1
|
“ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಮರುಭೂಮಿಗೆ ತಿರುಗಿಹೋದೆವು. ಆ ಮಾರ್ಗವು ಕೆಂಪುಸಮುದ್ರದ ಕಡೆ ಹೋಗುತ್ತಿತ್ತು. ಸೇಯೀರ್ ಬೆಟ್ಟವನ್ನು ಸುತ್ತಿಕೊಂಡು ಹೋಗುವುದಕ್ಕೆ ನಮಗೆ ತುಂಬಾ ದಿವಸಗಳಾದವು. |
2
|
ಆಗ ಯೆಹೋವನು ನನಗೆ ಹೀಗೆ ಹೇಳಿದನು: |
3
|
‘ನೀವು ಬೆಟ್ಟದ ಸುತ್ತ ಸುತ್ತುತ್ತಾ ಬಹಳ ದಿವಸಗಳನ್ನು ಕಳೆದಿರಿ. ಈಗ ನೀವು ಉತ್ತರದಿಕ್ಕಿಗೆ ತಿರುಗಿರಿ. |
4
|
ಇದನ್ನು ಜನರಿಗೆ ತಿಳಿಸು: ನೀವು ಸೇಯೀರ್ ದೇಶದ ಮೂಲಕ ದಾಟಿಹೋಗುವಿರಿ. ಇದು ನಿಮ್ಮ ಸಂಬಂಧಿಕರ ದೇಶ. ಇವರು ಏಸಾವನ ಸಂತತಿಯವರು. ಅವರು ನಿಮಗೆ ಭಯಪಡುವರು; ಆದರೆ ನೀವು ಅವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. |
5
|
ಅವರ ವಿರುದ್ಧ ಯುದ್ಧ ಮಾಡಬಾರದು. ನಾನು ನಿಮಗೆ ಅವರ ದೇಶದಲ್ಲಿ ಯಾವ ಪಾಲನ್ನೂ ಕೊಡುವುದಿಲ್ಲ. ಅದರ ಒಂದು ಅಡಿ ಜಾಗವನ್ನೂ ಕೊಡುವುದಿಲ್ಲ. ಯಾಕೆಂದರೆ ಸೇಯೀರ್ ಬೆಟ್ಟಪ್ರದೇಶವನ್ನು ಏಸಾವನ ಸ್ವಂತ ದೇಶವನ್ನಾಗಿ ಕೊಟ್ಟಿರುತ್ತೇನೆ. |
6
|
ನೀವು ಅವರ ದೇಶವನ್ನು ದಾಟುವಾಗ ಅವರ ಆಹಾರಸಾಮಾಗ್ರಿಗಳಿಗೂ ನೀರಿಗೂ ಹಣವನ್ನು ಕೊಡಬೇಕು. |
7
|
ನಿಮ್ಮ ದೇವರಾದ ಯೆಹೋವನು ಪ್ರತಿಯೊಂದು ವಿಷಯದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ. ಈ ಮಹಾ ಮರುಭೂಮಿಯ ಮೂಲಕ ನೀವು ನಡೆದುಹೋದದ್ದರ ಬಗ್ಗೆಯೂ ಆತನಿಗೆ ತಿಳಿದಿದೆ. ಕಳೆದ ನಲವತ್ತು ವರ್ಷಗಳಿಂದ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ನಡಿಸಿದ್ದಾನೆ. ನಿಮಗೆ ಬೇಕಾದವುಗಳನ್ನೆಲ್ಲಾ ಒದಗಿಸಿರುತ್ತಾನೆ.’ |
8
|
“ಹಾಗೆ ನಾವು ನಮ್ಮ ಸಂಬಂಧಿಕರಾದ ಏಸಾವನ ಜನರ ದೇಶದ ಮೂಲಕ ಪ್ರಯಾಣ ಬೆಳೆಸಿದೆವು. ಜೋರ್ಡನ್ ಕಣಿವೆಯಿಂದ ಏಲತ್ ಮತ್ತು ಎಚ್ಯೋನ್ಗೆಬೆರ್ ಪಟ್ಟಣಗಳಿಗೆ ಹೋಗುವ ಮಾರ್ಗವನ್ನು ಬಿಟ್ಟು, ನಾವು ಮೋವಾಬ್ ದೇಶದ ಮರುಭೂಮಿಗೆ ಹೋಗುವ ರಸ್ತೆಯಲ್ಲಿ ನಡೆದೆವು. |
