1
|
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಜಾಲೀಮರದಿಂದ ಧೂಪವೇದಿಕೆಯನ್ನು ಮಾಡಿಸು. |
2
|
ಈ ಧೂಪವೇದಿಕೆಯು ಚೌಕವಾಗಿ ಒಂದು ಮೊಳ ಉದ್ದ, ಒಂದು ಮೊಳ ಅಗಲ, ಎರಡು ಮೊಳ ಎತ್ತರ ಇರಬೇಕು. ಅದರ ನಾಲ್ಕು ಮೂಲೆಗಳಲ್ಲೂ ಕೊಂಬುಗಳಿರಬೇಕು. ಈ ಕೊಂಬುಗಳು ಧೂಪವೇದಿಕೆಯ ಅವಿಭಾಜ್ಯ ಭಾಗವಾಗಿರಬೇಕು. |
3
|
ಧೂಪವೇದಿಕೆಯ ಮೇಲ್ಭಾಗವನ್ನೂ ಎಲ್ಲಾ ಪಾರ್ಶ್ವಗಳನ್ನೂ ಅದರ ಕೊಂಬುಗಳನ್ನೂ ಶುದ್ಧಬಂಗಾರದ ತಗಡಿನಿಂದ ಹೊದಿಸಬೇಕು ಮತ್ತು ಸುತ್ತಲೂ ಚಿನ್ನದ ಕಟ್ಟನ್ನು ಕಟ್ಟಿಸಬೇಕು. |
4
|
ಧೂಪವೇದಿಕೆಯ ಎದುರುಬದುರಾಗಿರುವ ಎರಡು ಗೋಡೆಗಳಲ್ಲಿ ಕಟ್ಟಿನ ಕೆಳಗೆ ಎರಡು ಚಿನ್ನದ ಬಳೆಗಳನ್ನು ಮಾಡಿಸು. ಧೂಪವೇದಿಕೆಯನ್ನು ಹೊರುವ ಕೋಲುಗಳನ್ನು ಈ ಬಳೆಗಳು ಹಿಡಿದುಕೊಂಡಿರುತ್ತವೆ. |
5
|
ಕೋಲುಗಳನ್ನು ಜಾಲೀಮರದಿಂದ ಮಾಡಿಸು. ಚಿನ್ನದ ತಗಡಿನಿಂದ ಆ ಕೋಲುಗಳನ್ನು ಹೊದಿಸು. |
6
|
ವಿಶೇಷ ಪರದೆಯ (ಒಡಂಬಡಿಕೆಯ ಪೆಟ್ಟಿಗೆಯನ್ನು ಆವರಿಸಿಕೊಂಡಿರುವ) ಮುಂಭಾಗದಲ್ಲಿ ಧೂಪವೇದಿಕೆಯನ್ನು ಇಡು. ಧೂಪವೇದಿಕೆಯು ಒಡಂಬಡಿಕೆ ಪೆಟ್ಟಿಗೆಯ ಕೃಪಾಸನದ ಮುಂಭಾಗದಲ್ಲಿರುವುದು. ಇದು ನಾನು ನಿನ್ನನ್ನು ಸಂಧಿಸುವ ಸ್ಥಳವಾಗಿದೆ. |
7
|
“ಆರೋನನು ಪ್ರತಿಮುಂಜಾನೆ ಧೂಪವೇದಿಕೆಯ ಮೇಲೆ ಸುಗಂಧದ್ರವ್ಯಗಳ ಧೂಪವನ್ನು ಉರಿಸಬೇಕು. ಅವನು ದೀಪಗಳನ್ನು ಸರಿಪಡಿಸಲು ಬರುವಾಗ ಇದನ್ನು ಮಾಡುವನು. |
8
|
ತಿರುಗಿ ಸಾಯಂಕಾಲದಲ್ಲಿ ಧೂಪವನ್ನು ಉರಿಸಬೇಕು. ಇದು ಸಾಯಂಕಾಲಗಳಲ್ಲಿ ಅವನು ದೀಪಗಳನ್ನು ಹೊತ್ತಿಸುವ ಸಮಯವಾಗಿರುತ್ತದೆ. ಹೀಗೆ ಪ್ರತಿದಿನ ಯೆಹೋವನ ಮುಂದೆ ನಿತ್ಯವಾದ ಧೂಪಸಮರ್ಪಣೆ ಇರುವುದು. |
9
|
