1
|
ಆ ರಾತ್ರಿ ಅರಸನಿಗೆ ನಿದ್ರಿಸಲಾಗಲಿಲ್ಲ. ಒಬ್ಬ ಸೇವಕನನ್ನು ಕರೆದು ರಾಜಕಾಲವೃತ್ತಾಂತ ಪುಸ್ತಕವನ್ನು ತರಹೇಳಿ ಅವನಿಂದ ಅದನ್ನು ಓದಿಸಿದನು. (ಈ ಪುಸ್ತಕದಲ್ಲಿ ಅರಸರ ರಾಜ್ಯ ಆಳ್ವಿಕೆಯಲ್ಲಿ ನಡೆದ ಘಟನೆಗಳು ಲಿಖಿತವಾಗಿರುತ್ತದೆ.) |
2
|
ಆ ಸೇವಕನು ರಾಜನಿಗೆ ಪುಸ್ತಕದಿಂದ ಓದುತ್ತಾ ಹೋದನು. ರಾಜನನ್ನು ಕೊಲ್ಲುವ ಒಳಸಂಚಿನ ವಿಚಾರವನ್ನೂ ಕೇಳಿದನು. ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ದ್ವಾರಪಾಲಕರು ರಾಜನನ್ನು ಕೊಲ್ಲಲು ಒಳಸಂಚು ಮಾಡಿದಾಗ ಮೊರ್ದೆಕೈಗೆ ಅದು ತಿಳಿದುಬಂತು. ಕೂಡಲೇ ಅವನು ಬೇರೆಯವರ ಮುಖಾಂತರ ಅರಸನಿಗೆ ತಿಳಿಸಿದನು. |
3
|
ಇದನ್ನು ಕೇಳುತ್ತಿದ್ದ ಅರಸನು, “ಮೊರ್ದೆಕೈ ಹೀಗೆ ಮಾಡಿದುದಕ್ಕೆ ಯಾವ ಗೌರವ ಮತ್ತು ಬಹುಮಾನಗಳು ಕೊಡಲ್ಪಟ್ಟವು?” ಎಂದು ವಿಚಾರಿಸಿದನು. “ಮೊರ್ದೆಕೈಗೆ ಏನೂ ಕೊಡಲಿಲ್ಲ” ಎಂದು ಸೇವಕರು ಉತ್ತರಿಸಿದರು. |
4
|
ಅದೇ ಸಮಯದಲ್ಲಿ ಹಾಮಾನನು ಹೊರಾಂಗಣದಲ್ಲಿದ್ದನು. ಅವನು ತಾನು ತಯಾರಿಸಿಟ್ಟಿರುವ ಗಲ್ಲುಕಂಬದಲ್ಲಿ ಮೊರ್ದೆಕೈಯನ್ನು ಗಲ್ಲಿಗೆ ಹಾಕಲು ಅರಸನಿಂದ ಅಪ್ಪಣೆ ಪಡೆದುಕೊಳ್ಳಲು ಬಂದಿದ್ದನು. ಅರಸನು ಹೊರಾಂಗಣದಲ್ಲಿ “ಈಗ ತಾನೇ ಯಾರು ಬಂದರು?” ಎಂದು ಕೇಳಿದಾಗ |
5
|
ಸೇವಕರು, “ಹಾಮಾನನು ನಿಂತಿದ್ದಾನೆ!” ಎಂದು ಹೇಳಿದರು. “ಸರಿ, ಒಳಕ್ಕೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು. |
6
|
ಹಾಮಾನನು ಒಳಗೆ ಪ್ರವೇಶಮಾಡುವಾಗ ಅರಸನು, “ಹಾಮಾನನೇ, ಅರಸನು ಒಬ್ಬನಿಗೆ ಗೌರವಿಸಬೇಕೆಂದು ಇಚ್ಫಿಸುವಾಗ ಯಾವ ರೀತಿಯಲ್ಲಿ ಅದನ್ನು ಮಾಡಬೇಕು? ಎಂದು ಕೇಳಿದನು. ಆಗ ಹಾಮಾನನು, “ಅರಸನು ಗೌರವಿಸುವವನು ನನಗಿಂತ ಹೆಚ್ಚಿನವನು ಯಾರಿರಬಹುದು? ಅವನು ನನ್ನ ವಿಚಾರವಾಗಿಯೇ ನೆನಸುತ್ತಿರಬಹುದು” ಎಂದು ತನ್ನ ಮನಸ್ಸಿನಲ್ಲಿಯೇ ನೆನೆಸಿಕೊಂಡು |
7
|
ಅರಸನಿಗೆ, “ನೀನು ಗೌರವಿಸಬೇಕಾದ ಮನುಷ್ಯನಿಗೆ ಈ ರೀತಿಯಾಗಿ ಮಾಡಬೇಕು. |
8
|
ಅರಸನು ಧರಿಸಿದ ರಾಜ ವಸ್ತ್ರಗಳನ್ನು ಸೇವಕರ ಮೂಲಕ ತರಿಸು. ಅಲ್ಲದೆ ರಾಜನು ಸವಾರಿ ಮಾಡಿರುವ ಕುದುರೆಯನ್ನು ತರಿಸು. ಸೇವಕರು ಅದರ ಹಣೆಯ ಮೇಲೆ ರಾಜನ ವಿಶೇಷ ಗುರುತನ್ನು ಇಡಲಿ. |
