2
|
“ಇಸ್ರೇಲರು ನನಗೆ ಕಾಣಿಕೆಗಳನ್ನು ತರಬೇಕೆಂದು ಅವರಿಗೆ ಹೇಳು. ಪ್ರತಿಯೊಬ್ಬನು ನನಗೆ ಕೊಡುವುದರ ಬಗ್ಗೆ ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಈ ಕಾಣಿಕೆಗಳನ್ನು ನನಗಾಗಿ ಸ್ವೀಕರಿಸು. |
3
|
ಜನರಿಂದ ನೀನು ಸ್ವೀಕರಿಸಬೇಕಾದ ವಸ್ತುಗಳ ಪಟ್ಟಿ ಇಲ್ಲಿದೆ: ಚಿನ್ನ, ಬೆಳ್ಳಿ, ತಾಮ್ರ, |
4
|
ನೀಲಿ, ನೇರಳೆ, ಕೆಂಪುದಾರ, ನಾರುಬಟ್ಟೆ, ಆಡು ಕೂದಲಿನ ಬಟ್ಟೆ, |
5
|
ಕೆಂಪುಬಣ್ಣದ ಕುರಿದೊಗಲು, ಉತ್ತಮ ತೊಗಲುಗಳು, ಜಾಲೀಮರ, |
6
|
ದೀಪಗಳಿಗೆ ಬೇಕಾದ ಎಣ್ಣೆ, ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು, |
7
|
ಏಪೋದಿಗೆ ದೈವನಿರ್ಣಯದ ಪದಕಚೀಲಕ್ಕೆ ಬೇಕಾದ ಗೋಮೇಧಕ ರತ್ನಗಳು ಮತ್ತು ಇತರ ರತ್ನಗಳು” ಎಂದು ಹೇಳಿದನು. |
8
|
ಇದಲ್ಲದೆ ದೇವರು ಮೋಶೆಗೆ, “ಜನರು ನನಗೋಸ್ಕರವಾಗಿ ಒಂದು ಪವಿತ್ರ ಗುಡಾರವನ್ನು ಕಟ್ಟಬೇಕು. ಆಗ ನಾನು ಅವರ ನಡುವೆ ಅದರಲ್ಲಿ ವಾಸಿಸುವೆನು. |
9
|
ಪವಿತ್ರ ಗುಡಾರ ಮತ್ತು ಅದರಲ್ಲಿರುವ ಪ್ರತಿಯೊಂದು ವಸ್ತುವೂ ಹೇಗಿರಬೇಕೆಂದು ನಾನು ನಿನಗೆ ತೋರಿಸುವೆನು. ನಾನು ನಿನಗೆ ತೋರಿಸುವ ಮಾದರಿಯ ಪ್ರಕಾರವೇ ಪ್ರತಿಯೊಂದನ್ನು ಮಾಡು. |
10
|
“ಜಾಲೀಮರದಿಂದ ಒಂದು ವಿಶೇಷ ಪೆಟ್ಟಿಗೆಯನ್ನು ಮಾಡಿಸು. ಈ ಪವಿತ್ರ ಪೆಟ್ಟಿಗೆಯು ಎರಡೂವರೆ ಮೊಳ ಉದ್ದ, ಒಂದೂವರೆ ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು. |
11
|
ಅದರ ಹೊರಮೈಯನ್ನು ಮತ್ತು ಒಳಮೈಯನ್ನು ಅಪ್ಪಟ ಬಂಗಾರದಿಂದ ಹೊದಿಸಬೇಕು. ಪೆಟ್ಟಿಗೆಯ ಅಂಚುಗಳ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು. |
12
|
ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ನಾಲ್ಕು ಚಿನ್ನದ ಬಳೆಗಳನ್ನು ಎರಕಹೊಯ್ಯಬೇಕು. ನಾಲ್ಕು ಮೂಲೆಗಳಲ್ಲಿ ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇಡಬೇಕು. |
13
|
ಬಳಿಕ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ಕಂಬಗಳನ್ನು ಮಾಡಬೇಕು. ಈ ಕಂಬಗಳನ್ನು ಜಾಲೀಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು. |
14
|
ಕಂಬಗಳನ್ನು ಪೆಟ್ಟಿಗೆ ಕೊನೆಗಳಲ್ಲಿರುವ ಬಳೆಗಳಲ್ಲಿ ಸೇರಿಸಿ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಬೇಕು. |
