1
|
ಯೆಹೋವನು ಮೋಶೆಗೆ, “ಪವಿತ್ರ ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಈ ಪರದೆಗಳನ್ನು ನಾರುಬಟ್ಟೆ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರದಿಂದ ಮಾಡಿಸಬೇಕು. ನುರಿತ ಕೆಲಸಗಾರನು ಪರದೆಗಳಲ್ಲಿ ರೆಕ್ಕೆಗಳಿರುವ ಕೆರೂಬಿಗಳ ಚಿತ್ರವನ್ನು ಕಸೂತಿ ಹಾಕಬೇಕು. |
2
|
ಪ್ರತಿಯೊಂದು ಪರದೆಯ ಅಳತೆಯು ಒಂದೇ ಆಗಿರಬೇಕು. ಪ್ರತಿ ಪರದೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. |
3
|
ಪರದೆಗಳನ್ನು ಒಟ್ಟಾಗಿ ಜೋಡಿಸಿ ಎರಡು ಭಾಗಗಳನ್ನಾಗಿ ಮಾಡಬೇಕು. ಒಂದು ಭಾಗದಲ್ಲಿ ಐದು ಪರದೆಗಳನ್ನೂ ಇನ್ನೊಂದು ಭಾಗದಲ್ಲಿ ಐದು ಪರದೆಗಳನ್ನೂ ಒಟ್ಟಾಗಿ ಜೋಡಿಸಬೇಕು. |
4
|
ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಕುಣಿಕೆಗಳನ್ನು ನೀಲಿ ಬಟ್ಟೆಯಿಂದ ಮಾಡಬೇಕು; ಇನ್ನೊಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿಯೂ ಅದೇ ರೀತಿ ಮಾಡಬೇಕು. |
5
|
ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳು ಇರಬೇಕು. ಇನ್ನೊಂದು ಭಾಗದ ಕೊನೆಯ ಪರದೆಯ ಅಂಚಿನಲ್ಲೂ ಐವತ್ತು ಕುಣಿಕೆಗಳು ಇರಬೇಕು. |
6
|
ಬಳಿಕ ಪರದೆಗಳನ್ನು ಒಟ್ಟಾಗಿ ಜೋಡಿಸಲು ಅನುಕೂಲವಾಗುವಂತೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಬೇಕು. ಹೀಗೆ ಒಂದೇ ಗುಡಾರವಾಗುವುದು. |
7
|
“ಪವಿತ್ರಗುಡಾರದ ಮೇಲೆ ಹೊದಿಸುವುದಕ್ಕೆ ಇನ್ನೊಂದು ಗುಡಾರವನ್ನು ಮಾಡಿಸಬೇಕು. ಈ ಗುಡಾರವನ್ನು ಹನ್ನೊಂದು ಪರದೆಗಳಿಂದ ಮಾಡಿಸಬೇಕು. ಈ ಪರದೆಗಳು ಆಡುಕೂದಲಿನಿಂದ ಮಾಡಲ್ಪಟ್ಟಿರಬೇಕು. |
8
|
ಈ ಎಲ್ಲಾ ಪರದೆಗಳ ಅಳತೆಯು ಒಂದೇ ಆಗಿರಬೇಕು. ಅವು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. |
9
|
ಐದು ಪರದೆಗಳನ್ನು ಒಟ್ಟಾಗಿ ಸೇರಿಸಿ ಒಂದು ಭಾಗವನ್ನಾಗಿ ಮಾಡು. ಬಳಿಕ ಉಳಿದ ಆರು ಪರದೆಗಳನ್ನು ಒಟ್ಟಾಗಿ ಸೇರಿಸಿ ಇನ್ನೊಂದು ಭಾಗವನ್ನಾಗಿ ಮಾಡು. ಆರನೇ ಪರದೆಯ ಅರ್ಧದಷ್ಟನ್ನು ಡೇರೆಯ ಮುಂದುಗಡೆಯಲ್ಲಿ ಮಡಚಬೇಕು. |
