1
|
ನಾನು ಪ್ರಭುವಿಗೆ ಸೇರಿದವನಾದ್ದರಿಂದ ಸೆರೆಯಲ್ಲಿದ್ದೇನೆ. ನೀವು ದೇವರಿಂದ ಕರಯಲ್ಪಟ್ಟಿದ್ದೀರಿ. ಆದ್ದರಿಂದ ನಿಮ್ಮ ಕರೆಯುವಿಕೆಗೆ ತಕ್ಕಂತೆ ಯೋಗ್ಯವಾಗಿ ಜೀವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. |
2
|
ಯಾವಾಗಲೂ ದೀನತೆಯಿಂದ, ಸಾತ್ವಿಕತೆಯಿಂದ ಮತ್ತು ತಾಳ್ಮೆಯಿಂದ ಕೂಡಿದವರಾಗಿದ್ದು ಒಬ್ಬರನ್ನೊಬ್ಬರು ಪ್ರೀತಿಯಿಂದ ಸಹಿಸಿಕೊಳ್ಳಿರಿ. |
3
|
ನೀವು ಆತ್ಮನ ಮೂಲಕವಾಗಿ ಸಮಾಧಾನವೆಂಬ ಬಂಧನದಿಂದ ಒಂದಾಗಿದ್ದೀರಿ. ಈ ರೀತಿ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿ. ಸಮಾಧಾನವು ನಿಮ್ಮೆಲ್ಲರನ್ನು ಒಂದಾಗಿಸಲಿ. |
4
|
ದೇಹವು ಒಂದೇ ಮತ್ತು ಆತ್ಮನು ಒಬ್ಬನೇ. ನೀವೆಲ್ಲರೂ ಒಂದೇ ನಿರೀಕ್ಷೆಯನ್ನು ಹೊಂದಿರಬೇಕೆಂದು ದೇವರು ನಿಮ್ಮನ್ನು ಕರೆದನು. |
5
|
ಒಬ್ಬನೇ ಪ್ರಭು, ಒಂದೇ ನಂಬಿಕೆ, ಒಂದೇ ದೀಕ್ಷಾಸ್ನಾನ. |
6
|
ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ಆತನು ಸಮಸ್ತವನ್ನೂ ಆಳುತ್ತಾನೆ. ಆತನು ಸರ್ವವ್ಯಾಪಿಯಾಗಿದ್ದಾನೆ ಮತ್ತು ಎಲ್ಲರಲ್ಲಿ ವಾಸಿಸುವವನಾಗಿದ್ದಾನೆ. |
7
|
ಕ್ರಿಸ್ತನು ನಮ್ಮಲ್ಲಿ ಪ್ರತಿಯೊಬ್ಬರಿಗೂ ವಿಶೇಷವಾದ ವರವನ್ನು ಕೊಟ್ಟಿದ್ದಾನೆ. ಪ್ರತಿಯೊಬ್ಬನು ಕ್ರಿಸ್ತನ ಇಷ್ಟಾನುಸಾರವಾಗಿ ವರವನ್ನು ಪಡೆದುಕೊಂಡಿದ್ದಾನೆ. |
8
|
ಆದಕಾರಣವೇ ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆದಿದೆ: “ಆತನು ಆಕಾಶದ ಉನ್ನತಸ್ಥಾನಕ್ಕೆ ಏರಿಹೋದಾಗ, ಶತ್ರುಗಳನ್ನು ಸೆರೆಯಾಳುಗಳಾಗಿ ಕೊಂಡೊಯ್ದು ಜನರಿಗೆ ದಾನಗಳನ್ನು ಮಾಡಿದನು.” ಕೀರ್ತನೆ 68:18 |
9
|
”ಆತನು ಉನ್ನತಸ್ಥಾನಕ್ಕೆ ಏರಿಹೋದನು” ಎಂದರೆ ಆತನು ಭೂಲೋಕಕ್ಕೆ ಇಳಿದುಬಂದು, |
10
|
ಭೂಮಿಯ ಅಧೋಭಾಗಕ್ಕೆ ಇಳಿದುಹೋಗಿ, ಅಲ್ಲಿಂದ ಆಕಾಶದ ಅತ್ಯುನ್ನತಸ್ಥಾನಕ್ಕೆ ಏರಿಹೋದನು ಎಂದರ್ಥ. ಸಮಸ್ತದಲ್ಲಿ ತಾನೇ ತುಂಬಿರಬೇಕೆಂದು ಕ್ರಿಸ್ತನು ಹಾಗೆ ಮಾಡಿದನು. |
11
|
ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಉಪದೇಶಕರನ್ನಾಗಿಯೂ ನೇಮಿಸಿದನು. |
12
|
