1
|
ಅಹಷ್ವೇರೋಷನು ರಾಜನಾಗಿದ್ದಾಗ ನಡೆದ ಘಟನೆ. ಹಿಂದೂಸ್ಥಾನದಿಂದ ಇಥಿಯೋಪ್ಯದ ತನಕ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅವನು ಆಳುತ್ತಿದ್ದನು. |
2
|
ಅವನ ರಾಜ್ಯದ ರಾಜಧಾನಿ ನಗರವಾಗಿದ್ದ ಶೂಷನ್ನಲ್ಲಿಯ ಸಿಂಹಾಸನದಿಂದ ಅರಸನು ರಾಜ್ಯವಾಳುತ್ತಿದ್ದನು. |
3
|
ತನ್ನ ಆಳ್ವಿಕೆಯ ಮೂರನೆ ವರುಷದಲ್ಲಿ ರಾಜ್ಯದ ಅಧಿಕಾರಿಗಳಿಗೂ ನಾಯಕರುಗಳಿಗೂ ಒಂದು ಔತಣವನ್ನು ಏರ್ಪಡಿಸಿದನು. ಮೇದ್ಯ. ಪರ್ಶಿಯದ ಎಲ್ಲಾ ಸೈನ್ಯಾಧಿಕಾರಿಗಳೂ ಪ್ರಧಾನರೂ ಔತಣದಲ್ಲಿ ಭಾಗವಹಿಸಿದ್ದರು. |
4
|
ಔತಣ ಸಮಾರಂಭವು ನೂರೆಂಭತ್ತು ದಿವಸಗಳ ತನಕ ಮುಂದುವರೆಯಿತು. ಆ ಸಮಯದಲ್ಲಿ ತನ್ನ ರಾಜ್ಯದ ಸಕಲ ವೈಭವವನ್ನೂ ಅರಮನೆಯ ಐಶ್ವರ್ಯವನ್ನೂ ಅತಿಥಿಗಳಿಗೆ ಪ್ರದರ್ಶಿಸಿದನು. |
5
|
ಆ ನೂರೆಂಭತ್ತು ದಿವಸಗಳು ಕಳೆದ ಬಳಿಕ ಅಹಷ್ವೇರೋಷನು ಮತ್ತೆ ಇನ್ನೊಂದು ಔತಣವನ್ನು ಒಂದು ವಾರದ ತನಕ ಮುಂದುವರಿಸಿದನು. ಇದು ಅರಮನೆಯ ಒಳ ಉದ್ಯಾನವನದಲ್ಲಿ ನಡೆಯಿತು. ಇದಕ್ಕೆ ಶೂಷನ್ ನಗರದಿಂದ ಗಣ್ಯರು, ಸಾಮಾನ್ಯರು ಎಂಬ ಭೇದಭಾವವಿಲ್ಲದೆ ಎಲ್ಲರೂ ಆಮಂತ್ರಿಸಲ್ಪಟ್ಟಿದ್ದರು. |
6
|
ಆ ಒಳ ಉದ್ಯಾನವನವು ಬಿಳಿ ಮತು ನೀಲಿಬಣ್ಣಗಳ ಬಟ್ಟೆಗಳಿಂದ ಶೃಂಗರಿಸಲ್ಪಟ್ಟಿತ್ತು. ಅವುಗಳನ್ನು ಬಿಳಿ ಮತ್ತು ನೇರಳೆ ಬಣ್ಣದ ದಾರಗಳಿಂದ ಬೆಳ್ಳಿಯ ಉಂಗುರಗಳಲ್ಲಿ ಕಟ್ಟಲ್ಪಟ್ಟ ಅಮೃತಶಿಲೆಯ ಕಂಬಗಳಿಗೆ ತೂಗು ಹಾಕಿದ್ದರು. ಬೆಲೆಬಾಳುವ ಕಲ್ಲುಗಳಿಂದಲೂ ಮುತ್ತು ಚಿಪ್ಪು, ರತ್ನಶಿಲೆಗಳಿಂದಲೂ ಅಲಂಕೃತವಾದ ನೆಲದ ಮೇಲೆ ಬೆಳ್ಳಿಬಂಗಾರಗಳಿಂದ ಮಾಡಿದ್ದ ಆಸನಗಳನ್ನಿಟ್ಟರು. |
7
|
ಅತಿಥಿಗಳಿಗೆ ಬಂಗಾರದ ಪಾನಪಾತ್ರೆಯಲ್ಲಿ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಬೇರೆಬೇರೆ ವಿಧದ ಪಾತ್ರೆಗಳನ್ನು ಉಪಯೋಗಿಸಲಾಗಿತ್ತು. ರಾಜನ ಔದಾರ್ಯಕ್ಕೆ ತಕ್ಕಂತೆ ದ್ರಾಕ್ಷಾರಸವು ಧಾರಾಳವಾಗಿ ಹಂಚಲ್ಪಡುತ್ತಿತ್ತು. |