9
|
“ಯೆಹೋವನು ನನಗೆ ಹೀಗೆ ಹೇಳಿದನು: ‘ಮೋವಾಬಿನ ಜನರಿಗೆ ತೊಂದರೆ ಕೊಡಬೇಡ. ಅವರ ವಿರುದ್ಧ ಯುದ್ಧಕ್ಕೆ ಹೋಗಬೇಡ; ಅವರ ದೇಶದಲ್ಲಿ ನಿಮಗೆ ಯಾವ ಪಾಲೂ ಸಿಗದು. ಅವರು ಲೋಟನ ಸಂತತಿಯವರು. ನಾನು ಅವರಿಗೆ ಆರ್ ಪಟ್ಟಣವನ್ನು ಕೊಟ್ಟಿರುತ್ತೇನೆ.’” |
10
|
(ಹಿಂದಿನ ಕಾಲದಲ್ಲಿ, ಏಮಿಯ ಜನರು ಆರ್ನಲ್ಲಿ ವಾಸಮಾಡುತ್ತಿದ್ದರು. ಅವರು ಬಲಾಢ್ಯರೂ ಉನ್ನತ ಪುರುಷರೂ ಆಗಿದ್ದರು ಮತ್ತು ಅವರ ಸಂಖ್ಯೆ ಹೆಚ್ಚಾಗಿತ್ತು. |
11
|
ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳಲಾಗುತ್ತಿತ್ತು. ಆದರೆ ಮೋವಾಬ್ಯರು ಅವರನ್ನು ಏಮಿಯರು ಎಂದೇ ಕರೆಯುತ್ತಿದ್ದರು. |
12
|
ಹೋರಿಯರು ಕೂಡಾ ಸೇಯೀರ್ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರಿಂದ ದೇಶವನ್ನು ವಶಮಾಡಿಕೊಂಡು, ಹೋರಿಯರನ್ನು ಸಂಹರಿಸಿ ಆ ದೇಶದಲ್ಲಿ ನೆಲೆಸಿದರು. ಇಸ್ರೇಲರೂ ಅದೇ ರೀತಿಯಲ್ಲಿ ಯೆಹೋವನು ವಾಗ್ದಾನ ಮಾಡಿದ ದೇಶದಲ್ಲಿದ್ದ ನಿವಾಸಿಗಳನ್ನು ಸೋಲಿಸಿ ಅವರ ದೇಶವನ್ನು ಸ್ವಾಧೀನ ಮಾಡಿಕೊಂಡರು.) |
13
|
“ಯೆಹೋವನು ನನಗೆ, ‘ಜೆರೆದ್ ಕಣಿವೆಯ ಆಚೆಕಡೆಗೆ ಹೋಗು’ ಎಂದು ಹೇಳಿದನು. ಆದುದರಿಂದ ನಾವು ಜೆರೆದ್ ಕಣಿವೆಯನ್ನು ದಾಟಿದೆವು. |
14
|
ಕಾದೇಶ್ಬರ್ನೇಯದಿಂದ ಜೆರೆದ್ ಕಣಿವೆಯನ್ನು ದಾಟಿ ಆಗಲೇ ಮೂವತ್ತೆಂಟು ವರ್ಷಗಳು ದಾಟಿದ್ದವು. ನಮ್ಮ ಸಮೂಹದಲ್ಲಿದ್ದ ಯುದ್ಧಭಟರೆಲ್ಲಾ ಸತ್ತುಹೋಗಿದ್ದರು. ಹೀಗೆ ಆಗುವುದೆಂದು ದೇವರು ಪ್ರಮಾಣ ಮಾಡಿದ್ದನು. |
15
|
ಯೆಹೋವನು ಅವರಿಗೆ ವಿರುದ್ಧವಾಗಿ ಇದ್ದುದರಿಂದ ಅವರೆಲ್ಲಾ ಸತ್ತು ಜನಸಮೂಹದಿಂದ ಇಲ್ಲವಾದರು. |
16
|
“ಯುದ್ಧಭಟರೆಲ್ಲಾ ಸತ್ತುಹೋದ ಬಳಿಕ |
17
|
ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: |
