1
|
ದೇವರು ಮೋಶೆಗೆ, “ನೀನು ಆರೋನ, ನಾದಾಬ್, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿಬಂದು ದೂರದಿಂದ ನನ್ನನ್ನು ಆರಾಧಿಸಬೇಕು. |
2
|
ಬಳಿಕ ನೀನು ಮಾತ್ರ ನನ್ನ ಬಳಿಗೆ ಬರಬೇಕು; ಬೇರೆಯವರು ಬರಕೂಡದು; ಆದರೆ ಉಳಿದ ಜನರು ಬೆಟ್ಟವನ್ನೂ ಏರಕೂಡದು” ಎಂದು ಹೇಳಿದನು. |
3
|
ಮೋಶೆಯು ಯೆಹೋವನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲರೂ, “ಯೆಹೋವನ ಆಜ್ಞೆಗಳಿಗೆಲ್ಲಾ ನಾವು ವಿಧೇಯರಾಗುವೆವು” ಎಂದು ಒಂದೇ ಸ್ವರದಿಂದ ಹೇಳಿದರು. |
4
|
ಆದ್ದರಿಂದ ಮೋಶೆ ಯೆಹೋವನ ಆಜ್ಞೆಗಳನ್ನೆಲ್ಲಾ ಒಂದು ಸುರುಳಿಯಲ್ಲಿ ಬರೆದನು. ಮರುದಿನ ಮುಂಜಾನೆ, ಅವನು ಬೇಗನೆ ಎದ್ದು ಬೆಟ್ಟದ ಕೆಳಭಾಗದ ಹತ್ತಿರ, ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಂಬಗಳುಳ್ಳ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಇಸ್ರೇಲರ ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. |
5
|
ಬಳಿಕ ಮೋಶೆಯು ಯಜ್ಞಗಳನ್ನು ಸಮರ್ಪಿಸುವುದಕ್ಕೆ ಇಸ್ರೇಲರ ಯೌವನಸ್ಥರನ್ನು ಕಳುಹಿಸಿದನು. ಅವರು ಯೆಹೋವನಿಗೆ ಎತ್ತುಗಳನ್ನು ಸರ್ವಾಂಗಹೋಮಗಳಾಗಿಯೂ ಸಮಾಧಾನ ಯಜ್ಞಗಳಾಗಿಯೂ ಅರ್ಪಿಸಿದರು. |
6
|
ಮೋಶೆಯು ಈ ಪಶುಗಳ ರಕ್ತವನ್ನು ತೆಗೆದುಕೊಂಡು ಅದರಲ್ಲಿ ಅರ್ಧಭಾಗವನ್ನು ಬೋಗುಣಿಗಳಲ್ಲಿ ಹಾಕಿದನು; ಉಳಿದ ಅರ್ಧಭಾಗವನ್ನು ಯಜ್ಞವೇದಿಕೆಯ ಮೇಲೆ ಸುರಿದನು. |
7
|
ವಿಶೇಷ ಒಡಂಬಡಿಕೆಯಿಂದ ಬರೆಯಲ್ಪಟ್ಟಿದ್ದ ಸುರುಳಿಯನ್ನು ಮೋಶೆಯು ಎಲ್ಲಾ ಜನರಿಗೆ ಕೇಳುವಂತೆ ಓದಿದನು. ಆಗ ಜನರು, “ಯೆಹೋವನ ಆಜ್ಞೆಗಳನ್ನೆಲ್ಲ ಅನುಸರಿಸಿ ಆತನಿಗೆ ವಿಧೇಯರಾಗಿರುತ್ತೇವೆ” ಅಂದರು. |
8
|
ಆಗ ಮೋಶೆ ಯಜ್ಞಗಳ ರಕ್ತದಿಂದ ತುಂಬಿದ ಬೋಗುಣಿಯನ್ನು ತೆಗೆದುಕೊಂಡು ಅದರಲ್ಲಿದ್ದ ರಕ್ತವನ್ನು ಜನರ ಮೇಲೆ ಚಿಮಿಕಿಸಿ, “ಈ ಸುರುಳಿಯಲ್ಲಿರುವ ವಾಕ್ಯಗಳಿಗನುಸಾರವಾಗಿ ಯೆಹೋವನು ನಿಮ್ಮೊಡನೆ ಒಂದು ವಿಶೇಷ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆಂಬುದನ್ನು ಈ ರಕ್ತವು ಸೂಚಿಸುತ್ತದೆ” ಎಂದು ಹೇಳಿದನು. |
9
|