ಈ ಧೂಪವೇದಿಕೆಯನ್ನು ಬೇರೆ ವಿಧದ ಧೂಪಸಮರ್ಪಣೆಗಾಗಲಿ ಸರ್ವಾಂಗಹೋಮವನ್ನು ಅರ್ಪಿಸುವುದಕ್ಕಾಗಲಿ ಯಾವುದೇ ಧಾನ್ಯಸಮರ್ಪಣೆಗಾಗಲಿ ಪಾನದ್ರವ್ಯಸಮರ್ಪಣೆಗಾಗಲಿ ಉಪಯೋಗಿಸಬಾರದು. |
10
|
“ಆರೋನನು ವರ್ಷಕ್ಕೊಮ್ಮೆ ಯೆಹೋವನಿಗೆ ವಿಶೇಷ ಯಜ್ಞವನ್ನು ಸಮರ್ಪಿಸಬೇಕು. ಜನರ ಪಾಪಗಳ ಪ್ರಾಯಶ್ಚಿತ್ತಕ್ಕಾಗಿ ಆರೋನನು ದೋಷಪರಿಹಾರಕ ಯಜ್ಞದ ರಕ್ತವನ್ನು ಉಪಯೋಗಿಸುವನು. ಆರೋನನು ಇದನ್ನು ಈ ಯಜ್ಞವೇದಿಕೆಯ ಕೊಂಬುಗಳಲ್ಲಿ ಮಾಡುವನು. ಆ ದಿನವು ದೋಷಪರಿಹಾರಕ ದಿನವೆಂದು ಕರೆಯಲ್ಪಡುವುದು. ಯೆಹೋವನಿಗೆ ಇದು ಅತೀ ಪರಿಶುದ್ಧವಾದ ವಿಶೇಷ ದಿನವಾಗಿದೆ.” |
11
|
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: |
12
|
“ಇಸ್ರೇಲರನ್ನು ಲೆಕ್ಕಿಸು. ಹೀಗಾಗಿ ಎಷ್ಟು ಮಂದಿ ಜನರಿರುತ್ತಾರೆಂದು ನೀನು ತಿಳಿದುಕೊಳ್ಳುವೆ. ಪ್ರತಿಸಾರಿ ಇದನ್ನು ಮಾಡಿದಾಗ, ಪ್ರತಿಯೊಬ್ಬನು ತನಗೋಸ್ಕರವಾಗಿ ಯೆಹೋವನಿಗೆ ತೆರಿಗೆಯನ್ನು ಕೊಡಬೇಕು. ಆಗ ಜನರಿಗೆ ಯಾವ ಕೇಡುಗಳೂ ಉಂಟಾಗುವುದಿಲ್ಲ. |
13
|
ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ಅಧಿಕೃತ ಅಳತೆಗನುಸಾರವಾಗಿರುವ ಅರ್ಧಶೆಕೆಲ್ ಕಪ್ಪವನ್ನು ಕೊಡಬೇಕು. ಈ ಅರ್ಧಶೆಕೆಲ್ ಯೆಹೋವನಿಗೆ ಕಾಣಿಕೆಯಾಗಿರುತ್ತದೆ. |
14
|
ಲೆಕ್ಕಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರೂ ಅದಕ್ಕೆ ಮೇಲ್ಪಟ್ಟವರೂ ಈ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು. |
15
|
ಐಶ್ವರ್ಯವಂತರು ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು; ಬಡವರು ಅರ್ಧಶೆಕೆಲಿಗಿಂತ ಕಡಿಮೆ ಕೊಡಬಾರದು. ಜನರೆಲ್ಲರೂ ಈ ಕಾಣಿಕೆಯನ್ನು ಯೆಹೋವನಿಗೆ ಅರ್ಪಿಸಬೇಕು. ಇದು ನಿಮ್ಮ ಪ್ರಾಣರಕ್ಷಣೆಯ ತೆರಿಗೆಯಾಗಿದೆ. |
16
|
