1
|
ಹನ್ನೆರಡನೆಯ ತಿಂಗಳಾದ ಅದಾರ್ ಮಾಸದ ಹದಿಮೂರನೇ ದಿವಸದಲ್ಲಿ ಯೆಹೂದ್ಯರ ವೈರಿಗಳು ರಾಜಾಜ್ಞೆಗನುಸಾರವಾಗಿ ಯೆಹೂದ್ಯರನ್ನು ನಿರ್ನಾಮ ಮಾಡಬೇಕಾಗಿತ್ತು. ಅವರು ಆ ದಿವಸಕ್ಕಾಗಿ ಕಾಯುತ್ತಿರುವಾಗ ಪರಿಸ್ಥಿತಿಯು ಬದಲಾಯಿತು. ಯೆಹೂದ್ಯರು ಅವರ ಶತ್ರುಗಳಿಗಿಂತ ಬಲಾಢ್ಯರಾದರು. |
2
|
ರಾಜನಾದ ಅಹಷ್ವೇರೋಷನ ಸಾಮ್ರಾಜ್ಯದ ಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಮ್ಮನ್ನು ಕೊಲ್ಲಲು ಬರುವ ವೈರಿಗಳನ್ನು ಎದುರಿಸಲು ಒಟ್ಟಾಗಿ ಸೇರಿದರು. ಇವರಿಗೆ ವಿರುದ್ಧವಾಗಿ ಬಿದ್ದು ಹೊಡೆದಾಡಲು ಯಾರಿಗೂ ಧೈರ್ಯಸಾಲಲಿಲ್ಲ. ಯೆಹೂದ್ಯರ ಮೇಲೆ ಜನರಿಗೆ ಭೀತಿ ಉಂಟಾಯಿತು. |
3
|
ಅಲ್ಲದೆ ಸಂಸ್ಥಾನಗಳಲ್ಲಿದ್ದ ಅಧಿಕಾರಿಗಳು, ರಾಜ್ಯಪಾಲರು, ಆಡಳಿತಾಧಿಕಾರಿಗಳು ಯೆಹೂದ್ಯರಿಗೆ ನೆರವಾದರು. ಯಾಕಂದರೆ ಅವರು ಮೊರ್ದೆಕೈಗೆ ಹೆದರುತ್ತಿದ್ದರು. |
4
|
ಮೊರ್ದೆಕೈ ಅರಮನೆಯಲ್ಲಿ ಅತ್ಯಂತ ಪ್ರಭಾವಶಾಲಿಯಾಗಿದ್ದನು. ಸಂಸ್ಥಾನಗಳಲ್ಲಿರುವವರೆಲ್ಲರೂ ಅವನ ಪ್ರಖ್ಯಾತಿಯ ಬಗ್ಗೆ ಕೇಳಿದ್ದರು. ದಿನೇದಿನೇ ಮೊರ್ದೆಕೈ ಬಲಶಾಲಿಯಾಗುತ್ತಾ ಬಂದನು. |
5
|
ತಮ್ಮ ಶತ್ರುಗಳನ್ನೆಲ್ಲಾ ಯೆಹೂದ್ಯರು ಸೋಲಿಸಿ ತಮ್ಮ ಖಡ್ಗಗಳಿಂದ ನಾಶಮಾಡಿದರು; ತಮ್ಮನ್ನು ದ್ವೇಷಿಸುತ್ತಿದ್ದವರನ್ನು ತಮಗಿಷ್ಟ ಬಂದಂತೆ ಮಾಡಿದರು. |
6
|
ರಾಜಧಾನಿಯಾದ ಶೂಷನ್ನಲ್ಲಿಯೇ ಯೆಹೂದ್ಯರು ಐನೂರು ಮಂದಿ ಶತ್ರುಗಳನ್ನು ಹತಿಸಿದರು. |
7
|
ಅವರು ಹತಿಸಿದವರಾರೆಂದರೆ: ಪರ್ಷಂದಾತ, ದಲ್ಫೋನ್, ಅಸ್ಪಾತ, |
9
|
[This verse may not be a part of this translation] |
10
|