10
|
ಒಂದು ಭಾಗದ ಕೊನೇ ಪರದೆಯ ಕೆಳಗಿನ ಭಾಗದ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಇನ್ನೊಂದು ಭಾಗದ ಕೊನೇ ಪರದೆಯ ಕೆಳಭಾಗದಲ್ಲಿಯೂ ಅದೇ ರೀತಿಯಾಗಿ ಮಾಡಬೇಕು. |
11
|
ಬಳಿಕ ಪರದೆಗಳನ್ನು ಒಟ್ಟಾಗಿ ಜೋಡಿಸಲು ಐವತ್ತು ತಾಮ್ರದ ಕೊಂಡಿಗಳನ್ನು ಮಾಡಬೇಕು. ಹೀಗೆ ಒಂದೇ ಗುಡಾರವಾಗುವುದು. |
12
|
ಈ ಗುಡಾರದ ಪರದೆಗಳಲ್ಲಿ ಉಳಿದ ಹೆಚ್ಚಿನ ಭಾಗಗಳನ್ನು ಅಂದರೆ ಉಳಿದ ಅರ್ಧಭಾಗವನ್ನು ಪವಿತ್ರಗುಡಾರದ ಹಿಂಬದಿಯಲ್ಲಿ ತೂಗುಹಾಕಬೇಕು. |
13
|
ಪಾರ್ಶ್ವಗಳಲ್ಲಿ ಈ ಗುಡಾರದ ಪರದೆಗಳು, ಪವಿತ್ರಗುಡಾರದ ಕೆಳಗಣ ಅಂಚುಗಳಿಂದ ಕೆಳಗೆ ಒಂದು ಮೊಳದಷ್ಟು ತೂಗಾಡುವವು. ಆದ್ದರಿಂದ ಈ ಡೇರೆಯು ಸಂಪೂರ್ಣವಾಗಿ ಪವಿತ್ರಗುಡಾರವನ್ನು ಮುಚ್ಚಿಕೊಳ್ಳುವುದು. |
14
|
ಹೊರಗಿನ ಗುಡಾರಕ್ಕೆ ಸರಿಹೊಂದುವ ಎರಡು ಹೊದಿಕೆಗಳನ್ನು ಮಾಡಿಸಬೇಕು. ಒಂದು ಹೊದಿಕೆಯನ್ನು ಕೆಂಪುಬಣ್ಣದ ಕುರಿದೊಗಲಿನ ಚರ್ಮದಿಂದ ಮಾಡಬೇಕು. ಇನ್ನೊಂದು ಹೊದಿಕೆಯನ್ನು ಉತ್ತಮ ತೊಗಲಿನಿಂದ ಮಾಡಿಸಬೇಕು. |
15
|
“ಪವಿತ್ರಗುಡಾರದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿಸಬೇಕು. |
16
|
ಚೌಕಟ್ಟುಗಳು ಹತ್ತುಮೊಳ ಎತ್ತರವಾಗಿಯೂ ಒಂದೂವರೆ ಮೊಳ ಅಗಲವಾಗಿಯೂ ಇರಬೇಕು. |
17
|
ಪ್ರತಿ ಚೌಕಟ್ಟನ್ನು ಮಾಡುವುದಕ್ಕೆ ಎರಡು ಕಡೆಯ ಕೋಲುಗಳನ್ನು ಅಡ್ಡಪಟ್ಟಿಗಳೊಂದಿಗೆ ಒಟ್ಟಾಗಿ ಜೋಡಿಸಬೇಕು. ಪವಿತ್ರಗುಡಾರದ ಎಲ್ಲಾ ಚೌಕಟ್ಟುಗಳು ಒಂದೇ ರೀತಿಯಾಗಿರಬೇಕು. |
18
|
ಪವಿತ್ರಗುಡಾರದ ದಕ್ಷಿಣ ಭಾಗಕ್ಕೆ ಇಪ್ಪತ್ತು ಚೌಕಟ್ಟುಗಳನ್ನು ಮಾಡಿಸಬೇಕು. |
19
|
ಚೌಕಟ್ಟುಗಳಿಗೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿಸು. ಪ್ರತಿಯೊಂದು ಕಡೆಯ ಕಂಬಕ್ಕೆ ಒಂದು ಗದ್ದಿಗೇಕಲ್ಲಿನಂತೆ ಪ್ರತಿಯೊಂದು ಚೌಕಟ್ಟಿಗೆ ಎರಡು ಬೆಳ್ಳಿಯ ಗದ್ದಿಗೇಕಲ್ಲುಗಳು ಇರಬೇಕು. |
20
|
ಪವಿತ್ರಗುಡಾರದ ಇನ್ನೊಂದು ಕಡೆಗೆ ಅಂದರೆ, ಉತ್ತರದಿಕ್ಕಿನಲ್ಲಿಯೂ ಇಪ್ಪತ್ತು ಚೌಕಟ್ಟುಗಳನ್ನು ಮಾಡಿಸಬೇಕು. |
