English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Exodus Chapters

Exodus 30 Verses

1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಜಾಲೀಮರದಿಂದ ಧೂಪವೇದಿಕೆಯನ್ನು ಮಾಡಿಸು.
2 ಈ ಧೂಪವೇದಿಕೆಯು ಚೌಕವಾಗಿ ಒಂದು ಮೊಳ ಉದ್ದ, ಒಂದು ಮೊಳ ಅಗಲ, ಎರಡು ಮೊಳ ಎತ್ತರ ಇರಬೇಕು. ಅದರ ನಾಲ್ಕು ಮೂಲೆಗಳಲ್ಲೂ ಕೊಂಬುಗಳಿರಬೇಕು. ಈ ಕೊಂಬುಗಳು ಧೂಪವೇದಿಕೆಯ ಅವಿಭಾಜ್ಯ ಭಾಗವಾಗಿರಬೇಕು.
3 ಧೂಪವೇದಿಕೆಯ ಮೇಲ್ಭಾಗವನ್ನೂ ಎಲ್ಲಾ ಪಾರ್ಶ್ವಗಳನ್ನೂ ಅದರ ಕೊಂಬುಗಳನ್ನೂ ಶುದ್ಧಬಂಗಾರದ ತಗಡಿನಿಂದ ಹೊದಿಸಬೇಕು ಮತ್ತು ಸುತ್ತಲೂ ಚಿನ್ನದ ಕಟ್ಟನ್ನು ಕಟ್ಟಿಸಬೇಕು.
4 ಧೂಪವೇದಿಕೆಯ ಎದುರುಬದುರಾಗಿರುವ ಎರಡು ಗೋಡೆಗಳಲ್ಲಿ ಕಟ್ಟಿನ ಕೆಳಗೆ ಎರಡು ಚಿನ್ನದ ಬಳೆಗಳನ್ನು ಮಾಡಿಸು. ಧೂಪವೇದಿಕೆಯನ್ನು ಹೊರುವ ಕೋಲುಗಳನ್ನು ಈ ಬಳೆಗಳು ಹಿಡಿದುಕೊಂಡಿರುತ್ತವೆ.
5 ಕೋಲುಗಳನ್ನು ಜಾಲೀಮರದಿಂದ ಮಾಡಿಸು. ಚಿನ್ನದ ತಗಡಿನಿಂದ ಆ ಕೋಲುಗಳನ್ನು ಹೊದಿಸು.
6 ವಿಶೇಷ ಪರದೆಯ (ಒಡಂಬಡಿಕೆಯ ಪೆಟ್ಟಿಗೆಯನ್ನು ಆವರಿಸಿಕೊಂಡಿರುವ) ಮುಂಭಾಗದಲ್ಲಿ ಧೂಪವೇದಿಕೆಯನ್ನು ಇಡು. ಧೂಪವೇದಿಕೆಯು ಒಡಂಬಡಿಕೆ ಪೆಟ್ಟಿಗೆಯ ಕೃಪಾಸನದ ಮುಂಭಾಗದಲ್ಲಿರುವುದು. ಇದು ನಾನು ನಿನ್ನನ್ನು ಸಂಧಿಸುವ ಸ್ಥಳವಾಗಿದೆ.
7 “ಆರೋನನು ಪ್ರತಿಮುಂಜಾನೆ ಧೂಪವೇದಿಕೆಯ ಮೇಲೆ ಸುಗಂಧದ್ರವ್ಯಗಳ ಧೂಪವನ್ನು ಉರಿಸಬೇಕು. ಅವನು ದೀಪಗಳನ್ನು ಸರಿಪಡಿಸಲು ಬರುವಾಗ ಇದನ್ನು ಮಾಡುವನು.
8 ತಿರುಗಿ ಸಾಯಂಕಾಲದಲ್ಲಿ ಧೂಪವನ್ನು ಉರಿಸಬೇಕು. ಇದು ಸಾಯಂಕಾಲಗಳಲ್ಲಿ ಅವನು ದೀಪಗಳನ್ನು ಹೊತ್ತಿಸುವ ಸಮಯವಾಗಿರುತ್ತದೆ. ಹೀಗೆ ಪ್ರತಿದಿನ ಯೆಹೋವನ ಮುಂದೆ ನಿತ್ಯವಾದ ಧೂಪಸಮರ್ಪಣೆ ಇರುವುದು.
