English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Deuteronomy Chapters

Deuteronomy 6 Verses

1 “ನಿಮ್ಮದೇವರಾದ ಯೆಹೋವನು ನಿಮಗೆ ಉಪದೇಶಿಸಲೆಂದು ನನಗೆ ಕೊಟ್ಟ ಆಜ್ಞೆಗಳು, ಕಟ್ಟಳೆಗಳು ಮತ್ತು ನಿಯಮಗಳು ಇವೇ. ನೀವು ವಾಸಮಾಡಲು ಪ್ರವೇಶಿಸಲಿರುವ ದೇಶದಲ್ಲಿ ಅವುಗಳನ್ನು ಪಾಲಿಸಿರಿ.
2 ನೀವೂ ಮತ್ತು ನಿಮ್ಮ ಸಂತತಿಯವರೂ ಜೀವಿಸುವ ದಿನಗಳಲ್ಲೆಲ್ಲಾ ದೇವರಾದ ಯೆಹೋವನನ್ನು ಗೌರವಿಸಬೇಕು. ನಾನೀಗ ಕೊಡುವ ಎಲ್ಲಾ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸಬೇಕು. ಹಾಗೆ ಮಾಡಿದ್ದಲ್ಲಿ ನೀವು ನೆಲೆಸುವ ಜಾಗದಲ್ಲಿ ನೀವು ಬಹುಕಾಲ ಜೀವಿಸುವಿರಿ.
3 ಇಸ್ರೇಲಿನ ಜನರೇ, ಕಿವಿಗೊಟ್ಟು ಕೇಳಿರಿ. ದೇವರ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನಿಮಗೆ ಎಲ್ಲಾದರಲ್ಲಿ ಶುಭವಾಗುವುದು. ನಿಮಗೆ ಹೆಚ್ಚು ಮಕ್ಕಳಾಗುವವು. ನೀವು ನೆಲೆಸುವ ದೇಶವು ನಿಮ್ಮ ಪೂರ್ವಿಕರಿಗೆ ದೇವರು ವಾಗ್ದಾನ ಮಾಡಿದ ಪ್ರಕಾರ ಫಲಭರಿತವಾಗುವುದು.
4 “ಇಸ್ರೇಲಿನ ಜನರೇ, ಕಿವಿಗೊಡಿರಿ. ಯೆಹೋವನೇ ನಮ್ಮ ದೇವರು. ದೇವರು ಒಬ್ಬನೇ!
5 ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.
6 ನಾನೀಗ ಕೊಡುವ ಆಜ್ಞೆಗಳನ್ನು ಯಾವಾಗಲೂ ನಿಮ್ಮ ಜ್ಞಾಪದಲ್ಲಿಟ್ಟುಕೊಂಡಿರಿ.
7 ನಿಮ್ಮ ಮಕ್ಕಳಿಗೆ ಇದನ್ನು ಕಲಿಸಲು ಮರೆಯಬೇಡಿರಿ. ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ರಸ್ತೆಗಳಲ್ಲಿ ನಡೆಯುತ್ತಿರುವಾಗ, ನೀವು ಮಲಗಿರುವಾಗ, ಎದ್ದಾಗ ಈ ಆಜ್ಞೆಗಳ ಕುರಿತಾಗಿ ಮಾತಾಡಿಕೊಳ್ಳಿರಿ.
8 ಈ ಆಜ್ಞೆಗಳನ್ನು ಬರೆದು ನಿಮ್ಮ ಕೈಗಳಿಗೆ ಕಟ್ಟಿರಿ, ನಿಮ್ಮ ಹಣೆಗಳ ಮೇಲೆ ಕಟ್ಟಿರಿ. ಇವು ನನ್ನ ಬೋಧನೆಯ ವಿಚಾರವಾಗಿ ನಿಮಗೆ ಜ್ಞಾಪಕ ಹುಟ್ಟಿಸಲು ಸಹಾಯವಾಗುವುದು.
