ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ.
ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.
ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.
ವೈರಿಯೊಬ್ಬನು ಒಬ್ಬನನ್ನು ಸೋಲಿಸಬಹುದು; ಆದರೆ ಇಬ್ಬರನ್ನು ಸೋಲಿಸಲು ಅವನಿಗೆ ಕಷ್ಟವಾಗುವುದು; ಒಂದುವೇಳೆ ಮೂವರಿದ್ದರೆ ಅವರು ಮೂರೆಳೆಯ ಹಗ್ಗದಂತೆ ಇರುವುದರಿಂದ ಅವನಿಗೆ ಮತ್ತಷ್ಟು ಕಷ್ಟವಾಗುವುದು. ಜನರು, ರಾಜಕೀಯ ಮತ್ತು ಪ್ರಖ್ಯಾತಿ