ಇವರು ಹಾಮಾನನ ಹತ್ತು ಗಂಡುಮಕ್ಕಳಾಗಿದ್ದರು. ಹಾಮಾನನು ಹಮ್ಮೆದಾತನ ಮಗನೂ ಯೆಹೂದ್ಯರ ಶತ್ರುವೂ ಆಗಿದ್ದನು. ಯೆಹೂದ್ಯರು ಅವರನ್ನು ಹತಿಸಿದ್ದು ಮಾತ್ರವೇ, ಹೊರತು ಅವರ ಸೊತ್ತುಗಳನ್ನು ಅಪಹರಿಸಲಿಲ್ಲ. |
11
|
ಶೂಷನ್ ನಗರದಲ್ಲಿ ಆ ದಿವಸ ಎಷ್ಟು ಮಂದಿ ಸತ್ತರು ಎಂದು ಅರಸನು ಕೇಳಿ ತಿಳಿದುಕೊಂಡನು. |
12
|
ಮತ್ತು ರಾಣಿಯಾದ ಎಸ್ತೇರಳಿಗೆ, “ಶೂಷನ್ನಲ್ಲಿ ಯೆಹೂದ್ಯರು ಹಾಮಾನನ ಹತ್ತು ಗಂಡುಮಕ್ಕಳೂ ಸೇರಿಸಿ ಐನೂರು ಮಂದಿಯನ್ನು ಕೊಂದಿದ್ದಾರೆ. ಇನ್ನು ಬೇರೆ ಸಂಸ್ಥಾನಗಳಲ್ಲಿ ನಿನಗೇನಾಗಬೇಕು? ನನಗೆ ಹೇಳು. ನಾನು ಹಾಗೆಯೇ ಮಾಡಿಸುತ್ತೇನೆ” ಎಂದು ಹೇಳಿದನು. |
13
|
ಅದಕ್ಕೆ ಎಸ್ತೇರಳು, “ಅರಸನು ಇಷ್ಟಪಟ್ಟಲ್ಲಿ ನಾಳೆಯೂ ಶೂಷನ್ನಲ್ಲಿರುವ ಯೆಹೂದ್ಯರು ಹೀಗೆಯೇ ಮಾಡಲಿ ಮತ್ತು ಹಾಮಾನನ ಆ ಹತ್ತು ಮಂದಿ ಗಂಡು ಮಕ್ಕಳನ್ನು ಗಲ್ಲುಕಂಬದಲ್ಲಿ ನೇತಾಡಿಸಲಿ” ಅಂದಳು. |
14
|
ಅದೇ ರೀತಿ ಅರಸನು ಆಜ್ಞಾಪಿಸಿದನು. ರಾಜಾಜ್ಞೆಯು ಇನ್ನೊಂದು ದಿವಸ ಮುಂದುವರಿಯಿತು ಮತ್ತು ಹಾಮಾನನ ಹತ್ತು ಮಂದಿ ಗಂಡು ಮಕ್ಕಳನ್ನು ಗಲ್ಲಿಗೆ ಹಾಕಿದರು. |
15
|
ಶೂಷನ್ ನಗರದಲ್ಲಿದ್ದ ಯೆಹೂದ್ಯರು ಅದಾರ್ ಮಾಸದ ಹದಿನಾಲ್ಕನೆಯ ದಿನದಂದು ಒಟ್ಟಾಗಿ ಸೇರಿ ಆ ದಿವಸ ಮುನ್ನೂರು ಮಂದಿಯನ್ನು ಹತಿಸಿದರೆ ಹೊರತು, ಅವರ ಆಸ್ತಿಪಾಸ್ತಿಯನ್ನು ಮುಟ್ಟಲಿಲ್ಲ. |
16
|
ಅದೇ ಸಮಯದಲ್ಲಿ ಇತರ ಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಾವು ಬಲ ಹೊಂದುವಂತೆ ಒಟ್ಟಾಗಿ ಸೇರಿ ಒಗ್ಗಟ್ಟಿನಲ್ಲಿದ್ದು ತಮ್ಮ ವೈರಿಗಳನ್ನು ಸಂಪೂರ್ಣವಾಗಿ ನಿರ್ನಾಮ ಮಾಡಿದರು. ಹೀಗೆ ಒಟ್ಟು ಎಪ್ಪತ್ತೈದು ಸಾವಿರ ಜನರು ಹತಿಸಲ್ಪಟ್ಟರು. ಆದರೆ ಅವರ ಆಸ್ತಿಯನ್ನು ಸೂರೆ ಮಾಡಲಿಲ್ಲ. |
