1
|
ಮೋಶೆ ಆರೋನರು ಇನ್ನೂ ಈಜಿಪ್ಟಿನಲ್ಲಿದ್ದಾಗ ಯೆಹೋವನು ಅವರೊಡನೆ ಮಾತಾಡಿ, |
2
|
“ಈ ತಿಂಗಳು ನಿಮಗೆ ವರ್ಷದ ಮೊದಲನೆ ತಿಂಗಳಾಗಿರುವುದು. |
3
|
ಈ ಆಜ್ಞೆಯು ಇಡೀ ಇಸ್ರೇಲರ ಸಮೂಹಕ್ಕೆ ಅನ್ವಯಿಸುತ್ತದೆ. ಈ ತಿಂಗಳ ಹತ್ತನೆಯ ದಿನದಲ್ಲಿ ಪ್ರತಿಯೊಬ್ಬನು ತನ್ನ ಮನೆಯಲ್ಲಿರುವ ಜನರಿಗಾಗಿ ಒಂದು ಕುರಿಮರಿಯನ್ನು ಅಥವಾ ಒಂದು ಆಡುಮರಿಯನ್ನು ಕೊಯ್ಯಬೇಕು. |
4
|
ಅದನ್ನು ಸಂಪೂರ್ಣವಾಗಿ ತಿನ್ನಲು ಅವನ ಮನೆಯಲ್ಲಿ ಸಾಕಷ್ಟು ಜನರಿಲ್ಲದಿದ್ದರೆ ಅವನು ತನ್ನ ನೆರೆಯವರನ್ನು ಆಮಂತ್ರಿಸಿ ಅವರೊಂದಿಗೆ ಅದರ ಮಾಂಸವನ್ನು ಹಂಚಿಕೊಳ್ಳಬೇಕು. ಪ್ರತಿಯೊಬ್ಬನಿಗೂ ತಿನ್ನಲು ಸಾಕಷ್ಟು ಮಾಂಸವಿರಬೇಕು. |
5
|
ಅದು ಒಂದು ವರ್ಷದ ಗಂಡು ಕುರಿಯಾಗಿರಬೇಕು ಅಥವಾ ಆಡಾಗಿರಬೇಕು. ಅಲ್ಲದೆ ಕಳಂಕ ರಹಿತವಾಗಿರಬೇಕು. |
6
|
ಈ ತಿಂಗಳ ಹದಿನಾಲ್ಕನೆಯ ದಿನದವರೆಗೆ ನೀವು ಆ ಪಶುವನ್ನು ಸಾಕಬೇಕು. ಅಂದು ಸಂಜೆ ಇಸ್ರೇಲರೆಲ್ಲರೂ ಆ ಪಶುಗಳನ್ನು ಕೊಯ್ಯಬೇಕು. |
7
|
ಈ ಪಶುಗಳ ರಕ್ತವನ್ನು ತೆಗೆದಿಟ್ಟು ಜನರು ಭೋಜನಮಾಡುವ ಮನೆಗಳ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗಳಿಗೂ ಆ ರಕ್ತವನ್ನು ಹಚ್ಚಬೇಕು. |
8
|
“ಅಂದು ರಾತ್ರಿ ಆ ಪಶುವಿನ ಮಾಂಸವನ್ನು ಸುಟ್ಟು ಸಂಪೂರ್ಣವಾಗಿ ತಿನ್ನಬೇಕು. ಅದರೊಡನೆ ಕಹಿಯಾದ ಪಲ್ಯಗಳನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತಿನ್ನಬೇಕು. |
9
|
ನೀವು ಆ ಪಶುವಿನ ಮಾಂಸವನ್ನು ಹಸಿಯಾಗಲಿ ನೀರಿನಲ್ಲಿ ಬೇಯಿಸಿಯಾಗಲಿ ತಿನ್ನಬಾರದು; ಅದರ ಮಾಂಸವನ್ನು ಬೆಂಕಿಯ ಮೇಲಿಟ್ಟು ಬೇಯಿಸಬೇಕು. ಅದರ ತಲೆ, ಕಾಲುಗಳನ್ನೂ ಒಳಗಿನ ಭಾಗಗಳನ್ನೂ ಬೆಂಕಿಯ ಮೇಲೆ ಬೇಯಿಸಬೇಕು. |
10
|
ಅದರ ಮಾಂಸವನ್ನೆಲ್ಲಾ ಆ ರಾತ್ರಿಯಲ್ಲಿಯೇ ತಿನ್ನಬೇಕು. ಬೆಳಗಾಗುವವರೆಗೆ ಮಾಂಸವೇನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. |