ಇಸ್ರೇಲರಿಂದ ಈ ಹಣವನ್ನು ಒಟ್ಟುಗೂಡಿಸಬೇಕು. ದೇವದರ್ಶನಗುಡಾರದ ಸೇವೆಗಾಗಿ ಹಣವನ್ನು ಉಪಯೋಗಿಸಬೇಕು. ಯೆಹೋವನು ತನ್ನ ಜನರನ್ನು ಜ್ಞಾಪಿಸಿಕೊಳ್ಳುವುದಕ್ಕಾಗಿ ಈ ಕಪ್ಪವು ಒಂದು ಮಾರ್ಗವಾಗಿದೆ. ಅವರು ತಮ್ಮ ಪ್ರಾಣರಕ್ಷಣೆಗಾಗಿ ಹಣವನ್ನು ಕೊಡುತ್ತಿರುವರು.” |
17
|
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: |
18
|
“ತಾಮ್ರದ ಗಂಗಾಳವನ್ನು ಮಾಡಿ ಅದನ್ನು ತಾಮ್ರದ ಪೀಠದ ಮೇಲಿಡು. ತೊಳೆದುಕೊಳ್ಳುವುದಕ್ಕೆ ನೀವು ಇದನ್ನು ಉಪಯೋಗಿಸುವಿರಿ. ಗಂಗಾಳವನ್ನು ದೇವದರ್ಶನಗುಡಾರ ಮತ್ತು ಯಜ್ಞವೇದಿಕೆಯ ನಡುವೆ ಇಡು. ಗಂಗಾಳದಲ್ಲಿ ನೀರನ್ನು ತುಂಬಿಸು. |
19
|
ಆರೋನನು ಮತ್ತು ಅವನ ಪುತ್ರರು ಈ ಗಂಗಾಳದಲ್ಲಿರುವ ನೀರಿನಿಂದ ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳಬೇಕು. |
20
|
ಪ್ರತಿಸಾರಿ ದೇವದರ್ಶನಗುಡಾರಕ್ಕೆ ಪ್ರವೇಶಿಸುವಾಗ ಅಥವಾ ಯೆಹೋವನಿಗಾಗಿ ಸರ್ವಾಂಗಹೋಮಗಳನ್ನು ಅರ್ಪಿಸಲು ಯಜ್ಞವೇದಿಕೆಯ ಹತ್ತಿರಕ್ಕೆ ಬರುವಾಗ ಅವರು ನೀರಿನಿಂದ ತೊಳೆದುಕೊಳ್ಳಬೇಕು. ಆಗ ಅವರು ಸಾಯುವುದಿಲ್ಲ. |
21
|
ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳುವುದರಿಂದ ಅವರು ಸಾಯುವುದಿಲ್ಲ. ಆರೋನನಿಗೂ ಅವನ ಸಂತತಿಯವರಿಗೂ ಇದು ಶಾಶ್ವತವಾದ ನಿಯಮ. ತಲೆಮಾರುಗಳವರೆಗೆ ಆರೋನನ ಸಂತತಿಯವರಿಗೆಲ್ಲಾ ಇದೇ ಕಟ್ಟಳೆಯಿರುವುದು.” |
22
|
ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: |
23
|
“ಶ್ರೇಷ್ಠವಾದ ಸುಗಂಧದ್ರವ್ಯಗಳನ್ನು ಮಾಡಿಸು. ಹನ್ನೆರಡು ಪೌಂಡುಗಳಷ್ಟು ಅಚ್ಚ ರಕ್ತಬೋಳ, ಅದರ ಅರ್ಧದಷ್ಟು ಅಂದರೆ ಆರು ಪೌಂಡು ಸುವಾಸನೆಯುಳ್ಳ ದಾಲ್ಚಿನ್ನಿ, ಹನ್ನೆರಡು ಪೌಂಡುಗಳಷ್ಟು ಸುವಾಸನೆಯುಳ್ಳ ಬಜೆ, |
24
|