18
|
‘ಈ ಹೊತ್ತು ಆರ್ ಎಂಬ ಪಟ್ಟಣದ ಗಡಿಯನ್ನು ದಾಟಿ ಮೋವಾಬ್ ದೇಶವನ್ನು ಪ್ರವೇಶಿಸಬೇಕು. |
19
|
ನೀನು ಅಮ್ಮೋನಿಯರ ಬಳಿಗೆ ಹೋಗಬೇಕು. ಆದರೆ ಅವರಿಗೆ ತೊಂದರೆ ಕೊಡಬೇಡ. ಅವರೊಂದಿಗೆ ಯುದ್ಧಮಾಡಬೇಡ. ಯಾಕೆಂದರೆ ಅವರ ದೇಶದಲ್ಲಿ ನಿನಗೆ ಪಾಲಿಲ್ಲ. ಅವರು ಲೋಟನ ಸಂತತಿಯವರು, ಆ ದೇಶವನ್ನು ನಾನು ಅವರಿಗೆ ಕೊಟ್ಟಿರುತ್ತೇನೆ.” |
20
|
(ಆ ಪ್ರದೇಶವನ್ನು ರೆಫಾಯ ದೇಶವೆಂದೂ ಕರೆಯುತ್ತಾರೆ. ಹಿಂದಿನ ಕಾಲದಲ್ಲಿ ರೆಫಾಯರು ಅಲ್ಲಿ ವಾಸಿಸುತ್ತಿದ್ದರು. ಅಮ್ಮೋನಿಯರು ಅವರನ್ನು ಜಮ್ಜುಮ್ಯರು ಎಂದು ಕರೆಯುತ್ತಿದ್ದರು. |
21
|
ಜಮ್ಜುಮ್ಯರು ತುಂಬಾ ಬಲಶಾಲಿಗಳಾಗಿದ್ದರು; ಅನಾಕ್ಯರಂತೆ ಉನ್ನತ ಪುರುಷರಾಗಿದ್ದರು. ಆದರೆ ಯೆಹೋವನು ಜಮ್ಜುಮ್ಯರನ್ನು ಸೋಲಿಸಲು ಅಮೋರಿಯರಿಗೆ ಸಹಾಯ ಮಾಡಿದನು. ಅಮೋರಿಯರು ಆ ದೇಶವನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಂಡು ಈಗ ಅದರಲ್ಲಿ ನೆಲೆಸಿರುತ್ತಾರೆ. |
22
|
ಏಸಾವನ ಜನರಿಗೂ ದೇವರು ಅದೇ ರೀತಿ ಮಾಡಿದನು. ಹಿಂದಿನ ಕಾಲದಲ್ಲಿ ಹೋರಿಯರು ಸೇಯೀರ್ನಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರನ್ನು ಸೋಲಿಸಿದರು. ಅವನ ಸಂತತಿಯವರು ಈಗಲೂ ಅಲ್ಲಿ ವಾಸಮಾಡುತ್ತಿದ್ದಾರೆ. |
23
|
ಕಫ್ತೋರ್ಯದವರಿಗೂ ದೇವರು ಅದೇ ರೀತಿ ಮಾಡಿದ್ದನು. ಗಾಜಾದ ಸುತ್ತಲಿನ ಪಟ್ಟಣಗಳಲ್ಲಿ ಅವ್ವಿಯ ಜನರು ವಾಸಿಸುತ್ತಿದ್ದರು. ಆದರೆ ಕಫ್ತೋರ್ಯದಿಂದ ಬಂದ ಜನರು ಅವ್ವಿಯರನ್ನು ನಾಶಮಾಡಿ ಅವರ ದೇಶದಲ್ಲಿ ಈಗಲೂ ಅವರು ವಾಸಿಸಿರುತ್ತಾರೆ.) |
24
|
“ಯೆಹೋವನು ನನಗೆ ಹೇಳಿದ್ದೇನೆಂದರೆ: ‘ಅರ್ನೋನ್ ಕಣಿವೆಯನ್ನು ದಾಟಲು ಸಿದ್ಧಪಡಿಸಿಕೊ. ಅಮೋರಿಯನೂ ಹೆಷ್ಬೋನಿನ ರಾಜನೂ ಆಗಿರುವ ಸೀಹೋನನನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುವೆನು. ಅವನ ರಾಜ್ಯವನ್ನು ನಾನು ನಿನಗೆ ಕೊಡುವೆನು. ಅದುದರಿಂದ ಅವನಿಗೆ ವಿರುದ್ಧವಾಗಿ ಯುದ್ಧಮಾಡಿ ದೇಶವನ್ನು ಸ್ವಾಧೀನಪಡಿಸಿಕೊ. |