9 ಅವುಗಳನ್ನು ನಿಮ್ಮ ಬಾಗಿಲಿನ ಮೇಲೆಯೂ ನಿಲುವುಪಟ್ಟಿಗಳ ಮೇಲೆಯೂ ಬರೆಯಿರಿ.
10 “ದೇವರಾದ ಯೆಹೋವನು ನಮಗೆ ಈ ದೇಶವನ್ನು ಕೊಡುವುದಾಗಿ ನಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ ಮತ್ತು ಯಾಕೋಬನಿಗೆ ವಾಗ್ದಾನ ಮಾಡಿದ್ದನು. ಈಗ ಆ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. ಅದರಲ್ಲಿರುವ ದೊಡ್ಡದೊಡ್ಡ ನಗರಗಳನ್ನು ನೀವು ಕೈಯಿಂದ ಕಟ್ಟಲಿಲ್ಲ.
11 ನೀವು ಕೂಡಿಸಿಡದ ಉತ್ತಮ ವಸ್ತುಗಳಿಂದ ತುಂಬಿರುವ ಮನೆಗಳನ್ನು ಯೆಹೋವನು ನಿಮಗೆ ಕೊಡುತ್ತಾನೆ. ನೀವು ತೋಡದಿರುವ ಬಾವಿಗಳನ್ನು ನಿಮಗೆ ಕೊಡುವನು. ನೀವು ನೆಡದಿರುವ ದ್ರಾಕ್ಷಾತೋಟಗಳನ್ನೂ ಎಣ್ಣೆಮರಗಳ ತೋಪುಗಳನ್ನೂ ನಿಮಗೆ ಕೊಡುವನು. ನಿಮಗೆ ತಿನ್ನಲು ಯಾವ ಕೊರತೆಯೂ ಇರುವುದಿಲ್ಲ.
12 “ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಿ ಆತನನ್ನೇ ಸೇವಿಸಿರಿ. ಆತನನ್ನು ಮರೆತುಬಿಡಬೇಡಿರಿ. ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಾಗ ಆತನೇ ನಿಮ್ಮನ್ನು ವಿಮೋಚಿಸಿದನಲ್ಲಾ?
13 ಆತನ ಹೆಸರಿನಲ್ಲಿಯೇ ವಾಗ್ದಾನಗಳನ್ನು ಮಾಡಿರಿ; ಅನ್ಯ ದೇವರ ಹೆಸರಿನಲ್ಲಿ ಮಾಡಕೂಡದು.
14 ಇತರ ದೇವರುಗಳನ್ನು ಅವಲಂಭಿಸಬಾರದು. ನಿಮ್ಮ ಸುತ್ತಲೂ ಇರುವವರ ದೇವರುಗಳನ್ನು ಪೂಜಿಸಬಾರದು.
15 ನಿಮ್ಮ ದೇವರಾದ ಯೆಹೋವನು ಯಾವಾಗಲೂ ನಿಮ್ಮ ಜೊತೆಯಲ್ಲಿರುವನು. ಸುಳ್ಳುದೇವರನ್ನು ಪೂಜಿಸುವವರನ್ನು ಯೆಹೋವನು ದ್ವೇಷಿಸುವುದರಿಂದ ಅವರನ್ನು ಈ ಲೋಕದಿಂದ ಅಳಿಸಿಬಿಡುವನು.
16 “ಮಸ್ಸಾದಲ್ಲಿ ನೀವು ನಿಮ್ಮ ದೇವರನ್ನು ಪರೀಕ್ಷಿಸಿದಂತೆ ಆತನನ್ನು ಪರೀಕ್ಷಿಸಬಾರದು.
17 ಆತನ ಆಜ್ಞೆಗಳಿಗೆ ವಿಧೇಯರಾಗಿರಲು ಎಚ್ಚರದಿಂದಿರಬೇಕು. ಆತನು ನಿಮಗೆ ಕೊಟ್ಟ ವಿಧಿನಿಯಮಗಳನ್ನು ಪರಿಪಾಲಿಸಲು ತಯಾರಾಗಿರಬೇಕು.