ಸಭೆಯ ಸೇವೆಗೋಸ್ಕರ ದೇವರ ಪರಿಶುದ್ಧ ಜನರನ್ನು ಸಿದ್ಧಪಡಿಸುವುದಕ್ಕಾಗಿ ಆತನು ಅವರನ್ನು ನೇಮಿಸಿದನು. |
13
|
ನಾವೆಲ್ಲರೂ ಒಂದೇ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಐಕ್ಯರಾಗುವತನಕ ಈ ಸೇವೆಯು ಮುಂದುವರಿಯಬೇಕು. ನಾವು ಪರಿಪೂರ್ಣರಾಗುವ ತನಕ ಅಂದರೆ ಕ್ರಿಸ್ತನ ಸರ್ವಸಂಪೂರ್ಣತೆಯನ್ನು ಮುಟ್ಟುವತನಕ ಬೆಳೆಯಬೇಕು. |
14
|
ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ಆ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ. |
15
|
ನಾವಾದರೊ ಸತ್ಯವನ್ನು ಪ್ರೀತಿಯಿಂದ ಹೇಳಬೇಕು; ಎಲ್ಲಾ ವಿಷಯಗಳಲ್ಲಿಯೂ ಬೆಳೆದು ಕ್ರಿಸ್ತನಂತಾಗಲು ಪ್ರಯತ್ನಿಸಬೇಕು. ಕ್ರಿಸ್ತನು ಶಿರಸ್ಸಾಗಿದ್ದಾನೆ ಮತ್ತು ನಾವು ದೇಹವಾಗಿದ್ದೇವೆ. |
16
|
ಇಡೀ ದೇಹವು ಕ್ರಿಸ್ತನನ್ನು ಅವಲಂಬಿಸಿಕೊಂಡಿದೆ. ದೇಹದ ಒಂದೊಂದು ಅಂಗಗಳೂ ಒಂದಕ್ಕೊಂದು ಬಿಗಿದುಕೊಂಡಿವೆ. ಪ್ರತಿಯೊಂದು ಅಂಗವು ತನ್ನದೇ ಆದ ಕೆಲಸವನ್ನು ಮಾಡುವುದರಿಂದ ಇಡೀ ದೇಹವು ಬೆಳೆದು ಪ್ರೀತಿಯಲ್ಲಿ ಬಲವಾಗಿರಲು ಸಾಧ್ಯವಾಗುತ್ತದೆ. |
17
|
ಪ್ರಭುವಿಗೋಸ್ಕರ ನಾನು ನಿಮಗೆ ಇದನ್ನು ಹೇಳುತ್ತೇನೆ ಮತ್ತು ಎಚ್ಚರಿಸುತ್ತೇನೆ. ಅವಿಶ್ವಾಸಿಗಳಂತೆ ಇನ್ನು ಮೇಲೆ ಜೀವಿಸದಿರಿ. ಅವರ ಆಲೋಚನೆಗಳು ನಿಷ್ಪ್ರಯೋಜಕವಾಗಿವೆ. |
18
|
ಅವರು ಅರ್ಥ ಮಾಡಿಕೊಳ್ಳುವುದಿಲ್ಲ. ಅವರು ಕಿವಿಗೊಡದ ಕಾರಣ ಅವರಿಗೆ ಏನೂ ಗೊತ್ತಿಲ್ಲ. ಆದ್ದರಿಂದ ದೇವರು ಕೊಡುವ ಜೀವಿತವನ್ನು ಹೊಂದಿಕೊಳ್ಳಲು ಅವರಿಗೆ ಸಾಧ್ಯವಿಲ್ಲ. |
19
|
ಅವರಿಗೆ ನಾಚಿಕೆಯೇ ಇಲ್ಲ. ಅವರು ತಮ್ಮ ಜೀವಿತಗಳನ್ನು ದುಷ್ಟಕಾರ್ಯಗಳಿಗೆ ಉಪಯೋಗಿಸುತ್ತಾರೆ; ಎಲ್ಲಾ ಬಗೆಯ ಕೆಟ್ಟಕಾರ್ಯಗಳನ್ನು ಇನ್ನೂ ಹೆಚ್ಚೆಚ್ಚಾಗಿ ಮಾಡಲು ತವಕಪಡುತ್ತಾರೆ. |
20
|
ಆದರೆ ಕ್ರಿಸ್ತನಿಂದ ನೀವು ಕಲಿತುಕೊಂಡದ್ದು ಅವುಗಳನ್ನಲ್ಲ. |
21
|
ನೀವು ಆತನ ವಿಷಯವಾಗಿ ಕೇಳಿದ್ದೀರೆಂಬುದು ನನಗೆ ಗೊತ್ತಿದೆ. ನೀವು ಆತನಲ್ಲಿರುವುದರಿಂದ ಸತ್ಯವನ್ನು ಕಲಿತುಕೊಂಡಿರಿ. ಹೌದು, ಸತ್ಯವು ಯೇಸುವಿನಲ್ಲಿದೆ. |
22
|