25
|
ಸುತ್ತಲಿರುವ ಜನಾಂಗಗಳು ನಿಮಗೆ ಹೆದರಿ ನಡುಗುವಂತೆ ನಾನು ಮಾಡುತ್ತಿದ್ದೇನೆ. ಅವರು ನಿಮ್ಮ ಬಗ್ಗೆ ಸುದ್ದಿಯನ್ನು ಕೇಳಿ ಹೆದರಿಕೊಳ್ಳುವರು ಮತ್ತು ಭಯದಿಂದ ನಡುಗುವರು.’ |
26
|
“ನಾವು ಕೆದೇಮೋತಿನ ಮರುಭೂಮಿಯಲ್ಲಿರುವಾಗ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಸಮಾಧಾನದ ಸಂದೇಶದೊಂದಿಗೆ ಕಳುಹಿಸಿದೆನು. ಆ ದೂತರು ಸೀಹೋನನಿಗೆ ಸಮಾಧಾನವನ್ನು ತಂದಿದ್ದರು. |
27
|
ಅವರು ಸೀಹೋನನಿಗೆ, ‘ನಿನ್ನ ರಾಜ್ಯವನ್ನು ನಾವು ದಾಟುವಂತೆ ನಮಗೆ ಅಪ್ಪಣೆ ಕೊಡು. ನಾವು ಮಾರ್ಗದಲ್ಲಿ ಬಲಕ್ಕಾಗಲಿ ಎಡಕ್ಕಾಗಲಿ ಹೋಗುವುದಿಲ್ಲ. |
28
|
ನಾವೇನಾದರೂ ನಿನ್ನ ದೇಶದ ಆಹಾರಪದಾರ್ಥಗಳನ್ನು ತೆಗೆದುಕೊಂಡರೆ, ನೀರನ್ನು ಉಪಯೋಗಿಸಿದರೆ ಅದಕ್ಕೆ ಪ್ರತಿಯಾಗಿ ಬೆಳ್ಳಿಯನ್ನು ಪಾವತಿ ಮಾಡುವೆವು. ನಿಮ್ಮ ದೇಶದ ಮೂಲಕ ನಾವು ಹಾದುಹೋಗಬೇಕಾಗಿದೆಯಷ್ಟೇ. |
29
|
ನಾವು ಜೋರ್ಡನ್ ನದಿಯನ್ನು ದಾಟುವವರೆಗೆ ನಿಮ್ಮ ದೇಶದ ಮೂಲಕ ಹೋಗಿ, ನಮ್ಮ ದೇವರಾದ ಯೆಹೋವನು ಕೊಡಲಿರುವ ದೇಶವನ್ನು ಪ್ರವೇಶಿಸುತ್ತೇವೆ. ಸೇಯೀರ್ನಲ್ಲಿ ವಾಸಿಸುವ ಏಸಾವನ ಜನರೂ, ಆರ್ನಲ್ಲಿ ವಾಸಿಸುವ ಮೋವಾಬ್ಯರೂ ತಮ್ಮ ದೇಶಗಳ ಮೂಲಕ ಹೋಗಲು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ’ ಎಂದು ಹೇಳಿದರು. |
30
|
“ಆದರೆ ಸೀಹೋನನು ನಮಗೆ ದಾಟಿಹೋಗಲು ಬಿಡಲಿಲ್ಲ. ನಮ್ಮ ದೇವರಾದ ಯೆಹೋವನು ಅವನ ಹೃದಯವನ್ನು ಕಠಿಣಗೊಳಿಸಿದನು. ನಾವು ಅವನನ್ನು ಸೋಲಿಸಿ ಅವನ ರಾಜ್ಯವನ್ನು ವಶಪಡಿಸಿಕೊಳ್ಳಬೇಕೆಂದು ಯೆಹೋವನು ಹಾಗೆ ಮಾಡಿದನು. ಆ ರಾಜ್ಯವು ಇಂದಿಗೂ ನಮ್ಮ ವಶದಲ್ಲಿದೆ. |
31
|