8
|
ತಮ್ಮ ಇಷ್ಟಾನುಸಾರವಾಗಿ ದ್ರಾಕ್ಷಾರಸವನ್ನು ಕುಡಿಯಲು ಅತಿಥಿಗಳಿಗೆ ಕೊಡಬೇಕೆಂದು ಸೇವಕರಿಗೆ ರಾಜಾಜ್ಞೆಯಾಗಿತ್ತು. ರಾಜಸೇವಕರು ಆ ಆಜ್ಞೆಯನ್ನು ಪಾಲಿಸಿದರು. |
9
|
ರಾಜನ ಅರಮನೆಯಲ್ಲಿ ವಷ್ಟಿರಾಣಿಯೂ ಅದೇ ಪ್ರಕಾರ ಸ್ತ್ರೀಯರಿಗೂ ಔತಣವನ್ನು ಮಾಡಿಸಿದ್ದಳು. |
10
|
[This verse may not be a part of this translation] |
11
|
[This verse may not be a part of this translation] |
12
|
ಆಸ್ಥಾನಸೇವಕರು ವಷ್ಟಿರಾಣಿಗೆ ರಾಜಾಜ್ಞೆಯನ್ನು ತಿಳಿಸಿದಾಗ ಆಕೆಯು ಬರಲು ನಿರಾಕರಿಸಿದಳು. ಇದರಿಂದ ರಾಜನು ಕೋಪೋದ್ರಿಕ್ತನಾದನು. |
13
|
[This verse may not be a part of this translation] |
14
|
[This verse may not be a part of this translation] |
15
|
“ಆಸ್ಥಾನ ಸೇವಕರ ಮೂಲಕ ಹೇಳಿ ಕಳುಹಿಸಿದ ರಾಜಾಜ್ಞೆಯನ್ನು ವಷ್ಟಿ ರಾಣಿಯು ನಿರಾಕರಿಸಿದ್ದಾಳೆ. ಇಂಥಾ ತಪ್ಪಿಗೆ ಯಾವ ಶಿಕ್ಷೆಯನ್ನು ವಿಧಿಸಬೇಕು?” ಎಂದು ವಿಚಾರಿಸಿದನು. |
16
|
ಇತರ ಅಧಿಕಾರಿಗಳು ಆಲಿಸುತ್ತಿದ್ದಾಗ ಮೆಮೂಕಾನ್ ಎದ್ದುನಿಂತು, “ರಾಣಿ ವಷ್ಟಿಯು ತಪ್ಪು ಮಾಡಿದಳು. ಇದು ರಾಜನಿಗೆ ವಿರುದ್ಧವಾಗಿ ಮಾತ್ರವೇ ಅಲ್ಲ, ರಾಜ್ಯದ ಸಕಲ ನಾಯಕರಿಗೂ ಸಂಸ್ಥಾನಗಳ ಎಲ್ಲಾ ಜನರಿಗೂ ವಿರುದ್ಧವಾದದ್ದು. |
17
|
ಹೇಗೆಂದರೆ: ರಾಣಿಯು ಮಾಡಿದ್ದನ್ನು ರಾಜ್ಯದ ಇತರ ಸ್ತ್ರೀಯರು ಕೇಳಿ ತಾವೂ ತಮ್ಮ ಗಂಡಂದಿರಿಗೆ ಅವಿಧೇಯರಾಗುವರು. ಅವರು ತಮ್ಮ ಗಂಡಂದಿರಿಗೆ, ‘ರಾಜ ಅಹಷ್ವೇರೋಷನು ವಷ್ಟಿರಾಣಿಯನ್ನು ಕರೆದುಕೊಂಡು ಬರಬೇಕೆಂದು ಆಜ್ಞಾಪಿಸಿದನು, ಆದರೆ ಆಕೆ ಬರಲಿಲ್ಲ’ ಎಂದು ಹೇಳುವರು. |
18
|