11
|
ನೀವು ಭೋಜನ ಮಾಡುವಾಗ ಪ್ರಯಾಣ ಮಾಡುತ್ತಿರುವಂತೆ ಬಟ್ಟೆ ಧರಿಸಿಕೊಂಡಿರಬೇಕು; ಕೆರಗಳನ್ನು ಹಾಕಿಕೊಂಡು ನಿಮ್ಮ ಊರುಗೋಲನ್ನು ಕೈಯಲ್ಲಿ ಹಿಡಿದಿರಬೇಕು. ನೀವು ಅವಸವಸರವಾಗಿ ತಿನ್ನಬೇಕು. ಯಾಕೆಂದರೆ ಇದು ಯೆಹೋವನ ಪಸ್ಕಹಬ್ಬ. |
12
|
“ಆ ರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗಿ ಈಜಿಪ್ಟಿನ ಚೊಚ್ಚಲು ಪಶುಗಳನ್ನೂ ಚೊಚ್ಚಲು ಗಂಡುಮಕ್ಕಳನ್ನೂ ಕೊಲ್ಲುವೆನು; ಈಜಿಪ್ಟಿನ ಎಲ್ಲಾ ದೇವರುಗಳಿಗೆ ತೀರ್ಪು ಮಾಡುವೆನು. ನಾನೇ ಯೆಹೋವನೆಂದು ತೋರಿಸಿಕೊಡುವೆನು. |
13
|
ಆದರೆ ನಿಮ್ಮ ಮನೆಗಳಿಗೆ ಹಚ್ಚಿರುವ ರಕ್ತವು ಒಂದು ವಿಶೇಷ ಸೂಚನೆಯಾಗಿದೆ. ನಾನು ಆ ರಕ್ತವನ್ನು ನೋಡಿದಾಗ ನಿಮ್ಮ ಮನೆಯನ್ನು ದಾಟಿಹೋಗುವೆನು. ಈಜಿಪ್ಟಿನ ಜನರಿಗೆ ಕೇಡುಗಳಾಗುವಂತೆ ಮಾಡುವೆನು. ಆದರೆ ಆ ವ್ಯಾಧಿಗಳು ನಿಮಗೆ ಹಾನಿ ಮಾಡುವುದಿಲ್ಲ. |
14
|
“ಆದ್ದರಿಂದ ನೀವು ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವಿರಿ. ಅದು ನಿಮಗೆ ವಿಶೇಷವಾದ ಹಬ್ಬವಾಗಿರುವುದು. ನಿಮ್ಮ ಸಂತತಿಯವರು ಈ ಹಬ್ಬದಿಂದ ಯೆಹೋವನನ್ನು ಎಂದೆಂದಿಗೂ ಸನ್ಮಾನಿಸುವರು. |
15
|
ಈ ಹಬ್ಬದಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನುವಿರಿ. ಹಬ್ಬದ ಪ್ರಥಮ ದಿನದಲ್ಲಿ ನೀವು ನಿಮ್ಮ ಮನೆಯಿಂದ ಎಲ್ಲಾ ಹುಳಿಯನ್ನು ತೆಗೆದುಹಾಕುವಿರಿ. ಈ ಹಬ್ಬದ ಏಳು ದಿನಗಳಲ್ಲಿ ಯಾವುದೇ ಹುಳಿಯನ್ನು ತಿನ್ನಬಾರದು. ಯಾವನಾದರೂ ಹುಳಿಯನ್ನು ತಿಂದರೆ, ನೀವು ಅವನನ್ನು ಇಸ್ರೇಲಿನಿಂದ ಬಹಿಷ್ಕರಿಸಬೇಕು. |
16
|
ಈ ಹಬ್ಬದ ಪ್ರಥಮ ಮತ್ತು ಕೊನೆಯ ದಿನಗಳಲ್ಲಿ ಪವಿತ್ರ ಸಭೆಯಾಗಿ ಕೂಡಿಬರಬೇಕು. ಈ ಹಬ್ಬದ ದಿನಗಳಲ್ಲಿ ನೀವು ಯಾವ ಕೆಲಸವನ್ನೂ ಮಾಡಬಾರದು. ಆದರೆ ನಿಮ್ಮ ಭೋಜನಕ್ಕಾಗಿ ಆಹಾರ ಸಿದ್ಧಪಡಿಸಬಹುದು. |
17
|
ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲೇಬೇಕು. ಯಾಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಎಲ್ಲಾ ಜನರ ಗುಂಪುಗಳನ್ನು ಈಜಿಪ್ಟಿನಿಂದ ಬಿಡಿಸಿ ಕರೆದುಕೊಂಡು ಹೋದೆನು. ಆದ್ದರಿಂದ ನಿಮ್ಮ ಸಂತತಿಯವರೆಲ್ಲರೂ ಆ ದಿನವನ್ನು ಜ್ಞಾಪಕಮಾಡಿಕೊಳ್ಳಬೇಕು. ಇದು ಶಾಶ್ವತವಾದ ಕಟ್ಟಳೆಯಾಗಿದೆ. |
18
|
ಆದ್ದರಿಂದ ಪ್ರಥಮ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಲು ಆರಂಭಿಸಿ ಅದೇ ತಿಂಗಳ ಇಪ್ಪತ್ತೊಂದನೇ ದಿನದ ಸಾಯಂಕಾಲದವರೆಗೂ ತಿನ್ನುವಿರಿ. |
19
|
ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಯಾವ ಹುಳಿಯೂ ಇರಬಾರದು. ಯಾವ ಇಸ್ರೇಲಿಯಾದರೂ ಯಾವ ವಿದೇಶಿಯನಾದರೂ ಈ ಹಬ್ಬದಲ್ಲಿ ಹುಳಿಯನ್ನು ತಿಂದರೆ, ಅವನನ್ನು ಇಸ್ರೇಲರ ಸಮುದಾಯದಿಂದ ಬಹಿಷ್ಕರಿಸಬೇಕು. |
20
|
ಈ ಹಬ್ಬದಲ್ಲಿ ನೀವು ಹುಳಿಯನ್ನು ತಿನ್ನಬಾರದು. ನೀವು ಎಲ್ಲೇ ವಾಸವಾಗಿದ್ದರೂ ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು” ಎಂದು ಹೇಳಿದನು. |
21
|
ಆದ್ದರಿಂದ ಮೋಶೆಯು ಹಿರಿಯರ ಸಭೆ ಸೇರಿಸಿ, “ನಿಮ್ಮ ಕುಟುಂಬಗಳಿಗೆ ಬೇಕಾದ ಪಶುಗಳನ್ನು ತೆಗೆದುಕೊಂಡು ಪಸ್ಕಕ್ಕಾಗಿ ಅವುಗಳನ್ನು ಕೊಯ್ಯಿರಿ. |
22
|
ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ರಕ್ತ ತುಂಬಿರುವ ಪಾತ್ರೆಯಲ್ಲಿ ಅದ್ದಿರಿ. ರಕ್ತವನ್ನು ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿರಿ. ಮುಂಜಾನೆಯಾಗುವವರೆಗೆ ಯಾರೂ ತಮ್ಮ ಮನೆಯನ್ನು ಬಿಟ್ಟು ಹೊರಗೆ ಹೋಗಬಾರದು. |
23
|
ಆ ಸಮಯದಲ್ಲಿ ಚೊಚ್ಚಲಾದವುಗಳನ್ನು ಸಂಹರಿಸಲು ಯೆಹೋವನು ಈಜಿಪ್ಟಿನ ಮೂಲಕ ಹಾದುಹೋಗುವನು. ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿದ ರಕ್ತವನ್ನು ಯೆಹೋವನು ನೋಡಿ ಆ ಮನೆಯನ್ನು ಸಂರಕ್ಷಿಸುವನು. ಸಂಹಾರಕನು ನಿಮ್ಮ ಮನೆಯೊಳಗೆ ಬಂದು ಸಂಹರಿಸಲು ಯೆಹೋವನು ಬಿಡುವುದಿಲ್ಲ. |
