಯಸತ್ಯವನ್ನು ದೇವರ ಪವಿತ್ರ ಜನರಿಗೆ ತಿಳಿಸಲಾಗಿದೆ.
27 ಮಹಿಮಾತಿಶಯವಾದ ಈ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಈ ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಆ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ.
28 ಆದ್ದರಿಂದಲೇ ನಾವು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುವವರಾಗಿದ್ದೇವೆ. ಪ್ರತಿಯೊಬ್ಬರನ್ನೂ ಬಲಪಡಿಸುವುದಕ್ಕಾಗಿ ಪ್ರತಿಯೊಬ್ಬರಿಗೂ ಉಪದೇಶಿಸುವುದಕ್ಕಾಗಿ ನಮ್ಮ ಜ್ಞಾನವನ್ನೆಲ್ಲಾ ಉಪಯೋಗಿಸುತ್ತೇವೆ. ಪ್ರತಿಯೊಬ್ಬರನ್ನು ಕ್ರಿಸ್ತನಲ್ಲಿ ಸಂಪೂರ್ಣ ಆತ್ಮಿಕರನ್ನಾಗಿ ಮಾಡಿ ದೇವರ ಸನ್ನಿಧಿಗೆ ತರಲು ಪ್ರಯತ್ನಿಸುತ್ತೇವೆ.
29 ಕ್ರಿಸ್ತನು ನನಗೆ ನೀಡಿರುವ ಬಲದಿಂದ ಇದಕ್ಕೋಸ್ಕರವೇ ಕೆಲಸ ಮಾಡುತ್ತೇನೆ ಮತ್ತು ಹೋರಾಡುತ್ತೇನೆ. ಆ ಬಲವೇ ನನ್ನ ಜೀವನದಲ್ಲಿ ಕಾರ್ಯಮಾಡುತ್ತಿದೆ.

Colossians 1:18 Kannada Language Bible Words basic statistical display

COMING SOON ...

×

Alert

×