17
|
ಅದಾರ್ ಮಾಸದ ಹದಿಮೂರನೇ ದಿವಸದಲ್ಲಿ ಈ ಕಾರ್ಯವು ನಡೆಯಿತು. ಹದಿನಾಲ್ಕನೆಯ ದಿವಸದಲ್ಲಿ ಅವರು ವಿಶ್ರಾಂತಿ ತೆಗೆದುಕೊಂಡರು. ಆ ದಿವಸವನ್ನು ಯೆಹೂದ್ಯರು ತಮ್ಮ ಸಂತಸದ ದಿನವಾಗಿ ಆಚರಿಸಿದರು. |
18
|
ಅದಾರ್ ತಿಂಗಳಿನ ಹದಿಮೂರನೇ ಮತ್ತು ಹದಿನಾಲ್ಕನೇ ದಿವಸಗಳಲ್ಲಿ ಶೂಷನ್ ನಗರದ ಯೆಹೂದ್ಯರು ಒಟ್ಟಾಗಿ ಸೇರಿ ಬಂದು ಹದಿನೈದನೆಯ ದಿವಸದಲ್ಲಿ ಅವರು ವಿಶ್ರಾಂತಿ ತೆಗೆದುಕೊಂಡರು. ಹದಿನೈದನೆಯ ದಿವಸವನ್ನು ಅವರು ಸಂತಸದ ಹಬ್ಬವನ್ನಾಗಿ ಮಾಡಿದರು. |
19
|
ದೇಶದ ಎಲ್ಲಾ ಹಳ್ಳಿಗಳಲ್ಲಿದ್ದ ಯೆಹೂದ್ಯರು ಅದಾರ್ ತಿಂಗಳಿನ ಹದಿನಾಲ್ಕನೆಯ ದಿವಸವನ್ನು ಪೂರಿಮ್ ದಿವಸವನ್ನಾಗಿ ಆಚರಿಸಿದರು. ಹದಿನಾಲ್ಕನೆಯ ದಿವಸವು ಅವರಿಗೆ ಸಂತಸದ ಹಬ್ಬ. ಆ ದಿವಸ ಅವರು ಔತಣ ಮಾಡಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಟ್ಟು ಕಳುಹಿಸಿದರು. |
20
|
ನಡೆದ ಸಂಗತಿಗಳನ್ನೆಲ್ಲಾ ಮೊರ್ದೆಕೈ ಬರೆದಿಟ್ಟು ಅಹಷ್ವೇರೋಷನ ಸಾಮ್ರಾಜ್ಯದಲ್ಲಿ ವಾಸಿಸಿದ್ದ ಎಲ್ಲಾ ಯೆಹೂದ್ಯರಿಗೆ, ದೂರ ಮತ್ತು ಹತ್ತಿರದಲ್ಲಿರುವ ಯೆಹೂದ್ಯರಿಗೂ ಪತ್ರ ಬರೆಯಿಸಿದನು. |
21
|
ಅದರಲ್ಲಿ ಅವನು ಯೆಹೂದ್ಯರೆಲ್ಲರೂ ಪ್ರತೀ ವರುಷ ಅದಾರ್ ತಿಂಗಳಿನ ಹದಿನಾಲ್ಕನೇ ಮತ್ತು ಹದಿನೈದನೇ ದಿವಸಗಳನ್ನು ಪೂರಿಮ್ ದಿವಸಗಳನ್ನಾಗಿ ಆಚರಿಸಬೇಕು ಎಂಬದಾಗಿ ಆದೇಶ ನೀಡಿದನು. |
22
|
ಯಾಕೆಂದರೆ ಆ ದಿವಸದಲ್ಲಿ ಯೆಹೂದ್ಯರು ತಮ್ಮ ಶತ್ರುಗಳನ್ನು ಸದೆ ಬಡಿದರು. ಆ ದಿವಸದಲ್ಲಿ ಅವರಿಗೆ ಶೋಕದ ಬದಲಾಗಿ ಸಂತಸವು ಒದಗಿಬಂತು. ಮತ್ತು ಆ ದಿವಸದಲ್ಲಿ ಅವರ ರೋಧನವು ಹರ್ಷಧ್ವನಿಯಾಗಿ ಮಾರ್ಪಟ್ಟಿತು. ಮೊರ್ದೆಕೈಯು ಎಲ್ಲಾ ಯೆಹೂದ್ಯರಿಗೆ ಪತ್ರ ಬರೆಯಿಸಿದನು. ಆ ದಿವಸದಲ್ಲಿ ಹಬ್ಬವನ್ನು ಆಚರಿಸಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಡಬೇಕು ಎಂಬುದಾಗಿ ಬರೆಯಿಸಿದನು. |