ಮತ್ತು ಹನ್ನೆರಡು ಪೌಂಡುಗಳಷ್ಟು ಲವಂಗಚಕ್ಕೆಯನ್ನು ತೆಗೆದುಕೊಂಡು ಬಾ. ಇವುಗಳನ್ನೆಲ್ಲ ಅಧಿಕೃತ ಅಳತೆಮಾಪಕದಿಂದ ಅಳತೆಮಾಡು. ಒಂದು ಗ್ಯಾಲನ್ ಆಲಿವ್ ಎಣ್ಣೆಯನ್ನೂ ತೆಗೆದುಕೊಂಡು ಬಾ. |
25
|
“ಸುವಾಸನೆಯುಳ್ಳ ಪವಿತ್ರ ಅಭಿಷೇಕತೈಲವನ್ನು ಮಾಡಲು ಇವುಗಳನ್ನೆಲ್ಲ ಒಟ್ಟಿಗೆ ಬೆರೆಸು. |
26
|
ದೇವದರ್ಶನಗುಡಾರವನ್ನು ಮತ್ತು ಒಡಂಬಡಿಕೆಯ ಪೆಟ್ಟಿಗೆಯನ್ನು ಅಭಿಷೇಕಿಸಲು ಈ ತೈಲವನ್ನು ಉಪಯೋಗಿಸು. |
27
|
ಈ ತೈಲವನ್ನು ಮೇಜಿನ ಮೇಲಿರುವ ಎಲ್ಲಾ ಉಪಕರಣಗಳ ಮೇಲೆ ಸುರಿ. ಈ ತೈಲವನ್ನು ದೀಪ ಮತ್ತು ಅದರ ಉಪಕರಣಗಳೆಲ್ಲದರ ಮೇಲೆ ಸುರಿ. ಆ ಯಜ್ಞವೇದಿಕೆಯ ಮೇಲಿರುವ ಅದರ ಉಪಕರಣಗಳ ಮೇಲೆಯೂ ಈ ತೈಲವನ್ನು ಸುರಿ. ತೈಲವನ್ನು ಧೂಪವೇದಿಕೆಯ ಮೇಲೆ ಸುರಿ. |
28
|
ದೇವರಿಗೆ ಬೆಂಕಿಯ ಮೂಲಕ ಅರ್ಪಿಸುವ ಹೋಮಗಳ ಮೇಲೆಯೂ ತೈಲವನ್ನು ಸುರಿ. ಈ ತೈಲವನ್ನು ಗಂಗಾಳದ ಮೇಲೆಯೂ ಮತ್ತು ಗಂಗಾಳದ ಕೆಳಗಿರುವ ಪೀಠದ ಮೇಲೆಯೂ ಸುರಿ. |
29
|
ಆಗ ನೀನು ಈ ಉಪಕರಣಗಳನ್ನೆಲ್ಲ ಪವಿತ್ರಗೊಳಿಸುವೆ. ಅವುಗಳು ಯೆಹೋವನಿಗೆ ಬಹು ವಿಶೇಷವಾಗಿವೆ. ಅವುಗಳಿಗೆ ಸೋಂಕಿದ್ದೆಲ್ಲವೂ ಪವಿತ್ರವಾಗುತ್ತವೆ. |
30
|
“ಆರೋನನನ್ನು ಮತ್ತು ಅವನ ಪುತ್ರರನ್ನು ಈ ತೈಲದಿಂದ ಅಭಿಷೇಕಿಸು. ಅವರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾರೆಂದು ಇದು ತೋರಿಸುವುದು. ಆಗ ಅವರು ಅಭಿಷೇಕಿಸಲ್ಪಟ್ಟ ಯಾಜಕರಾಗಿ ನನ್ನ ಸೇವೆಮಾಡಬಹುದು. |
31
|
ಅಭಿಷೇಕತೈಲವು ಪವಿತ್ರವಾದದ್ದು. ಅದನ್ನು ಯಾವಾಗಲೂ ನನಗಾಗಿ ಮಾತ್ರವೇ ಉಪಯೋಗಿಸಬೇಕೆಂದು ಇಸ್ರೇಲರಿಗೆ ಹೇಳು. |
32
|
ಯಾರೂ ಇದನ್ನು ಸಾಮಾನ್ಯವಾದ ಸುಗಂಧ ವಾಸನೆಯುಳ್ಳ ತೈಲವಾಗಿ ಉಪಯೋಗಿಸಬಾರದು. ಈ ವಿಶೇಷವಾದ ತೈಲವನ್ನು ಮಾಡುವ ರೀತಿಯಲ್ಲಿ ಸಾಮಾನ್ಯವಾದ ಸುಗಂಧ ತೈಲವನ್ನು ಮಾಡಬಾರದು. ಈ ತೈಲವು ಪವಿತ್ರವಾದದ್ದು. ಇದು ನಿಮಗೆ ಬಹಳ ವಿಶೇಷವಾದದ್ದಾಗಿರಬೇಕು. |
