“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಒಬ್ಬ ವ್ಯಕ್ತಿ ಕೊಲೆಯಾಗಿ ಹೊಲದಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಲೆ ಮಾಡಿದ್ದು ಯಾರು ಎಂದು ನಿಮಗೆ ಗೊತ್ತಿಲ್ಲದಿದ್ದರೆ,
ಯಾವ ಪಟ್ಟಣವು ಕೊಲೆಯಾದ ವ್ಯಕ್ತಿಯ ಶವಕ್ಕೆ ಹತ್ತಿರವಾಗಿದೆಯೋ ಆ ಪಟ್ಟಣದ ನಾಯಕರು ಮತ್ತು ನ್ಯಾಯಾಧೀಶರು ತಮ್ಮ ಹಟ್ಟಿಯಿಂದ ಎಂದೂ ಕರು ಈಯದ, ಕೆಲಸಕ್ಕೆ ಉಪಯೋಗಿಸದ ಒಂದು ಹಸುವನ್ನು ತೆಗೆದುಕೊಂಡು
ಹರಿಯುವ ನೀರಿರುವ ತಗ್ಗಿಗೆ ಅಟ್ಟಿಕೊಂಡು ಹೋಗಬೇಕು. ಆ ತಗ್ಗು ಉಳಿಮೆ ಮಾಡಿದ ಜಾಗವಾಗಿರಬಾರದು ಮತ್ತು ಆ ಸ್ಥಳದಲ್ಲಿ ಯಾವ ಸಸಿಯೂ ನೆಟ್ಟಿರಬಾರದು. ಅಲ್ಲಿ ಊರ ಹಿರಿಯರು ಆ ಹಸುವಿನ ಕುತ್ತಿಗೆ ಮುರಿಯಬೇಕು.
ಊರಿನಲ್ಲಿದ್ದ ಲೇವಿಯರೂ ಅಲ್ಲಿಗೆ ಹೋಗಬೇಕು. ಯೆಹೋವನು ಅವರ ಜನರನ್ನು ಆತನ ಹೆಸರಿನಲ್ಲಿ ಆಶೀರ್ವದಿಸುವುದಕ್ಕಾಗಿಯೂ ತನ್ನ ಸೇವೆ ಮಾಡುವುದಕ್ಕಾಗಿಯೂ ಆರಿಸಿದ್ದಾನೆ. ಎಲ್ಲಾ ವಾಗ್ವಾದಗಳನ್ನು ಯಾಜಕನೇ ಇತ್ಯರ್ಥಮಾಡುವನು.
ಆಕೆಯು ತನ್ನ ಸೆರೆವಾಸದ ಬಟ್ಟೆಯನ್ನು ತೆಗೆದಿಟ್ಟು ಒಂದು ತಿಂಗಳು ಪೂರ್ತಿ ತನ್ನ ತಂದೆತಾಯಿಗಳಿಗಾಗಿ ಶೋಕಿಸಬೇಕು. ಅನಂತರ ನೀನು ಆಕೆಯ ಬಳಿಗೆ ಹೋಗಿ ಆಕೆಯನ್ನು ವರಿಸಿ ಗಂಡನಾಗಬಹುದು. ಆಕೆಯು ನಿನ್ನ ಹೆಂಡತಿಯಾಗುವಳು.
ಆಕೆಯನ್ನು ನೀನು ಮೆಚ್ಚದಿದ್ದರೆ ವಿವಾಹವಿಚ್ಛೇದನೆ ಮಾಡಿ ಆಕೆಯನ್ನು ಸ್ವತಂತ್ರಳಾಗುವಂತೆ ಬಿಟ್ಟುಬಿಡಬಹುದು. ಆದರೆ ನೀನು ಆಕೆಯನ್ನು ಮಾರಬಾರದು. ಆಕೆಯನ್ನು ಗುಲಾಮಳಂತೆ ನೋಡಬಾರದು. ಯಾಕೆಂದರೆ ನೀನು ಆಕೆಯೊಂದಿಗೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡಿದ್ದಿಯಲ್ಲಾ.
“ಒಬ್ಬ ಮನುಷ್ಯನಿಗೆ ಇಬ್ಬರು ಹೆಂಡತಿಯರಿದ್ದರೆ ಅವರಲ್ಲಿ ಒಬ್ಬಾಕೆಯನ್ನು ಅವನು ಹೆಚ್ಚಾಗಿ ಪ್ರೀತಿಸಿದರೂ ಪ್ರೀತಿಸಬಹುದು. ಆ ಇಬ್ಬರು ಅವನಿಗೆ ಮಕ್ಕಳನ್ನು ಹೆರುವರು. ಹಿರಿಮಗನು ತಾನು ಪ್ರೀತಿಸಿದ ಹೆಂಡತಿಯಲ್ಲಿ ಹುಟ್ಟಿದರೆ
ತಾನು ಪ್ರೀತಿಸದೆ ಇರುವ ಹೆಂಡತಿಯ ಚೊಚ್ಚಲಮಗನನ್ನು ಅವನು ಸ್ವೀಕರಿಸಬೇಕು. ಆ ಚೊಚ್ಚಲಮಗನಿಗೆ ಬೇರೆ ಮಕ್ಕಳಿಗಿಂತ ಎರಡು ಪಾಲು ಆಸ್ತಿಯನ್ನು ಕೊಡಬೇಕು. ಯಾಕೆಂದರೆ ಅವನು ನಿಮ್ಮ ಚೊಚ್ಚಲ ಮಗನು. ಚೊಚ್ಚಲ ಮಗನ ಹಕ್ಕು ಅವನಿಗೆ ಸೇರಿದ್ದು.
“ಒಬ್ಬ ಮನುಷ್ಯನಿಗೆ ಹಠಮಾರಿಯಾದ ಅವಿಧೇಯ ಮಗನಿರಬಹುದು. ಈ ಮಗನು ತಂದೆಯ ಮಾತನ್ನಾಗಲಿ ತಾಯಿಯ ಮಾತನ್ನಾಗಲಿ ಕೇಳದವನಾಗಿದ್ದರೆ ಅವನಿಗೆ ಅವರು ಶಿಕ್ಷೆ ಕೊಟ್ಟರೂ ಅವನು ಅವರಿಗೆ ವಿಧೇಯನಾಗದಿದ್ದರೆ, ಅವರ ಮಾತುಗಳನ್ನು ಕೇಳದಿದ್ದರೆ,
ಇಡೀ ರಾತ್ರಿ ಆ ಮರದಲ್ಲಿ ಅವನ ಶರೀರ ನೇತಾಡುವಂತೆ ಮಾಡಬಾರದು. ಅದೇ ದಿವಸದಲ್ಲಿ ಅವನ ಶವವು ಹೂಳಲ್ಪಡಬೇಕು. ಯಾಕೆಂದರೆ ಮರದಲ್ಲಿ ತೂಗುಹಾಕಲ್ಪಟ್ಟ ಮನುಷ್ಯನು ದೇವರಿಂದ ಶಪಿಸಲ್ಪಟ್ಟವನು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ನೀವು ಹೊಲಸು ಮಾಡಬೇಡಿರಿ.