23
|
ಮೊರ್ದೆಕೈ ಪತ್ರದಲ್ಲಿ ಬರೆದದ್ದನ್ನು ಯೆಹೂದ್ಯರು ಒಪ್ಪಿಕೊಂಡು ಆ ವರ್ಷದಲ್ಲಿ ನಡೆದ ಉತ್ಸವವು ತಮ್ಮಲ್ಲಿ ವಾರ್ಷಿಕೋತ್ಸವವಾಗಬೇಕೆಂದು ನಿರ್ಧರಿಸಿದರು. |
24
|
ಅಗಾನನ ವಂಶದವನಾದ ಹಮ್ಮೆದಾತನ ಮಗನಾದ ಹಾಮಾನನು ಸಮಸ್ತ ಯೆಹೂದ್ಯರ ಶತ್ರುವಾಗಿದ್ದನು. ಯೆಹೂದ್ಯರನ್ನೆಲ್ಲಾ ಸಂಹರಿಸಲು ಆತನು ಒಂದು ದುಷ್ಟ ಹಂಚಿಕೆಯನ್ನು ಹೂಡಿದನು; ಮತ್ತು ಆ ನಿರ್ಧಿಷ್ಟ ದಿನಕ್ಕಾಗಿ ಅವನು ಚೀಟು ಹಾಕಿದನು. ಆ ದಿವಸಗಳಲ್ಲಿ ಚೀಟು ಹಾಕುವುದಕ್ಕೆ “ಪೂರ್” ಎಂದು ಹೇಳುತ್ತಿದ್ದರು. ಹಾಗೆ ಆ ಹಬ್ಬವು “ಪೂರಿಮ್” ಎಂಬ ಹೆಸರಿನಿಂದ ಕರೆಯಲ್ಪಟ್ಟಿತ್ತು. |
25
|
ಹಾಮಾನನ ಕುತಂತ್ರವನ್ನು ಎಸ್ತೇರ್ ರಾಣಿಯು ರಾಜನ ಸಂಗಡ ಮಾತಾಡುವುದರ ಮೂಲಕ ನಿರರ್ಥಕಗೊಳಿಸಿ ಅವನಿಗೂ ಅವನ ಕುಟುಂಬಕ್ಕೂ ಮರಣವಾಗುವಂತೆ ಮಾಡಿದಳು. ಹಾಮಾನನೂ ಅವನ ಗಂಡುಮಕ್ಕಳೂ ಗಲ್ಲಿಗೇರಿಸಲ್ಪಟ್ಟರು. |
26
|
[This verse may not be a part of this translation] |
27
|
[This verse may not be a part of this translation] |
28
|
ತಮ್ಮ ವೈರಿಗಳಿಗಾಗುವ ದಂಡನೆಯನ್ನು ಅವರು ಈ ಹಬ್ಬದ ಸಮಯದಲ್ಲಿ ಜ್ಞಾಪಕ ಮಾಡಿಕೊಳ್ಳುವರು. ಯೆಹೂದ್ಯರ ಎಲ್ಲಾ ಗೋತ್ರಗಳವರು ಮತ್ತು ಅವರ ಪ್ರಾಂತ್ಯಗಳಲ್ಲಿರುವವರು ಈ ದಿನಗಳನ್ನು ಪ್ರತಿ ವರುಷ ಸರಿಯಾದ ಸಮಯದಲ್ಲಿ ಸರಿಯಾದ ರೀತಿಯಲ್ಲಿ ಈ ಹಬ್ಬವನ್ನು ಪ್ರತಿಯೊಂದು ಪ್ರಾಂತ್ಯಗಳಲ್ಲಿಯೂ ಪ್ರತಿಯೊಂದು ಊರುಗಳಲ್ಲಿಯೂ ನೆನಪುಮಾಡಿಕೊಳ್ಳುವರು. ಇಂದಿಗೂ ಯೆಹೂದ್ಯರು ಈ ದಿನಗಳನ್ನು ನೆನಪುಮಾಡಿಕೊಂಡು ಪೂರಿಮ್ ಹಬ್ಬವನ್ನು ಆಚರಿಸುತ್ತಾರೆ. |