21
|
ಪ್ರತಿಯೊಂದು ಚೌಕಟ್ಟಿನ ಕೆಳಗೆ ಎರಡು ಗದ್ದಿಗೇಕಲ್ಲುಗಳು ಇರುವಂತೆ ಪ್ರತಿಯೊಂದು ಕಡೆಗೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು. |
22
|
ಪವಿತ್ರಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮ ದಿಕ್ಕಿನಲ್ಲಿಯೂ ಆರು ಚೌಕಟ್ಟುಗಳನ್ನು ಮಾಡಿಸಬೇಕು. |
23
|
ಪವಿತ್ರಗುಡಾರದ ಹಿಂಭಾಗದಲ್ಲಿರುವ ಮೂಲೆಗಳಿಗೆ ಎರಡು ಚೌಕಟ್ಟುಗಳನ್ನು ಮಾಡಿಸಬೇಕು. |
24
|
ಮೂಲೆಗಳಲ್ಲಿರುವ ಚೌಕಟ್ಟುಗಳು ಕೆಳಗಿನ ಭಾಗದಲ್ಲಿ ಒಟ್ಟಾಗಿ ಜೋಡಿಸಿರಬೇಕು. ತುದಿಯಲ್ಲಿ ಒಂದು ಬಳೆಯು ಚೌಕಟ್ಟುಗಳನ್ನು ಒಟ್ಟಾಗಿ ಹಿಡಿದುಕೊಂಡಿರುವುದು. ಎರಡು ಮೂಲೆಗಳಿಗೂ ಅದೇ ರೀತಿಯಾಗಿ ಮಾಡಿಸಬೇಕು. |
25
|
ಗುಡಾರದ ಪಶ್ಚಿಮ ದಿಕ್ಕಿನ ಕೊನೆಯಲ್ಲಿ ಒಟ್ಟು ಎಂಟು ಚೌಕಟ್ಟುಗಳಿರುವವು. ಪ್ರತಿ ಚೌಕಟ್ಟಿನ ಕೆಳಗೆ ಎರಡು ಗದ್ದಿಗೇಕಲ್ಲುಗಳಂತೆ ಹದಿನಾರು ಬೆಳ್ಳಿಯ ಗದ್ದಿಗೇಕಲ್ಲುಗಳಿರುವವು. |
26
|
“ಜಾಲೀಮರದಿಂದ ಪವಿತ್ರಗುಡಾರದ ಚೌಕಟ್ಟುಗಳಿಗೆ ಅಗುಳಿಗಳನ್ನು ಮಾಡಿಸು. ಪವಿತ್ರಗುಡಾರದ ಒಂದು ಭಾಗದಲ್ಲಿ ಐದು ಅಗುಳಿಗಳು ಇರಬೇಕು. |
27
|
ಪವಿತ್ರಗುಡಾರದ ಇನ್ನೊಂದು ಭಾಗದಲ್ಲಿ ಐದು ಅಗುಳಿಗಳು ಇರಬೇಕು. ಪವಿತ್ರಗುಡಾರದ ಹಿಂಭಾಗದಲ್ಲಿರುವ, ಅಂದರೆ ಪಶ್ಚಿಮ ಭಾಗದಲ್ಲಿರುವ ಚೌಕಟ್ಟುಗಳಿಗೆ ಐದು ಅಗುಳಿಗಳು ಇರಬೇಕು. |
28
|
ಮಧ್ಯದಲ್ಲಿರುವ ಅಗುಳಿಯು ಚೌಕಟ್ಟುಗಳ ಮೂಲಕ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೂ ಹಾದುಹೋಗಬೇಕು. |
29
|
“ಚೌಕಟ್ಟುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು; ಅಗುಳಿಗಳನ್ನು ಹಿಡಿದುಕೊಂಡಿರಲು ಚೌಕಟ್ಟುಗಳಿಗೆ ಬಳೆಗಳನ್ನು ಮಾಡಿಸಬೇಕು. ಮಾತ್ರವಲ್ಲದೆ ಅಗುಳಿಗಳನ್ನು ಚಿನ್ನದಿಂದ ಹೊದಿಸಬೇಕು. |
30
|
ನಾನು ನಿನಗೆ ಬೆಟ್ಟದಲ್ಲಿ ತೋರಿಸಿದ ಪ್ರಕಾರವೇ ಪವಿತ್ರಗುಡಾರವನ್ನು ಮಾಡಿಸಬೇಕು. |
31
|