9
|
ಅನಂತರ ಅರಸನ ಮುಖ್ಯ ಅಧಿಕಾರಿಗಳಲ್ಲೊಬ್ಬನನ್ನು ರಾಜವಸ್ತ್ರಗಳಿಗೂ ಕುದುರೆಗೂ ಜವಾಬ್ದಾರನನ್ನಾಗಿ ನೇಮಿಸಿರಿ. ರಾಜನು ಯಾವ ವ್ಯಕ್ತಿಯನ್ನು ಗೌರವಿಸಬೇಕೆಂದಿದ್ದಾನೋ ಆ ವ್ಯಕ್ತಿಯ ಮೇಲೆ ಅವನು ರಾಜ ವಸ್ತ್ರವನ್ನು ಹಾಕಲಿ. ಆಮೇಲೆ ಅವನನ್ನು ಕುದುರೆಯ ಮೇಲೆ ಕುಳ್ಳಿರಿಸಿಕೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿಸುತ್ತಾ, ‘ರಾಜನು ಗೌರವಿಸುವ ಮನುಷ್ಯನಿಗೆ ಹೀಗೆಯೇ ಆಗುವುದು’ ಎಂದು ಪ್ರಕಟಿಸುತ್ತಾ ಹೋಗಲಿ” ಎಂದು ಹೇಳಿದನು. |
10
|
“ಈಗಲೇ,” ಅರಸನು ಹಾಮಾನನಿಗೆ ಆಜ್ಞೆಕೊಟ್ಟು “ಈಗಲೇ ಹೋಗಿ ರಾಜವಸ್ತ್ರಗಳನ್ನೂ ರಾಜನ ಕುದುರೆಯನ್ನೂ ಕೊಂಡು ಹೋಗಿ ಯೆಹೂದ್ಯನಾದ ಮೊರ್ದೆಕೈಗೆ ನೀನು ಹೇಳಿದ ಪ್ರಕಾರವೆ ಮಾಡು. ಮೊರ್ದೆಕೈ ಅರಮನೆಯ ಹೆಬ್ಬಾಗಿಲ ಬಳಿಯಲ್ಲಿ ಕುಳಿತುಕೊಂಡಿರುತ್ತಾನೆ. ನಿನ್ನ ಸಲಹೆಯಂತೆಯೇ ಎಲ್ಲವನ್ನೂ ಮಾಡು” ಅಂದನು. |
11
|
ಹಾಮಾನನು ಉಡುಪನ್ನೂ ಕುದುರೆಯನ್ನೂ ತೆಗೆದುಕೊಂಡು ಮೊರ್ದೆಕೈಗೆ ತೊಡಿಸಿ, ಕುದುರೆಯ ಮೇಲೆ ಕುಳ್ಳಿರಿಸಿ ನಗರದ ಮುಖ್ಯರಸ್ತೆಗಳಲ್ಲಿ ಕರೆದುಕೊಂಡು ಹೋಗುತ್ತಿರುವಾಗ, “ಅರಸನು ಸನ್ಮಾನಿಸುವ ಮನುಷ್ಯನಿಗೆ ಹೀಗೆಯೇ ಆಗುವದು” ಎಂದು ಪ್ರಕಟಿಸಿದನು. |
12
|
ಇದಾದ ಬಳಿಕ ಮೊರ್ದೆಕೈ ಹೆಬ್ಬಾಗಿಲ ಬಳಿಯಲ್ಲಿದ್ದ ತನ್ನ ಸ್ಥಾನಕ್ಕೆ ಹೋದನು. ಆದರೆ ಹಮಾನನು ತನ್ನ ಮನೆಗೆ ಅವಸರವಸರವಾಗಿ ನಡೆದನು. ನಾಚಿಕೆಯಿಂದಲೂ ಸಿಟ್ಟಿನಿಂದಲೂ ತನ್ನ ಮುಖವನ್ನು ಮುಚ್ಚಿಕೊಂಡಿದ್ದನು. |
13
|
ತನ್ನ ಹೆಂಡತಿ ಜೆರೆಷಳಿಗೂ ಮತ್ತು ತನಗೆ ಸಲಹೆ ಕೊಟ್ಟಿದ್ದ ಮಿತ್ರವೃಂದದವರಿಗೂ ನಡೆದ ವಿಷಯ ತಿಳಿಸಿದನು. ಆಗ ಅವರು ತಿಳಿಸಿದ್ದೇನಂದರೆ: “ಮೊರ್ದೆಕೈಯು ಯೆಹೂದ್ಯನಾಗಿದ್ದರೆ ನೀನು ಜಯಗಳಿಸುವುದಿಲ್ಲ. ಈಗಲೇ ನೀನು ಸೋಲುತ್ತಿರುವಿ. ನಿಜವಾಗಿಯೂ ನೀನೇ ನಾಶವಾಗುವಿ.” |
14
|
ಅವರು ಮಾತಾಡುತ್ತಿರುವಾಗಲೇ ರಾಜಕಂಚುಕಿಗಳು ಅವನನ್ನು ರಾಣಿ ಎಸ್ತೇರಳು ಏರ್ಪಡಿಸಿದ್ದ ಔತಣಕ್ಕೆ ಕರೆದುಕೊಂಡು ಹೋಗಲು ಬಂದರು. |
Esther 6:8 Kannada Language Bible Words basic statistical display
COMING SOON ...