9 ಈ ಧೂಪವೇದಿಕೆಯನ್ನು ಬೇರೆ ವಿಧದ ಧೂಪಸಮರ್ಪಣೆಗಾಗಲಿ ಸರ್ವಾಂಗಹೋಮವನ್ನು ಅರ್ಪಿಸುವುದಕ್ಕಾಗಲಿ ಯಾವುದೇ ಧಾನ್ಯಸಮರ್ಪಣೆಗಾಗಲಿ ಪಾನದ್ರವ್ಯಸಮರ್ಪಣೆಗಾಗಲಿ ಉಪಯೋಗಿಸಬಾರದು.
10 “ಆರೋನನು ವರ್ಷಕ್ಕೊಮ್ಮೆ ಯೆಹೋವನಿಗೆ ವಿಶೇಷ ಯಜ್ಞವನ್ನು ಸಮರ್ಪಿಸಬೇಕು. ಜನರ ಪಾಪಗಳ ಪ್ರಾಯಶ್ಚಿತ್ತಕ್ಕಾಗಿ ಆರೋನನು ದೋಷಪರಿಹಾರಕ ಯಜ್ಞದ ರಕ್ತವನ್ನು ಉಪಯೋಗಿಸುವನು. ಆರೋನನು ಇದನ್ನು ಈ ಯಜ್ಞವೇದಿಕೆಯ ಕೊಂಬುಗಳಲ್ಲಿ ಮಾಡುವನು. ಆ ದಿನವು ದೋಷಪರಿಹಾರಕ ದಿನವೆಂದು ಕರೆಯಲ್ಪಡುವುದು. ಯೆಹೋವನಿಗೆ ಇದು ಅತೀ ಪರಿಶುದ್ಧವಾದ ವಿಶೇಷ ದಿನವಾಗಿದೆ.”
11 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
12 “ಇಸ್ರೇಲರನ್ನು ಲೆಕ್ಕಿಸು. ಹೀಗಾಗಿ ಎಷ್ಟು ಮಂದಿ ಜನರಿರುತ್ತಾರೆಂದು ನೀನು ತಿಳಿದುಕೊಳ್ಳುವೆ. ಪ್ರತಿಸಾರಿ ಇದನ್ನು ಮಾಡಿದಾಗ, ಪ್ರತಿಯೊಬ್ಬನು ತನಗೋಸ್ಕರವಾಗಿ ಯೆಹೋವನಿಗೆ ತೆರಿಗೆಯನ್ನು ಕೊಡಬೇಕು. ಆಗ ಜನರಿಗೆ ಯಾವ ಕೇಡುಗಳೂ ಉಂಟಾಗುವುದಿಲ್ಲ.
13 ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ಅಧಿಕೃತ ಅಳತೆಗನುಸಾರವಾಗಿರುವ ಅರ್ಧಶೆಕೆಲ್ ಕಪ್ಪಕಾಣಿಕೆಯನ್ನು ಕೊಡಬೇಕು. ಈ ಅರ್ಧಶೆಕೆಲ್ ಯೆಹೋವನಿಗೆ ಕಾಣಿಕೆಯಾಗಿರುತ್ತದೆ.
14 ಲೆಕ್ಕಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರೂ ಅದಕ್ಕೆ ಮೇಲ್ಪಟ್ಟವರೂ ಈ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು.
15 ಐಶ್ವರ್ಯವಂತರು ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು; ಬಡವರು ಅರ್ಧಶೆಕೆಲಿಗಿಂತ ಕಡಿಮೆ ಕೊಡಬಾರದು. ಜನರೆಲ್ಲರೂ ಈ ಕಾಣಿಕೆಯನ್ನು ಯೆಹೋವನಿಗೆ ಅರ್ಪಿಸಬೇಕು. ಇದು ನಿಮ್ಮ ಪ್ರಾಣರಕ್ಷಣೆಯ ತೆರಿಗೆಯಾಗಿದೆ.
