1
|
ನಾನು ನನ್ನ ಹೃದಯದಲ್ಲಿ, “ಬಾ, ನಿನ್ನನ್ನು ಸುಖದ ಮೂಲಕ ಪರೀಕ್ಷಿಸುವೆನು; ಆಗ ನೀನು ನೀತಿ ಮಾರ್ಗವನ್ನು ಕಲಿತುಕೊಳ್ಳುವೆ” ಎಂದುಕೊಂಡೆನು. ಆದರೆ ಇದು ಸಹ ವ್ಯರ್ಥವೆಂದು ಕಂಡುಕೊಂಡೆನು. |
2
|
ನಗೆಯು ಹುಚ್ಚುತನ. ಸುಖದಿಂದ ಪ್ರಯೋಜನವೇನು? ಅಂದುಕೊಂಡೆನು. |
3
|
ಮನುಷ್ಯರು ತಮ್ಮ ಕ್ಷಣಿಕ ಜೀವಮಾನದಲ್ಲಿ ಮಾಡತಕ್ಕ ಒಳ್ಳೆಯದನ್ನು ತಿಳಿದುಕೊಳ್ಳಬೇಕೆಂದು ನನ್ನ ಮನಸ್ಸನ್ನು ಜ್ಞಾನದಿಂದ ತುಂಬಿಸಿದೆ; ದೇಹವನ್ನು ದ್ರಾಕ್ಷಾರಸದಿಂದ ತುಂಬಿಸಿದೆ; ಮೂಢತನವನ್ನು ಅವಲಂಭಿಸಿಕೊಂಡೆ. |
4
|
ದೊಡ್ಡ ಕಾರ್ಯಗಳನ್ನು ಮಾಡಲಾರಂಭಿಸಿದೆ; ನನಗೋಸ್ಕರ ಮನೆಗಳನ್ನು ಕಟ್ಟಿಸಿದೆ; ದ್ರಾಕ್ಷಾತೋಟಗಳನ್ನು ಮಾಡಿಸಿದೆ; |
5
|
ತೋಟಗಳನ್ನೂ ಉದ್ಯಾನವನಗಳನ್ನೂ ಮಾಡಿಸಿದೆ; ಎಲ್ಲಾ ಬಗೆಯ ಹಣ್ಣಿನ ಮರಗಳನ್ನು ನೆಡಿಸಿದೆ. |
6
|
ನೀರಿನ ಕೊಳಗಳನ್ನು ಮಾಡಿಸಿ ಮರಗಳಿಗೆ ನೀರನ್ನು ಹಾಯಿಸಿದೆ. |
7
|
ಪುರುಷರನ್ನೂ ಸ್ತ್ರೀಯರನ್ನೂ ಗುಲಾಮರನ್ನಾಗಿ ಕೊಂಡುಕೊಂಡೆ. ನನ್ನ ಮನೆಯಲ್ಲೇ ಹುಟ್ಟಿದ ಗುಲಾಮರೂ ನನಗಿದ್ದರು. ನನಗೆ ದನದ ಹಿಂಡುಗಳೂ ಕುರಿಮಂದೆಗಳೂ ಇದ್ದವು. ಜೆರುಸಲೇಮಿನಲ್ಲಿ ಇದ್ದವರೆಲ್ಲರಿಗಿಂತಲೂ ಹೆಚ್ಚು ವಸ್ತುಗಳನ್ನು ನಾನು ಪಡೆದಿದ್ದೆ. |
8
|
ಇದಲ್ಲದೆ ಬೆಳ್ಳಿಬಂಗಾರಗಳನ್ನು ನನಗೋಸ್ಕರ ಸಂಗ್ರಹಿಸಿದೆ; ರಾಜರುಗಳಿಂದಲೂ ಅವರ ದೇಶಗಳಿಂದಲೂ ಭಂಡಾರಗಳನ್ನು ತೆಗೆದುಕೊಂಡೆ. ನನಗೋಸ್ಕರ ಹಾಡಲು ಗಾಯಕಗಾಯಕಿಯರಿದ್ದರು. ನನ್ನನ್ನು ಸಂತೋಷಪಡಿಸಲು ಅನೇಕ ಉಪಪತ್ನಿಯರಿದ್ದರು. ಮನುಷ್ಯನು ಬಯಸಬಹುದಾದ ಪ್ರತಿಯೊಂದನ್ನೂ ನಾನು ಪಡೆದಿದ್ದೆ. |
9
|
ನಾನು ಬಹು ಐಶ್ವರ್ಯವಂತನಾದೆ; ಪ್ರಸಿದ್ಧನಾದೆ. ನನಗಿಂತ ಮೊದಲು ಜೆರುಸಲೇಮಿನಲ್ಲಿದ್ದ ಎಲ್ಲರಿಗಿಂತಲೂ ನಾನು ದೊಡ್ಡವನಾದೆ. ನನಗೆ ಸಹಾಯಕ್ಕಾಗಿ ಯಾವಾಗಲೂ ನನ್ನಲ್ಲಿ ಜ್ಞಾನವಿತ್ತು. |
10
|