ನೀವು ನಿಮ್ಮ ಹಿಂದಿನ ಕೆಟ್ಟ ನಡತೆಯನ್ನು ಬಿಟ್ಟು ಬಿಡಬೇಕೆಂಬುದನ್ನು ಅಂದರೆ ನಿಮ್ಮ ಹಳೆಯ ಸ್ವಭಾವವನ್ನು ತೊರೆದುಬಿಡಬೇಕೆಂಬುದನ್ನು ಕಲಿತುಕೊಂಡಿರಿ. ಜನರು ತಾವು ಮಾಡ ಬಯಸುವ ದುಷ್ಟಕಾರ್ಯಗಳಿಂದ ವಂಚಿತರಾಗಿರುವುದರಿಂದ ಆ ಹಳೆಯ ಸ್ವಭಾವವು ದಿನದಿಂದ ದಿನಕ್ಕೆ ಮತ್ತಷ್ಟು ಕೆಟ್ಟು ಹೋಗುತ್ತದೆ. |
23
|
ಆದರೆ ಆಂತರ್ಯದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಹೊಂದಿಕೊಳ್ಳತಕ್ಕ ರೀತಿಯನ್ನು ನೀವು ಕಲಿತುಕೊಂಡಿರಿ. |
24
|
ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯವಾದ ನೀತಿಯುಳ್ಳದಾಗಿಯೂ ಪರಿಶುದ್ಧವಾಗಿಯೂ ನಿರ್ಮಿಸಲ್ಪಟ್ಟಿದೆ. |
25
|
ಆದ್ದರಿಂದ ನೀವು ಸುಳ್ಳು ಹೇಳದೆ ಒಬ್ಬರಿಗೊಬ್ಬರು ಯಾವಾಗಲೂ ಸತ್ಯವನ್ನೇ ಹೇಳಿರಿ. ಏಕೆಂದರೆ ನಾವೆಲ್ಲರೂ ಒಂದೇ ದೇಹಕ್ಕೆ ಸೇರಿದ ಅಂಗಗಳಾಗಿದ್ದೇವೆ. |
26
|
ಕೋಪಗೊಂಡರೂ ಪಾಪ ಮಾಡಬೇಡಿ ಮತ್ತು ದಿನವೆಲ್ಲಾ ಕೋಪದಿಂದಿರಬೇಡಿ. |
27
|
ನಿಮ್ಮನ್ನು ಸೋಲಿಸಲು ಸೈತಾನನಿಗೆ ಅವಕಾಶಕೊಡಬೇಡಿ. |
28
|
ಕಳ್ಳನು ಕದಿಯುವುದನ್ನು ನಿಲ್ಲಿಸಿ ತಾನೇ ದುಡಿದು ಸಂಪಾದಿಸಲಿ; ಅವನು ತನ್ನ ಕೈಗಳನ್ನು ಒಳ್ಳೆಯದನ್ನು ಮಾಡುವುದಕ್ಕಾಗಿ ಉಪಯೋಗಿಸಲಿ. ಆಗ ಬಡವರಿಗೂ ಸಹಾಯ ಮಾಡಲು ಅವನಿಗೆ ಸಾಧ್ಯವಾಗುವುದು. |
29
|
ನಿಮ್ಮ ಬಾಯಿಂದ ಕೆಟ್ಟ ಮಾತುಗಳು ಬಾರದಿರಲಿ. ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ. |
30
|
ಪವಿತ್ರಾತ್ಮನನ್ನು ದುಃಖಪಡಿಸಬೇಡಿ. ನೀವು ದೇವರಿಗೆ ಸೇರಿದವರೆಂಬುದಕ್ಕೆ ಆತನೇ ದೇವರ ಪ್ರಮಾಣವಾಗಿದ್ದಾನೆ. ಸೂಕ್ತ ಸಮಯದಲ್ಲಿ ನಿಮ್ಮನ್ನು ಬಿಡುಗಡೆ ಮಾಡುತ್ತೇನೆ ಎಂಬುದನ್ನು ತೋರಿಸುವುದಕ್ಕಾಗಿಯೇ ದೇವರು ನಿಮಗೆ ಆತನನ್ನು ಕೊಟ್ಟನು. |
31
|
ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ. |
32
|
ಒಬ್ಬರಿಗೊಬ್ಬರು ಕರುಣೆ ತೋರಿರಿ. ಒಬ್ಬರನ್ನೊಬ್ಬರು ಪ್ರೀತಿಸಿರಿ. ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆ ನೀವೂ ಒಬ್ಬರನ್ನೊಬ್ಬರು ಕ್ಷಮಿಸಿರಿ. |
Ephesians 4:1 Kannada Language Bible Words basic statistical display
COMING SOON ...