“ಕೆಲಸ ಮಾಡುವುದಕ್ಕೆ ಆರು ದಿನಗಳಿವೆ. ಆದರೆ ಏಳನೆಯ ದಿನವು ನಿಮಗೆ ಬಹು ವಿಶೇಷವಾದ ವಿಶ್ರಾಂತಿ ದಿನವಾಗಿರುವುದು. ಆ ವಿಶೇಷ ದಿನದಲ್ಲಿ ವಿಶ್ರಮಿಸುವುದರ ಮೂಲಕ ನೀವು ಯೆಹೋವನನ್ನು ಸನ್ಮಾನಿಸುವಿರಿ. ಏಳನೆಯ ದಿನದಲ್ಲಿ ಕೆಲಸಮಾಡುವ ವ್ಯಕ್ತಿಯು ಸಂಹರಿಸಲ್ಪಡಬೇಕು.
ಯೆಹೋವನಿಗಾಗಿ ಕಾಣಿಕೆಗಳನ್ನು ಕೂಡಿಸಿರಿ. ನಿಮ್ಮಲ್ಲಿ ಪ್ರತಿಯೊಬ್ಬನು ತಾನು ಕೊಡುವಂಥದ್ದನ್ನು ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಬಳಿಕ ಆ ಕಾಣಿಕೆಯನ್ನು ಯೆಹೋವನ ಸನ್ನಿಧಿಗೆ ತರಬೇಕು. ಚಿನ್ನ, ಬೆಳ್ಳಿ, ತಾಮ್ರ,
ಮತ್ತು ಪವಿತ್ರಸ್ಥಳದಲ್ಲಿ ಯಾಜಕರು ಧರಿಸತಕ್ಕ ವಿಶೇಷವಾದ ಹೆಣೆದ ಬಟ್ಟೆಗಳು. ಈ ಬಟ್ಟೆಗಳನ್ನು ಯಾಜಕನಾದ ಆರೋನನು ಮತ್ತು ಅವನ ಪುತ್ರರು ಯಾಜಕ ಸೇವೆ ಮಾಡುವಾಗ ಧರಿಸಿಕೊಳ್ಳುವರು” ಎಂದು ಹೇಳಿದನು.
ಕಾಣಿಕೆ ಕೊಡುವುದಕ್ಕೆ ಯಾರ್ಯಾರು ಬಯಸಿದರೋ ಅವರೆಲ್ಲರೂ ಬಂದು ಯೆಹೋವನಿಗೆ ಕಾಣಿಕೆಯನ್ನು ಅರ್ಪಿಸಿದರು. ಈ ಕಾಣಿಕೆಗಳು ದೇವದರ್ಶನಗುಡಾರ, ಅದರ ಎಲ್ಲಾ ವಸ್ತುಗಳು ಮತ್ತು ವಿಶೇಷ ಬಟ್ಟೆಗಳನ್ನು ಮಾಡಲು ಉಪಯೋಗಿಸಲ್ಪಟ್ಟವು.
ಕಾಣಿಕೆ ಕೊಡುವುದಕ್ಕೆ ಬಯಸಿದ ಎಲ್ಲಾ ಗಂಡಸರು, ಹೆಂಗಸರು ಎಲ್ಲಾ ವಿಧದ ಚಿನ್ನದ ಆಭರಣಗಳನ್ನು ತಂದರು. ಅವರು ತಮ್ಮ ಕಡಗ, ಮೂಗುತಿ, ಉಂಗುರ, ಕಂಠಮಾಲೆ ಮತ್ತು ಇತರ ಚಿನ್ನದ ಆಭರಣಗಳನ್ನು ತಂದರು. ಅವರೆಲ್ಲರು ತಮ್ಮ ಎಲ್ಲಾ ಕೊಡುಗೆಗಳನ್ನು ಯೆಹೋವನಿಗೆ ಕೊಟ್ಟರು. ಇದು ಯೆಹೋವನಿಗೆ ಕೊಟ್ಟ ವಿಶೇಷವಾದ ಕಾಣಿಕೆಯಾಗಿತ್ತು.
ಪ್ರತಿಯೊಬ್ಬನು ತನ್ನಲ್ಲಿದ್ದ ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಯೆಹೋವನಿಗಾಗಿ ತಂದನು. ಯಾರಲ್ಲಿ ಕೆಂಪುಬಣ್ಣದ ಕುರಿದೊಗಲಾಗಲಿ ಕಡಲುಹಂದಿಯ ತೊಗಲಾಗಲಿ ಇದ್ದವೋ ಅವರು ಅವುಗಳನ್ನು ಯೆಹೋವನಿಗಾಗಿ ತಂದುಕೊಟ್ಟರು.
ಸಹಾಯ ಮಾಡುವುದಕ್ಕೆ ಬಯಸಿದ ಇಸ್ರೇಲರೆಲ್ಲರೂ ಯೆಹೋವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಈ ಕಾಣಿಕೆಗಳನ್ನು ಗಂಡಸರು ಮತ್ತು ಹೆಂಗಸರು ಕೊಡುವುದಕ್ಕೆ ಬಯಸಿದ್ದರಿಂದ ಉದಾರವಾಗಿ ಕೊಟ್ಟರು. ಯೆಹೋವನು ಮೋಶೆಗೆ ಮತ್ತು ಜನರಿಗೆ ಆಜ್ಞಾಪಿಸಿದ ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಈ ಕಾಣಿಕೆಗಳು ಉಪಯೋಗಿಸಲ್ಪಟ್ಟವು.
ಯೆಹೋವನು ಇವರಿಬ್ಬರಿಗೆ ಎಲ್ಲಾ ವಿಧದ ಕೆಲಸಗಳನ್ನು ಮಾಡಲು ವಿಶೇಷ ನಿಪುಣತೆಯನ್ನು ಅನುಗ್ರಹಿಸಿದ್ದಾನೆ. ಅವರು ಮರಗೆಲಸವನ್ನೂ ಲೋಹದ ಕೆಲಸವನ್ನೂ ಮಾಡಬಲ್ಲರು. ಅವರು ನೀಲಿ, ನೇರಳೆ ಕೆಂಪುದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಅಲಂಕೃತವಾದ ಬಟ್ಟೆಗಳನ್ನು ನೇಯಿಗೆ ಮಾಡಬಲ್ಲರು; ಅವರು ಉಣ್ಣೆ ಬಟ್ಟೆಗಳನ್ನು ನೇಯಲು ಶಕ್ತರಾಗಿದ್ದಾರೆ.