24
|
ನೀವು ಈ ಆಜ್ಞೆಯನ್ನು ಜ್ಞಾಪಕದಲ್ಲಿಡಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ. |
25
|
ಯೆಹೋವನು ನಿಮಗೆ ಕೊಡಲಿರುವ ದೇಶಕ್ಕೆ ನೀವು ಹೋದಾಗಲೂ ಈ ಹಬ್ಬವನ್ನು ಆಚರಿಸಬೇಕು. |
26
|
‘ಈ ಹಬ್ಬವನ್ನು ಮಾಡುವುದೇಕೆ?’ ಎಂದು ನಿಮ್ಮ ಮಕ್ಕಳು ನಿಮ್ಮನ್ನು ಕೇಳುವಾಗ, |
27
|
‘ಇದು ಯೆಹೋವನನ್ನು ಸನ್ಮಾನಿಸಲು ಮಾಡುವ ಪಸ್ಕಹಬ್ಬವಾಗಿದೆ. ಯಾಕೆಂದರೆ ನಾವು ಈಜಿಪ್ಟಿನಲ್ಲಿದ್ದಾಗ ಯೆಹೋವನು ಇಸ್ರೇಲರ ಮನೆಗಳನ್ನು ಬಿಟ್ಟು ದಾಟಿಹೋದನು; ಈಜಿಪ್ಟಿನವರನ್ನು ಸಂಹರಿಸಿದನು; ಆದರೆ ಆತನು ನಮ್ಮ ಮನೆಗಳಲ್ಲಿದ್ದವರನ್ನು ರಕ್ಷಿಸಿದನು’ ಎಂದು ಹೇಳಬೇಕು. ಆಗ ಮೋಶೆಯ ಮಾತನ್ನು ಕೇಳುತ್ತಿದ್ದ ಇಸ್ರೇಲರು ಅಡ್ಡಬಿದ್ದು ಯೆಹೋವನನ್ನು ಆರಾಧಿಸಿದರು.” |
28
|
ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದಂತೆಯೇ ಇಸ್ರೇಲರು ಮಾಡಿದರು. |
29
|
ಮಧ್ಯರಾತ್ರಿಯಲ್ಲಿ ಯೆಹೋವನು ಈಜಿಪ್ಟಿನಲ್ಲಿದ್ದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. ಫರೋಹನ ಚೊಚ್ಚಲು ಮಗನಿಂದಿಡಿದು ಸೆರೆಮನೆಯಲ್ಲಿದ್ದ ಕೈದಿಯ ಚೊಚ್ಚಲು ಮಗನವರೆಗೆ ಇರುವ ಎಲ್ಲಾ ಚೊಚ್ಚಲು ಮಕ್ಕಳನ್ನು ಆತನು ಸಂಹರಿಸಿದನು. ಚೊಚ್ಚಲು ಪಶುಗಳೂ ಸಂಹರಿಸಲ್ಪಟ್ಟವು. |
30
|
ಆ ರಾತ್ರಿಯಲ್ಲಿ ಫರೋಹನೂ ಅವನ ಅಧಿಕಾರಿಗಳೂ ಈಜಿಪ್ಟಿನ ಜನರೆಲ್ಲರೂ ಎದ್ದರು. ಈಜಿಪ್ಟಿನಲ್ಲಿ ಮಹಾ ಗೋಳಾಟ ಉಂಟಾಯಿತು. ಯಾಕೆಂದರೆ ಸಾವಿಲ್ಲದ ಮನೆಯೇ ಇರಲಿಲ್ಲ. ಇಸ್ರೇಲರಿಗೆ ಈಜಿಪ್ಟಿನಿಂದ ಬಿಡುಗಡೆ |
31
|
ಆದ್ದರಿಂದ ಆ ರಾತ್ರಿ, ಫರೋಹನು ಮೋಶೆ ಆರೋನರನ್ನು ಕರೆಸಿ, “ನನ್ನ ಜನರನ್ನು ಬಿಟ್ಟುಹೋಗಿರಿ. ನೀವು ಕೇಳಿಕೊಂಡಂತೆ ನೀವು ಮತ್ತು ನಿಮ್ಮ ಜನರು ಹೊರಟುಹೋಗಿ ಯೆಹೋವನನ್ನು ಆರಾಧಿಸಿರಿ. |
32
|
