1
|
ಯಾಕೋಬನು (ಇಸ್ರೇಲನು) ತನ್ನ ಗಂಡುಮಕ್ಕಳೊಂದಿಗೆ ಈಜಿಪ್ಟಿಗೆ ಪ್ರಯಾಣ ಮಾಡಿದನು; ತಮ್ಮ ಕುಟುಂಬಗಳೊಡನೆ ಹೋದ ಅವನ ಗಂಡುಮಕ್ಕಳು ಯಾರೆಂದರೆ: |
2
|
ರೂಬೇನ್, ಸಿಮೆಯೋನ್, ಲೇವಿ, ಯೆಹೂದ, |
3
|
ಇಸ್ಸಾಕಾರ್, ಜೆಬುಲೂನ್, ಬೆನ್ಯಾಮೀನ್, |
4
|
ದಾನ್, ನಫ್ತಾಲಿ, ಗಾದ್ ಮತ್ತು ಅಶೇರ್. |
5
|
ಯಾಕೋಬನ ಸಂತತಿಯವರಲ್ಲಿ ಒಟ್ಟು ಎಪ್ಪತ್ತು ಮಂದಿ ಇದ್ದರು. (ಯಾಕೋಬನ ಹನ್ನೆರಡು ಮಂದಿ ಗಂಡುಮಕ್ಕಳಲ್ಲಿ ಒಬ್ಬನಾದ ಯೋಸೇಫನು ಮೊದಲೇ ಈಜಿಪ್ಟಿನಲ್ಲಿದ್ದನು.) |
6
|
ಬಳಿಕ ಯೋಸೇಫನೂ ಅವನ ಸಹೋದರರೂ ಮತ್ತು ಆ ತಲೆಮಾರಿನ ಜನರೆಲ್ಲರೂ ಸತ್ತುಹೋದರು. |
7
|
ಆದರೆ ಇಸ್ರೇಲರಿಗೆ ಅನೇಕ ಮಕ್ಕಳಿದ್ದರು; ಅವರ ಸಂಖ್ಯೆಯು ಹೆಚ್ಚಾಗತೊಡಗಿತು. ಇಸ್ರೇಲರು ಬಲಗೊಂಡರು; ಈಜಿಪ್ಟಿನಲ್ಲೆಲ್ಲಾ ತುಂಬಿಕೊಂಡರು. ಇಸ್ರೇಲರಿಗೆ ಹಿಂಸೆ |
8
|
ಬಳಿಕ ಒಬ್ಬ ಹೊಸ ರಾಜನು ಈಜಿಪ್ಟನ್ನು ಆಳತೊಡಗಿದನು. ಈ ರಾಜನಿಗೆ ಯೋಸೇಫನ ವಿಷಯವಾಗಿ ತಿಳಿದಿರಲಿಲ್ಲ. |
9
|
ಈ ರಾಜನು ತನ್ನ ಜನರಿಗೆ, “ಇಸ್ರೇಲರ ಸಂಖ್ಯೆಯು ಹೆಚ್ಚಾಯಿತು; ಅವರು ನಮಗಿಂತಲೂ ಬಲಿಷ್ಠರಾದರು. |
10
|
ಯುದ್ಧವೇನಾದರೂ ಸಂಭವಿಸಿದರೆ, ಇಸ್ರೇಲರು ನಮ್ಮ ವೈರಿಗಳೊಡನೆ ಸೇರಿಕೊಂಡು ನಮ್ಮನ್ನು ಸೋಲಿಸಿ ನಮ್ಮಿಂದ ತಪ್ಪಿಸಿಕೊಳ್ಳಬಹುದು. ಆದ್ದರಿಂದ ಅವರು ಅಭಿವೃದ್ಧಿಯಾಗದಂತೆ ನಾವು ಉಪಾಯವನ್ನು ಮಾಡೋಣ” ಎಂದು ಹೇಳಿದನು. |
11
|
ಆದ್ದರಿಂದ ಅವರು ಇಸ್ರೇಲರನ್ನು ಹಿಂಸಿಸಲು ತೀರ್ಮಾನಿಸಿದರು. ಇಸ್ರೇಲರಿಂದ ಬಿಟ್ಟೀಕೆಲಸ ಮಾಡಿಸುವುದಕ್ಕಾಗಿ ಅಧಿಕಾರಿಗಳನ್ನು ನೇಮಿಸಿದರು. ಈ ಅಧಿಕಾರಿಗಳು ರಾಜನಿಗಾಗಿ ಪಿತೋಮ್ ಮತ್ತು ರಾಮ್ಸೇಸ್ ಪಟ್ಟಣಗಳನ್ನು ಇಸ್ರೇಲರಿಂದ ಬಲವಂತವಾಗಿ ಕಟ್ಟಿಸಿದರು; ಧಾನ್ಯಗಳನ್ನು ಮತ್ತು ಇನ್ನಿತರ ವಸ್ತುಗಳನ್ನು ಶೇಖರಿಸುವುದಕ್ಕೆ ರಾಜನು ಈ ಪಟ್ಟಣಗಳನ್ನು ಉಪಯೋಗಿಸಿದನು. |
12
|
ಈಜಿಪ್ಟಿನವರು ಇಸ್ರೇಲರಿಂದ ಪ್ರಯಾಸಕರವಾದ ಕೆಲಸಗಳನ್ನು ಬಲವಂತವಾಗಿ ಮಾಡಿಸಿದಷ್ಟೂ ಇಸ್ರೇಲರು ಹೆಚ್ಚು ಹರಡಿಕೊಂಡದ್ದರಿಂದ ಈಜಿಪ್ಟಿನ ಜನರು ಇಸ್ರೇಲರಿಗೆ ಹೆಚ್ಚೆಚ್ಚಾಗಿ ಭಯಪಟ್ಚರು. |
