1
|
ನೀನು ಹೋದಲ್ಲೆಲ್ಲಾ ಒಳ್ಳೆಯದನ್ನೇ ಮಾಡು. ಸ್ವಲ್ಪಕಾಲದ ಮೇಲೆ, ನಿನ್ನ ಸತ್ಕ್ರಿಯೆಗಳ ಫಲವನ್ನು ಹೊಂದಿಕೊಳ್ಳುವೆ. |
2
|
ನಿನ್ನಲ್ಲಿರುವುದನ್ನೆಲ್ಲ ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸು; ಲೋಕಕ್ಕೆ ಮುಂದೆ ಸಂಭವಿಸುವ ಕೇಡು ನಿನಗೆ ತಿಳಿಯದು. |
3
|
ಮೋಡಗಳು ನೀರಿನಿಂದ ತುಂಬಿದ್ದರೆ, ಅವು ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತವೆ. ಮರವು ದಕ್ಷಿಣಕ್ಕಾಗಲಿ ಉತ್ತರಕ್ಕಾಗಲಿ ಬಿದ್ದರೆ, ಅದು ತಾನು ಬಿದ್ದಲ್ಲಿಯೇ ಇರುವುದು. |
4
|
ಒಳ್ಳೆಯ ಹವಾಮಾನಕ್ಕಾಗಿ ಕಾದುಕೊಂಡಿರುವವನು ಬೀಜ ಬಿತ್ತುವುದಿಲ್ಲ; ಮಳೆ ಬರಬಹುದೆಂದು ಮೋಡವನ್ನು ನೋಡುತ್ತಿರುವವನು ಪೈರು ಕೊಯ್ಯನು. |
5
|
ಗಾಳಿಯ ಬೀಸುವಿಕೆಯನ್ನೂ ತನ್ನ ತಾಯಿಯ ಗರ್ಭದಲ್ಲಿ ಮಗುವಿನ ಎಲುಬು ಬೆಳೆಯುವ ರೀತಿಯನ್ನೂ ನೀನು ಹೇಗೆ ತಿಳಿದಿಲ್ಲವೊ ಅದೇರೀತಿಯಲ್ಲಿ ಸೃಷ್ಟಿಕರ್ತನ ಕಾರ್ಯಗಳನ್ನು ನೀನು ಅರಿತುಕೊಳ್ಳಲಾರೆ. |
6
|
ಆದ್ದರಿಂದ ಮುಂಜಾನೆಯಲ್ಲಿ ಬೀಜಬಿತ್ತಲು ಆರಂಭಿಸು; ಸಾಯಂಕಾಲದತನಕ ಕೆಲಸಮಾಡುವುದನ್ನು ನಿಲ್ಲಿಸಬೇಡ, ಯಾಕೆಂದರೆ ಇದು ಸಫಲವಾಗುವುದೋ ಅದು ಸಫಲವಾಗುವುದೋ ಒಂದುವೇಳೆ ಎರಡೂ ಸಫಲವಾಗುವುದೋ ನಿನಗೆ ತಿಳಿಯದು. |
7
|
ಬೆಳಕು ಹಿತ! ಸೂರ್ಯನ ಬೆಳಕು ನೋಡಲು ಚೆಂದ. |
8
|
ನಿನ್ನ ಜೀವನದ ಪ್ರತಿಯೊಂದು ದಿನದಲ್ಲಿಯೂ ಆನಂದಿಸು. ನೀನು ಎಷ್ಟುಕಾಲ ಬದುಕುವೆ ಎಂಬುದು ಮುಖ್ಯವಲ್ಲ. ಆದರೆ ಕತ್ತಲೆಯ ದಿನಗಳು ಬಹಳವೆಂದು ಜ್ಞಾಪಕದಲ್ಲಿಟ್ಟುಕೊ. ಮುಂದೆ ಸಂಭವಿಸುವುದೆಲ್ಲಾ ವ್ಯರ್ಥವೇ. |
9
|
ಆದ್ದರಿಂದ ಯೌವನಸ್ಥರೇ, ನಿಮ್ಮ ಯೌವನ ಕಾಲದಲ್ಲಿ ಆನಂದಿಸಿರಿ! ಸಂತೋಷವಾಗಿರಿ! ನಿಮ್ಮ ಹೃದಯವು ನಿಮ್ಮನ್ನು ನಡೆಸಿದಂತೆ ಮಾಡಿರಿ. ನೀವು ಬಯಸುವುದನ್ನೆಲ್ಲಾ ಮಾಡಿರಿ. ಆದರೆ ನೀವು ಮಾಡುವ ಪ್ರತಿಯೊಂದಕ್ಕೂ ದೇವರು ನಿಮಗೆ ನ್ಯಾಯತೀರಿಸುವನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ. |
10
|
ನಿಮ್ಮ ಕೋಪವು ನಿಮ್ಮನ್ನು ಹತೋಟಿಯಲ್ಲಿಡದಂತೆ ನೋಡಿಕೊಳ್ಳಿರಿ. ನಿಮ್ಮ ದೇಹವು ನಿಮ್ಮನ್ನು ಪಾಪಕ್ಕೆ ನಡೆಸದಂತೆ ನೋಡಿಕೊಳ್ಳಿರಿ. ಜನರು ಯೌವನಪ್ರಾಯದಲ್ಲಿರುವಾಗ, ಜೀವನದ ಆರಂಭದಲ್ಲಿಯೇ ಮೂಢಕಾರ್ಯಗಳನ್ನು ಮಾಡುವರು. |
Ecclesiastes 11:1 Kannada Language Bible Words basic statistical display
COMING SOON ...