18 ಯೋಗ್ಯವಾದವುಗಳನ್ನು, ಸರಿಯಾದವುಗಳನ್ನು ಮತ್ತು ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡಬೇಕು. ಆಗ ನಿಮ್ಮ ಕಾರ್ಯಗಳೆಲ್ಲವೂ ಸಫಲವಾಗುವುವು. ಅಲ್ಲದೆ ಯೆಹೋವನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದೊಳಗೆ ನೀವು ಹೋಗಿ ಅದನ್ನು ವಶಪಡಿಸಿಕೊಳ್ಳಬಹುದು.
19 ಯೆಹೋವನು ಹೇಳಿದಂತೆಯೇ, ಅಲ್ಲಿ ವಾಸವಾಗಿರುವ ನಿಮ್ಮ ವೈರಿಗಳನ್ನೆಲ್ಲಾ ಹೊರಗಟ್ಟುವಿರಿ.
20 “ಮುಂದಿನ ದಿನಗಳಲ್ಲಿ ನಿಮ್ಮ ಮಕ್ಕಳು ನಿಮಗೆ ಈ ಪ್ರಶ್ನೆ ಕೇಳಬಹುದು: ‘ಯೆಹೋವದೇವರು ನಮಗೆ ನ್ಯಾಯವಿಧಿ, ನಿಯಮಗಳನ್ನು ಕೊಟ್ಟಿರುತ್ತಾನೆ. ಇವುಗಳ ಅರ್ಥವೇನು?’
21 ಆಗ ನೀವು ಹೀಗೆ ಉತ್ತರಿಸಬೇಕು: ‘ನಾವು ಈಜಿಪ್ಟಿನಲ್ಲಿ ಫರೋಹನ ಗುಲಾಮರಾಗಿದ್ದೆವು. ಆದರೆ ನಮ್ಮ ದೇವರಾದ ಯೆಹೋವನು ತನ್ನ ಪರಾಕ್ರಮದಿಂದ ನಮ್ಮನ್ನು ಬಿಡುಗಡೆ ಮಾಡಿದನು.
22 ಯೆಹೋವನು ಈಜಿಪ್ಟಿನವರನ್ನೂ ಫರೋಹನನ್ನೂ ಅವನ ಪರಿವಾರದವರನ್ನೂ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಮಹತ್ಕಾರ್ಯಗಳಿಂದಲೂ ಭಯಂಕರ ಕಾರ್ಯಗಳಿಂದಲೂ ಬಾಧಿಸಿದನು.
23 ಯೆಹೋವನು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನದಂತೆ ನಮಗೆ ಆ ದೇಶವನ್ನು ಕೊಡುವುದಕ್ಕಾಗಿ ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು.
24 ಈ ಉಪದೇಶಗಳನ್ನೆಲ್ಲಾ ಅನುಸರಿಸಬೇಕೆಂದು ಯೆಹೋವನು ನಮಗೆ ಆಜ್ಞಾಪಿಸಿದ್ದಾನೆ. ನಮ್ಮ ದೇವರಾದ ಯೆಹೋವನನ್ನು ನಾವು ಗೌರವಿಸತಕ್ಕದ್ದು. ಆಗ ಇಂದಿನಂತೆ ಯೆಹೋವನು ನಮ್ಮನ್ನು ಜೀವಂತವಾಗಿರಿಸಿ ನಮಗೆ ಒಳ್ಳೆಯದನ್ನು ಮಾಡುತ್ತಾನೆ.
25 ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ, ಇಡೀ ಧರ್ಮಶಾಸ್ತ್ರಕ್ಕೆ ನಾವು ಚಾಚೂತಪ್ಪದೆ ಎಚ್ಚರಿಕೆಯಿಂದ ವಿಧೇಯರಾದರೆ, ನಾವು ಒಳ್ಳೆಯದನ್ನು ಮಾಡಿದೆವೆಂದು ದೇವರು ಹೇಳುತ್ತಾನೆ.’
×

Alert

×