1
|
ಸುಗಂಧತೈಲಕ್ಕಿಂತಲೂ ಒಳ್ಳೆಯ ಹೆಸರೇ ಉತ್ತಮ. ಜನನ ದಿನಕ್ಕಿಂತಲೂ ಮರಣ ದಿನವೇ ಉತ್ತಮ. |
2
|
ಔತಣಕೂಟಕ್ಕೆ ಹೋಗುವುದಕ್ಕಿಂತ ಶವಸಂಸ್ಕಾರಕ್ಕೆ ಹೋಗುವುದು ಇನ್ನೂ ಉತ್ತಮ. ಯಾಕೆಂದರೆ ಎಲ್ಲರೂ ಒಂದು ದಿನ ಸಾಯಲೇಬೇಕು. ಸಾವನ್ನು ಕಂಡ ಪ್ರತಿಯೊಬ್ಬನು ಇದನ್ನು ಸ್ಮರಿಸಿಕೊಳ್ಳುವನು. |
3
|
ನಗುವಿಗಿಂತ ವ್ಯಸನವು ಇನ್ನೂ ಉತ್ತಮ. ಯಾಕೆಂದರೆ ನಮ್ಮ ಮುಖವು ವ್ಯಸನದಿಂದಿರುವಾಗ ನಮ್ಮ ಹೃದಯಕ್ಕೆ ಒಳ್ಳೆಯದಾಗುವುದು. |
4
|
ಜ್ಞಾನಿಯು ಮರಣದ ಬಗ್ಗೆ ಆಲೋಚಿಸುವನು; ಮೂಢನಾದರೊ ಉಲ್ಲಾಸ ಸಮಯದ ಬಗ್ಗೆ ಆಲೋಚಿಸುವನು. |
5
|
ಮೂಢನ ಹೊಗಳಿಕೆಗಿಂತ ಜ್ಞಾನಿಯ ಗದರಿಕೆಯೇ ಉತ್ತಮ. |
6
|
ಮೂಢರ ನಗು ಉಪಯೋಗವಿಲ್ಲದ್ದು. ಅದು ಮಡಕೆಯ ಕೆಳಗೆ ಚಟಪಟನೆ ಉರಿದುಹೋಗುವ ಮುಳ್ಳು ಕಡ್ಡಿಯಂತಿದೆ. |
7
|
ಹಣವು ಜ್ಞಾನಿಯನ್ನೂ ಮೂರ್ಖನನ್ನಾಗಿ ಮಾಡುವುದು. ಲಂಚವು ಅವನ ವಿವೇಕವನ್ನು ಕೆಡಿಸುವುದು. |
8
|
ಆರಂಭಿಸುವ ಸಮಯಕ್ಕಿಂತಲೂ ಪೂರ್ಣಗೊಳಿಸುವ ಸಮಯವೇ ಮೇಲು. ಗರ್ವಕ್ಕಿಂತಲೂ ತಾಳ್ಮೆಯೇ ಉತ್ತಮ. |
9
|
ಮುಂಗೋಪಿಯಾಗಿರಬೇಡ. ಯಾಕೆಂದರೆ ಕೋಪವು ಕೇವಲ ಮೂಢತನ. |
10
|
“ಈ ಕಾಲಕ್ಕಿಂತ ‘ಹಿಂದಿನ ಕಾಲವೇ’ ಚೆನ್ನಾಗಿತ್ತಲ್ಲವೇ?” ಎನ್ನಬೇಡ. ಅದು ಜ್ಞಾನವುಳ್ಳವರ ಪ್ರಶ್ನೆಯಲ್ಲ. |
11
|
ನಿನಗೆ ಆಸ್ತಿಯಿದ್ದರೆ ಜ್ಞಾನವು ಮತ್ತಷ್ಟು ಉಪಯುಕ್ತವಾಗಿದೆ. ನಿಜವಾಗಿಯೂ ಜ್ಞಾನಿಗಳು ಐಶ್ವರ್ಯವನ್ನು ಹೇರಳವಾಗಿ ಪಡೆದುಕೊಳ್ಳುವರು. |
12
|
ಜ್ಞಾನಿಯು ಐಶ್ವರ್ಯವಂತನಾಗುವನು; ಜ್ಞಾನವು ತನ್ನ ಯಜಮಾನನನ್ನು ನೋಡಿಕೊಳ್ಳುವುದು. |
13
|
ದೇವರ ಕಾರ್ಯಗಳನ್ನು ನೋಡು. ಆತನು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡಲು ಯಾರಿಗೆ ಸಾಧ್ಯ? |
14
|
ಸುಖದ ದಿನಗಳಲ್ಲಿ ಸಂತೋಷಿಸು. ದುಃಖದ ದಿನಗಳಲ್ಲಿ, ಸುಖದುಃಖಗಳನ್ನು ಕೊಡುವವನು ದೇವರೇ ಎಂಬುದನ್ನು ಜ್ಞಾಪಿಸಿಕೊ. ಮುಂದೆ ಏನಾಗುವುದೊ ಯಾರಿಗೂ ಗೊತ್ತಿಲ್ಲ. |
15
|
ನನ್ನ ಅಲ್ಪಕಾಲದ ಜೀವನದಲ್ಲಿ ನಾನು ಪ್ರತಿಯೊಂದನ್ನೂ ನೋಡಿದ್ದೇನೆ. ನೀತಿವಂತರು ಯೌವನ ಪ್ರಾಯದಲ್ಲಿ ಸಾಯುವುದನ್ನೂ ನೋಡಿದ್ದೇನೆ. ದುಷ್ಟರು ಬಹುಕಾಲ ಬದುಕುವುದನ್ನೂ ನೋಡಿದ್ದೇನೆ. |
16
|
[This verse may not be a part of this translation] |