15
|
ಕಂಬಗಳು ಯಾವಾಗಲೂ ಪೆಟ್ಟಿಗೆಯ ಬಳೆಗಳಲ್ಲಿ ಇರಬೇಕು. ಕಂಬಗಳನ್ನು ಅವುಗಳಿಂದ ಹೊರಗೆ ತೆಗೆಯಬಾರದು. |
16
|
“ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಅದರೊಳಗೆ ಇಡು” ಎಂದು ಹೇಳಿದನು. |
17
|
ಇದಲ್ಲದೆ ದೇವರು ಮೋಶೆಗೆ, “ಅಪ್ಪಟ ಬಂಗಾರದಿಂದ ಕೃಪಾಸನವನ್ನು ಮಾಡಿಸಬೇಕು. ಅದು ಎರಡೂವರೆ ಮೊಳ ಉದ್ದವಾಗಿರಬೇಕು. ಒಂದೂವರೆ ಮೊಳ ಅಗಲವಾಗಿರಬೇಕು. |
18
|
ಬಳಿಕ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ಮಾಡಿಸಿ ಕೃಪಾಸನದ ಎರಡು ಕೊನೆಗಳಲ್ಲಿ ಇಡಬೇಕು. |
19
|
ಕೃಪಾಸನದ ಒಂದು ಕೊನೆಯಲ್ಲಿ ಒಂದು ಕೆರೂಬಿಯನ್ನೂ ಇನ್ನೊಂದು ಕೊನೆಯಲ್ಲಿ ಇನ್ನೊಂದು ಕೆರೂಬಿಯನ್ನೂ ಜೋಡಿಸಬೇಕು. |
20
|
ಅವುಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿರಬೇಕು; ಪೆಟ್ಟಿಗೆಯನ್ನು ಮುಚ್ಚಿಕೊಂಡಿರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು. |
21
|
“ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಪೆಟ್ಟಿಗೆಯಲ್ಲಿಡಬೇಕು; ಕೃಪಾಸನವನ್ನು ಆ ಪೆಟ್ಟಿಗೆಯ ಮೇಲಿಡಬೇಕು. |
22
|
ನಾನು ನಿನಗೆ ದರ್ಶನ ಕೊಡುವಾಗ ಒಡಂಬಡಿಕೆ ಪೆಟ್ಟಿಗೆಯ ಮೇಲಿರುವ ಕೆರೂಬಿಗಳ ಮಧ್ಯದಿಂದ ನಿನ್ನ ಸಂಗಡ ಮಾತಾಡುವೆನು; ಇಸ್ರೇಲರಿಗೆ ಆಜ್ಞಾಪಿಸಬೇಕಾದವುಗಳನ್ನು ನಿನಗೆ ತಿಳಿಸುವೆನು. ಮೇಜು |
23
|
“ನೀನು ಜಾಲೀಮರದಿಂದ ಮೇಜನ್ನು ಮಾಡಬೇಕು. ಮೇಜು ಎರಡು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು. |
24
|
ಶುದ್ಧಬಂಗಾರದ ತಗಡುಗಳನ್ನು ಮೇಜಿಗೆ ಹೊದಿಸಿ ಅದರ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು. |
25
|
ಬಳಿಕ ಮೇಜಿನ ಸುತ್ತಲೂ ಮೂರು ಇಂಚು ಅಗಲದ ಚೌಕಟ್ಟನ್ನು ಮಾಡಿಸಿ ಅದಕ್ಕೂ ಚಿನ್ನದ ಗೋಟು ಕಟ್ಟಿಸಬೇಕು. |
26
|
ಬಳಿಕ ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಜೋಡಿಸಬೇಕು. |
27
|
ಆ ಬಳೆಗಳು ಅಡ್ಡಪಟ್ಟಿಗೆ ಜೋಡಿಸಿಕೊಂಡಿರಬೇಕು. ಮೇಜನ್ನು ಹೊತ್ತುಕೊಂಡು ಹೋಗುವುದಕ್ಕೆ ಉಪಯೋಗಿಸುವ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು. |
28
|
ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು. |