“ಪರ್ಶಿಯ ಮತ್ತು ಮೇದ್ಯ ನಾಯಕರುಗಳ ಹೆಂಡತಿಯರು ಸಹ ವಷ್ಟಿರಾಣಿ ಈ ಹೊತ್ತು ಮಾಡಿದ್ದನ್ನು ಕೇಳಿದ್ದಾರೆ. ಅವರು ಸಹ ವಷ್ಟಿರಾಣಿಯ ನಡತೆಯಿಂದ ಪ್ರೋತ್ಸಾಹಿತರಾಗಿ ರಾಜನ ಮುಖ್ಯ ನಾಯಕರುಗಳೊಡನೆ ಅದೇರೀತಿ ವರ್ತಿಸುವರು. ಇದರಿಂದಾಗಿ ಅಗೌರವವೂ ಕೋಪವೂ ತುಂಬಿಕೊಳ್ಳುತ್ತವೆ. |
19
|
“ಆದುದರಿಂದ ರಾಜನು ಒಪ್ಪುವುದಾದರೆ ನನ್ನ ಸಲಹೆ ಏನಂದರೆ, ಅರಸನು ಒಂದು ರಾಜಾಜ್ಞೆಯನ್ನು ಹೊರಡಿಸಬೇಕು. ಆ ಆಜ್ಞೆಯು ಪರ್ಶಿಯ ಮತ್ತು ಮೇದ್ಯ ರಾಜಶಾಸನಗಳಲ್ಲಿ ಬರೆಯಲ್ಪಡಬೇಕು. ಪರ್ಶಿಯ ಮತ್ತು ಮೇದ್ಯ ರಾಜಶಾಸನಗಳು ಎಂದಿಗೂ ಬದಲಾಗುವದಿಲ್ಲ. ರಾಜಾಜ್ಞೆಯು ಏನೆಂದರೆ, ಅರಸನಾದ ಅಹಷ್ವೇರೋಷನ ಸನ್ನಿಧಿಗೆ ರಾಣಿಯು ಪ್ರವೇಶಿಸಲೇ ಕೂಡದು. ಮಾತ್ರವಲ್ಲ ರಾಜನು ವಷ್ಟಿ ರಾಣಿಯ ಸ್ಥಾನವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಾಕೆಗೆ ಕೊಡಲಿ. |
20
|
ಈ ರಾಜಶಾಸನವು ವಿಶಾಲ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಪ್ರಕಟಿಸಲ್ಪಟ್ಟಾಗ ಎಲ್ಲಾ ಹೆಂಡತಿಯರು ತಮ್ಮ ಗಂಡಂದಿರಿಗೆ ಗೌರವವನ್ನು ಸಲ್ಲಿಸುವರು. ಶ್ರೇಷ್ಠರೂ ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಗೌರವವನ್ನು ಸಲ್ಲಿಸುವರು.” |
21
|
ಅರಸನೂ ಅವನ ಪ್ರಮುಖ ಅಧಿಕಾರಿಗಳೂ ಈ ಸಲಹೆಯನ್ನು ಕೇಳಿ ಸಂತೋಷಪಟ್ಟರು, ಮತ್ತು ಅಹಷ್ವೇರೋಷ ರಾಜನು ಮೆಮೂಕಾನ್ ಹೇಳಿದ ಹಾಗೆ ಮಾಡಿದನು. |
22
|
ಅಹಷ್ವೇರೋಷನು ತನ್ನ ರಾಜ್ಯದ ಎಲ್ಲಾ ಕಡೆಗಳಿಗೆ, ಎಲ್ಲಾ ಸಂಸ್ಥಾನಗಳಿಗೆ ಅವರವರ ಭಾಷೆಯಲ್ಲಿ ಪತ್ರಗಳನ್ನು ಬರೆಯಿಸಿ ರವಾನಿಸಿದನು. ಅವರವರ ಭಾಷೆಯಲ್ಲಿ ಬರೆದ ಪತ್ರದಲ್ಲಿ ಪ್ರತಿಯೊಬ್ಬ ಗಂಡಸು ತನ್ನ ಸಂಸಾರವನ್ನು ಆಳಬೇಕು ಎಂಬುದಾಗಿ ಬರೆಯಲ್ಪಟ್ಟಿತ್ತು. |
Esther 1:1 Kannada Language Bible Words basic statistical display
COMING SOON ...