33
|
ಯಾವನಾದರೂ ಸುಗಂಧ ತೈಲವನ್ನು ಈ ಪವಿತ್ರತೈಲದಂತೆ ಮಾಡಿ ಯಾಜಕನಲ್ಲದ ಒಬ್ಬನಿಗೆ ಅದನ್ನು ಕೊಟ್ಟರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.” |
34
|
ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಹಾಲು, ಮಡ್ಡಿ, ಗುಗ್ಗುಲ, ಗಂಧದ ಚೆಕ್ಕೆ ಎಂಬ ಸುಗಂಧ ದ್ರವ್ಯಗಳನ್ನು ಸಮವಾಗಿ ತೆಗೆದುಕೊ. |
35
|
ಸುವಾಸನೆಯುಳ್ಳ ಧೂಪವನ್ನು ಮಾಡುವುದಕ್ಕೆ ಈ ಸುಗಂಧ ದ್ರವ್ಯಗಳನ್ನು ಒಟ್ಟಾಗಿ ಬೆರೆಸು. ಸುಗಂಧದ್ರವ್ಯಕಾರನು ಮಾಡುವ ಪ್ರಕಾರವೇ ಇದನ್ನು ಮಾಡು. ಈ ಧೂಪಕ್ಕೆ ಉಪ್ಪನ್ನು ಬೆರೆಸು. ಉಪ್ಪು ಅದನ್ನು ಶುದ್ಧಗೊಳಿಸುವುದು. |
36
|
ಸ್ವಲ್ಪ ಧೂಪವನ್ನು ಅರೆದು ಪುಡಿ ಮಾಡು. ಈ ಪುಡಿಯನ್ನು ದೇವದರ್ಶನಗುಡಾರದಲ್ಲಿರುವ ಒಡಂಬಡಿಕೆ ಪೆಟ್ಟಿಗೆಯ ಮುಂದೆ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿಡು. ಈ ಧೂಪದ ಪುಡಿಯನ್ನು ಅದರ ವಿಶೇಷ ಉದ್ದೇಶಕ್ಕಾಗಿ ಮಾತ್ರವೇ ಉಪಯೋಗಿಸಬೇಕು. ಅದು ಅತಿ ಪರಿಶುದ್ಧವಾದದ್ದು. |
37
|
ನೀನು ಈ ಧೂಪವನ್ನು ಯೆಹೋವನಿಗಾಗಿ ವಿಶೇಷವಾದ ರೀತಿಯಲ್ಲಿ ಮಾತ್ರ ಉಪಯೋಗಿಸಬೇಕು. ನೀನು ಈ ಧೂಪವನ್ನು ವಿಶೇಷವಾದ ರೀತಿಯಲ್ಲಿ ತಯಾರಿಸಬೇಕು. ಈ ರೀತಿ ವಿಶೇಷವಾಗಿ ಬೇರೆ ಯಾವ ಧೂಪವನ್ನೂ ಮಾಡಬಾರದು. |
38
|
ಸುವಾಸನೆಗೋಸ್ಕರ ಒಬ್ಬನು ತನಗಾಗಿ ಸ್ವಲ್ಪ ಧೂಪವನ್ನು ಈ ರೀತಿಯಲ್ಲಿ ಮಾಡಿದರೆ ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು.” |
Exodus 30:9 Kannada Language Bible Words basic statistical display
COMING SOON ...