29
|
ತಟ್ಟೆಗಳನ್ನು, ಚಮಚಗಳನ್ನು, ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಶುದ್ಧಬಂಗಾರದಿಂದ ಮಾಡಬೇಕು. ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಪಾನದ್ರವ್ಯಗಳನ್ನು ಅರ್ಪಿಸಲು ಉಪಯೋಗಿಸಬೇಕು. |
30
|
ನೈವೇದ್ಯದ ರೊಟ್ಟಿಗಳನ್ನು ಮೇಜಿನ ಮೇಲೆ ನನ್ನ ಮುಂದೆ ಇಡು. ಅವು ಅಲ್ಲಿ ನನ್ನ ಮುಂದೆ ಯಾವಾಗಲೂ ಇರಬೇಕು. |
31
|
“ಬಳಿಕ ಒಂದು ದೀಪಸ್ತಂಭವನ್ನು ಶುದ್ಧಬಂಗಾರದಿಂದ ಮಾಡಿಸಬೇಕು. ಅದರ ಬುಡವನ್ನೂ ಕಂಬವನ್ನೂ ಕಸೂತಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭವೆಲ್ಲಾ ಅಖಂಡವಾಗಿದ್ದು ಪುಷ್ಪಪಾತ್ರೆಗಳಂತೆಯೂ ಅಲಂಕಾರವಾಗಿ ಕೆತ್ತಲ್ಪಡಬೇಕು. |
32
|
“ದೀಪಸ್ತಂಭಕ್ಕೆ ಒಂದೊಂದು ಪಾರ್ಶ್ವದಲ್ಲಿ ಮೂರುಮೂರು ಕೊಂಬೆಗಳಂತೆ ಆರು ಕೊಂಬೆಗಳಿರಬೇಕು. |
33
|
ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರುಮೂರು ಪುಷ್ಪಾಲಂಕಾರಗಳಿರಬೇಕು. ಒಂದೊಂದು ಅಲಂಕಾರಕ್ಕೆ ಒಂದು ಪುಷ್ಪಪಾತ್ರೆಯೂ ಒಂದು ಪುಷ್ಪವೂ ಇರಬೇಕು. ಆರು ಕೊಂಬೆಗಳನ್ನೂ ಹಾಗೇ ಮಾಡಿಸಬೇಕು. |
34
|
ದೀಪದ ಸ್ತಂಭದಲ್ಲಿ ಪುಷ್ಪಪಾತ್ರೆಗಳೂ ಪುಷ್ಪಗಳೂ ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇರಬೇಕು. |
35
|
ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಪುಷ್ಪಪಾತ್ರೆಯಿರಬೇಕು. |
36
|
ಪುಷ್ಪಪಾತ್ರೆಗಳನ್ನೂ ಕೊಂಬೆಗಳನ್ನೂ ಒಳಗೊಂಡಿರುವ ದೀಪಸ್ತಂಭವು ಅಖಂಡವಾಗಿದ್ದು ಅಪ್ಪಟ ಬಂಗಾರದಿಂದಲೂ ನಕಾಸಿ ಕೆಲಸದಿಂದಲೂ ಮಾಡಿದ್ದಾಗಿರಬೇಕು. |
37
|
ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಈ ಹಣತೆಗಳು ದೀಪಸ್ತಂಭದ ಮುಂದಿರುವ ಪ್ರದೇಶಕ್ಕೆ ಬೆಳಕು ಕೊಡುವುದು. |
38
|
ಅದರ ಬತ್ತಿಗಳನ್ನು ಕತ್ತರಿಸುವ ಕತ್ತರಿಯನ್ನು ಮತ್ತು ಹರಿವಾಣಗಳನ್ನು ಅಪ್ಪಟ ಬಂಗಾರದಿಂದ ಮಾಡಿಸಬೇಕು. |
39
|
ದೀಪಸ್ತಂಭವನ್ನು ಮತ್ತು ಅದರ ಎಲ್ಲಾ ಉಪಕರಣಗಳನ್ನು ಎಪ್ಪತ್ತೈದು ಪೌಂಡು |
40
|
ನಾನು ನಿನಗೆ ಬೆಟ್ಟದ ಮೇಲೆ ತೋರಿಸಿದ ಮಾದರಿಯಂತೆಯೇ ಪ್ರತಿಯೊಂದನ್ನು ಮಾಡಬೇಕು” ಎಂದು ಹೇಳಿದನು. |
Exodus 25:9 Kannada Language Bible Words basic statistical display
COMING SOON ...