ಬಳಿಕ ಮೋಶೆ, ಆರೋನ, ನಾದಾಬ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿದರು. |
10
|
ಈ ಜನರು ಇಸ್ರೇಲರ ಯೆಹೋವನನ್ನು ನೋಡಿದರು. ದೇವರು ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟಿನ ಮೇಲೆ ನಿಂತುಕೊಂಡಿದ್ದನು! |
11
|
ಇಸ್ರೇಲರ ನಾಯಕರೆಲ್ಲರೂ ಯೆಹೋವನನ್ನು ನೋಡಿದರು, ಆದರೆ ದೇವರು ಅವರನ್ನು ನಾಶಮಾಡಲಿಲ್ಲ. ಅವರೆಲ್ಲರೂ ದೇವದರ್ಶನ ಮಾಡಿ ಅನ್ನಪಾನಗಳನ್ನು ತೆಗೆದುಕೊಂಡರು. |
12
|
ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಬಳಿಯಲ್ಲಿರು. ನಾನು ನನ್ನ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದಿದ್ದೇನೆ. ಈ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ನೀನು ಜನರಿಗೆ ಬೋಧಿಸಬೇಕು. ನಾನು ಈ ಕಲ್ಲಿನ ಹಲಗೆಗಳನ್ನು ನಿನಗೆ ಕೊಡುವೆನು” ಎಂದು ಹೇಳಿದನು. |
13
|
ಆದ್ದರಿಂದ ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಡನೆ ಎದ್ದುನಿಂತು ದೇವರ ಬೆಟ್ಟದ ಮೇಲಕ್ಕೆ ಹೋದನು. |
14
|
ಮೋಶೆಯು ಹಿರಿಯರಿಗೆ, “ನಾವು ನಿಮ್ಮ ಬಳಿಗೆ ಹಿಂತಿರುಗಿ ಬರುವ ತನಕ ನೀವು ಇಲ್ಲಿ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಿದ್ದಾರೆ; ನಿಮ್ಮಲ್ಲಿ ಯಾರಿಗಾದರೂ ಸಮಸ್ಯೆಯಿದ್ದರೆ ಅವರ ಬಳಿಗೆ ಹೋಗಲಿ” ಎಂದು ಹೇಳಿದನು. |
15
|
ಬಳಿಕ ಮೋಶೆ ಬೆಟ್ಟದ ಮೇಲಕ್ಕೆ ಹೋದನು. ಮೋಡವು ಬೆಟ್ಟವನ್ನು ಕವಿದುಕೊಂಡಿತ್ತು. |
16
|
ಸೀನಾಯಿ ಬೆಟ್ಟದ ಮೇಲೆ ಯೆಹೋವನ ಮಹಿಮೆಯು ಇಳಿದು ಬಂದಿತು. ಮೋಡವು ಆರುದಿನಗಳವರೆಗೆ ಬೆಟ್ಟವನ್ನು ಕವಿದುಕೊಂಡಿತ್ತು. ಏಳನೆಯ ದಿನದಲ್ಲಿ, ಮೋಡದಿಂದ ಯೆಹೋವನು ಮೋಶೆಯೊಡನೆ ಮಾತಾಡಿದನು. |
17
|
ಇಸ್ರೇಲರಿಗೆ ಯೆಹೋವನ ಮಹಿಮೆಯು ಬೆಟ್ಟದ ತುದಿಯಲ್ಲಿ ಉರಿಯುವ ಬೆಂಕಿಯಂತೆ ಕಾಣುತ್ತಿತ್ತು. |
18
|
ಬಳಿಕ ಮೋಶೆಯು ಮೋಡದಲ್ಲಿ ಬೆಟ್ಟದ ಮೇಲೆ ಇನ್ನೂ ಎತ್ತರಕ್ಕೆ ಹೋದನು. ಮೋಶೆಯು ಬೆಟ್ಟದಲ್ಲಿ ಹಗಲಿರುಳು ನಲವತ್ತು ದಿವಸ ಇದ್ದನು. |
Exodus 24:4 Kannada Language Bible Words basic statistical display
COMING SOON ...