13
|
ಅಲ್ಲದೆ ಇನ್ನೂ ಪ್ರಯಾಸಕರವಾದ ಕೆಲಸವನ್ನು ಬಲವಂತದಿಂದ ಮಾಡಿಸಿಕೊಂಡರು. |
14
|
ಈಜಿಪ್ಟಿನವರು ಇಸ್ರೇಲರ ಜೀವಿತವನ್ನು ಕಷ್ಟಕರವನ್ನಾಗಿ ಮಾಡಿದರು. ಇಸ್ರೇಲರಿಂದ ಇಟ್ಟಿಗೆಗಳನ್ನೂ ಗಾರೆಗಳನ್ನೂ ಬೇಸಾಯವನ್ನೂ ಪ್ರತಿಯೊಂದು ಕೆಲಸವನ್ನು ಬಲವಂತವಾಗಿ ಮಾಡಿಸಿಕೊಂಡರು. |
15
|
ಇಸ್ರೇಲಿನ ಸ್ತ್ರೀಯರಿಗೆ ಹೆರಿಗೆ ಮಾಡಿಸಲು ಇಬ್ರಿಯರಾದ ಇಬ್ಬರು ದಾದಿಯರಿದ್ದರು. ಇವರ ಹೆಸರು: ಶಿಫ್ರಾ ಮತ್ತು ಪೂಗಾ. ಈಜಿಪ್ಟಿನ ರಾಜನು ಈ ದಾದಿಯರೊಡನೆ ಮಾತಾಡಿ ಅವರಿಗೆ, |
16
|
“ಇಬ್ರಿಯ ಸ್ತ್ರೀಯರಿಗೆ ನೀವು ಹೆರಿಗೆ ಮಾಡುವಾಗ ಹೆಣ್ಣುಮಗು ಹುಟ್ಟಿದರೆ, ಅದನ್ನು ಉಳಿಸಿರಿ; ಗಂಡುಮಗು ಹುಟ್ಟಿದರೆ ಸಾಯಿಸಿರಿ!” ಎಂದು ಹೇಳಿದನು. |
17
|
ಆದರೆ ಆ ದಾದಿಯರಿಗೆ ದೇವರಲ್ಲಿ ಭಯಭಕ್ತಿ ಇದ್ದಕಾರಣ ಅವರು ರಾಜನ ಆಜ್ಞೆಗೆ ವಿಧೇಯರಾಗದೆ ಗಂಡುಮಕ್ಕಳನ್ನೂ ಉಳಿಸಿದರು. |
18
|
ಈಜಿಪ್ಟಿನ ರಾಜನು ದಾದಿಯರನ್ನು ಕರೆದು, “ನೀವು ಹೀಗೇಕೆ ಮಾಡುತ್ತಿದ್ದೀರಿ? ಗಂಡುಮಕ್ಕಳನ್ನು ನೀವು ಉಳಿಸುತ್ತಿರುವುದೇಕೆ?” ಎಂದು ಕೇಳಿದನು. |
19
|
ದಾದಿಯರು, “ಇಬ್ರಿಯ ಸ್ತ್ರೀಯರು ಈಜಿಪ್ಟಿನ ಸ್ತ್ರೀಯರಿಗಿಂತ ಚುರುಕಾಗಿದ್ದಾರೆ. ನಾವು ಅವರಿಗೆ ಸಹಾಯ ಮಾಡುವುದಕ್ಕಿಂತ ಮೊದಲೇ ಅವರು ಹೆರುತ್ತಾರೆ” ಎಂದು ಹೇಳಿದರು. |
20
|
[This verse may not be a part of this translation] |
21
|
[This verse may not be a part of this translation] |
22
|
ಆದ್ದರಿಂದ ಫರೋಹನು ತನ್ನ ಜನರಿಗೆಲ್ಲಾ, “ಇಬ್ರಿಯರಿಗೆ ಹುಟ್ಟುವ ಗಂಡುಕೂಸುಗಳನ್ನೆಲ್ಲಾ ನೈಲ್ ನದಿಗೆ ಎಸೆದುಬಿಡಬೇಕು. ಆದರೆ ಎಲ್ಲಾ ಹೆಣ್ಣುಮಕ್ಕಳು ಬದುಕಲಿ” ಎಂದು ಆಜ್ಞಾಪಿಸಿದನು. ಮೋಶೆಯ ಬಾಲ್ಯ |
Exodus 1:14 Kannada Language Bible Words basic statistical display
COMING SOON ...