1
|
ದಾವೀದನ ಮಗನೂ ಜೆರುಸಲೇಮಿನಲ್ಲಿ ಆಳುತ್ತಿದ್ದ ರಾಜನೂ ಆಗಿದ್ದ ಪ್ರಸಂಗಿಯ ಮಾತುಗಳು. ಪ್ರಸಂಗಿಯು ಹೇಳುವುದೇನೆಂದರೆ, |
2
|
ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ! |
3
|
ಈ ಲೋಕದಲ್ಲಿ ಮನುಷ್ಯರು ಪಡುವ ಪ್ರಯಾಸದಿಂದ ಅವರಿಗೇನು ಲಾಭ? |
4
|
ಒಂದು ತಲೆಮಾರು ಹೋಗಿ ಮತ್ತೊಂದು ತಲೆಮಾರು ಬರುವುದು. ಆದರೆ ಭೂಮಿ ಎಂದೆಂದಿಗೂ ಮುಂದುವರಿಯುವುದು. |
5
|
ಸೂರ್ಯನು ಏರುವನು ಮತ್ತು ಇಳಿಯುವನು; ಬಳಿಕ ಅದೇ ಸ್ಥಳದಲ್ಲಿ ಮತ್ತೆ ಏರಲು ಅವಸರಪಡುವನು. |
6
|
ಗಾಳಿಯು ದಕ್ಷಿಣಕ್ಕೆ ಬೀಸುವುದು; ನಂತರ ಉತ್ತರಕ್ಕೆ ತಿರುಗಿಕೊಳ್ಳುವುದು; ಅದು ತಿರುತಿರುಗುತ್ತಾ ಹೋಗಿ ತಿರುತಿರುಗುತ್ತಾ ಬರುವುದು. |
7
|
ನದಿಗಳು ಎಲ್ಲಿಗೆ ಹರಿದುಹೋಗುತ್ತವೋ ಅಲ್ಲಿಗೇ ತಿರಿಗಿ ಹೋಗುವವು. ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತಲೇ ಇರುತ್ತವೆ; ಆದರೂ ಸಮುದ್ರವು ತುಂಬುವುದಿಲ್ಲ. |
8
|
ಮಾತುಗಳಿಂದ ಯಾವುದನ್ನೂ ಸಂಪೂರ್ಣವಾಗಿ ವಿವರಿಸಲು ಸಾಧ್ಯವಿಲ್ಲ; ಆದರೂ ಜನರು ಮಾತಾಡುತ್ತಲೇ ಇರುವರು. ನಮ್ಮ ಕಿವಿಗಳು ಮಾತುಗಳನ್ನು ಕೇಳುತ್ತಲೇ ಇರುತ್ತವೆ; ಆದರೂ ನಮ್ಮ ಕಿವಿಗಳು ತುಂಬುವುದಿಲ್ಲ. ನಮ್ಮ ಕಣ್ಣುಗಳು ನೋಡುತ್ತಲೇ ಇರುತ್ತವೆ; ಆದರೂ ಅವು ತುಂಬುವುದಿಲ್ಲ. |
9
|
ಇದ್ದದ್ದೇ ಇರುವುದು; ನಡೆದದ್ದೇ ನಡೆಯುವುದು. ಲೋಕದಲ್ಲಿ ಹೊಸದೇನೂ ಇಲ್ಲ. |
10
|
“ಇಗೋ, ಇದು ಹೊಸದು!” ಎಂದು ಒಬ್ಬನು ಹೇಳಬಹುದು. ಆದರೆ ಅದು ಸಹ ಮೊದಲಿಂದ ಇಲ್ಲಿ ಇದ್ದದ್ದೇ. ನಮಗಿಂತ ಮೊದಲೇ ಅದು ಇಲ್ಲಿತ್ತು. |
11
|