ನನ್ನ ಕಣ್ಣುಗಳು ಬಯಸಿದ್ದನ್ನೆಲ್ಲ ನನಗೋಸ್ಕರ ಪಡೆದುಕೊಂಡೆನು. ಯಾವುದೇ ಸುಖದಿಂದಾಗಲಿ ನನ್ನ ಹೃದಯವನ್ನು ನಾನು ತಡೆಹಿಡಿಯಲಿಲ್ಲ; ಯಾಕಂದರೆ ನನ್ನ ಕಾರ್ಯಗಳಲ್ಲಿ ನನ್ನ ಹೃದಯವು ಸಂತೋಷಗೊಂಡಿತ್ತು. ನನ್ನ ಪ್ರಯಾಸದ ಫಲವು ಅದೊಂದೇ. |
11
|
ನನ್ನ ಕಾರ್ಯಗಳನ್ನೂ ನನ್ನ ಪ್ರಯಾಸವನ್ನೂ ಆಲೋಚಿಸಿದೆ. ಗಾಳಿಯನ್ನು ಹಿಂದಟ್ಟಿದ ಹಾಗೆ ಅದೆಲ್ಲಾ ವ್ಯರ್ಥವೆಂದು ಕಂಡುಕೊಂಡೆ. ನಮ್ಮ ಈ ಜೀವಮಾನದ ಯಾವ ಕೆಲಸಗಳಿಂದಲೂ ಲಾಭವಿಲ್ಲ. |
12
|
ರಾಜನಿಗಿಂತ ಹೆಚ್ಚಾಗಿ ಮಾಡಲು ಬೇರೆ ಯಾರಿಗೂ ಸಾಧ್ಯವಿಲ್ಲ. ನೀನು ಮಾಡಬೇಕೆನ್ನುವುದನ್ನು ನಿನಗಿಂತ ಮೊದಲೇ ಬೇರೊಬ್ಬ ರಾಜನು ಮಾಡಿರುತ್ತಾನೆ; ಆದ್ದರಿಂದ ರಾಜನ ಕಾರ್ಯಗಳು ಸಹ ವ್ಯರ್ಥವೆಂದು ಕಂಡುಕೊಂಡೆನು. ಆದ್ದರಿಂದ ನಾನು ಜ್ಞಾನವನ್ನೂ ಮೂಢತನವನ್ನೂ ಬುದ್ಧಿಹೀನತೆಯನ್ನೂ ಮತ್ತೆ ಮತ್ತೆ ಆಲೋಚಿಸಿದೆನು. |
13
|
ಆಗ ಬೆಳಕು ಕತ್ತಲೆಗಿಂತ ಉತ್ತಮವಾಗಿರುವಂತೆ ಜ್ಞಾನವು ಮೂಢತನಕ್ಕಿಂತ ಉತ್ತಮವಾಗಿದೆ ಎಂಬುದನ್ನು ಅರಿತುಕೊಂಡೆನು. |
14
|
ಅದು ಈ ರೀತಿಯಿದೆ: ಜ್ಞಾನಿಯು ತನ್ನ ಮಾರ್ಗವನ್ನು ತಿಳಿದುಕೊಳ್ಳಲು ತನ್ನ ಮನಸ್ಸನ್ನು ಕಣ್ಣುಗಳಂತೆ ಉಪಯೋಗಿಸುವನು. ಮೂಢನಾದರೊ ಕತ್ತಲೆಯಲ್ಲಿ ನಡೆದು ಹೋಗುವನು. ಆದರೆ ಜ್ಞಾನಿಗೂ ಮೂಢನಿಗೂ ಒಂದೇ ಗತಿಯೆಂದು ಕಂಡುಕೊಂಡೆನು; ಅವರಿಬ್ಬರೂ ಸಾಯುವರು. |
15
|
ನಾನು ನನ್ನೊಳಗೆ, “ಮೂಢನಿಗೆ ಸಂಭವಿಸುವ ಗತಿಯು ನನಗೂ ಸಂಭವಿಸುವುದು. ಹೀಗಿರಲು ಜ್ಞಾನಿಯಾಗಲು ನಾನೇಕೆ ಪ್ರಯಾಸಪಡಬೇಕು? ಇದೂ ವ್ಯರ್ಥವಲ್ಲವೇ?” ಅಂದುಕೊಂಡೆನು. |
16
|
ಯಾಕೆಂದರೆ ಮೂಢನು ಸಾಯುವಂತೆ ಜ್ಞಾನಿಯೂ ಸಾಯುವುದರಿಂದ ಜನರು ಜ್ಞಾನಿಯನ್ನಾಗಲಿ ಮೂಢನನ್ನಾಗಲಿ ಸದಾಕಾಲ ಜ್ಞಾಪಿಸಿಕೊಳ್ಳುವುದಿಲ್ಲ. ಅವರ ಕಾರ್ಯಗಳನ್ನು ಮುಂದಿನ ಕಾಲದ ಜನರು ಮರೆತು ಬಿಡುವರು. ಆದ್ದರಿಂದ ಜ್ಞಾನಿಗೂ ಮೂಢನಿಗೂ ಯಾವ ವ್ಯತ್ಯಾಸವೂ ಇಲ್ಲ. |
17
|
ಈ ಲೋಕದ ಕಾರ್ಯಗಳೆಲ್ಲಾ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೆಂದು ನನಗೆ ಕಂಡು ಬಂದುದ್ದರಿಂದ ಜೀವನವೇ ನನಗೆ ಅಸಹ್ಯವಾಯಿತು. |