16 ಇಸ್ರೇಲರಿಂದ ಈ ಹಣವನ್ನು ಒಟ್ಟುಗೂಡಿಸಬೇಕು. ದೇವದರ್ಶನಗುಡಾರದ ಸೇವೆಗಾಗಿ ಹಣವನ್ನು ಉಪಯೋಗಿಸಬೇಕು. ಯೆಹೋವನು ತನ್ನ ಜನರನ್ನು ಜ್ಞಾಪಿಸಿಕೊಳ್ಳುವುದಕ್ಕಾಗಿ ಈ ಕಪ್ಪವು ಒಂದು ಮಾರ್ಗವಾಗಿದೆ. ಅವರು ತಮ್ಮ ಪ್ರಾಣರಕ್ಷಣೆಗಾಗಿ ಹಣವನ್ನು ಕೊಡುತ್ತಿರುವರು.”
17 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
18 “ತಾಮ್ರದ ಗಂಗಾಳವನ್ನು ಮಾಡಿ ಅದನ್ನು ತಾಮ್ರದ ಪೀಠದ ಮೇಲಿಡು. ತೊಳೆದುಕೊಳ್ಳುವುದಕ್ಕೆ ನೀವು ಇದನ್ನು ಉಪಯೋಗಿಸುವಿರಿ. ಗಂಗಾಳವನ್ನು ದೇವದರ್ಶನಗುಡಾರ ಮತ್ತು ಯಜ್ಞವೇದಿಕೆಯ ನಡುವೆ ಇಡು. ಗಂಗಾಳದಲ್ಲಿ ನೀರನ್ನು ತುಂಬಿಸು.
19 ಆರೋನನು ಮತ್ತು ಅವನ ಪುತ್ರರು ಈ ಗಂಗಾಳದಲ್ಲಿರುವ ನೀರಿನಿಂದ ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳಬೇಕು.
20 ಪ್ರತಿಸಾರಿ ದೇವದರ್ಶನಗುಡಾರಕ್ಕೆ ಪ್ರವೇಶಿಸುವಾಗ ಅಥವಾ ಯೆಹೋವನಿಗಾಗಿ ಸರ್ವಾಂಗಹೋಮಗಳನ್ನು ಅರ್ಪಿಸಲು ಯಜ್ಞವೇದಿಕೆಯ ಹತ್ತಿರಕ್ಕೆ ಬರುವಾಗ ಅವರು ನೀರಿನಿಂದ ತೊಳೆದುಕೊಳ್ಳಬೇಕು. ಆಗ ಅವರು ಸಾಯುವುದಿಲ್ಲ.
21 ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳುವುದರಿಂದ ಅವರು ಸಾಯುವುದಿಲ್ಲ. ಆರೋನನಿಗೂ ಅವನ ಸಂತತಿಯವರಿಗೂ ಇದು ಶಾಶ್ವತವಾದ ನಿಯಮ. ತಲೆಮಾರುಗಳವರೆಗೆ ಆರೋನನ ಸಂತತಿಯವರಿಗೆಲ್ಲಾ ಇದೇ ಕಟ್ಟಳೆಯಿರುವುದು.”
22 ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
23 “ಶ್ರೇಷ್ಠವಾದ ಸುಗಂಧದ್ರವ್ಯಗಳನ್ನು ಮಾಡಿಸು. ಹನ್ನೆರಡು ಪೌಂಡುಗಳಷ್ಟು ಅಚ್ಚ ರಕ್ತಬೋಳ, ಅದರ ಅರ್ಧದಷ್ಟು ಅಂದರೆ ಆರು ಪೌಂಡು ಸುವಾಸನೆಯುಳ್ಳ ದಾಲ್ಚಿನ್ನಿ, ಹನ್ನೆರಡು ಪೌಂಡುಗಳಷ್ಟು ಸುವಾಸನೆಯುಳ್ಳ ಬಜೆ,
24 ಮತ್ತು ಹನ್ನೆರಡು ಪೌಂಡುಗಳಷ್ಟು ಲವಂಗಚಕ್ಕೆಯನ್ನು ತೆಗೆದುಕೊಂಡು ಬಾ. ಇವುಗಳನ್ನೆಲ್ಲ ಅಧಿಕೃತ ಅಳತೆಮಾಪಕದಿಂದ ಅಳತೆಮಾಡು. ಒಂದು ಗ್ಯಾಲನ್ ಆಲಿವ್ ಎಣ್ಣೆಯನ್ನೂ ತೆಗೆದುಕೊಂಡು ಬಾ.
