ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೊ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.
ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು. ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು.
ಮರುದಿನ ಮುಂಜಾನೆ ಜನರೆಲ್ಲರೂ ಬೇಗನೆ ಎದ್ದು ತಮ್ಮ ಪಶುಗಳನ್ನು ವಧಿಸಿ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಅರ್ಪಿಸಿ ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಬಳಿಕ ಎದ್ದು ಕುಣಿದಾಡಿದರು ಮತ್ತು ಕೂಗಾಡಿದರು.
ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.
ಆದರೆ ಮೋಶೆಯು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ನಿನ್ನ ಕೋಪವು ನಿನ್ನ ಜನರನ್ನು ನಾಶಮಾಡದಿರಲಿ. ನಿನ್ನ ಮಹಾಶಕ್ತಿಯಿಂದಲೂ ಬಲದಿಂದಲೂ ಈ ಜನರನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆಯಲ್ಲಾ.
ಆದರೆ ನೀನು ನಿನ್ನ ಜನರನ್ನು ನಾಶಮಾಡಿದರೆ, ಈಜಿಪ್ಟಿನವರು, ‘ಯೆಹೋವನು ತನ್ನ ಜನರಿಗೆ ಕೇಡನ್ನು ಮಾಡುವುದಕ್ಕಾಗಿಯೇ ಈಜಿಪ್ಟಿನಿಂದ ಕರೆದುಕೊಂಡು ಹೋದನು. ಆತನು ಅವರನ್ನು ಬೆಟ್ಟಗಳಲ್ಲಿ ಕೊಲ್ಲಬೇಕೆಂದಿದ್ದನು; ತನ್ನ ಜನರನ್ನು ಭೂಮಿಯಿಂದ ನಿರ್ಮೂಲ ಮಾಡಬೇಕೆಂದಿದ್ದನು’ ಎಂದು ಹೇಳುವರು. ಆದ್ದರಿಂದ ನಿನ್ನ ಜನರ ಮೇಲೆ ಕೋಪಗೊಳ್ಳಬೇಡ. ನಿನ್ನ ಕೋಪವನ್ನು ಬಿಟ್ಟುಬಿಡು. ನಿನ್ನ ಜನರನ್ನು ನಾಶಮಾಡಬೇಡ.
ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಇಸ್ರೇಲನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.
ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದನು. ಅವನು ಚಿನ್ನದ ಬಸವನನ್ನೂ ಜನರ ನರ್ತನವನ್ನೂ ನೋಡಿ ಬಹುಕೋಪಗೊಂಡು ಕಲ್ಲಿನ ಹಲಿಗೆಗಳನ್ನು ನೆಲದ ಮೇಲೆ ಬಿಸಾಡಿಬಿಟ್ಟನು; ಅವು ಚೂರುಚೂರಾಗಿ ಒಡೆದುಹೋದವು.
ಅವರು ನನಗೆ, ‘ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ನಡೆಸಿದನು. ಆದರೆ ಅವನಿಗೇನಾಯಿತೊ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ದೇವರುಗಳನ್ನು ಮಾಡಿಕೊಡು’ ಎಂದು ಕೇಳಿದರು.
ಆದ್ದರಿಂದ ನಾನು ಅವರಿಗೆ, ‘ನಿಮ್ಮಲ್ಲಿ ಚಿನ್ನದ ಆಭರಣಗಳಿದ್ದರೆ ನನಗೆ ಕೊಡಿರಿ’ ಎಂದು ಹೇಳಿದೆನು. ಅವರು ಆಭರಣಗಳನ್ನು ನನಗೆ ತಂದುಕೊಟ್ಟರು. ನಾನು ಅವುಗಳನ್ನು ಬೆಂಕಿಯಲ್ಲಿ ಕರಗಿಸಿ ಈ ಬಸವನ ಮೂರ್ತಿಯನ್ನು ಎರಕಹೊಯ್ದೆನು” ಎಂದು ಉತ್ತರಿಸಿದನು.
ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಬಿಟ್ಟುಬಿಟ್ಟಿರುವುದು ಮೋಶೆಗೆ ತಿಳಿಯಿತು. ಜನರು ಕ್ರಮವಿಲ್ಲದೆ ಸ್ವೇಚ್ಛೆಯಿಂದ ನಡೆಯುತ್ತಿದ್ದರು; ಅವರ ಮೂರ್ಖತನವು ಅವರ ವಿರೋಧಿಗಳಿಗೆ ಎದ್ದುಕಾಣುತ್ತಿತ್ತು!
ಆಗ ಮೋಶೆ ಅವರಿಗೆ, “ಇಸ್ರೇಲರ ದೇವರಾದ ಯೆಹೋವನು ಹೇಳುವುದನ್ನು ನಿಮಗೆ ತಿಳಿಸುತ್ತೇನೆ: ‘ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ತೆಗೆದುಕೊಂಡು ಪಾಳೆಯದ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೆ ಹೋಗಿ ಜನರನ್ನು ಶಿಕ್ಷಿಸಬೇಕು. ನಿಮ್ಮ ಸಹೋದರರಾಗಿದ್ದರೂ ಸ್ನೇಹಿತರಾಗಿದ್ದರೂ ಅಥವಾ ನೆರೆಯವರಾಗಿದ್ದರೂ ಸರಿ, ಕೊಲ್ಲಿರಿ’ ” ಎಂದು ಹೇಳಿದನು.
ಆಗ ಮೋಶೆಯು ಅವರಿಗೆ, “ಇಂದು ನೀವು ಯೆಹೋವನಿಗೆ ಮೀಸಲಾದ ಜನರಾದಿರಿ; ಯಾಕೆಂದರೆ ನೀವು ನಿಮ್ಮ ಸ್ವಂತ ಗಂಡು ಮಗನಿಗೂ ಸಹೋದರನಿಗೂ ವಿರೋಧವಾದಿರಿ. ಇಂದು ಆತನು ನಿಮ್ಮನ್ನು ಆಶೀರ್ವದಿಸಿದ್ದಾನೆ” ಅಂದನು.
ಮರುದಿನ ಮುಂಜಾನೆ ಮೋಶೆಯು ಜನರಿಗೆ, “ನೀವು ಭಯಂಕರವಾದ ಪಾಪವನ್ನು ಮಾಡಿದ್ದೀರಿ. ಆದರೆ ಈಗ ನಾನು ಯೆಹೋವನ ಬಳಿಗೆ ಹೋಗಿ, ಆತನು ನಿಮ್ಮ ಪಾಪಗಳನ್ನು ಕ್ಷಮಿಸುವಂತೆ ನಾನೇನಾದರೂ ಮಾಡಬಹುದೊ ಎಂದು ವಿಚಾರಿಸುತ್ತೇನೆ” ಎಂದನು.
ಆದ್ದರಿಂದ ಈಗ ಕೆಳಗಿಳಿದು ನಾನು ನಿನಗೆ ಹೇಳುವಲ್ಲಿಗೆ ಜನರನ್ನು ನಡಿಸು. ನನ್ನ ದೂತನು ನಿನ್ನ ಮುಂದೆ ಹೋಗಿ ನಿನ್ನನ್ನು ನಡಿಸುವನು. ಪಾಪಮಾಡಿದ ಜನರನ್ನು ಶಿಕ್ಷಿಸುವ ಸಮಯ ಬಂದಾಗ ಅವರು ಶಿಕ್ಷಿಸಲ್ಪಡುವರು” ಎಂದು ಹೇಳಿದನು.