29
|
ಹಾಗೆ, ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಮತ್ತು ಯೆಹೂದಿಯಾದ ಮೊರ್ದೆಕೈಯು ಈ ಪೂರಿಮ್ ಹಬ್ಬದ ಬಗ್ಗೆ ಒಂದು ಅಧಿಕೃತ ಪತ್ರವನ್ನು ಬರೆಯಿಸಿದರು. ಜನರು ಅವರ ಎರಡನೆಯ ಪತ್ರವನ್ನು ಸತ್ಯವೆಂದು ನಂಬುವ ಹಾಗೆ ರಾಜ ಮುದ್ರೆಯೊಂದಿಗೆ ಕಳುಹಿಸಿದರು. |
30
|
ಅರಸನ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿರುವ ಯೆಹೂದ್ಯರಿಗೆಲ್ಲಾ ಪತ್ರವನ್ನು ಕಳುಹಿಸಿದನು. ಅದರಲ್ಲಿ ಆ ಹಬ್ಬವು ಜನರು ಮಧ್ಯದಲ್ಲಿ ಸಮಾಧಾನ ಹುಟ್ಟಿಸಿ ಒಬ್ಬರ ಮೇಲೊಬ್ಬರ ಮೇಲೆ ನಂಬಿಕೆ ಬೆಳೆಸುವುದು ಎಂದು ಬರೆದಿದ್ದನು. |
31
|
ಮತ್ತು ಪತ್ರದಲ್ಲಿ ಪೂರಿಮ್ ಹಬ್ಬವನ್ನು ಆಚರಿಸಲು ಪ್ರಾರಂಭಿಸಿರಿ ಎಂದೂ ಬರೆದಿದ್ದನು. ಈ ಹಬ್ಬವನ್ನು ಯಾವ ದಿನ ಆಚರಿಸಬೇಕು ಎಂಬುದನ್ನೂ ನಮೂದಿಸಿದನು. ಈ ಎರಡು ವಿಶ್ರಾಂತಿ ದಿನಗಳನ್ನು ತಮಗೂ ತಮ್ಮ ಸಂತಾನಗಳವರಿಗೂ ಖಾಯಂಗೊಳಿಸಲು ಯೆಹೂದಿಯಾದ ಮೊರ್ದೆಕೈಯೂ ರಾಣಿ ಎಸ್ತೇರಳೂ ಯೆಹೂದ್ಯರಿಗೆ ಒಂದು ಆಜ್ಞೆಯನ್ನು ಹೊರಡಿಸಿದರು. ತಮಗೆ ಸಂಬಂಧಿಸಿದ ಕೆಟ್ಟಸಂಗತಿಗಳನ್ನು ನೆನಪಿಗೆ ತಂದುಕೊಂಡು ಬೇರೆ ವಿಶ್ರಾಂತಿ ದಿನಗಳಲ್ಲಿ ಉಪವಾಸವಿದ್ದು ಗೋಳಾಡುವಂತೆ ಈ ಹಬ್ಬದ ದಿನಗಳಲ್ಲಿಯೂ ಅವರು ಮಾಡುವರು. |
32
|
ಎಸ್ತೇರಳ ಈ ಆಜ್ಞೆಯು ಅಧಿಕೃತವಾಗಿದ್ದು ಪುಸ್ತಕದಲ್ಲಿ ಬರೆಯಲ್ಪಟ್ಟಿತು. |
Esther 9:7 Kannada Language Bible Words basic statistical display
COMING SOON ...