25 “ಸುವಾಸನೆಯುಳ್ಳ ಪವಿತ್ರ ಅಭಿಷೇಕತೈಲವನ್ನು ಮಾಡಲು ಇವುಗಳನ್ನೆಲ್ಲ ಒಟ್ಟಿಗೆ ಬೆರೆಸು.
26 ದೇವದರ್ಶನಗುಡಾರವನ್ನು ಮತ್ತು ಒಡಂಬಡಿಕೆಯ ಪೆಟ್ಟಿಗೆಯನ್ನು ಅಭಿಷೇಕಿಸಲು ಈ ತೈಲವನ್ನು ಉಪಯೋಗಿಸು.
27 ಈ ತೈಲವನ್ನು ಮೇಜಿನ ಮೇಲಿರುವ ಎಲ್ಲಾ ಉಪಕರಣಗಳ ಮೇಲೆ ಸುರಿ. ಈ ತೈಲವನ್ನು ದೀಪ ಮತ್ತು ಅದರ ಉಪಕರಣಗಳೆಲ್ಲದರ ಮೇಲೆ ಸುರಿ. ಆ ಯಜ್ಞವೇದಿಕೆಯ ಮೇಲಿರುವ ಅದರ ಉಪಕರಣಗಳ ಮೇಲೆಯೂ ಈ ತೈಲವನ್ನು ಸುರಿ. ತೈಲವನ್ನು ಧೂಪವೇದಿಕೆಯ ಮೇಲೆ ಸುರಿ.
28 ದೇವರಿಗೆ ಬೆಂಕಿಯ ಮೂಲಕ ಅರ್ಪಿಸುವ ಹೋಮಗಳ ಮೇಲೆಯೂ ತೈಲವನ್ನು ಸುರಿ. ಈ ತೈಲವನ್ನು ಗಂಗಾಳದ ಮೇಲೆಯೂ ಮತ್ತು ಗಂಗಾಳದ ಕೆಳಗಿರುವ ಪೀಠದ ಮೇಲೆಯೂ ಸುರಿ.
29 ಆಗ ನೀನು ಈ ಉಪಕರಣಗಳನ್ನೆಲ್ಲ ಪವಿತ್ರಗೊಳಿಸುವೆ. ಅವುಗಳು ಯೆಹೋವನಿಗೆ ಬಹು ವಿಶೇಷವಾಗಿವೆ. ಅವುಗಳಿಗೆ ಸೋಂಕಿದ್ದೆಲ್ಲವೂ ಪವಿತ್ರವಾಗುತ್ತವೆ.
30 “ಆರೋನನನ್ನು ಮತ್ತು ಅವನ ಪುತ್ರರನ್ನು ಈ ತೈಲದಿಂದ ಅಭಿಷೇಕಿಸು. ಅವರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾರೆಂದು ಇದು ತೋರಿಸುವುದು. ಆಗ ಅವರು ಅಭಿಷೇಕಿಸಲ್ಪಟ್ಟ ಯಾಜಕರಾಗಿ ನನ್ನ ಸೇವೆಮಾಡಬಹುದು.
31 ಅಭಿಷೇಕತೈಲವು ಪವಿತ್ರವಾದದ್ದು. ಅದನ್ನು ಯಾವಾಗಲೂ ನನಗಾಗಿ ಮಾತ್ರವೇ ಉಪಯೋಗಿಸಬೇಕೆಂದು ಇಸ್ರೇಲರಿಗೆ ಹೇಳು.