ನೀವು ಕೇಳಿಕೊಂಡಂತೆ ನಿಮ್ಮ ಕುರಿಗಳನ್ನೂ ದನಕರುಗಳನ್ನೂ ನಿಮ್ಮೊಂದಿಗೆ ತೆಗೆದುಕೊಂಡು ಹೋಗಿರಿ! ನನ್ನನ್ನು ಆಶೀರ್ವಾದಿಸಿರಿ!” ಎಂದು ಹೇಳಿದನು. |
33
|
ಈಜಿಪ್ಟಿನ ಜನರು ಸಹ ತಮ್ಮನ್ನು ಬೇಗನೆ ಬಿಟ್ಟು ಹೋಗಬೇಕೆಂದು ಇಸ್ರೇಲರನ್ನು ಬೇಡಿಕೊಂಡು, “ನೀವು ಬಿಟ್ಟು ಹೋಗದಿದ್ದರೆ, ನಾವೆಲ್ಲಾ ಸಾಯುವೆವು” ಎಂದು ಹೇಳಿದರು. |
34
|
ತಮ್ಮ ರೊಟ್ಟಿಗೆ ಹುಳಿಹಾಕಲು ಇಸ್ರೇಲರಿಗೆ ಸಮಯವಿರಲಿಲ್ಲ. ಅವರು ಹಿಟ್ಟಿನ ಮುದ್ದೆಯನ್ನು ಬಟ್ಟೆಯಲ್ಲಿ ಸುತ್ತಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು. |
35
|
ಅಲ್ಲದೆ ಮೋಶೆಯು ಹೇಳಿದಂತೆಯೇ ಇಸ್ರೇಲರು ತಮ್ಮ ನೆರೆಮನೆಯವರ ಬಳಿಗೆ ಹೋಗಿ ಬಟ್ಟೆಗಳನ್ನೂ ಬೆಳ್ಳಿಬಂಗಾರಗಳ ವಸ್ತುಗಳನ್ನೂ ಕೇಳಿಕೊಂಡರು. |
36
|
ಈಜಿಪ್ಟಿನವರು ಇಸ್ರೇಲರಿಗೆ ದಯೆ ತೋರಿಸುವಂತೆ ಯೆಹೋವನು ಪ್ರೇರೇಪಿಸಿದ್ದರಿಂದ ಈಜಿಪ್ಟಿನವರು ತಮ್ಮ ಸ್ವತ್ತುಗಳನ್ನು ಇಸ್ರೇಲರಿಗೆ ಕೊಟ್ಟುಬಿಟ್ಟರು. |
37
|
ಇಸ್ರೇಲರು ರಮ್ಸೇಸ್ನಿಂದ ಸುಕ್ಕೋತಿಗೆ ಪ್ರಯಾಣ ಮಾಡಿದರು. ಅವರಲ್ಲಿ ಸುಮಾರು ಆರು ಲಕ್ಷಮಂದಿ ಗಂಡಸರಿದ್ದರು. (ಈ ಸಂಖ್ಯೆಯಲ್ಲಿ ಮಕ್ಕಳು ಮತ್ತು ಹೆಂಗಸರು ಸೇರಿಲ್ಲ.) |
38
|
ಲೆಕ್ಕವಿಲ್ಲದಷ್ಟು ಕುರಿಗಳೂ ದನಕರುಗಳೂ ಇವರೊಂದಿಗಿದ್ದವು. ಇಸ್ರೇಲರಲ್ಲದ ಬೇರೆ ಜನರು ಸಹ ಇಸ್ರೇಲರೊಂದಿಗೆ ಈಜಿಪ್ಟಿನಿಂದ ಹೊರಟರು. |
39
|
ರೊಟ್ಟಿಗೆ ಹುಳಿಹಾಕುವಷ್ಟು ಸಮಯವೂ ಜನರಿಗೆ ಇರಲಿಲ್ಲ; ಅವರು ತಮ್ಮ ಪ್ರಯಾಣಕ್ಕಾಗಿ ವಿಶೇಷ ಆಹಾರವನ್ನು ತಯಾರಿಸುವುದಕ್ಕೂ ಆಗಲಿಲ್ಲ. ಆದ್ದರಿಂದ ಅವರು ಹುಳಿಯಿಲ್ಲದ ರೊಟ್ಟಿ ಮಾಡಿ ತಮ್ಮೊಡನೆ ತೆಗೆದುಕೊಂಡು ಹೋದರು. |
40
|
ಇಸ್ರೇಲರು ಈಜಿಪ್ಟಿನಲ್ಲಿ ನಾನೂರಮೂವತ್ತು ವರ್ಷ ವಾಸಿಸಿದರು. |
41
|
ನಾನೂರಮೂವತ್ತು ವರ್ಷಗಳಾದ ನಂತರ, ಅದೇ ದಿನದಂದು ಯೆಹೋವನ ಸೈನ್ಯಗಳೆಲ್ಲಾ ಈಜಿಪ್ಟನ್ನು ಬಿಟ್ಟು ಹೊರಟವು. |
42
|
