1
|
ಮೋಶೆಯು ನೆಬೋ ಬೆಟ್ಟವನ್ನು ಹತ್ತಿದನು. ಅವನು ಮೋವಾಬಿನ ಜೋರ್ಡನ್ ಕಣಿವೆಯಿಂದ ಪಿಸ್ಗಾ ಬೆಟ್ಟದ ಮೇಲಕ್ಕೆ ಬಂದನು. ಇದು ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ಯೆರಿಕೋ ಊರಿನ ಎದುರಿನಲ್ಲಿದೆ. ಯೆಹೋವನು ಮೋಶೆಗೆ ಗಿಲ್ಯಾದಿನಿಂದ ದಾನ್ವರೆಗಿದ್ದ ಎಲ್ಲಾ ಪ್ರದೇಶವನ್ನು ತೋರಿಸಿದನು. |
2
|
ಮೋಶೆಗೆ ಯೆಹೋವನು ನಫ್ತಾಲಿ, ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳನ್ನು ತೋರಿಸಿದನು. ಯೆಹೂದ ಪ್ರಾಂತ್ಯವನ್ನು ಮೆಡಿಟರೇನಿಯನ್ ಸಮುದ್ರದವರೆಗೂ ತೋರಿಸಿದನು. |
3
|
ಯೆಹೋವನು ಮೋಶೆಗೆ ನೆಗೆವ್ ಮತ್ತು ಚೋಗರೂರಿನಿಂದ ಖರ್ಜೂರದ ಮರಗಳ ಪಟ್ಟಣವಾದ ಯೆರಿಕೋ ಪಟ್ಟಣದವರೆಗಿರುವ ಕಣಿವೆಯನ್ನು ತೋರಿಸಿದನು. |
4
|
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಈ ದೇಶವನ್ನು ನಾನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ವಾಗ್ದಾನ ಮಾಡಿದ್ದೇನೆ. ನಿಮ್ಮ ಸಂತತಿಯವರಿಗೆ ನಾನು ಈ ದೇಶವನ್ನು ಕೊಡುವೆನು ಎಂದು ಹೇಳಿದ್ದೆನು. ಆ ದೇಶವನ್ನು ನೀನು ನೋಡುವಂತೆ ಮಾಡಿದೆನು. ಆದರೆ ನೀನು ಅದರೊಳಗೆ ಪ್ರವೇಶಿಸುವುದಿಲ್ಲ.” |
5
|
ಮೋವಾಬ್ ದೇಶದಲ್ಲಿ ಯೆಹೋವನ ಸೇವಕನಾದ ಮೋಶೆಯು ಸತ್ತುಹೋದನು. ಯೆಹೋವನು ಅವನಿಗೆ ಹಾಗೆ ಆಗುತ್ತದೆಂದು ಮುಂಚೆಯೇ ತಿಳಿಸಿದ್ದನು. |
6
|
ಯೆಹೋವನು ಮೋಶೆಯನ್ನು ಮೋವಾಬ್ನಲ್ಲಿ ಹೂಳಿಟ್ಟನು. ಇದು ಬೇತ್ಪೆಗೋರ್ ತಗ್ಗಿಗೆ ಎದುರಾಗಿದೆ. ಆದರೆ ಮೋಶೆಯನ್ನು ಸಮಾಧಿಮಾಡಿದ ಸ್ಥಳವು ಇದುವರೆಗೆ ಯಾರಿಗೂ ಗೊತ್ತಾಗಲಿಲ್ಲ. |
7
|
ಮೋಶೆಯು ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನು ಸಾಯುವ ತನಕ ಬಲಶಾಲಿಯಾಗಿಯೇ ಇದ್ದನು. ಅವನ ಕಣ್ಣು ಮೊಬ್ಬಾಗಿರಲಿಲ್ಲ. |
8
|
ಇಸ್ರೇಲರು ಮೋಶೆಗಾಗಿ ಮೂವತ್ತು ದಿವಸಗಳ ತನಕ ಗೋಳಾಡಿದರು. ಶೋಕದ ದಿವಸಗಳು ಕಳೆಯುವ ತನಕ ಅವರು ಮೋವಾಬಿನಲ್ಲಿದ್ದ ಜೋರ್ಡನ್ ಕಣಿವೆಯಲ್ಲಿ ತಂಗಿದ್ದರು. |
9
|
ಮೋಶೆಯು ಯೆಹೋಶುವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ನಾಯಕನನ್ನಾಗಿ ನೇಮಿಸಿದನು. ಆಗ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮನಿಂದ ತುಂಬಲ್ಪಟ್ಟವನಾದನು. ಇಸ್ರೇಲಿನ ಜನರು ಯೆಹೋಶುವನಿಗೆ ವಿಧೇಯರಾದರು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರೇಲರು ಮಾಡಿದರು. |
10
|
ಮೋಶೆಯಂತ ಪ್ರವಾದಿಯು ಇಸ್ರೇಲರಿಗೆ ದೊರೆಯಲೇ ಇಲ್ಲ. ಯೆಹೋವನು ಅವನೊಂದಿಗೆ ಮುಖಾಮುಖಿಯಾಗಿ ಮಾತನಾಡಿದನು. |
11
|
ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡುವುದಕ್ಕಾಗಿ ಯೆಹೋವನು ಮೋಶೆಯನ್ನು ಕಳುಹಿಸಿದನು. ಅದನ್ನು ಫರೋಹನೂ ಅವನ ಪರಿವಾರದವರೂ ಅಧಿಕಾರಿಗಳೆಲ್ಲರೂ ನೋಡಿದರು. |
12
|
ಯಾವ ಪ್ರವಾದಿಯೂ ಮೋಶೆ ಮಾಡಿದ ಸೂಚಕಕಾರ್ಯಗಳನ್ನು ಮಾಡಲಿಲ್ಲ. ಇಸ್ರೇಲಿನ ಎಲ್ಲಾ ಜನರು ಮೋಶೆ ಮಾಡಿದ್ದನ್ನು ನೋಡಿದ್ದರು. |
Deuteronomy 34:1 Kannada Language Bible Words basic statistical display
COMING SOON ...