ಯೆಹೋವನು ನನಗೆ, ‘ನಾನು ನಿನಗೆ ಸೀಹೋನನನ್ನೂ ಅವನ ಎಲ್ಲಾ ಜನರನ್ನೂ ಅವನ ದೇಶವನ್ನೂ ನಿನಗೆ ಕೊಡುತ್ತೇನೆ. ಈಗ ಹೋಗಿ ಅವನ ದೇಶವನ್ನು ವಶಪಡಿಸಿಕೊ!’ ಎಂದು ಹೇಳಿದನು. |
32
|
“ಅನಂತರ ಸೀಹೋನ್ ಅರಸನೂ ಅವನ ಜನರೂ ನಮ್ಮೊಂದಿಗೆ ಕಾದಾಡಲು ಯಹಜಿ ಎಂಬ ಸ್ಥಳಕ್ಕೆ ಬಂದರು. |
33
|
ಆದರೆ ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮ ವಶಕ್ಕೆ ಕೊಟ್ಟನು. ನಾವು ಸೀಹೋನ್ ಅರಸನನ್ನೂ ಅವನ ಮಕ್ಕಳನ್ನೂ ಅವನ ಎಲ್ಲಾ ಜನರನ್ನೂ ಸದೆಬಡೆದು ಸೋಲಿಸಿದೆವು. |
34
|
ಅವನಿಗೆ ಒಳಪಟ್ಟ ಪಟ್ಟಣಗಳನ್ನೆಲ್ಲಾ ವಶಪಡಿಸಿಕೊಂಡೆವು. ಪ್ರತಿಯೊಂದು ಪಟ್ಟಣದಲ್ಲಿದ್ದ ಗಂಡಸರು, ಹೆಂಗಸರು, ಮಕ್ಕಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು. ಯಾರನ್ನೂ ಜೀವಂತವಾಗಿ ಉಳಿಸಲಿಲ್ಲ. |
35
|
ಅವರ ದನಕರುಗಳನ್ನು ಮತ್ತು ಅವರಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಸೂರೆಮಾಡಿದೆವು. |
36
|
ನಾವು ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಎಂಬ ಊರನ್ನು ಮತ್ತು ಆ ಕಣಿವೆಯ ಮಧ್ಯದಲ್ಲಿದ್ದ ಇನ್ನೊಂದು ಊರನ್ನು ವಶಪಡಿಸಿಕೊಂಡೆವು. ಅರ್ನೋನ್ ಕಣಿವೆ ಮತ್ತು ಗಿಲ್ಯಾದ್ಗಳ ನಡುವೆ ಇರುವ ಎಲ್ಲಾ ಪಟ್ಟಣಗಳನ್ನು ಸೋಲಿಸಲು ಯೆಹೋವನು ಅವಕಾಶ ಮಾಡಿಕೊಟ್ಟನು. ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಿ ಕಂಡುಬರಲಿಲ್ಲ. |
37
|
ಆದರೆ ಅಮ್ಮೋನಿಯರಿಗೆ ಸೇರಿದ ದೇಶದ ಸಮೀಪಕ್ಕೆ ನಾವು ಹೋಗಲಿಲ್ಲ: ಯಬ್ಬೋಕ್ ನದಿಯ ಬದಿಗೂ ನಾವು ಹೋಗಲಿಲ್ಲ: ಬೆಟ್ಟಪ್ರದೇಶಗಳ ಪಟ್ಟಣಗಳಿಗೂ ನಾವು ಹೋಗಲಿಲ್ಲ: ನಮ್ಮ ದೇವರಾದ ಯೆಹೋವನು ನಮಗೆ ಕೊಡದೆ ಇರುವ ದೇಶಗಳ ಬಳಿಗೆ ನಾವು ಹೋಗಲೇ ಇಲ್ಲ. |
Deuteronomy 2:1 Kannada Language Bible Words basic statistical display
COMING SOON ...