ಆದ್ದರಿಂದ ಯೆಹೋವನು ಅವರನ್ನು ಸಂರಕ್ಷಿಸಿ ಈಜಿಪ್ಟಿನಿಂದ ಹೊರತಂದದ್ದನ್ನು ಜ್ಞಾಪಕಮಾಡುವ ಆ ರಾತ್ರಿ ಬಹು ವಿಶೇಷವಾದ ರಾತ್ರಿಯಾಗಿದೆ. ಇಸ್ರೇಲರೆಲ್ಲರೂ ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವರು. |
43
|
ಯೆಹೋವನು ಮೋಶೆ ಆರೋನರಿಗೆ, “ಪಸ್ಕಹಬ್ಬದ ನಿಯಮಗಳು ಇಂತಿವೆ: ಯಾವ ಪರದೇಶಿಯೂ ಪಸ್ಕಹಬ್ಬದ ಊಟವನ್ನು ಮಾಡಬಾರದು. |
44
|
ಆದರೆ ಸುನ್ನತಿ ಮಾಡಿಸಿಕೊಂಡಿರುವ ಗುಲಾಮನು ಪಸ್ಕಹಬ್ಬದ ಊಟವನ್ನು ಮಾಡಬಹುದು. |
45
|
ಆದರೆ ನಿಮ್ಮ ದೇಶದಲ್ಲಿ ಕೇವಲ ವಾಸವಾಗಿರುವವರಾಗಲಿ ಕೂಲಿಯಾಳಾಗಲಿ ಪಸ್ಕಹಬ್ಬದ ಊಟ ಮಾಡಬಾರದು. |
46
|
“ಪಸ್ಕಹಬ್ಬದ ಊಟವನ್ನು ಮನೆಯೊಳಗೆ ತಿನ್ನಬೇಕು. ಪಸ್ಕದ ಮಾಂಸವನ್ನು ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಕೂಡದು. ಕುರಿಮರಿಯ ಎಲುಬುಗಳಲ್ಲಿ ಯಾವುದನ್ನೂ ಮುರಿಯಬಾರದು. |
47
|
ಇಸ್ರೇಲರ ಇಡೀ ಸಮೂಹವು ಈ ಹಬ್ಬವನ್ನು ಆಚರಿಸಬೇಕು. |
48
|
ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಪರದೇಶದವನು ಯೆಹೋವನ ಪಸ್ಕ ಭೋಜನದಲ್ಲಿ ಪಾಲುಗಾರನಾಗಬೇಕೆಂದು ಬಯಸಿದರೆ ಅವನು ಸುನ್ನತಿ ಮಾಡಿಸಿಕೊಳ್ಳಬೇಕು. ಆಗ ಅವನು ಇಸ್ರೇಲಿನವನಾಗುವುದರಿಂದ ಭೋಜನದಲ್ಲಿ ಪಾಲುಗಾರನಾಗಬಹುದು. ಆದರೆ ಸುನ್ನತಿಯಾಗಿಲ್ಲದವನು ಪಸ್ಕದ ಊಟ ಮಾಡಕೂಡದು. |
49
|
ಪ್ರತಿಯೊಬ್ಬರಿಗೂ ಇದೇ ನಿಯಮ ಅನ್ವಯಿಸುತ್ತದೆ. ಸ್ವದೇಶದವನಿಗೂ ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು” ಅಂದನು. |
50
|
ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರೇಲರೆಲ್ಲರೂ ಮಾಡಿದರು. |
51
|
ಆದ್ದರಿಂದ ಅದೇ ದಿನದಲ್ಲಿ ಯೆಹೋವನು ಇಸ್ರೇಲರನ್ನು ಈಜಿಪ್ಟ್ ದೇಶದಿಂದ ಜನರನ್ನು ಗುಂಪುಗುಂಪುಗಳಾಗಿ ಹೊರತಂದನು. |
Exodus 12:7 Kannada Language Bible Words basic statistical display
COMING SOON ...