“ಪವಿತ್ರಗುಡಾರದ ಒಳಭಾಗವನ್ನು ವಿಂಗಡಿಸಲು ಉತ್ತಮವಾದ ಹುರಿನಾರಿನ ಬಟ್ಟೆಯಿಂದ ಒಂದು ವಿಶೇಷ ಪರದೆಯನ್ನು ಮಾಡಿಸಬೇಕು. ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಪರದೆಯ ಮೇಲೆ ಕೆರೂಬಿಗಳ ಚಿತ್ರಗಳನ್ನು ಕಸೂತಿಹಾಕಿಸಬೇಕು. |
32
|
ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ ಅವುಗಳನ್ನು ಚಿನ್ನದಿಂದ ಹೊದಿಸಬೇಕು. ನಾಲ್ಕು ಕಂಬಗಳ ಮೇಲೆ ಚಿನ್ನದಿಂದ ಮಾಡಿದ ಕೊಂಡಿಗಳನ್ನು ಹಾಕಿಸಬೇಕು. ಕಂಬಗಳ ಕೆಳಗೆ ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಹಾಕಿಸಬೇಕು. ಬಳಿಕ ಚಿನ್ನದ ಕೊಂಡಿಗಳಲ್ಲಿ ಪರದೆಯನ್ನು ತೂಗುಹಾಕಿಸಬೇಕು. |
33
|
ಚಿನ್ನದ ಬಳೆಗಳ ಕೆಳಗೆ ಪರದೆಯನ್ನು ಹಾಕಿಸಬೇಕು; ಪರದೆಯ ಹಿಂಭಾಗದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಬೇಕು. ಈ ಪರದೆಯು ಪವಿತ್ರ ಸ್ಥಳವನ್ನು ಮಹಾಪವಿತ್ರ ಸ್ಥಳದಿಂದ ಪ್ರತ್ಯೇಕಿಸುವುದು. |
34
|
ಮಹಾಪವಿತ್ರ ಸ್ಥಾನದಲ್ಲಿರುವ ಒಡಂಬಡಿಕೆಯ ಪೆಟ್ಟಿಗೆಯ ಮೇಲೆ ಕೃಪಾಸನವನ್ನು ಇಡಬೇಕು. |
35
|
“ಪರದೆಯ ಇನ್ನೊಂದು ಭಾಗದಲ್ಲಿ ನೀನು ಮಾಡಿಸಿದ ವಿಶೇಷ ಮೇಜನ್ನು ಇಡಬೇಕು. ಮೇಜು ಪರಿಶುದ್ಧ ಗುಡಾರದ ಉತ್ತರಭಾಗದಲ್ಲಿರಬೇಕು. ಬಳಿಕ ದೀಪಸ್ತಂಭವನ್ನು ದಕ್ಷಿಣಭಾಗದಲ್ಲಿಡಬೇಕು. ಇದು ಮೇಜಿನ ಎದುರಿಗೆ ಇರಬೇಕು. |
36
|
“ಬಳಿಕ ಪವಿತ್ರಗುಡಾರದ ಪ್ರವೇಶಸ್ಥಳವನ್ನು ಮುಚ್ಚುವುದಕ್ಕೆ ಒಂದು ಪರದೆಯನ್ನು ಮಾಡಿಸಬೇಕು. ಈ ಪರದೆಯನ್ನು ನೀಲಿ, ನೇರಳೆ, ಕೆಂಪು ದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಮಾಡಿಸಿ ಅದರಲ್ಲಿ ಚಿತ್ರಗಳನ್ನು ಕಸೂತಿ ಹಾಕಿಸಬೇಕು. |
37
|
ಈ ಪರದೆಗೆ ಚಿನ್ನದ ಕೊಂಡಿಗಳನ್ನು ಮಾಡಿಸಬೇಕು. ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು ಮತ್ತು ಈ ಕಂಬಗಳಿಗೆ ಐದು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು” ಎಂದು ಹೇಳಿದನು. ಯಜ್ಞವೇದಿಕೆ |
Exodus 26:37 Kannada Language Bible Words basic statistical display
COMING SOON ...