32 ಯಾರೂ ಇದನ್ನು ಸಾಮಾನ್ಯವಾದ ಸುಗಂಧ ವಾಸನೆಯುಳ್ಳ ತೈಲವಾಗಿ ಉಪಯೋಗಿಸಬಾರದು. ಈ ವಿಶೇಷವಾದ ತೈಲವನ್ನು ಮಾಡುವ ರೀತಿಯಲ್ಲಿ ಸಾಮಾನ್ಯವಾದ ಸುಗಂಧ ತೈಲವನ್ನು ಮಾಡಬಾರದು. ಈ ತೈಲವು ಪವಿತ್ರವಾದದ್ದು. ಇದು ನಿಮಗೆ ಬಹಳ ವಿಶೇಷವಾದದ್ದಾಗಿರಬೇಕು.
33 ಯಾವನಾದರೂ ಸುಗಂಧ ತೈಲವನ್ನು ಈ ಪವಿತ್ರತೈಲದಂತೆ ಮಾಡಿ ಯಾಜಕನಲ್ಲದ ಒಬ್ಬನಿಗೆ ಅದನ್ನು ಕೊಟ್ಟರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”
34 ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಹಾಲು, ಮಡ್ಡಿ, ಗುಗ್ಗುಲ, ಗಂಧದ ಚೆಕ್ಕೆ ಎಂಬ ಸುಗಂಧ ದ್ರವ್ಯಗಳನ್ನು ಸಮವಾಗಿ ತೆಗೆದುಕೊ.
35 ಸುವಾಸನೆಯುಳ್ಳ ಧೂಪವನ್ನು ಮಾಡುವುದಕ್ಕೆ ಈ ಸುಗಂಧ ದ್ರವ್ಯಗಳನ್ನು ಒಟ್ಟಾಗಿ ಬೆರೆಸು. ಸುಗಂಧದ್ರವ್ಯಕಾರನು ಮಾಡುವ ಪ್ರಕಾರವೇ ಇದನ್ನು ಮಾಡು. ಈ ಧೂಪಕ್ಕೆ ಉಪ್ಪನ್ನು ಬೆರೆಸು. ಉಪ್ಪು ಅದನ್ನು ಶುದ್ಧಗೊಳಿಸುವುದು.
36 ಸ್ವಲ್ಪ ಧೂಪವನ್ನು ಅರೆದು ಪುಡಿ ಮಾಡು. ಈ ಪುಡಿಯನ್ನು ದೇವದರ್ಶನಗುಡಾರದಲ್ಲಿರುವ ಒಡಂಬಡಿಕೆ ಪೆಟ್ಟಿಗೆಯ ಮುಂದೆ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿಡು. ಈ ಧೂಪದ ಪುಡಿಯನ್ನು ಅದರ ವಿಶೇಷ ಉದ್ದೇಶಕ್ಕಾಗಿ ಮಾತ್ರವೇ ಉಪಯೋಗಿಸಬೇಕು. ಅದು ಅತಿ ಪರಿಶುದ್ಧವಾದದ್ದು.
37 ನೀನು ಈ ಧೂಪವನ್ನು ಯೆಹೋವನಿಗಾಗಿ ವಿಶೇಷವಾದ ರೀತಿಯಲ್ಲಿ ಮಾತ್ರ ಉಪಯೋಗಿಸಬೇಕು. ನೀನು ಈ ಧೂಪವನ್ನು ವಿಶೇಷವಾದ ರೀತಿಯಲ್ಲಿ ತಯಾರಿಸಬೇಕು. ಈ ರೀತಿ ವಿಶೇಷವಾಗಿ ಬೇರೆ ಯಾವ ಧೂಪವನ್ನೂ ಮಾಡಬಾರದು.
38 ಸುವಾಸನೆಗೋಸ್ಕರ ಒಬ್ಬನು ತನಗಾಗಿ ಸ್ವಲ್ಪ ಧೂಪವನ್ನು ಈ ರೀತಿಯಲ್ಲಿ ಮಾಡಿದರೆ ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು.”
×

Alert

×