17
|
[This verse may not be a part of this translation] |
18
|
ಇವೆರಡರಲ್ಲಿಯೂ ಮಿತವಾಗಿರಬೇಕು. ದೇವಭಕ್ತರಲ್ಲಿ ಇವೆರಡೂ ಅತಿಯಾಗಿರುವುದಿಲ್ಲ. |
19
|
[This verse may not be a part of this translation] |
20
|
[This verse may not be a part of this translation] |
21
|
ಜನರ ಮಾತಿಗೆಲ್ಲಾ ಕಿವಿಗೊಡಬೇಡ. ನಿನ್ನ ಸ್ವಂತ ಸೇವಕನೇ ನಿನ್ನನ್ನು ಶಪಿಸಬಹುದು. |
22
|
ನೀನು ಸಹ ಅನೇಕಸಲ ಬೇರೆಯವರನ್ನು ಶಪಿಸಿರುವುದಕ್ಕೆ ನಿನ್ನ ಮನಸ್ಸೇ ಸಾಕ್ಷಿಯಾಗಿದೆ. |
23
|
ನನ್ನ ಜ್ಞಾನದಿಂದ ಇವೆಲ್ಲವುಗಳ ಕುರಿತಾಗಿ ಆಲೋಚಿಸಿದೆನು; ಜ್ಞಾನಿಯಾಗುವೆನು ಎಂದುಕೊಂಡೆನು; ಆದರೆ ಅದು ಅಸಾಧ್ಯವಾಗಿತ್ತು. |
24
|
ಪ್ರತಿಯೊಂದು ತನ್ನದೇ ಆದ ವಿಶಿಷ್ಟತೆಯನ್ನು ಹೊಂದಿದೆ. ಅದನ್ನು ಅರ್ಥಮಾಡಿಕೊಳ್ಳುವುದಕ್ಕೂ ಕಷ್ಟ. |
25
|
ನಿಜವಾದ ಜ್ಞಾನವನ್ನು ಕಂಡುಕೊಳ್ಳಲು ನಾನು ವ್ಯಾಸಂಗ ಮಾಡಿದೆ ಮತ್ತು ತುಂಬ ಕಷ್ಟಪಟ್ಟು ಪ್ರಯತ್ನಿಸಿದೆ. ಪ್ರತಿಯೊಂದಕ್ಕೂ ಕಾರಣವನ್ನು ಕಂಡುಕೊಳ್ಳಲು ನಾನು ಪ್ರಯತ್ನಿಸಿದೆ. ನಾನು ಕಲಿತಿದ್ದೇನು? ಕೆಡುಕನಾಗಿರುವುದು ಮೂಢತನ ಮತ್ತು ಮೂಢನಂತೆ ವರ್ತಿಸುವುದು ಹುಚ್ಚುತನ ಎಂಬುದನ್ನು ನಾನು ಕಲಿತುಕೊಂಡೆ. |
26
|
ಇದಲ್ಲದೆ ಕೆಲವು ಸ್ತ್ರೀಯರು ಅಪಾಯಕರವಾದ ಬೋನುಗಳಂತಿರುವರು ಎಂಬುದನ್ನು ನಾನು ಕಂಡುಕೊಂಡೆ. ಅವರ ಹೃದಯಗಳು ಬಲೆಗಳಂತಿವೆ; ಅವರ ಕೈಗಳು ಸರಪಣಿಗಳಂತಿವೆ. ಆ ಸ್ತ್ರೀಯರಿಗೆ ಸಿಕ್ಕಿಬೀಳುವುದು ಮರಣಕ್ಕಿಂತಲೂ ಅಪಾಯಕರ. ದೇವರ ಭಕ್ತನು ಆ ಸ್ತ್ರೀಯರ ಬಳಿಯಿಂದ ಓಡಿ ಹೋಗುವನು; ಪಾಪಿಯಾದರೊ ಅವರಿಗೆ ಸಿಕ್ಕಿಕೊಳ್ಳುವನು. |
27
|
[This verse may not be a part of this translation] |
28
|
[This verse may not be a part of this translation] |
29
|
“ನಾನು ಮತ್ತೊಂದು ವಿಷಯವನ್ನು ತಿಳಿದುಕೊಂಡೆನು. ಅದೇನಂದರೆ, ದೇವರು ಮನುಷ್ಯರನ್ನು ನೀತಿವಂತರನ್ನಾಗಿ ಸೃಷ್ಟಿಸಿದನು. ಆದರೆ ಜನರು ಕೆಟ್ಟವರಾಗಿರಲು ಅನೇಕ ದಾರಿಗಳನ್ನು ಕಂಡುಕೊಂಡರು.” |
Ecclesiastes 7:1 Kannada Language Bible Words basic statistical display
COMING SOON ...