ಬಹುಕಾಲದ ಹಿಂದಿನ ಘಟನೆಗಳನ್ನು ಜನರು ಜ್ಞಾಪಿಸಿಕೊಳ್ಳುವುದಿಲ್ಲ. ಈಗ ನಡೆಯುತ್ತಿರುವ ಸಂಗತಿಗಳನ್ನು ಮುಂದಿನ ಕಾಲದ ಜನರು ಜ್ಞಾಪಿಸಿಕೊಳ್ಳುವುದಿಲ್ಲ, ಹೀಗೆ, ತಮಗಿಂತ ಮುಂಚೆ ಇದ್ದವರು ಮಾಡಿದ್ದನ್ನು ಜನರು ಜ್ಞಾಪಿಸಿಕೊಳ್ಳುವುದಿಲ್ಲ. |
12
|
ಪ್ರಸಂಗಿಯಾದ ನಾನು ಜೆರುಸಲೇಮಿನಲ್ಲಿ ಇಸ್ರೇಲರಿಗೆ ರಾಜನಾಗಿದ್ದೆನು. |
13
|
ಈ ಜೀವಿತದ ಎಲ್ಲಾ ವಿಷಯಗಳನ್ನು ಜ್ಞಾನದಿಂದ ವಿಮರ್ಶಿಸಿ ಕಲಿತುಕೊಳ್ಳಲು ನಿರ್ಧರಿಸಿದೆನು. ದೇವರು ಮನುಷ್ಯರಿಗೆ ಕೊಟ್ಟಿರುವ ಕೆಲಸವೆಲ್ಲ ಬಹು ಪ್ರಯಾಸವೇ. |
14
|
ಈ ಲೋಕದ ಕೆಲಸಗಳನ್ನೆಲ್ಲ ನೋಡಿದಾಗ ಅವೆಲ್ಲ ಕೇವಲ ವ್ಯರ್ಥವೆಂದು ಕಂಡುಕೊಂಡೆನು. ಅವು ಗಾಳಿಯನ್ನು ಹಿಡಿಯಲು ಪ್ರಯತ್ನಿಸಿದಷ್ಟೇ ವ್ಯರ್ಥವಾಗಿವೆ. |
15
|
ವಕ್ರವಾದದ್ದನ್ನು ನೆಟ್ಟಗೆ ಮಾಡಲು ಸಾಧ್ಯವಿಲ್ಲ. ಇಲ್ಲದ್ದನ್ನು ಲೆಕ್ಕಿಸುವುದಕ್ಕೂ ಸಾಧ್ಯವಿಲ್ಲ. |
16
|
ನಾನು ಮನಸ್ಸಿನಲ್ಲಿ, “ನಾನು ಬಹು ಜ್ಞಾನಿ. ನನಗಿಂತ ಮೊದಲು ಜೆರುಸಲೇಮನ್ನು ಆಳಿದ ಏಲ್ಲಾ ರಾಜರುಗಳಿಗಿಂತ ನಾನು ಜ್ಞಾನಿ. ನಾನು ಜ್ಞಾನವನ್ನೂ ವಿವೇಕವನ್ನೂ ಚೆನ್ನಾಗಿ ತಿಳಿದುಕೊಂಡಿರುವೆ” ಎಂದುಕೊಂಡೆನು. |
17
|
ಜ್ಞಾನವನ್ನಲ್ಲದೆ ಮೂಢತನವನ್ನೂ ಬುದ್ಧಿಹೀನತೆಯನ್ನೂ ಗ್ರಹಿಸಿಕೊಳ್ಳಲು ನಿರ್ಧರಿಸಿದೆನು. ಆದರೆ ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೆಂದು ಕಲಿತುಕೊಂಡೆನು. |
18
|
ಬಹು ಜ್ಞಾನದಿಂದ ಬಹು ಸಂಕಟ; ಹೆಚ್ಚು ತಿಳುವಳಿಕೆಯಿಂದ ಹೆಚ್ಚು ದುಃಖ. “ಸುಖವು” ನೀತಿಮಾರ್ಗಕ್ಕೆ ನಡೆಸುವುದೇ? |
Ecclesiastes 1:11 Kannada Language Bible Words basic statistical display
COMING SOON ...