1
|
ಬಳಿಕ ಯೆಹೋವನು ಮೋಶೆಗೆ, “ನಾನು ಫರೋಹನಿಗೂ ಈಜಿಪ್ಟಿಗೂ ಮತ್ತೊಂದು ವಿಪತ್ತನ್ನು ಬರಮಾಡುತ್ತೇನೆ. ಆಗ ಅವನು ನಿಮ್ಮನ್ನು ಈಜಿಪ್ಟಿನಿಂದ ಕಳುಹಿಸುವನು; ನಿಮ್ಮನ್ನು ಬಲವಂತದಿಂದ ಕಳುಹಿಸಿಬಿಡುವನು. |
2
|
ನೀನು ಇಸ್ರೇಲರಿಗೆ ಈ ಸಂದೇಶವನ್ನು ತಿಳಿಸು: ‘ಸ್ತ್ರೀಯರೂ ಪುರುಷರೂ ತಮ್ಮ ನೆರೆಯವರಿಂದ ಬೆಳ್ಳಿಬಂಗಾರಗಳ ವಸ್ತುಗಳನ್ನು ಕೇಳಿಕೊಳ್ಳಬೇಕು. |
3
|
ಈಜಿಪ್ಟಿನವರು ನಿಮಗೆ ದಯೆತೋರುವಂತೆ ಯೆಹೋವನು ಅವರನ್ನು ಪ್ರೇರೇಪಿಸುವನು. ಈಜಿಪ್ಟಿನ ಜನರು ಮತ್ತು ಫರೋಹನ ಅಧಿಕಾರಿಗಳು ಮೋಶೆಯನ್ನು ಮಹಾಪುರುಷನೆಂದು ತಿಳಿದುಕೊಂಡಿದ್ದಾರೆ” ಎಂದು ಹೇಳಿದನು. |
4
|
ಮೋಶೆಯು ಜನರಿಗೆ, “ಯೆಹೋವನು ಇಂತೆನ್ನುತ್ತಾನೆ: ‘ಇಂದು ಮಧ್ಯರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗುವೆನು. |
5
|
ಈಜಿಪ್ಟಿನ ಚೊಚ್ಚಲು ಮಕ್ಕಳೆಲ್ಲರೂ ಅಂದರೆ ಫರೋಹನ ಚೊಚ್ಚಲು ಮಗನಿಂದಿಡಿದು ಧಾನ್ಯವನ್ನು ಬೀಸುವ ಸೇವಕಿಯ ಚೊಚ್ಚಲು ಮಗನವರೆಗೂ ಇರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಇದಲ್ಲದೆ ಚೊಚ್ಚಲು ಪಶುಗಳೂ ಸಾಯುತ್ತವೆ. |
6
|
ಈಜಿಪ್ಟಿನಲ್ಲೆಲ್ಲಾ ದೊಡ್ಡ ಗೋಳಾಟ ಉಂಟಾಗುವುದು, ಅಂಥ ಗೋಳಾಟ ಈವರೆಗೂ ಆಗಿಲ್ಲ; ಮುಂದೆಯೂ ಆಗುವುದಿಲ್ಲ. |
7
|
ಆದರೆ ಇಸ್ರೇಲರಲ್ಲಿ ಯಾರಿಗೂ ಕೇಡಾಗುವುದಿಲ್ಲ. ಒಂದು ನಾಯಿಯೂ ಅವರಿಗೆ ಬೊಗಳುವುದಿಲ್ಲ. ಇಸ್ರೇಲಿನ ಜನರಿಗಾಗಲಿ ಪಶುಗಳಿಗಾಗಲಿ ಕೇಡಾಗುವುದಿಲ್ಲ. ಇಸ್ರೇಲರಿಗೂ ಮತ್ತು ಈಜಿಪ್ಟಿನವರಿಗೂ ನಾನು ವ್ಯತ್ಯಾಸ ಮಾಡಿದ್ದೇನೆಂದು ಆಗ ನೀವು ತಿಳಿದುಕೊಳ್ಳುವಿರಿ. |
8
|
ಆಗ ನಿಮ್ಮ ಈ ಗುಲಾಮರೆಲ್ಲರೂ (ಈಜಿಪ್ಟಿನ ಅಧಿಕಾರಿಗಳು) ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸುವರು. ಅವರು, “ಹೊರಟುಹೋಗಿ, ನಿಮ್ಮ ಜನರೆಲ್ಲರನ್ನು ನಿಮ್ಮೊಂದಿಗೆ ಕರೆದುಕೊಂಡು ಹೋಗಿರಿ” ಎಂದು ಹೇಳುವರು. ಆಗ ನಾನು ಫರೋಹನ ಬಳಿಯಿಂದ ಬಿಟ್ಟುಹೋಗುವೆನು” ಅಂದನು. |
9
|
ಬಳಿಕ ಯೆಹೋವನು ಮೋಶೆಗೆ, “ಫರೋಹನು ನಿನ್ನ ಮಾತಿಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಾನು ನನ್ನ ಮಹಾಶಕ್ತಿಯನ್ನು ಈಜಿಪ್ಟಿನಲ್ಲಿ ತೋರಿಸಬೇಕಾಗಿದೆ” ಅಂದನು. |
10
|
ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಇಸ್ರೇಲರನ್ನು ಕಳುಹಿಸಿಕೊಡಲಿಲ್ಲ; ಆದ್ದರಿಂದ ಮೋಶೆ ಆರೋನರು ಈ ಅದ್ಭುತಕಾರ್ಯಗಳನ್ನೆಲ್ಲಾ ಮಾಡಿದರು. |
Exodus 11:1 Kannada Language Bible Words basic statistical display
COMING SOON ...