18
|
ನನ್ನ ಪ್ರಯಾಸದ ಫಲವನ್ನು ನನ್ನ ತರುವಾಯ ಬೇರೆಯವರು ಪಡೆದುಕೊಳ್ಳುವುದರಿಂದ ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು. |
19
|
ನಾನು ಜ್ಞಾನವನ್ನೂ ಪ್ರಯಾಸವನ್ನೂ ಯಾವುದರಲ್ಲಿ ವಿನಿಯೋಗಿಸಿದ್ದೇನೋ ಅದರ ಮೇಲೆ ಬೇರೊಬ್ಬನು ದೊರೆತನ ಮಾಡುವನು. ಅವನು ಜ್ಞಾನಿಯೋ ಮೂಢನೋ ನನಗೆ ಗೊತ್ತಿಲ್ಲ. ಇದೂ ವ್ಯರ್ಥವೇ. |
20
|
ಆದ್ದರಿಂದ, ನಾನು ಈ ಲೋಕದಲ್ಲಿ ಪ್ರಯಾಸಪಟ್ಟ ಕೆಲಸಗಳ ಬಗ್ಗೆ ವ್ಯಸನಗೊಂಡೆನು. |
21
|
ಒಬ್ಬನು ತನ್ನ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ಕಾರ್ಯವನ್ನು ಸಫಲಗೊಳಿಸಿದ ಮೇಲೆ ಅದರ ಫಲವನ್ನು ಪ್ರಯಾಸಪಡದ ಬೇರೊಬ್ಬನಿಗೆ ಬಿಟ್ಟು ಹೋಗಬೇಕಾಗುವುದು. ಇದೂ ವ್ಯರ್ಥವೂ ಅನ್ಯಾಯವೂ ಆಗಿದೆ. |
22
|
ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ಪ್ರಯೋಜನವೇನು? |
23
|
ಅವನ ಜೀವಮಾನವೆಲ್ಲಾ ಅವನಿಗೆ ವ್ಯಸನವಿರುವುದು; ಕೆಲಸದಲ್ಲೆಲ್ಲಾ ಕಷ್ಟವಿರುವುದು; ರಾತ್ರಿಯಲ್ಲಿಯೂ ಮನಸ್ಸಿಗೆ ವಿಶ್ರಾಂತಿಯಿರದು. ಇದೂ ವ್ಯರ್ಥವೇ. |
24
|
[This verse may not be a part of this translation] |
25
|
[This verse may not be a part of this translation] |
26
|
ದೇವರು ತಾನು ಮೆಚ್ಚಿಕೊಂಡವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ಕೊಡುವನು. ಪಾಪಿಗಾದರೋ ಪ್ರಯಾಸದಿಂದ ಸಂಪಾದಿಸುವ ಮತ್ತು ಕೂಡಿಸಿಡುವ ಕೆಲಸವನ್ನು ಕೊಡುವನು. ಅವನು ಕೂಡಿಸಿಟ್ಟವುಗಳನ್ನು ದೇವರು ತನ್ನ ಮೆಚ್ಚಿಕೆಗೆ ಪಾತ್ರನಾದವನಿಗೆ ಕೊಡುವನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ. |
Ecclesiastes 2:21 Kannada Language Bible Words basic statistical display
COMING SOON ...